ರಾಜಕೀಯ, ಚಿತ್ರನಟರು ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿನ ಗಣ್ಯರು ಕಂಠೀರವ ಕ್ರೀಡಾಂಗಣಕ್ಕೆ ಭೇಟಿ ನೀಡಿ, ಪುನೀತ್ ಅವರ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದು ಕುಟುಂಬದ ಸದಸ್ಯರಿಗೆ ಸಾಂತ್ವನ ತಿಳಿಸಿದರು.
ತುಮಕೂರಿನ ಸಿದ್ಧಗಂಗಾ ಮಠದ ಸಿದ್ದಲಿಂಗ ಸ್ವಾಮೀಜಿ ಹಾಗೂ ಸುತ್ತೂರು ಮಠದ ಶಿವರಾತ್ರಿ ದೇಶಕೇಂದ್ರ ಸ್ವಾಮೀಜಿ, ವಿಧಾಸಭೆ ಅಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ, ಪ್ರಹ್ಲಾದ್ ಜೋಶಿ, ಮಾಜಿ ಮುಖ್ಯಮಂತ್ರಿ ಎಸ್. ಎಂ ಕೃಷ್ಣ, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಸಂಗೀತ ನಿರ್ದೇಶಕ ಅಜನೀಶ್ ಲೋಕನಾಥ್, ನಟ ದೊಡ್ಡಣ್ಣ, ಕಲಾವಿದ ಶಂಕರ್ ಅಶ್ವತ್ಥ್, ನಟ ಚೇತನ್, ಕಿರುತೆರೆ ನಿರ್ದೇಶಕ ಟಿ.ಎನ್. ಸೀತಾರಾಮ, ಗೀತ ರಚನೆಕಾರ ನಾಗೇಂದ್ರ ಪ್ರಸಾದ್, ಗಾಯಕ ರಾಜೇಶ್ ಕೃಷ್ಣನ್, ತೆಲುಗು ನಟ ನಂದಮೂರಿ ಬಾಲಕೃಷ್ಣ ಸೇರಿದಂತೆ ಹಲವರು ಗಣ್ಯರು ಪುನೀತ್ ಪಾರ್ಥಿವ ಶರೀರಕ್ಕೆ ಅಂತಿಮ ನಮನ ಸಲ್ಲಿಸಿ ಕುಟುಂಬದ ಸದಸ್ಯರಿಗೆ ಸಾಂತ್ವನ ತಿಳಿಸಿದರು.
Post a Comment