ಕೆಪಿಸಿಸಿ

*ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಮಂಗಳೂರು ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳಿಗೆ ನೀಡಿದ ಪ್ರತಿಕ್ರಿಯೆ:*

ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಕುಕ್ಕೆ ಸುಬ್ರಹ್ಮಣ್ಯ ದೇಗುಲಕ್ಕೆ ಮಂಗಳವಾರ ಭೇಟಿ ನೀಡಿ, ಪೂಜೆ ಸಲ್ಲಿಸಿದರು.
'ನಾನು ಇಂಧನ ಸಚಿವನಾಗಿದ್ದ ಸಂದರ್ಭದಲ್ಲಿ ಯಾವುದೋ ವ್ಯಕ್ತಿ ಕರೆ ಮಾಡಿ ಬಾಯಿಗೆ ಬಂದಂತೆ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದ. ನಂತರ ಅಧಿಕಾರಿಗಳು ದೂರು ದಾಖಲಿಸಿದ್ದರು. ನಂತರ ಆತ ಆ ಅಧಿಕಾರಿಗಳಿಗೂ ನಿಂದನೆ ಮಾಡಿದ್ದ. ಆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಕ್ಷಿಯಾಗಿ ಬರಬೇಕು ಎಂದು ನ್ಯಾಯಾಲಯ ಸೂಚಿಸಿದೆ. ಮೊದಲ ಬಾರಿಗೆ ನನಗೆ ತಿಳಿದಿರಲಿಲ್ಲ. ಹೀಗಾಗಿ ನ್ಯಾಯಾಲಯಕ್ಕೆ ತಲೆಬಾಗಿ ಈಗ ಆಗಮಿಸಿದ್ದೇನೆ.

*ಭಾರತೀಯ ಸಂಸ್ಕೃತಿಗೆ ಮಾಡಿದ ಅಪಮಾನ:*

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಹೋರಾಟ, ಪ್ರತಿಭಟನೆ ನಮ್ಮ ಹಕ್ಕು. ಅಹಿಂಸೆ ಮಾರ್ಗದಲ್ಲಿ ಹೋರಾಟ ಮಾಡುವುದು ಗಾಂಧೀಜಿ ಅವರು ನಮಗೆ ಹೇಳಿಕೊಟ್ಟ ಪಾಠ. ರೈತರು ಕಳೆದ 10 ತಿಂಗಳಿಂದ ಶಾಂತಿಯುತ ಪ್ರತಿಭಟನೆ ನಡೆಸುತ್ತಿದ್ದು, ಪ್ರಧಾನಮಂತ್ರಿಗಳಾಗಲಿ, ಮಂತ್ರಿಗಳಾಗಲಿ ಯಾರೂ ರೈತರನ್ನು ಭೇಟಿ ಮಾಡಿ ಮಾತನಾಡಿಲ್ಲ. 

ಕೇಂದ್ರ ಸಚಿವರ ಮಗ ಪ್ರತಿಭಟನಾ ನಿರತ ರೈತರ ಮೇಲೆ ಕಾರು ಹರಿಸಿ 4 ಮಂದಿಯನ್ನು ಹತ್ಯೆ ಮಾಡಿದ್ದಾರೆ. ಇದರಿಂದ ರೊಚ್ಚಿಗೆದ್ದ ಜನ ದಾಳಿ ಮಾಡಿದ್ದಾರೆ. ಇದು ಕೂಡ ನಡೆಯಬಾರದ ಘಟನೆ. ಆದರೆ ಇದಕ್ಕೆ ಕಾರಣರಾದವರನ್ನು ಬಂಧಿಸಿಲ್ಲ, ಮಂತ್ರಿ ರಾಜೀನಾಮೆ ನೀಡಿಲ್ಲ, ಇದು ಒಂದು ಸರ್ಕಾರನಾ?

ಮೃತ ರೈತರ ಕುಟುಂಬಕ್ಕೆ ಸಾಂತ್ವನ ಹೇಳಲು ಮುಂದಾಗಿದ್ದ ನಮ್ಮ ನಾಯಕಿ ಪ್ರಿಯಾಂಕಾ ಗಾಂಧಿ ಅವರನ್ನು ಉತ್ತರ ಪ್ರದೇಶ ಪೊಲೀಸರು ಬಂಧಿಸಿದ್ದಾರೆ. ಸಾಂತ್ವನ ಹೇಳುವುದು ರಾಜಕೀಯ ಕರ್ತವ್ಯ. ಅದನ್ನು ಮಾಡಲು ಹೋದರೆ ಪುರುಷ ಪೊಲೀಸ್ ಅಧಿಕಾರಿಗಳು ಎಳೆದಾಡಿ ಅವರ ಹಕ್ಕನ್ನು ಕಸಿದಿದ್ದಾರೆ. ಇದು ಇಡೀ ಭಾರತೀಯ ಸಂಸ್ಕೃತಿಗೆ ಮಾಡಿದ ಅಪಮಾನ.'
[5/10 3:52 ಅಪರಾಹ್ನ] +91 90088 29855: *ಮಾಜಿ ಸಚಿವ ಚೆಲುವರಾಯಸ್ವಾಮಿ ಅವರ ಪತ್ರಿಕಾಗೋಷ್ಠಿಯ ಮುಖ್ಯಾಂಶಗಳು*

