ಬಜೆಟ್ ಸಿದ್ಧತೆ : ಸಾರಿಗೆ ಸಮಾಲೋಚನೆ

ಬೆಂಗಳೂರು, ಫೆಬ್ರವರಿ 02: ನಿವೃತ್ತ ಐ.ಎ.ಎಸ್.ಅಧಿಕಾರಿ ಎಂ.ಆರ್.ಶ್ರೀನಿವಾಸಮೂರ್ತಿ ಅವರ ಅಧ್ಯಕ್ಷತೆಯಲ್ಲಿ ರಚಿಸಿರುವ ರಸ್ತೆ ಸಾರಿಗೆ ಸಂಸ್ಥೆಗಳ ಆರ್ಥಿಕ ಸ್ವಾವಲಂಬನೆ ಅಂತ್ತು ಸಂಪನ್ಮೂಲ ಕ್ರೋಢೀಕರಣಗಳ ಅಧ್ಯಯನ ಸಮಿತಿಯೊಂದಿಗೆ  ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಚರ್ಚಿಸಿದರು. 

ಸಮಿತಿ ಅಧ್ಯಕ್ಷ ಎಂ.ಆರ್.ಶ್ರೀನಿವಾಸಮೂರ್ತಿ, ಸಾರಿಗೆ ಇಲಾಖೆ ಪ್ರಧಾನ ಕಾರ್ಯದರ್ಶಿ ರಾಜೇಂದ್ರ ಕುಮಾರ್ ಕಟಾರಿಯಾ,   ಕ.ರ.ಸಾ.ಸಂಸ್ಥೆ ಅಧ್ಯಕ್ಷ ಶಿವಯೋಗಿ ಕಳಸದ್, ಬಿ.ಎಂ.ಟಿ.ಸಿ ವ್ಯವಸ್ಥಾಪಕ ನಿರ್ದೇಶಕ ಅನ್ಬುಕುಮಾರ್ , ಆರ್ಥಿಕ ಇಲಾಖೆ ಕಾರ್ಯದರ್ಶಿ ಏಕರೂಪ್ ಕೌರ್ , ಮುಖ್ಯ ಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಮಂಜುನಾಥ್ ಪ್ರಸಾದ್ ಮೊದಲಾದವರು ಉಪಸ್ಥಿತರಿದ್ದರು.

Post a Comment

Previous Post Next Post