ಕಾಂಗ್ರೆಸ್​​​ ಪಕ್ಷಕ್ಕೆ ನಾನೇ ಪೂರ್ಣಾವಧಿ ಅಧ್ಯಕ್ಷೆ: G23 ಸಭೆಯಲ್ಲಿ ಸೋನಿಯಾ ಗಾಂಧಿ

 ಕಾಂಗ್ರೆಸ್​​​ ಪಕ್ಷಕ್ಕೆ ನಾನೇ ಪೂರ್ಣಾವಧಿ ಅಧ್ಯಕ್ಷೆಯಾಗಿದ್ದು, ಯಾವುದೇ ಸಮಸ್ಯೆಗಳಿದ್ದರೆ ಮಾಧ್ಯಮಗಳ ಮುಂದೆ ಹೋಗದೇ ನನ್ನ ಹತ್ತಿರ ಬರುವಂತೆ ಸೋನಿಯಾ ಗಾಂಧಿ ಹೇಳಿಕೊಂಡಿದ್ದಾರೆ.

ತೀವ್ರ ಕುತೂಲಹ ಕೆರಳಿಸಿರುವ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆ ಇಂದು ದೆಹಲಿಯಲ್ಲಿರುವ ಎಐಸಿಸಿ ಕಚೇರಿಯಲ್ಲಿ  ನಡೆಯಿತು.
G23 ಸಭೆಯಲ್ಲಿ ಭಾಗಿಯಾಗಿ ಮಾತನಾಡಿರುವ ಸೋನಿಯಾ ಗಾಂಧಿ, ಸಭೆಯನ್ನು ಉದ್ದೇಶಿಸಿ ಮಾತನಾಡಿದ ಸೋನಿಯಾ ಗಾಂಧಿ, ಕಾಂಗ್ರೆಸ್‌ ಪಕ್ಷಕ್ಕೆ ನಾನೇ ಪೂರ್ಣಾವಧಿಯ, ಸಕ್ರಿಯ ಅಧ್ಯಕ್ಷೆ.. ಅದು ಕೂಡ ನೀವು ಒಪ್ಪಿದರೆ ಮಾತ್ರ. ಇಡೀ ಸಂಘಟನೆ ಕಾಂಗ್ರೆಸ್‌ನ ಪುನರುಜ್ಜೀವನವನ್ನು ಬಯಸುತ್ತದೆ. ಇದಕ್ಕೆ, ಒಗ್ಗಟ್ಟು, ಪಕ್ಷದ ಹಿತವೇ ಅಂತಿಮ ಎಂಬ ಮನೋಭವಾ ಅಗತ್ಯ. ಎಲ್ಲಕ್ಕಿಂತ ಸ್ವಯಂ ನಿಯಂತ್ರಣ ಮತ್ತು ಶಿಸ್ತಿನ ಅಗತ್ಯವಿದೆ ಎಂದು ಹೇಳಿದರು.
ನಾವೆಲ್ಲರೂ ಮುಕ್ತ ಮತ್ತು ಪ್ರಾಮಾಣಿಕವಾಗಿ ಚರ್ಚೆ ಮಾಡೋಣ. ನಾಲ್ಕು ಕೊಠಡಿಗಳ ಹೊರೆಗೆ ಏನು ಮಾತನಾಡಬೇಕು ಎಂಬುದರ ಬಗ್ಗೆ ಕಾರ್ಯಕಾರಿಣಿ ಸಮಿತಿ ಸಭೆಯಲ್ಲಿ ನಿರ್ಧಾರ ಮಾಡೋಣ ಎಂದರು.
ಕಾಂಗ್ರೆಸ್​​​ ಪಕ್ಷದ ಪ್ರತಿಯೊಬ್ಬರು ಪಕ್ಷದ ಪುನಶ್ಚೇತನ ಬಯಸುತ್ತಾರೆ. ಅದಕ್ಕಾಗಿ ಒಗ್ಗಟ್ಟಿನಿಂದ ಕೆಲಸ ಮಾಡುವ ಅಗತ್ಯವಿದೆ . ಮನಮೋಹನ್ ಸಿಂಗ್ ಹಾಗೂ ರಾಹುಲ್​ ಗಾಂಧಿ ಅವರಂತೆ ನಾನು ಪ್ರಧಾನಿ ಜೊತೆ ಮಾತನಾಡಿ, ದೇಶದಲ್ಲಿನ ಜ್ವಲಂತ ಸಮಸ್ಯೆಗಳ ಬಗ್ಗೆ ತಿಳಿಸುವೆ ಎಂದರು.
ಸೋನಿಯಾ ಗಾಂಧಿ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಪ್ರಿಯಾಂಕಾ ಗಾಂಧಿ, ರಾಹುಲ್​ ಗಾಂಧಿ ಸೇರಿದಂತೆ ಕಾಂಗ್ರೆಸ್​ ಪಕ್ಷದ ಸುಮಾರು 52 ಪ್ರಮುಖ ನಾಯಕರು ಭಾಗಿಯಾಗಿದ್ದರು. ಆದರೆ ದಿಗ್ವಿಜಯ್ ಸಿಂಗ್ ಹಾಗೂ ಮನಮೋಹನ್​ ಸಿಂಗ್​ ಸೇರಿದಂತೆ ಕೆಲವರು ಗೈರಾಗಿದ್ದರು.

Post a Comment

Previous Post Next Post