*ಫುಡ್ ಪಾರ್ಕ್ ಯಶಸ್ವಿಗೊಳಿಸಲು ಪರಿಣಾಮ ಮೌಲ್ಯಮಾಪನ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚನೆ*

*ಫುಡ್ ಪಾರ್ಕ್ ಯಶಸ್ವಿಗೊಳಿಸಲು ಪರಿಣಾಮ ಮೌಲ್ಯಮಾಪನ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚನೆ*
ಬೆಂಗಳೂರು, ಜನವರಿ 29 :  ರಾಜ್ಯ ಸರ್ಕಾರ ಪ್ರಾಯೋಜಿತ ನಾಲ್ಕು ಆಹಾರ ಪಾರ್ಕ್ ಗಳನ್ನು ಯಶಸ್ವಿಗೊಳಿಸಲು  'ಪರಿಣಾಮ  ಮೌಲ್ಯಮಾಪನ' ( impact assessment) ಮಾಡುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚಿಸಿದರು. 

ಆಹಾರ ಕರ್ನಾಟಕ ನಿಯಮಿತದ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಇಂದು  ಮಾತನಾಡುತ್ತಿದ್ದರು. 

ಬಾಗಲಕೋಟೆ, ಹಿರಿಯೂರು, ಮಾಲೂರು ಮತ್ತು ಜೇವರ್ಗಿಯಲ್ಲಿರುವ    ಫುಡ್ ಪಾರ್ಕ್ ಗಳಿಗೆ ಸಂಬಂಧಿಸಿದಂತೆ ಭೂಮಿ, ಈಕ್ವಿಟಿ, ಮೂಲಭೂತ ಸೌಕರ್ಯಗಳನ್ನು ಪರಿಶೀಲಿಸಬೇಕು. 
ಆಹಾರ ಕರ್ನಾಟಕ ನಿಯಮಿತ ಫುಡ್  ಪಾರ್ಕ್ ಗಳನ್ನು ಆರಂಭಿಸಲು ಕೋರಿರುವ  26 ಕೋಟಿ ರೂ.ಗಳ ಅನುದಾನ ಒದಗಿಸುವ ಬಗ್ಗೆ ಆರ್ಥಿಕ ಇಲಾಖೆ ಪರಿಶೀಲನೆಯ ನಂತರ ತೀರ್ಮಾನಕ್ಕೆ  ಬರಲಾಗುವುದು ಎಂದು ತಿಳಿಸಿದರು.


ಸಭೆಯಲ್ಲಿ ಕೃಷಿ ಸಚಿವ ಬಿ.ಸಿ.ಪಾಟೀಲ್,  ಸಂಸದ ಶಿವಕುಮಾರ್ ಉದಾಸಿ, ವಿಧಾನ ಪರಿಷತ್ ಸದಸ್ಯ ವೈ.ಯೇ.ನಾರಾಯಣಸ್ವಾಮಿ, ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಹಾಗೂ ಅಭಿವೃದ್ಧಿ ಆಯುಕ್ತೆ ವಂದಿತಾ ಶರ್ಮಾ, ಮುಖ್ಯ ಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಎನ್.ಮಂಜುನಾಥ್ ಪ್ರಸಾದ್ , ಆಹಾರ ಕರ್ನಾಟಕ ನಿಯಮಿತದ ಅಧ್ಯಕ್ಷ ಡಾ: ಐ.ಎಸ್. ಪ್ರಸಾದ್ ಉಪಸ್ಥಿತರಿದ್ದರು.

Post a Comment

Previous Post Next Post