ಬೆಂಗಳೂರು, ಜು.15- ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 41,806 ಕೊರೊನಾ ಪ್ರಕರಣಗಳು ಪತ್ತೆಯಾಗಿದ್ದು, ಕೊರೊನಾ ಸೋಂಕಿತರ ಸಂಖ್ಯೆ ಒಟ್ಟು 3,09,87,880ಕ್ಕೆ ಏರಿಕೆಯಾಗಿದೆ. ನಿನ್ನೆ 581 ಮಂದಿ ಕೊರೊನಾ ಮಹಾಮಾರಿಗೆ ಬಲಿಯಾಗಿದ್ದಾರೆ. ಕಳೆದ 24 ಗಂಟೆಗಳಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಏರಿಕೆಯಾಗಿದ್ದು, ಸಾವಿನ ಸಂಖ್ಯೆಯಲ್ಲಿ ಗಣನೀಯ ಪ್ರಮಾಣದ ಇಳಿಕೆಯಾಗಿರುವುದು ಕಂಡುಬಂದಿದೆ.
ದೇಶದಲ್ಲಿ ಈವರೆಗೆ ಕೊರೊನಾಗೆ ಬಲಿಯಾದವರ ಸಂಖ್ಯೆ 4,11,990ಕ್ಕೆ ಏರಿಕೆಯಾಗಿದೆ. 4,32,041 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, ಕಳೆದ 24 ಗಂಟೆಗಳಲ್ಲಿ 39,130 ಜನ ಗುಣಮುಖರಾಗಿದ್ದು, ಒಟ್ಟಾರೆ ದೇಶದಲ್ಲಿ 3,01,43,850 ಜನರು ಕೋವಿಡ್‍ನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಜಾರ್ಚ್ ಆಗಿದ್ದಾರೆ. ನಿನ್ನೆ 19,43,488 ಜನರಿಗೆ ಕೋವಿಡ್ ಪರೀಕ್ಷೆ ಮಾಡಲಾಗಿದೆ. ಒಟ್ಟಾರೆ ಈವರೆಗೆ 43,80,11,958 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ.
Post a Comment