ಜಮ್ಮುವಿನಲ್ಲಿ ಮೊದಲ ಬಾರಿಗೆ ಸಿಆರ್’ಪಿಎಫ್ ದಿಂದ ಮಹಿಳೆಯರ ತಪಾಸಣೆ

ಕಳೆದ 30 ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ಜಮ್ಮು ಕಾಶ್ಮೀರದಲ್ಲಿ ಮಹಿಳಾ ಸಿಆರ್ ಪಿಎಫ್ ತಂಡದಿಂದ ಮಹಿಳೆಯರ ತಪಾಸಣೆ ನಡೆಸಲಾಗುತ್ತಿದೆ. ಇತ್ತೀಚೆಗೆ ಜಮ್ಮು ಕಾಶ್ಮೀರರದಲ್ಲಿ ಹೆಚ್ಚಾಗುತ್ತಿರುವ ಜನಸಾಮಾನ್ಯರ ಹತ್ಯೆ ಹಿನ್ನೆಲೆ ಸಿಆರ್ ಪಿಎಫ್ ಈ ಕ್ರಮಕ್ಕೆ ಮುಂದಾಗಿದ್ದು, ಜಮ್ಮುವಿನ ಲಾಲ್ ಚೌಕ್ ಪ್ರದೇಶದಲ್ಲಿ ಮಹಿಳೆಯರ ಬ್ಯಾಗ್ ಗಳನ್ನು ತಪಾಸಣೆ ನಡೆಸಲಾಗುತ್ತಿದೆ. ಕಳೆದ ಎರಡು ದಿನಗಳಲ್ಲಿ ಉಗ್ರರು ಮೂರು ಕಡೆ ವಲಸೆ ಕಾರ್ಮಿಕರ ಮೇಲೆ ದಾಳಿ ನಡೆಸಿದ್ದಾರೆ. ಈ ನಿಟ್ಟಿನಲ್ಲಿ ಕಣಿವೆ ರಾಜ್ಯದಲ್ಲಿರುವ ಎಲ್ಲಾ ವಲಸೆ ಕಾರ್ಮಿಕರ ಸುರಕ್ಷತೆ ಖಚಿತಪಡಿಸಿಕೊಳ್ಳಲು ಕ್ರಮ ಕೈಗೊಳ್ಳಲಾಗಿದೆ. ಈ ಕೂಡಲೇ ಎಲ್ಲಾ ವಲಸಿಗರನ್ನು ಹತ್ತಿರದ ಪೊಲೀಸರ ಅಥವಾ ಅರೆಸೇನಾ, ಸೇನಾಕೇಂದ್ರಗಳಿಗೆ ಸ್ಥಳಾಂತರ ಮಾಡಬೇಕಿದೆ ಎಂದು ಜಮ್ಮು ಐಜಿಪಿ ವಿಜಯ್ ಕುಮಾರ್ ತಿಳಿಸಿದ್ದಾರೆ. ಜಮ್ಮುವಿನಲ್ಲಿ ವಲಸೆ ಕಾರ್ಮಿಕರ ಮೇಲೆ ಸರಣಿ ದಾಳಿ ನಡೆಯುತ್ತಿದ್ದು, ಬಿಹಾರ, ಉತ್ತರ ಪ್ರದೇಶ ಮೂಲದ ಸುಮಾರು 11 ಜನರನ್ನು ಉಗ್ರರು ಹತ್ಯೆ ಮಾಡಿದ್ದಾರೆ. ಈ ನಾಗರಿಕರ ಹತ್ಯೆ ಬಳಿಕ ಭದ್ರತಾ ಪಡೆಗಳಿಂದ ನಡೆದ ಎನ್ ಕೌಂಟರ್ ಗಳಲ್ಲಿ 13 ಉಗ್ರರನ್ನು ಸದೆಬಡೆಯಲಾಗಿದೆ ಎಂದರು.

Post a Comment

Previous Post Next Post