ಕೋವಿಡ್ ನಿಂದ ಮೃತಪಟ್ಟ 1200 ಮಂದಿಯನ್ನು ಅನಾಥರು ಎಂದು ಪರಿಗಣಿಸಿ ಅವರ ಪಿಂಡ ಪ್ರದಾನ ಮಾಡಿ ಪ್ರಚಾರ ಪಡೆಯುತ್ತಿರುವ ಬಿಜೆಪಿ ಸರ್ಕಾರಕ್ಕೆ ಜನರಿಗೆ ನೆರವಾಗುವ ಮನಸ್ಸಿದ್ದರೆ, ಕೋವಿಡ್ ನಿಂದ ಮೃತಪಟ್ಟ ಎಲ್ಲರಿಗೂ ಯಾವುದೇ ಷರತ್ತು ಇಲ್ಲದೇ, ಅವರ ಮನೆ ಬಾಗಿಲಿಗೆ ಕೋವಿಡ್ ಮರಣ ಪ್ರಮಾಣಪತ್ರ ನೀಡಲಿ. ಜತೆಗೆ ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ನೀಡಲಿ’ ಎಂದು ಮಾಜಿ ಸಚಿವ ಚೆಲುವರಾಯಸ್ವಾಮಿ ಆಗ್ರಹಿಸಿದ್ದಾರೆ.

ಕೋವಿಡ್ ಮೊದಲ ಹಾಗೂ ಎರಡನೇ ಅಲೆಯಲ್ಲಿ ಜನಸಾಮಾನ್ಯರು ಚಿಕಿತ್ಸೆ ಸಿಗದೆ, ಬೀದಿಗಳಲ್ಲಿ ಹೆಣವಾಗಿದ್ದರು. ಸರ್ಕಾರ ಮಾತ್ರ ಭ್ರಷ್ಟಾಚಾರದಲ್ಲಿ ಮುಳುಗಿತ್ತು. ಇದಾದರೂ ಇತ್ತೀಚೆಗೆ ಆರೋಗ್ಯ ಸಚಿವ ಸುಧಾಕರ್ ಅವರಿಗೆ ಕೇಂದ್ರ ಸರ್ಕಾರ ಅತ್ಯುತ್ತಮ ರೀತಿಯಲ್ಲಿ ಕೋವಿಡ್ ನಿರ್ವಹಣೆ ಪ್ರಮಾಣಪತ್ರ ನೀಡಿದೆ. ಯಾವ ಮಾನದಂಡದ ಆಧಾರದ ಮೇಲೆ ಈ ಪ್ರಶಸ್ತಿ ಕೊಟ್ಟಿದ್ದಾರೋ ಗೊತ್ತಿಲ್ಲ. ಬೆಂಗಳೂರಿನಲ್ಲಿ ಕಂಡು ಕೇಳರಿಯದಷ್ಟು ಅವಾಂತರ ಕಂಡಿದ್ದರೂ ಯಾವ ಕಾರಣಕ್ಕೆ ಈ ಪ್ರಶಸ್ತಿ ಕೊಟ್ಟಿದ್ದಾರೆ ಎಂಬ ಪ್ರಶ್ನೆ ಇದೆ.

ಪ್ರಚಾರಕ್ಕಾಗಿ ಪಿಂಡ ಪ್ರದಾನ ಮಾಡುವುದು, ಪ್ರಶಸ್ತಿ ಪಡೆಯುವುದನ್ನು ಬಿಟ್ಟು ಆರ್. ಅಶೋಕ್ ಹಾಗೂ ಸುಧಾಕರ್ ಮತ್ತು ಅವರ ಸರ್ಕಾರ ಜನರ ಕಷ್ಟಕ್ಕೆ ಸ್ಪಂದಿಸುವ ಪ್ರಾಮಾಣಿಕ ಪ್ರಯತ್ನ ಮಾಡಬೇಕು.

ಬಿಜೆಪಿ ಸರ್ಕಾರ ಈ ವೈರಸ್ ತಡೆಯಲು ವಿಫಲಾವಾಗಿದ್ದು ಮಾತ್ರವಲ್ಲ, ಸೋಕಿತರಿಗೆ ಸರಿಯಾದ ಚಿಕಿತ್ಸೆ ನೀಡಲು ವಿಫಲವಾಗಿತ್ತು. ಜನರ ಆರೋಗ್ಯ ಲೆಕ್ಕಿಸದೇ ಚಿಕಿತ್ಸೆ ಹೆಸರಲ್ಲಿ ಭ್ರಷ್ಟಾಚಾರ ಮಾಡಿತ್ತು. ಕೋವಿಡ್ ಸಮಯದಲ್ಲಿ ಕಾಂಗ್ರೆಸ್ ಪಕ್ಷ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಿಗಿಂತ ಹೆಚ್ಚಿನ ಪ್ರಮಾಣದಲ್ಲಿ ಜನರಿಗೆ ನೆರವಾಗಿತ್ತು. ಹೀಗಾಗಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಕಾಂಗ್ರೆಸ್ ಪಕ್ಷಕ್ಕೆ ಅಭಿನಂದನೆ ಸಲ್ಲಿಸಬೇಕು. 

