ಬೆಂಗಳೂರು ದಕ್ಷಿಣ ವಿಧಾನಸಭೆ ಕ್ಷೇತ್ರದ ಉತ್ತರಹಳ್ಳಿ ವಿಭಾಗದ ಬಿಜೆಪಿ ಮುಖಂಡ ದೇವರಾಜ್ ಹಾಗೂ ಜೆಡಿಎಸ್ ಮುಖಂಡ ಈಶ್ವರ್ ಅವರು ತಮ್ಮ ಅಪಾರ ಬೆಂಬಲಿಗರ ಜತೆ ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗಾರೆಡ್ಡಿ ಹಾಗೂ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಸದಸ್ಯ ಡಿ.ಕೆ. ಸುರೇಶ್ ಅವರ ಸಮ್ಮುಖದಲ್ಲಿ ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಶುಕ್ರವಾರ ಸೇರ್ಪಡೆಯಾದರು. ಡಿಸಿಸಿ ಅಧ್ಯಕ್ಷ ಕೃಷ್ಣಪ್ಪ, ಮುಖಂಡ ಆರ್.ಕೆ. ರಮೇಶ್ ಮತ್ತಿತರರು ಉಪಸ್ಥಿತರಿದ್ದರು.
Post a Comment