ಬೆಂಗಳೂರು, ಜನವರಿ 31: ರಾಜ್ಯಾದ್ಯಂತ ಚಳಿ ಕಡಿಮೆಯಾಗಿದ್ದು, ಒಣಹವಚೆ ಮುಂದುವರೆದಿದೆ, ಕಳೆದ ಕೆಲವು ದಿನಗಳಿಂದ ಮೋಡಕವಿದ ವಾತಾವರಣ ನಿರ್ಮಾಣವಾಗುತ್ತಿದೆ.
ಬೀದರ್‌ನಲ್ಲಿ 9.6 ಡಿಗ್ರಿ ಸೆಲ್ಸಿಯಸ್ ಅತಿ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಬೆಂಗಳೂರಿನಲ್ಲಿ 30 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಎಚ್‌ಎಎಲ್‌ನಲ್ಲಿ 30.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 31.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್‌ನಲ್ಲಿ 29.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ ದಾಖಲಾಗಿದೆ.
ಹೊನ್ನಾವರದಲ್ಲಿ 34.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 37.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಶಿರಾಲಿಯಲ್ಲಿ 33.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.7 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಮಂಗಳೂರು ಏರ್‌ಪೋರ್ಟ್‌ನಲ್ಲಿ 34.7 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.6ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಪಣಂಬೂರಿನಲ್ಲಿ 36.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ದೆಹಲಿ, ಉತ್ತರ ಪ್ರದೇಶ, ಹರಿಯಾಣ, ಜಮ್ಮು ಮತ್ತು ಕಾಶ್ಮೀರ, ಬಿಹಾರ, ಅಸ್ಸಾಂ, ಮೇಘಾಲಯ ಮತ್ತು ಮಧ್ಯ ಮಹಾರಾಷ್ಟ್ರದ ಕೆಲವು ಸ್ಥಳಗಳಲ್ಲಿ ಇಂದು ಮಳೆಯಾಗಲಿದೆ. ಫೆಬ್ರವರಿ 5ರವರೆಗೆ ಶೀತ ಅಲೆ ಮತ್ತು ಮಳೆಯಾಗಲಿದೆ. ಇಂದು ಪಂಜಾಬ್, ಹರಿಯಾಣ, ಚಂಡೀಗಢ, ಪಶ್ಚಿಮ ಉತ್ತರ ಪ್ರದೇಶ, ಮಧ್ಯಪ್ರದೇಶ, ವಿದರ್ಭ (ಮಹಾರಾಷ್ಟ್ರದಲ್ಲಿ), ಮತ್ತು ಛತ್ತೀಸ್‌ಗಢದಲ್ಲಿ ಚಳಿಯಿಂದ ತೀವ್ರ ಚಳಿಯ ದಿನ ಪರಿಸ್ಥಿತಿಗಳು ಇರಬಹುದೆಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್, ಉತ್ತರಾಖಂಡದಲ್ಲಿ ಮಳೆಯಾಗಲಿದೆ. ಜನವರಿ 31 ಮತ್ತು ಫೆಬ್ರವರಿ 1ರಂದು ಸಿಕ್ಕಿಂ, ಅಸ್ಸಾಂ, ಮೇಘಾಲಯ, ಅರುಣಾಚಲ ಪ್ರದೇಶ, ತ್ರಿಪುರಾ, ನಾಗಾಲ್ಯಾಂಡ್, ಮಣಿಪುರ ಮತ್ತು ಮಿಜೋರಾಂನಲ್ಲಿ ಮಳೆಯಾಗುವ ಸಾಧ್ಯತೆಯಿದೆ.
ಪಂಜಾಬ್, ಹರಿಯಾಣ, ಉತ್ತರ ಪ್ರದೇಶ, ರಾಜಸ್ಥಾನ ಮತ್ತು ಮಧ್ಯಪ್ರದೇಶ ಸೇರಿದಂತೆ ವಾಯುವ್ಯ ಮತ್ತು ಮಧ್ಯ ಭಾರತದ ಹಲವಾರು ರಾಜ್ಯಗಳು ಇಂದು ತೀವ್ರ ಶೀತ ಅಲೆಯ ಪರಿಸ್ಥಿತಿಗಳಿಗೆ ಸಾಕ್ಷಿಯಾಗಲಿವೆ ಎಂದು ಭಾರತೀಯ ಹವಾಮಾನ ಇಲಾಖೆ ತನ್ನ ಇತ್ತೀಚಿನ ಬುಲೆಟಿನ್‌ನಲ್ಲಿ ಮುನ್ಸೂಚನೆ ನೀಡಿದೆ. ಫೆಬ್ರವರಿ 2 ಮತ್ತು 4ರ ನಡುವೆ ಉತ್ತರ ಪ್ರದೇಶ, ಪಂಜಾಬ್, ಹರಿಯಾಣ, ಚಂಡೀಗಢ ಮತ್ತು ದೆಹಲಿಯಲ್ಲಿ ವ್ಯಾಪಕ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ.