ಕೋವಿಡ್ ನಿಂದ ರಾಜ್ಯದಲ್ಲಿ ಸುಮಾರು 4 ಲಕ್ಷಕ್ಕೂ ಹೆಚ್ಚು ಜನ ಸತ್ತಿದ್ದು, ಸರ್ಕಾರ ಮಾತ್ರ 37 ಸಾವಿರ ಜನ ಮೃತಪಟ್ಟಿದ್ದಾರೆ ಎಂಬ ಸುಳ್ಳು ಲೆಕ್ಕ ನೀಡುತ್ತಿದೆ. ಮೊದಲ ಅಲೆಯಲ್ಲಿ ಕೋವಿಡ್ ಮೃತರನ್ನು ಜೆಸಿಬಿಯಲ್ಲಿ ಬಿಸಾಕಿದ್ದರು. ಎರಡನೇ ಅಲೆಯಲ್ಲಿ ಕೋವಿಡ್ ಮೃತರಿಗೆ ಅಂತ್ಯಸಂಸ್ಕಾರ ನೀಡಲು ಪರದಾಡುವ ಸ್ಥಿತಿ ನಿರ್ಮಾಣ ಮಾಡಿದ್ದರು. 

ಕೇಂದ್ರ ಸರ್ಕಾರ ಕೋವಿಡ್ ನಿಂದ ಮೃತಪಟ್ಟ ಹಿಂದುಳಿದ ಹಾಗೂ ದಲಿತ ಸಮುದಾಯದವರ ಕುಟುಂಬಕ್ಕೆ 5 ಲಕ್ಷ ಸಾಲ ಹಾಗೂ ಅದರಲ್ಲಿ 1 ಲಕ್ಷ ಸಬ್ಸಿಡಿಯನ್ನು ನೀಡುವ ಯೋಜನೆ ಜಾರಿಗೆ ತಂದಿದ್ದು, ರಾಜ್ಯ ಸರ್ಕಾರ ಕೋವಿಡ್ ನಿಂದ ಸತ್ತ ಎಷ್ಟು ಕುಟುಂಬದವರಿಗೆ ಈ ಯೋಜನೆಯ ಫಲ ಸಿಗುವಂತೆ ಮಾಡಿದ್ದಾರೆ? ಬಿಜೆಪಿ ನಾಯಕರು ತಮ್ಮ ಜೇಬಿಂದ ಜನರಿಗೆ ಸಹಾಯ ಮಾಡದಿದ್ದರೂ ಪರವಾಗಿಲ್ಲ. ಆದರೆ ಸರ್ಕಾರದ ಯೋಜನೆಯಾದರೂ ಸಿಗುವಂತೆ ಮಾಡುವ ಯೋಚನೆ ಮಾಡಿಲ್ಲ.

ಕೋವಿಡ್ ನಿಂದ ಸತ್ತಿರುವವರಿಗೆ ಯಾವುದೇ ದಾಖಲಾತಿ  ಕೇಳದೇ ಪರಿಹಾರ ನೀಡಬೇಕು ಎಂದು ಸುಪ್ರೀಂ ಕೋರ್ಟ್ ತಿಳಿಸಿದೆ. ನಿನ್ನೆ ಮಂಡ್ಯದಲ್ಲಿ ಕೋವಿಡ್ ಮರಣ ಪ್ರಮಾಣ ಪತ್ರ ಕೇಳಲು ಹೋದಾಗ ನೀವು ಅಕ್ಸಿಡೆಂಟ್ ನಿಂದ ಸತ್ತಿದ್ದು, ನಿಮಗೆ ಕೋವಿಡ್ ಮರಣ ಪ್ರಮಾಣ ಪತ್ರ ನೀಡಲು ಸಾಧ್ಯವಿಲ್ಲ ಎಂದಿದ್ದಾರೆ. ಕೋವಿಡ್ ಸೋಂಕಿತರಾದವರು ಆಕ್ಸಿಜನ್ ಇಲ್ಲದೆ, ಔಷಧಿ ಇಲ್ಲದೆ ಅಥವಾ ಇತರೆ ಕಾರಣದಿಂದ ಸತ್ತರೂ ಅವರಿಗೆ ಕೋವಿಡ್ ಮರಣ ಪ್ರಮಾಣಪತ್ರ ನೀಡಬೇಕು. ಮೃತರ ಕುಟುಂಬಕ್ಕೆ ಈವರೆಗೂ ಪರಿಹಾರ ನೀಡಿಲ್ಲ ಎಂದು ಸ್ವತಃ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಸದನದಲ್ಲಿ ಹೇಳಿದ್ದರು. ಕಾಂಗ್ರೆಸ್ ಪಕ್ಷ ಇಂದಿಗೂ ಕೋವಿಡ್ ನಿಂದ  ಮೃತಪಟ್ಟ ಎಲ್ಲರಿಗೂ ತಲಾ 5 ಲಕ್ಷ ಪರಿಹಾರ ನೀಡಬೇಕು. ಕೋವಿಡ್ ನಿಂದ ಸತ್ತವರಿಗೆ ಆರೋಗ್ಯ ಹಾಗೂ ಕಂದಾಯ ಇಲಾಖೆಯಿಂದ ನೇರವಾಗಿ ಅವರ ಮನೆಗೆ ಕೋವಿಡ್ ಮರಣ ಪ್ರಮಾಣ ಪತ್ರ ಸಿಗುವಂತಾಗಬೇಕು. ಇದರಿಂದ ಸಂತ್ರಸ್ತರ ಕುಟುಂಬ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಯೋಜನೆಗಳ ಫಲ ಪಡೆಯಲು ಅನುಕೂಲವಾಗುತ್ತದೆ.

