ಪಿತೃ ವಿಯೋಗಕ್ಕೆ ಒಳಗಾಗಿರುವ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ, ರಾಜ್ಯದ ಮಾಜಿ ಸಚಿವ ಸಿ.ಟಿ. ರವಿ ಅವರಿಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಶನಿವಾರ ಸಂಜೆ ಸಾಂತ್ವನ ಹೇಳಿದರು.
ಡಿ.ಕೆ. ಶಿವಕುಮಾರ್ ಅವರು ಗೋವಾದಲ್ಲಿ ಚುನಾವಣೆ ಪ್ರಚಾರ ಮುಗಿಸಿ ಬೆಂಗಳೂರು ವಿಮಾನ ನಿಲ್ದಾಣಕ್ಕೆ ಬಂದಿಳಿದಾಗ ಸಿ.ಟಿ. ರವಿ ಅವರು ಎದಿರಾದರು.
......
ಸಂತಾಪ
ಸಿ ಟಿ ರವಿ ತಂದೆ ಸಿ ಇ ತಿಮ್ಮೇಗೌಡ ನಿಧನಕ್ಕೆ ಸಿಎಂ ಸಂತಾಪ
ಬೆಂಗಳೂರು :
ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ ಟಿ ರವಿ ಅವರ ತಂದೆಯವರಾದ ಸಿ ಇ ತಿಮ್ಮೇಗೌಡ ಅವರ ನಿಧಾನಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಸಿಟಿ ರವಿ ಅವರೊಂದಿಗೆ ದೂರವಾಣಿ ಮೂಲಕ ಮಾತನಾಡಿದ ಬೊಮ್ಮಾಯಿ, ಸಂತಾಪ ಸೂಚಿಸಿದರು.
ದೇವರು ತಿಮ್ಮೇಗೌಡ ಅವರ ಆತ್ಮಕ್ಕೆ ಶಾಂತಿಯನ್ನು ಕರುಣಿಸಲಿ. ಅವರ ಅಗಲಿಕೆಯ ದುಃಖವನ್ನು ಭರಿಸುವ ಶಕ್ತಿ ನೀಡಲಿ ಎಂದು ಮುಖ್ಯಮಂತ್ರಿಗಳು ಪತ್ರಿಕಾ ಪ್ರಕಟನೆಯಲ್ಲಿ ಕೋರಿದ್ದಾರೆ.
.....
29-1-2022
ಪ್ರಕಟಣೆಯ ಕೃಪೆಗಾಗಿ
ತಿಮ್ಮೇಗೌಡ ಅವರ ನಿಧನಕ್ಕೆ
ನಳಿನ್‍ಕುಮಾರ್ ಕಟೀಲ್ ಸಂತಾಪ
ಬೆಂಗಳೂರು: ಶಾಸಕ ಹಾಗೂ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ಅವರ ತಂದೆ ತಿಮ್ಮೇಗೌಡ (92) ಅವರ ನಿಧನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷರು ಮತ್ತು ಸಂಸದರೂ ಆದ ನಳಿನ್‍ಕುಮಾರ್ ಕಟೀಲ್ ಅವರು ತೀವ್ರ ಸಂತಾಪ ಸೂಚಿಸಿದ್ದಾರೆ.
ಮೃತರ ಕುಟುಂಬಕ್ಕೆ ಅವರ ಅಗಲುವಿಕೆಯ ದುಃಖವನ್ನು ಸಹಿಸುವ ಶಕ್ತಿಯನ್ನು ಭಗವಂತನು ಕರುಣಿಸಲಿ ಎಂದು ಅವರು ಪ್ರಾರ್ಥಿಸಿದ್ದಾರೆ.
(ಕರುಣಾಕರ ಖಾಸಲೆ)
ಮಾಧ್ಯಮ ಸಂಚಾಲಕರು
ಬಿಜೆಪಿ ಕರ್ನಾಟಕ
Post a Comment