ಯಡಿಯೂರಪ್ಪ ಅವರ ಕೊನೆಯ ಮಗಳಾದದ ಪದ್ಮ ಮರಿಸ್ವಾಮಿ ಮಗಳು ಆತ್ಮಹತ್ಯೆ ನಿರ್ಧಾರ ಕೈಗೊಂಡ ದುರ್ದೈವಿ. ಶ್ಯಾಂಗ್ರೀಲಾ ಹೋಟೆಲ್ ಬಳಿ ಅಪಾರ್ಟ್ಮೆಂಟ್ ಒಂದರಲ್ಲಿ ಈ ಘಟನೆ ನಡೆದಿದೆ
ಹೈಗ್ರೌಂಡ್ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಸೌಂದರ್ಯ ಅವರು ಎಂ.ಎಸ್. ರಾಮಯ್ಯ ಆಸ್ಪತ್ರೆಯಲ್ಲಿ ವೈದ್ಯೆಯಾಗಿ ಸೇವೆ ಸಲ್ಲಿಸುತ್ತಿದ್ದರು ಎಂದು ತಿಳಿದುಬಂದಿದೆ.
ಮೃತದೇಹವನ್ನು ಬೌರಿಂಗ್ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.ಬೆಂಗಳೂರು: ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರ ಮೊಮ್ಮಗಳು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನ ಹೈಗ್ರೌಂಡ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಬಿ ಎಸ್ ವೈ ಪುತ್ರಿ ಪದ್ಮಾವತಿ ಮಗಳು ಸೌಂದರ್ಯ (30) ಆತ್ಮಹತ್ಯೆಗೆ ಶರಣಾಗಿದ್ದಾರೆ.ಈ ಹಿನ್ನಲೆ ಅವರು ಮಲ್ಲಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆಯನ್ನು ಪಡೆಯುತ್ತಿದ್ದರು, ಅವರಿಗೆ ಒಂದು ಆರು ತಿಂಗಳ ಪುಟ್ಟ ಮಗು ಕೂಡ ಇದೆ.
ಸೌಂದರ್ಯ ಪತಿ ನೀರಜ್ ಕೂಡ ವೈದ್ಯರಾಗಿದ್ದರು. ಇಂದು ಎಂದಿನಂತೆ ಅವರು ಆಸ್ಪತ್ರೆಗೆ ತೆರಳಿದ ಬಳಿಕ ಸೌಂದರ್ಯ ಈ ಕೃತ್ಯಕ್ಕೆ ಮುಂದಾಗಿದ್ದಾರೆ.
ಮನೆಕೆಲಸದವರು ಬಂದು ಎಷ್ಟು ಬಡಿದರೂ ಸೌಂದರ್ಯ ರೂಮಿನ ಬಾಗಿಲು ತೆರೆಯಲಿಲ್ಲ ಬಳಿಕ ನೀರಜ್ಗೆ ಕರೆ ಮಾಡಿದ್ದಾರೆ. ಆಸ್ಪತ್ರೆಯಿಂದ ಬಂದ ವೈದ್ಯ ನೀರಜ್ ಬಾಗಿಲು ಮುರಿದ ಒಳ ಹೋದಾಗ ಅವರು ಫ್ಯಾನ್ಗೆ ನೇಣು ಹಾಕಿಕೊಂಡಿದ್ದರು.
ತಕ್ಷಣಕ್ಕೆ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಿಸಲಿಲ್ಲ. ಮೊಮ್ಮಗಳು ಸಾವನ್ನಪ್ಪಿದ ಸುದ್ದಿ ತಿಳಿಯುತ್ತಿದ್ದಂತೆ ಬಿಎಸ್ ಯಡಿಯೂರಪ್ಪ ಮತ್ತು ಸಿಎಂ ಸೇರಿದಂತೆ ಅನೇಕ ಬಿಜೆಪಿ ಶಾಸಕರು ಇದೀಗ ಬೌರಿಂಗ್ ಆಸ್ಪತ್ರೆಗೆ ತೆರಳಿದ್ದಾರೆ
ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಪೊಲೀಸರು ಇದೀಗ ಮೃತ ಸೌಂದರ್ಯ ಅವರ ಕರೆಗಳನ್ನು ಸಂಗ್ರಹಿಸಿದ್ದು, ಎಲ್ಲಾ ಆಯಾಮದಲ್ಲೂ ತನಿಖೆಗೆ ಮುಂದಾಗಿದ್ದಾರೆ
Post a Comment