ಇನ್ನು ಆರೋಗ್ಯ ಇಲಾಖೆ ಕಾರ್ಯದರ್ಶಿಗಳು 18 ವರ್ಷಕ್ಕಿಂದ ಕೆಳಗಿನವರರು ಕೋವಿಡ್ ನಿಂದ ಮೃತಪಟ್ಟರೆ ಅವರಿಗೆ ಪರಿಹಾರ ಇಲ್ಲ ಎಂದು ಹೇಳಿದ್ದಾರೆ. ಯುವ ಪೀಳಿಗೆ ನಮ್ಮ ದೇಶದ ಭವಿಷ್ಯ ಎಂದು ನಾವು ಭಾವಿಸುತ್ತೇವೆ. ಆದರೆ ಈ ಸರ್ಕಾರಕ್ಕೆ ಅವರ ಪ್ರಾಣ ಲೆಕ್ಕಕ್ಕೇ ಇಲ್ಲವಾಯಿತೆ? ಇದೆಂತಾ ಸರ್ಕಾರ? ಎಂತಹ ಇಲಾಖೆ?

ಕೋವಿಡ್ ನಿಂತ ಮೃತಪಟ್ಟವರ ಹೆಸರನ್ನು ಐಸಿಎಂಆರ್ ನಲ್ಲಿ ನೋಂದಣಿ ಮಾಡಿಸಬೇಕು ಎಂದು ಸರ್ಕಾರ ಹೇಳಿದೆ. ಈ ನೋಂದಣಿ ಯಾರು ಮಾಡಬೇಕು? ಇದು ಸರ್ಕಾರಿ ಇಲಾಖೆ ಅಧಿಕಾರಿಗಳ ಕೆಲಸ. ಅಧಿಕಾರಿಗಳು ಸರಿಯಾಗಿ ಕೆಲಸ ಮಾಡದೇ ಈಗ ನೋಂದಣಿಯಾಗದಿದ್ದರೆ ಪರಿಹಾರ ಬರುವುದಿಲ್ಲ ಎಂದು ಹೇಳುತ್ತಿದ್ದಾರೆ. ಸರ್ಕಾರ ಕೋವಿಡ್ ಸಾವಿನ ಆಡಿಟ್ ಮಾಡಿಲ್ಲ, 
 
ಕೇವಲ ಬಿಪಿಎಲ್ ಕಾರ್ಡ್ ದಾರರಿಗೆ ಮಾತ್ರ, ಅದು ಕುಟುಂಬದಲ್ಲಿ ಸತ್ತ ಒಬ್ಬರಿಗೆ ಮಾತ್ರ ಪರಿಹಾರ ನೀಡಲಾಗುವುದು ಎಂದು ಸರ್ಕಾರ ಹೇಳಿದೆ. ಆದರೆ ಕೋವಿಡ್ ನಿಂದ ಸತ್ತ ಎಲ್ಲರಿಗೂ ತಲಾ 5 ಲಕ್ಷ ಪರಿಹಾರ ನೀಡಬೇಕು ಎಂದು ಕಾಂಗ್ರೆಸ್ ಆಗ್ರಹಿಸುತ್ತದೆ.
 
