ಸಂತಾಪ
ಬೆಂಗಳೂರು :
ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರ ಮೊಮ್ಮಗಳಾದ ಡಾ. ಸೌಂದರ್ಯ ಅವರ ನಿಧನಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸಂತಾಪ ವ್ಯಕ್ತಪಡಿಸಿದ್ದಾರೆ .
ಇಂದು ಮಧ್ಯಾಹ್ನ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಯಡಿಯೂರಪ್ಪ ನಿವಾಸಕ್ಕೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಯಡಿಯೂರಪ್ಪ ಅವರಿಗೆ ಸಾಂತ್ವನ ಹೇಳಿದರು.
ಡಾ. ಸೌಂದರ್ಯ ಅವರ ನಿಧನದ ಸುದ್ದಿ ಆಘಾತ ತಂದಿದೆ ಎಂದು ಅವರು ಕಂಬನಿ ಮಿಡಿದರು.
ಡಾ.ಸೌಂದರ್ಯ ಅವರ ನಿಧನದ ದುಃಖವನ್ನು ತಡೆದುಕೊಳ್ಳುವ ಶಕ್ತಿಯನ್ನು ಆ ಭಗವಂತ ಅವರ ಕುಟುಂಬ ಸದಸ್ಯರಿಗೆ ನೀಡಲಿ ಎಂದು ಪತ್ರಿಕಾ ಪ್ರಕಟಣೆಯಲ್ಲಿ ಕೋರಿದ್ದಾರೆ.
Post a Comment