*ಕಲ್ಲಿದ್ದಲು ಕೊರತೆ ನೀಗಿಸಲು ಕೇಂದ್ರ ಸಚಿವರಿಗೆ ಮನವಿ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ*

*ಕಲ್ಲಿದ್ದಲು ಕೊರತೆ ನೀಗಿಸಲು ಕೇಂದ್ರ ಸಚಿವರಿಗೆ ಮನವಿ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ*
ಬೆಂಗಳೂರು, ಅಕ್ಟೋಬರ್ 9 :  ಕಲ್ಲಿದ್ದಲು ಕೊರತೆ ನೀಗಿಸಲು ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಅವರಿಗೆ ಮನವಿ  ಮಾಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕೈಗೊಂಡ ನವದೆಹಲಿ ಪ್ರವಾಸದ ಫಲಶೃತಿಯ ಬಗ್ಗೆ ಮಾಧ್ಯಮದವರಿಗೆ ವಿವರಿಸಿದರು.

ಕಲ್ಲಿದ್ದಲ್ಲಿನ ಕೊರತೆ ಇಡೀ ಭಾರತ ದೇಶವನ್ನು ಬಾಧಿಸುತ್ತಿದೆ. ಕರ್ನಾಟದಕದಲ್ಲಿ ಕಲ್ಲಿದ್ದಲಿನ ಸಂಗ್ರಹ ಕಡಿಮೆಯಾಗಬಾರದೆಂಬ ದೃಷ್ಟಿಯಿಂದ  ಕೇಂದ್ರ ಕಲ್ಲಿದ್ದಲು ಮತ್ತು ಗಣಿ ಸಚಿವ ಶ್ರೀ ಪ್ರಹ್ಲಾದ್ ಜೋಷಿಯವರನ್ನು ಮನವಿ ಮಾಡಲಾಗಿ, ರಾಜ್ಯಕ್ಕೆ ಪ್ರಸ್ತುತ ಸರಬರಾಜಾಗುತ್ತಿರುವ 10 ರೇಕ್  ಕಲ್ಲಿದ್ದಲ್ಲನ್ನು ಹಚ್ಚಿಸಿ 14 ರೇಕ್ ಸರಬರಾಜು ಮಾಡಲು ಒಪ್ಪಿಗೆ ಸೂಚಿಸಿದ್ದಾರೆ ಎಂದು ತಿಳಿಸಿದರು.  

ಕೇಂದ್ರ ಆರೋಗ್ಯ, ರಾಸಾಯನಿಕ ಮತ್ತು ರಸಗೊಬ್ಬರ ಸಚಿವ ಮನ್ ಸುಖ್ ಮಾಂಡವೀಯ ಅವರನ್ನು ಭೇಟಿಯಾಗಿ, ರಬಿ ಹಂಗಾಮಿಗೆ  ಹೆಚ್ಚಿನ ಡಿಎಪಿ ಹಾಗೂ ಎಂಓಪಿ ಒದಗಿಸಲು ಮನವಿ ಮಾಡಲಾಯಿತು. ಇದನ್ನು ಒಂದು ವಾರದೊಳಗೆ ಒದಗಿಸುವುದಾಗಿ ತಿಳಿಸಿದ್ದಾರೆ.  

ರಾಜ್ಯದಲ್ಲಿ ಡಿಸೆಂಬರ್ ಅಂತ್ಯದೊಳಗೆ ಮೊದಲನೇ ಡೋಸ್ 90 ಶೇಕಡಾ ಹಾಗೂ ಎರಡನೇ ಡೋಸ್ 70 ಶೇಕಡಾ ಕೊಡುವ  ಗುರಿಗೆ ಕೇಂದ್ರ ಆರೋಗ್ಯ ಸಚಿವರು ಸಂಪೂರ್ಣ ಸಹಕಾರ ನೀಡುವ  ಭರವಸೆ ನೀಡಿದ್ದಾರೆ ಎಂದು ತಿಳಿಸಿದರು.

Post a Comment

Previous Post Next Post