*ರಾಮ ಹುಟ್ಟಿದ ರಾಜ್ಯ, ರಾವಣ ರಾಜ್ಯವಾಗುತ್ತಿದೆ:*

ರಾಮ ಹುಟ್ಟಿದ ಉತ್ತರ ಪ್ರದೇಶ ರಾಜ್ಯ ಈಗ ರಾವಣರ ರಾಜ್ಯವಾಗುತ್ತಿದೆ. ರೈತರನ್ನು ರಕ್ಷಿಸುವ ಬದಲು ಅವರನ್ನು ಸಾಯಿಸುವ ಘಟನೆ ಆ ರಾಜ್ಯದಲ್ಲಿ ನಡೆಯುತ್ತಿದೆ. ಮೃತ ರೈತರ ಕುಟುಂಬಕ್ಕೆ ಸಾಂತ್ವನ ಹೇಳಲು ಹೊರಟರೆ ಅವರನ್ನು ತಡೆದು ಗೃಹಬಂಧನದಲ್ಲಿ ಇಡಲಾಗಿದೆ. ಬಿಜೆಪಿ ಸರ್ಕಾರಕ್ಕೆ ನಾಚಿಕೆಯಾಗಬೇಕು. ರೈತರು ಪ್ರತಿಭಟನೆ ಆರಂಭಿಸಿ 10 ತಿಂಗಳಾದರೂ ಅವರಿಗೆ ನ್ಯಾಯ ಕೊಡಲು, ಕಾನೂನಿಗೆ ತಿದ್ದುಪಡಿ ತರಲು ಆಗಿಲ್ಲ. ಇಂತಹ ಸರ್ಕಾರ ನಮಗೆ ಬೇಕಾ ಎಂದು ಜನ ಚಿಂತನೆ ನಡೆಸುತ್ತಿದ್ದಾರೆ. ಬಿಜೆಪಿ ಈಗಲಾದರೂ ಪ್ರಚಾರ ಬಿಟ್ಟು ಜನರ ಕಷ್ಟದ ಬಗ್ಗೆ ಗಮನಹರಿಸಲಿ.

ಪಕ್ಷದ ಸಂಘಟನೆ ವಿಚಾರವಾಗಿ ಕೇಂದ್ರ ನಾಯಕರು ಎಲ್ಲ ರಾಜ್ಯಗಳ ನಾಯಕರನ್ನು ಕರೆಸಿ ಮಾತನಾಡುತ್ತಿದ್ದು, ಹೀಗಾಗಿ ಸಿದ್ದರಾಮಯ್ಯ ಅವರನ್ನು ಕರೆಸಿಕೊಂಡಿದ್ದಾರೆ. 

ನಮ್ಮ ಪಕ್ಷ ಮುಂದಿನ ಚುನಾವಣೆಗೆ ಸಿದ್ಧತೆ ಮಾಡಿಕೊಳ್ಳುತ್ತಿದ್ದು, ತಂತ್ರಗಾರಿಕೆಗಿಂದ ಜನರ ಸಮಸ್ಯೆಗೆ ಸ್ಪಂದಿಸುವ ಬಗ್ಗೆ ಹೆಚ್ಚಿನ ಗಮನಹರಿಸುತ್ತಿದ್ದೇವೆ. ನಾವು ಈಗ ಚುನಾವಣೆ ಬಗ್ಗೆ ಗಮನಹರಿಸಿದರೆ, ಈಗ ಕೋವಿಡ್ ನಿಂದ ಆದ ಅನ್ಯಾಯ, ಉತ್ತರ ಪ್ರದೇಶದಲ್ಲಿ ರೈತರ ಹತ್ಯೆ, ರೈತರಿಗೆ ಯೂರಿಯಾ ಸಿಗದಿರುವ ಸಮಸ್ಯೆ ಬಗ್ಗೆ ನಿರ್ಲಕ್ಷ್ಯ ವಹಿಸಬೇಕಾಗುತ್ತದೆ. ಹೀಗಾಗಿ ನಾವು ಜನರ ಕಷ್ಟದ ಬಗ್ಗೆ ಗಮನಹರಿಸುತ್ತಿದ್ದೇವೆ.

ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್ ಅವರ ನಡುವೆ ಭಿನ್ನಭಿಪ್ರಾಯ ಇಲ್ಲ. ಇವರಿಬ್ಬರಲ್ಲಿ ಯಾರಾದರೂ ಬ್ಬರು ಪರಸ್ಪರವಾಗಿ ಟೀಕೆ ಮಾಡಿದ್ದಾರಾ? ಇದು ಕೇವಲ ಊಹಾಪೋಹಗಳ ಸುದ್ದಿ. ಮಾಧ್ಯಮಗಳು ರಾಜ್ಯ ಹಾಗೂ ರಾಷ್ಟ್ರದ ಹಿತದೃಷ್ಟಿಯಿಂದ ಕಾಂಗ್ರೆಸ್ ಪಕ್ಷದ ಚಿಂತನೆಗಳ ಬಗ್ಗೆ ಆದ್ಯತೆ ನೀಡಬೇಕು. ಯಾರು ಅಧಿಕಾರಕ್ಕೆ ಬಂದರೆ ರಾಜ್ಯದ ಹಿತ ಕಾಯುತ್ತಾರೆ ಎಂಬುದನ್ನು ಆಲೋಚಿಸಿ.