ತಮಿಳುನಾಡು ಮತ್ತು ಕೇರಳ ಫೆಬ್ರವರಿ 1ರವರೆಗೆ ಮುಂದಿನ ನಾಲ್ಕು ದಿನಗಳಲ್ಲಿ ಲಘು ಮಳೆಗೆ ಸಾಕ್ಷಿಯಾಗಲಿದೆ ಎಂದು IMD ಮುನ್ಸೂಚನೆ ನೀಡಿದೆ. ಫೆಬ್ರವರಿ 2 ಮತ್ತು 4ರ ನಡುವೆ ಪಶ್ಚಿಮ ಹಿಮಾಲಯನ್ ಪ್ರದೇಶದಲ್ಲಿ ಸ್ವಲ್ಪ ಮಟ್ಟಿಗೆ ಸಾಧಾರಣ ಮಳೆ ಅಥವಾ ಹಿಮಪಾತದ ಸಾಧ್ಯತೆಯಿದೆ. ಫೆಬ್ರವರಿ 3ರಂದು ಜಮ್ಮು ಮತ್ತು ಕಾಶ್ಮೀರ ಮತ್ತು ಹಿಮಾಚಲ ಪ್ರದೇಶದ ಮೇಲೆ ಹಿಮ ಬೀಳುವ ಸಾಧ್ಯತೆಯಿದೆ.
ಮುಂದಿನ 2 ದಿನಗಳಲ್ಲಿ ತಮಿಳುನಾಡು, ಪುದುಚೇರಿ, ಕಾರೈಕಲ್ ಮತ್ತು ಕೇರಳ-ಮಾಹೆಯಲ್ಲಿ ಲಘು ಮಳೆಯಾಗುವ ಸಾಧ್ಯತೆಯಿದೆ. ಫೆ. 3 ಮತ್ತು 4ರಂದು ಬಿಹಾರ, ಜಾರ್ಖಂಡ್, ಪಶ್ಚಿಮ ಬಂಗಾಳ ಮತ್ತು ಸಿಕ್ಕಿಂನಲ್ಲಿ ಮತ್ತು 4 ಮತ್ತು 5ರಂದು ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ ಮತ್ತು ತ್ರಿಪುರಾದಲ್ಲಿ ಮಳೆಯಾಗಲಿದೆ.
ಈ ವಾರ ಚೆನ್ನೈ ಸೇರಿದಂತೆ ತಮಿಳುನಾಡಿನ ಕೆಲವು ಭಾಗಗಳಲ್ಲಿ ಅಲ್ಪ ಪ್ರಮಾಣದ ಮಳೆಯಾಗಿದ್ದು, ಮುಂದಿನ ವಾರವೂ ಇದೇ ಮಾದರಿ ಮುಂದುವರಿಯುವ ಸಾಧ್ಯತೆಯಿದೆ. ಕೊಚ್ಚಿ ಮತ್ತು ಚೆನ್ನೈ ಮುಂದಿನ ಕೆಲವು ದಿನಗಳವರೆಗೆ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರಲಿದೆ. ಇಂದು ಜಮ್ಮು ಮತ್ತು ಕಾಶ್ಮೀರ ಮತ್ತು ಲಡಾಖ್‌ನಲ್ಲಿ ಮಳೆಯಾಗಲಿದೆ. ಕರ್ನಾಟಕ ಮತ್ತು ರಾಯಲಸೀಮಾದಲ್ಲಿ ಲಘು ಮಳೆಯಾಗುವ ಸಾಧ್ಯತೆಯಿದೆ. ಇಂದು ಒಡಿಶಾ, ಪಂಜಾಬ್, ಹರಿಯಾಣ, ಚಂಡೀಗಢ, ರಾಜಸ್ಥಾನ, ಪಶ್ಚಿಮ ಉತ್ತರ ಪ್ರದೇಶ, ವಿದರ್ಭ, ಬಿಹಾರ ಮತ್ತು ಛತ್ತೀಸ್‌ಗಢದಲ್ಲಿ ಶೀತ ಗಾಳಿ ಉಂಟಾಗುವ ನಿರೀಕ್ಷೆಯಿದೆ.
ಜನವರಿಯಲ್ಲಿ ದಕ್ಷಿಣ ಭಾರತದಲ್ಲಿ ಮಳೆಯು ಅತ್ಯಲ್ಪವಾಗಿದೆ ಮತ್ತು ಇಡೀ ಪರ್ಯಾಯ ದ್ವೀಪವು ವರ್ಷದ ಮೊದಲ ತಿಂಗಳಲ್ಲಿ ಸರಾಸರಿ 10 ಮಿ.ಮೀಗಿಂತ ಕಡಿಮೆ ಮಳೆಯಾಗಲಿದೆ. ಇಂದು ಜಮ್ಮು ಮತ್ತು ಕಾಶ್ಮೀರ ಮತ್ತು ಲಡಾಖ್‌ನಲ್ಲಿ ಮಳೆ ಅಥವಾ ಹಿಮ ಉಂಟಾಗುವ ಸಾಧ್ಯತೆ
Post a Comment