ನಟ ಸತ್ಯಜಿತ್ ನಿಧನಕ್ಕೆ ನಳಿನ್‍ಕುಮಾರ್ ಸಂತಾಪ

10-10-2021
ಪ್ರಕಟಣೆಯ ಕೃಪೆಗಾಗಿ
ನಟ ಸತ್ಯಜಿತ್ ಅವರ ನಿಧನಕ್ಕೆ ನಳಿನ್‍ಕುಮಾರ್ ಕಟೀಲ್ ಸಂತಾಪ
ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟ ಸತ್ಯಜಿತ್ ಅವರ ನಿಧನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷರು ಮತ್ತು ಸಂಸದರೂ ಆದ ನಳಿನ್‍ಕುಮಾರ್ ಕಟೀಲ್ ಅವರು ತೀವ್ರ ಸಂತಾಪ ಸೂಚಿಸಿದ್ದಾರೆ. 
ಬಹುಬೇಡಿಕೆಯ ಪೆÇೀಷಕ ನಟನಾಗಿದ್ದ ನಟ ಸತ್ಯಜಿತ್ ‘ಅರುಣ ರಾಗ’, ‘ಅಂತಿಮ ತೀರ್ಪು’, ‘ಶಿವ ಮೆಚ್ಚಿದ ಕಣ್ಣಪ್ಪ’, ‘ರಣರಂಗ’, ‘ಉಪ್ಪಿ 2’-ಹೀಗೆ 650ಕ್ಕೂ ಅಧಿಕ ಸಿನಿಮಾಗಳಲ್ಲಿ ಅಭಿನಯಿಸಿದ್ದಾರೆ. ಕನ್ನಡ ಚಿತ್ರರಂಗದಲ್ಲಿ ನಟ ಸತ್ಯಜಿತ್ ಪೆÇೀಷಕ ಪಾತ್ರ ಹಾಗೂ ನೆಗೆಟಿವ್ ಪಾತ್ರಗಳಲ್ಲಿ ಹೆಚ್ಚು ಗಮನ ಸೆಳೆದಿದ್ದರು ಎಂದು ನೆನಪಿಸಿದ್ದಾರೆ.
ಮೃತರ ಕುಟುಂಬ, ಬಂಧುಮಿತ್ರರಿಗೆ ಹಾಗೂ ಅಭಿಮಾನಿಗಳಿಗೆ ಈ ದುಃಖ ಭರಿಸುವ ಶಕ್ತಿಯನ್ನು ದೇವರು ನೀಡಲಿ ಎಂದು ನಳಿನ್‍ಕುಮಾರ್ ಕಟೀಲ್ ಅವರು ಪ್ರಾರ್ಥಿಸಿದ್ದಾರೆ.


             
      ಕರುಣಾಕರ ಖಾಸಲೆ
 ಮಾಧ್ಯಮ ಸಂಚಾಲಕರು
  ಬಿಜೆಪಿ ಕರ್ನಾಟಕ

Post a Comment

Previous Post Next Post