ಕೋವಿಡ್ ಹಿನ್ನೆಲೆಯಲ್ಲಿ ಪದಾಧಿಕಾರಿಗಳ ಪಟ್ಟಿಗೆ ವಿಳಂಬವಾಯಿತು. ಈಗ ಅದಕ್ಕೆ ಅನುಮತಿ ಪಡೆಯಲು ಅಧ್ಯಕ್ಷರು ದೆಹಲಿಗೆ ತೆರಳಿದ ದಿನವೇ ಉಪಚುನಾವಣೆ ಪ್ರಕಟವಾಗಿದೆ.

ಪ್ರತಿ ಸಮಾಜದ ನಾಯಕರನ್ನು ನೋಡಲು ಸಾಧ್ಯವಾಗುವುದು ಕಾಂಗ್ರೆಸ್ ನಲ್ಲಿ ಮಾತ್ರ. ಎಲ್ಲ ವರ್ಗದ ಜನರಿಗೆ ಕಾರ್ಯಕ್ರಮ ನೀಡಲು ಕೇವಲ ಕಾಂಗ್ರೆಸ್ ಸರ್ಕಾರದಿಂದ ಮಾತ್ರ ಸಾಧ್ಯ. ಡಿ.ಕೆ. ಶಿವಕುಮಾರ್, ಸಿದ್ದರಾಮಯ್ಯ, ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್, ಆರ್.ವಿ ದೇಶಪಾಂಡೆ, ಎಂ.ಬಿ. ಪಾಟೀಲ್, ಎಸ್.ಆರ್ ಪಾಟೀಲ್, ಈಶ್ವರ್ ಖಂಡ್ರೆ ಹೀಗೆ ಎಲ್ಲ ಸಮುದಾಯದ ಸಮರ್ಥ ನಾಯಕರೂ ಇದ್ದಾರೆ.  

ಪಕ್ಷದ ಸಂಘಟನೆ ವಿಚಾರವಾಗಿ ಪಕ್ಷದ ಒಕ್ಕಲಿಗ ಹಾಗೂ ಲಿಂಗಾಯತ ನಾಯಕರುಗಳು ಸಭೆ ನಡೆಸಿದ್ದಾರೆ. ಅದೇ ರೀತಿ ಇತರೆ ಸಮುದಾಯದ ನಾಯಕರೂ ಸಭೆ ಮಾಡಲಿದ್ದಾರೆ. ಅದರಲ್ಲಿ ತಪ್ಪಿಲ್ಲ. ಸಿದ್ದರಾಮಯ್ಯ ಅವರು, ಡಿ.ಕೆ. ಶಿವಕುಮಾರ್, ಮಲ್ಲಿಕಾರ್ಜುನ ಖರ್ಗೆ ಅವರು ಒಂದು ಸಮುದಾಯಕ್ಕೆ ಸೀಮಿತವಾದ ನಾಯಕರಲ್ಲ. ಅವರು ಈ ರಾಜ್ಯದ ಎಲ್ಲ ವರ್ಗದ ಜನರ ನಾಯಕರು. 

ಸಿದ್ದರಾಮಯ್ಯ ಅವರು ಕೇವಲ ಕುರುಬ ಅಥವಾ ಹಿಂದ ಸಮುದಾಯಕ್ಕೆ ಸೇರಿದವರಲ್ಲ. ರಾಜ್ಯದ 7 ಕೋಟಿ ಜನರ ನಾಯಕ. ಪಕ್ಷದಲ್ಲಿರುವ ಇತರೆ ಹಿಂದ ನಾಯಕರು ಸಭೆ ಮಾಡಿದರೆ ತಪ್ಪೇನು. ಒಕ್ಕಲಿಗರು, ಲಿಂಗಾಯತ, ದಲಿತ ನಾಯಕರು ಆಯಾ ಸಮಾಜದ ಸಮಸ್ಯೆಯನ್ನು ಶಿವಕುಮಾರ್, ಸಿದ್ದರಾಮಯ್ಯ ಅವರ ಸಮ್ಮುಖದಲ್ಲಿ ಚರ್ಚಿಸಿದರೆ ತಪ್ಪೇನು? 

*ಜೆಡಿಎಸ್ ಗೆ ಕೌಂಟರ್ ಕೊಟ್ಟು ರಾಜಕಾರಣ ಮಾಡುವ ಪರಿಸ್ಥಿತಿ ಕಾಂಗ್ರೆಸ್ ಗಿಲ್ಲ:*

ಜೆಡಿಎಸ್ ನೋಡಿ ನಮಗೆ ನಡುಕ ಆಗಿದೆ ಎಂದು ನಾವ್ಯಾರು ಹೇಳಿಲ್ಲ. ಯಾರಿಗೆ ಸೋಲಿನ ಭೀತಿ ಇರುತ್ತದೆಯೋ ಅವರು ಎಲ್ಲರಿಗೂ ಮುಂಚಿತವಾಗಿ ಯೋಚಿಸಲು ಆರಂಭಿಸುತ್ತಾರೆ. 2018ರ ಚುನಾವಣೆಯಲ್ಲಿ ನಮ್ಮದೇ ಪೂರ್ಣ ಸರ್ಕಾರ ಬರುತ್ತದೆ. ಜನ ಆ ಅವಕಾಶ ಕೋಡದಿದ್ದರೆ ಯಾವ ಪಕ್ಷದ ಜತೆ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದಿದ್ದರು. ಕಳೆದ 20 ವರ್ಷಗಳಿಂದ ಅವರದ್ದು ಒಂದೇ ಮಾತನ್ನು ಪದೇ ಪದೆ ಪುನರುಚ್ಛರಿಸುತ್ತಿದ್ದಾರೆ.

