[27/01, 3:44 PM] +91 90088 29855: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಬೆಂಗಳೂರಿನ ಸದಾಶಿವನಗರದ ನಿವಾಸದ ಬಳಿ ಮಾಧ್ಯಮಗಳಿಗೆ ಗುರುವಾರ ನೀಡಿದ ಪ್ರತಿಕ್ರಿಯೆ...
[27/01, 4:14 PM] +91 90088 29855: *ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ಮಾಧ್ಯಮ ಪ್ರತಿಕ್ರಿಯೆ:*
ನನ್ನ ಹಾಗೂ ಕಾಂಗ್ರೆಸ್ ಸಂಬಂಧ ಮುಗಿಯಿತು ಎಂಬ ಸಿ.ಎಂ ಇಬ್ರಾಹಿಂ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಶಿವಕುಮಾರ್ ಅವರು, 'ಇಬ್ರಾಹಿಂ ಅವರು ಹಿರಿಯ ನಾಯಕರು. ಕಾಂಗ್ರೆಸ್ ಸರ್ಕಾರದಲ್ಲಿ ಮಂತ್ರಿಯಾಗಿದ್ದರು. ಸಿದ್ದರಾಮಯ್ಯ ಅವರ ಕಾಲದಲ್ಲಿ ಹಾಲಿ ಶಾಸಕರನ್ನು ಬಿಟ್ಟು ಅವರಿಗೆ ಟಿಕೆಟ್ ನೀಡಲಾಗಿತ್ತು. ಅವರು ಸೋತ ನಂತರವೂ ಅವರಿಗೆ ಸಂಪುಟ ಸ್ಥಾನಮಾನ ನೀಡಿ ಯೋಜನಾ ಆಯೋಗದ ಮುಖ್ಯಸ್ಥರನ್ನಾಗಿ ಮಾಡಲಾಗಿತ್ತು. ಸತತ ಎರಡು ಬಾರಿ ವಿಧಾನ ಪರಿಷತ್ ಸದಸ್ಯರನ್ನಾಗಿ ಮಾಡಲಾಗಿತ್ತು. ಅವರು ಪಕ್ಷದ ಕೆಲಸ ಮಾಡಿಕೊಂಡು ಬಂದಿದ್ದಾರೆ. ಅಸಮಾಧಾನ0 ಇರುತ್ತದೆ ಹೀಗಾಗಿ ಅವರು ಮಾತನಾಡಿದ್ದಾರೆ. ಅವರು ನಮ್ಮ ಸ್ನೇಹಿತರು, ನಮಗೆ ಒಳ್ಳೆಯದು ಬಯಸಿದ್ದಾರೆ. ಪಕ್ಷಕ್ಕಾಗಿ ದುಡಿದಿದ್ದಾರೆ. ಖಂಡಿತವಾಗಿಯೂ ಅವರ ಜತೆ ಮಾತನಾಡುತ್ತೇನೆ' ಎಂದರು.
ಕಾಂಗ್ರೆಸ್ ಅಧಿಕಾರಕ್ಕೆ ಬರುವ ಭ್ರಮೆಯಲ್ಲಿದೆ ಎಂಬ ಇಬ್ರಾಹಿಂ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಅವರು, 'ಅವರು ಕಾಂಗ್ರೆಸ್ ಪಕ್ಷದ ಸದಸ್ಯರು. ಪಕ್ಷ ಅವರನ್ನು ವಿಧಾನ ಪರಿಷತ್ ಸದಸ್ಯರನ್ನಾಗಿ ಮಾಡಿದೆ. ಅವರು ನೋವಿನಿಂದ ಮಾತನಾಡಿದ್ದಾರೆ, ಅದನ್ನು ಗಂಭೀರವಾಗಿ ತೆಗೆದುಕೊಳ್ಳಬಾರದು' ಎಂದರು.
ಕಾಂಗ್ರೆಸ್ ನಲ್ಲಿ ಸಿದ್ದರಾಮಯ್ಯ ಅವರು ತಬ್ಬಲಿಯಾಗಿದ್ದಾರೆ ಎಂಬ ಹೇಳಿಕೆ ವಿಚಾರವಾಗಿ ಪ್ರಶ್ನೆ ಕೇಳಿದಾಗ, 'ಕಾಂಗ್ರೆಸ್ ನಲ್ಲಿ ಇಬ್ರಾಹಿಂ, ನಾನು, ಸಿದ್ದರಾಮಯ್ಯ ಅವರು ಸೇರಿದಂತೆ ಯಾರೂ ತಬ್ಬಲಿಯಾಗಿಲ್ಲ. ನಾವೆಲ್ಲಾ ಒಂದೇ' ಎಂದು ಪುನರುಚ್ಚರಿಸಿದರು.
