ಚನ್ನಮ್ಮನ ಕಿತ್ತೂರು ಕೋಟೆ ಆವರಣದಲ್ಲಿ ಕಿತ್ತೂರು ಉತ್ಸವದ ಬೆಳ್ಳಿ ಹಬ್ಬಕ್ಕೆ ಚಾಲನೆ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಬೆಳಗಾವಿ ಜಿಲ್ಲೆ ಚನ್ನಮ್ಮನ ಕಿತ್ತೂರು ಕೋಟೆ ಆವರಣದಲ್ಲಿ ಕಿತ್ತೂರು ಉತ್ಸವದ ಬೆಳ್ಳಿ ಹಬ್ಬಕ್ಕೆ ಚಾಲನೆ ನೀಡಿದರು. 




ಕೇಂದ್ರ ಕಲ್ಲಿದ್ದಲು ಮತ್ತು ಗಣಿ ಸಚಿವ ಪ್ರಲ್ಹಾದ ಜೋಷಿ, ಅರಣ್ಯ, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಸಚಿವ ಉಮೇಶ್ ಕತ್ತಿ, ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಇಲಾಖೆಯ ಸಚಿವ ಮುರುಗೇಶ್ ನಿರಾಣಿ, ವಿಧಾನಪರಿಷತ್ತಿನ ಸರಕಾರದ ಮುಖ್ಯ ಸಚೇತಕ ಮಹಾಂತೇಶ ಕವಟಗಿಮಠ, ವಿಧಾನಸಭೆ ಉಪಾಧ್ಯಕ್ಷ  ಆನಂದ ಮಾಮನಿ, ಚಿಕ್ಕೋಡಿ ಸಂಸದ ಅಣ್ಣಾಸಾಹೇಬ್ ಜೊಲ್ಲೆ, ಬೆಳಗಾವಿ ಸಂಸದರಾದ ಮಂಗಳಾ ಅಂಗಡಿ, ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ, ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಮಹೇಶ‌ ಕುಮಠಳ್ಳಿ ಮತ್ತಿತರ ಗಣ್ಯರು ಸಮಾರಂಭದಲ್ಲಿ ಭಾಗವಹಿಸಿದ್ದರು.

Post a Comment

Previous Post Next Post