ಕಾಂಗ್ರೆಸ್ ನಾಯಕರ ಬಗ್ಗೆ ಮಾತನಾಡಿದರೆ ಅವರು ಟೀಕೆ ಮಾಡುತ್ತಾರೆ, ಆಗ ಜನರ ಸಿಂಪತಿ ಸಿಗುತ್ತದೆ ಎಂಬ ತಂತ್ರಗಾರಿಕೆಯಿಂದ ಕುಮಾರಸ್ವಾಮಿ ಅವರು ಕಾಂಗ್ರೆಸ್ ನಾಯಕರನ್ನು ಟಾರ್ಗೆಟ್ ಮಾಡುತ್ತಿದ್ದಾರೆ. ಜೆಡಿಎಸ್ ಗೆ ಕೌಂಟರ್ ಮಾಡಿಕೊಂಡು ರಾಜಕಾರಣ ಮಾಡುವ ಪರಿಸ್ಥಿತಿ ನಮಗಿಲ್ಲ. ನಾವು ರಾಜಕಾರಣ ಮಾಡಲು ಅನೇಕ ಜನಪರ ಕಾರ್ಯಕ್ರಮಗಳು ಇವೆ. ಕಾಂಗ್ರೆಸ್ ಸರ್ಕಾರ ಕೊಟ್ಟಿರುವ ಕಾರ್ಯಕ್ರಮಗಳೇ ನಮ್ಮ ಶಕ್ತಿ.

10 ಕೆ.ಜಿ ಅಕ್ಕಿ ಕೊಟ್ಟು ಜನರನ್ನು ಭಿಕ್ಷುಕರನ್ನಾಗಿ ಮಾಡುವುದಾದರೆ, ತಮಿಳುನಾಡಿನಲ್ಲಿ ಕೊಟ್ಟ ಕಾರ್ಯಕ್ರಮಗಳಿಂದ ಅವರು ಭಿಕ್ಷುಕರಾಗಿದ್ದಾರಾ? ಇನ್ನು ಮೋದಿ ಅವರು ಖಾತೆಗೆ 500 ರೂ. ಹಾಕಿರುವುದು ಭಿಕ್ಷೆಯೇ? ಕೋವಿಡ್ ಸಮಯದಲ್ಲಿ ಸಿದ್ದರಾಮಯ್ಯ ಅವರು ಅಕ್ಕಿ ಕೊಟ್ಟಿದ್ದರಿಂದಲೇ ನಾವು ಇಂದು ಊಟ ಮಾಡಿ ನೆಮ್ಮದಿಯಿಂದ ಇದ್ದೇವೆ ಎಂದು ಜನ ಮಾತನಾಡಿಕೊಳ್ಳುತಿದ್ದಾರೆ. ಇದೇ ರೀತಿ ಹಸಿವು ನೀಗಿಸುವ ಕಾರ್ಯಕ್ರಮವನ್ನು ಮುಂದಿನ ದಿನಗಳಲ್ಲಿ ಹಮ್ಮಿಕೊಳ್ಳುತ್ತೇವೆ ಎಂದು ಸಿದ್ದರಾಮಯ್ಯ ಅವರು ಹೇಳಿದ್ದಾರೆ. 

ಜೆಡಿಎಸ್ ಅವರು ಮೇಲ್ನೋಟಕ್ಕೆ ಬಿಜೆಪಿ ವಿರುದ್ಧ ಮಾತನಾಡುತ್ತಾರೆ, ನಂತರ ಮುಖ್ಯಮಂತ್ರಿಗಳ ಬಳಿ ಹೋಗಿ ತಮ್ಮ ಶಾಸಕರ ಕ್ಷೇತ್ರಕ್ಕೆ ಅನುದಾನ ಬಿಡುಗಡೆ ಮಾಡಿಸುತ್ತಾರೆ. ಕಲ್ಬುರ್ಗಿ ಪಾಲಿಕೆ ಚುನಾವಣೆಯಲ್ಲಿ 4 ಸೀಟು ಬಂದರೂ ಬಿಜೆಪಿ ಜತೆ ಕೈಜೋಡಿಸುತ್ತಾರೆ. ಸಿಂದಗಿ ಹಾಗೂ ಹಾನಗಲ್ ಉಪಚುನಾವಣೆಯಲ್ಲಿ ಕಾಂಗ್ರೆಸ್ ಮತ ಕಿತ್ತು ಬಿಜೆಪಿ ಗೆಲುವಿಗೆ ಸಹಕರಿಸಲು ಮುಸ್ಲಿಂ ಅಭ್ಯರ್ಥಿಯನ್ನು ನಿಲ್ಲಿಸಿದ್ದಾರೆ. ಇವರ ತಂತ್ರಗಾರಿಕೆ ಜನರಿಗೂ ಅರಿವಾಗುತ್ತಿದೆ. 