ಕೋವಿಡ್ ಸೋಂಕು ಹೆಚ್ಚಾಗುತ್ತಿರುವ ಹೊತ್ತಲ್ಲಿ, ರೇಸ್ ಕೋರ್ಸ್ ನಲ್ಲಿ ಅಲ್ಟ್ರಾ ಡರ್ಬಿ ಬೆಂಗಳೂರು ರೇಸ್ ನಡೆಸಿರುವ ಬಗ್ಗೆ ಕೇಳಿದ ಪ್ರಶ್ನೆಗೆ, 'ಈ ವಿಚಾರವಾಗಿ ನಾನು ಟ್ವೀಟ್ ಮಾಡಿದ್ದೇನೆ. ನಾವು ರಾಜ್ಯದ ಹಿತಕ್ಕಾಗಿ ಪಾದಯಾತ್ರೆ ಮಾಡಿದಾಗ ನಮ್ಮ ಮೇಲೆ ಕೇಸ್ ದಾಖಲಿಸಿದ್ದಾರೆ. ಈ ವಿಚಾರವಾಗಿ ಮುಖ್ಯಮಂತ್ರಿಗಳು, ಪೊಲೀಸ್ ಮಹಾನಿರ್ದೇಶಕರು, ಗೃಹಮಂತ್ರಿಗಳು ಗಮನಹರಿಸಲಿ. ರಾಜ್ಯಾದ್ಯಂತ ಬಿಜೆಪಿ ನಾಯಕರು ಸಾಕಷ್ಟು ಬಾರಿ ನಿಯಮ ಉಲ್ಲಂಘಿಸಿದ್ದಾರೆ. ರೇಸ್ ಕೋರ್ಸ್ ಆಡಳಿತ ಮಂಡಳಿಯಲ್ಲಿ ಸರ್ಕಾರದ ಅಧಿಕಾರಿಗಳು ಇದ್ದಾರೆ. ಇದರಲ್ಲಿ ಸರ್ಕಾರದ ಪಾತ್ರವೂ ಇದೆ. ಸರ್ಕಾರ ಯಾವ ರೀತಿ ಕ್ರಮ ಕೈಗೊಳ್ಳಲಿದೆ ಎಂದು ನೋಡಿಕೊಂಡು, ಈ ವಿಚಾರವಾಗಿ ಕೋರ್ಟ್ ಗೆ ಮಾಹಿತಿ ನೀಡಬೇಕೋ ಅಥವಾ ನಾವು ಏನು ಮಾಡಬಹುದು ಎಂಬುದನ್ನು ತೀರ್ಮಾನಿಸುತ್ತೇವೆ' ಎಂದು ಉತ್ತರಿಸಿದರು.
[27/01, 8:48 PM] +91 90088 29855: ವಿಧಾನ ಪರಿಷತ್ ವಿರೋಧ ಪಕ್ಷದ ನೂತನ ಉಪನಾಯಕರಾದ ಕೆ. ಗೋವಿಂದರಾಜು ಅವರು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರನ್ನು ಬೆಂಗಳೂರಿನ ಸದಾಶಿವನಗರ ನಿವಾಸದಲ್ಲಿ ಗುರುವಾರ ಭೇಟಿ ಮಾಡಿ ಕೃತಜ್ಞತೆ ಸಲ್ಲಿಸಿದರು.
[27/01, 8:49 PM] +91 90088 29855: ವಿಧಾನ ಪರಿಷತ್ ವಿರೋಧ ಪಕ್ಷದ ಮುಖ್ಯ ಸಚೇತಕರಾದ ಪ್ರಕಾಶ್ ರಾಥೋಡ್ ಅವರು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರನ್ನು ಬೆಂಗಳೂರಿನ ಸದಾಶಿವನಗರ ನಿವಾಸದಲ್ಲಿ ಗುರುವಾರ ಭೇಟಿ ಮಾಡಿ ಕೃತಜ್ಞತೆ ಸಲ್ಲಿಸಿದರು. ಮಾಜಿ ಶಾಸಕರಾದ ಅಶೋಕ್ ಪಟ್ಟಣ, ಅಪ್ಪಾಜಿ ಸಿ.ಎಸ್. ನಾಡಗೌಡ ಹಾಗೂ ಮುಖಂಡ ವಿಜಯ ಮುಳುಗುಂದ್ ಉಪಸ್ಥಿತರಿದ್ದರು.
[27/01, 8:49 PM] +91 90088 29855: ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರ ಮೇಲಿನ ಅಭಿಮಾನದಿಂದ ಹಿಮಾಚಲಪ್ರದೇಶದಿಂದ ಬೆಂಗಳೂರಿನ ಪುನೀತ್ ಅವರ ಸಮಾಧಿ ಸ್ಥಳದವರೆಗೂ ಸೈಕಲ್ ನಲ್ಲಿ ಬಂದ ಗುರುಪ್ರಕಾಶ್ ಗೌಡ ಅವರು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹಾಗೂ ಸಂಸದ ಡಿ.ಕೆ. ಸುರೇಶ್ ಅವರನ್ನು ಸದಾಶಿವನಗರ ನಿವಾಸದಲ್ಲಿ ಗುರುವಾರ ಸಂಜೆ ಭೇಟಿ ಮಾಡಿದರು.
Post a Comment