ಕಾಂಗ್ರೆಸ್ ಮುಂದಿನ ಚುನಾವಣೆಯಲ್ಲಿ ಅಧಿಕಾರಕ್ಕೆ ಬರುತ್ತದೆ ಎನ್ನುವ ಭಯದಲ್ಲಿ ಕುಮಾರಸ್ವಾಮಿ ಅವರು ಈ ಎಲ್ಲ ತಂತ್ರಗಾರಿಕೆ ಮಾಡುತ್ತಿದ್ದಾರೆ. ಅವರು ಪೂರ್ಣ ಬಹುಮತಕ್ಕಾಗಿ ರಾಜಕಾರಣ ಮಾಡುತ್ತಿಲ್ಲ. ಕುಮಾರಸ್ವಾಮಿ ಅವರು ಯಾವತ್ತು ನಾವು ಅಧಿಕಾರಕ್ಕೆ ಬರುವುದಿಲ್ಲ ಎಂದಿದ್ದಾರೆ? ಕಾಂಗ್ರೆಸ್ ಹಾಗೂ ಬಿಜೆಪಿಗೆ 115ಕ್ಕಿಂತ ಹೆಚ್ಚು ಸೀಟು ಹೋಗದಂತೆ ನೋಡಿಕೊಳ್ಳಲು ರಾಜಕಾರಣ ಮಾಡುತ್ತಿದ್ದಾರೆ. ಜನ ಬುದ್ಧಿವಂತರಿದ್ದು, ಇವರ ರಣತಂತ್ರಕ್ಕೆ ಬಲಿಯಾಗುವುದಿಲ್ಲ.

ಕುಮಾರಸ್ವಾಮಿ ಅವರಿಗೆ ಕಾಂಗ್ರೆಸ್ ಪಕ್ಷಕ್ಕೆ ನೆರವಾಗುವ ಔದಾರ್ಯತೆ ಇರುವುದು ನಿಜವೇ ಆಗಿದ್ದರೆ, ಸಿಂದಗಿ ಹಾಗೂ ಹಾನಗಲ್ ಉಪಚುನಾವಣೆಯಲ್ಲಿ ಕಣಕ್ಕಿಳಿಸಿರುವ ಅಭ್ಯರ್ಥಿಯನ್ನು ಹಿಂಪಡೆಯಲಿ. ಈ ಚುನಾವಣೆಯಲ್ಲಿ ಕಾಂಗ್ರೆಸ್ ಸೋಲಿಸುವ ಉದ್ದೇಶದಿಂದಲೇ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ್ದಾರೆ. ಅವರ ಮಾತು ನಿಜವೇ ಆಗಿದ್ದರೆ ಸಾಬೀತು ಮಾಡಲಿ.

 
*ಸರ್ವಜನಾಂಗದ ಏಕೈಕ ಪಕ್ಷ ಎಂದರೆ ಅದು ಕಾಂಗ್ರೆಸ್: ನರೇಂದ್ರಸ್ವಾಮಿ*

ಯಾವ ಯಾವ ರಾಜ್ಯದಲ್ಲಿ ಯಾವ ಸಮುದಾಯಕ್ಕೆ ಮುಖ್ಯಮಂತ್ರಿ ಸ್ಥಾನ ನೀಡಬೇಕು ಎಂದು ನಮ್ಮ ಕೇಂದ್ರ ನಾಯಕರು ಸೂಕ್ತ ಸಮಯದಲ್ಲಿ ಸೂಕ್ತ ನಿರ್ಧಾರ ಕೈಗೊಳ್ಳುತ್ತಾರೆ. ಅದನ್ನು ಈಗಾಗಲೇ ಸಾಬೀತುಪಡಿಸಿದೆ. ಕಾಂಗ್ರೆಸ್ ಎಂದಿಗೂ ಹೇಳಿಕೊಂಡು ಈ ಕೆಲಸ ಮಾಡಿಲ್ಲ. ಸರ್ವಜನಾಂಗದ ಏಕೈಕ ಪಕ್ಷ ಎಂದರೆ ಅದು ಕಾಂಗ್ರೆಸ್. ನಮಗೆ ಸಿಎಂ ಸ್ಥಾನ ನೀಡಬೇಕು ಎಂಬ ಬೇಡಿಕೆ ತಪ್ಪಲ್ಲ. ಪಕ್ಷದ ತೀರ್ಮಾನ ಅಂತಿಮ. ನಾವೆಲ್ಲರೂ ಪಕ್ಷದ ತೀರ್ಮಾನಕ್ಕೆ ಬದ್ಧರಾಗಿದ್ದೇವೆ.

Post a Comment

Previous Post Next Post