1-3-2022
ಪ್ರಕಟಣೆಯ ಕೃಪೆಗಾಗಿ
ಉಕ್ರೇನ್‍ನಲ್ಲಿ ಹಾವೇರಿ ವಿದ್ಯಾರ್ಥಿಯ ಸಾವಿಗೆ
ನಳಿನ್‍ಕುಮಾರ್ ಕಟೀಲ್ ತೀವ್ರ ಸಂತಾಪ
ಬೆಂಗಳೂರು: ಯುದ್ಧಪೀಡಿತ ಉಕ್ರೇನ್‍ನ ಖಾರ್ಕೀವ್ ನಲ್ಲಿ ರಾಜ್ಯದ ಹಾವೇರಿ ಜಿಲ್ಲೆಯ ಚಳಗೇರಿ ಗ್ರಾಮದ ವಿದ್ಯಾರ್ಥಿ ನವೀನ್ ಗ್ಯಾನಗೌಡರ ಅವರು ಮೃತಪಟ್ಟಿರುವ ಸುದ್ದಿ ತಿಳಿದು ದುಃಖವಾಯಿತು ಎಂದು ಬಿಜೆಪಿ ರಾಜ್ಯಾಧ್ಯಕ್ಷರು ಮತ್ತು ಸಂಸದರೂ ಆದ ನಳಿನ್‍ಕುಮಾರ್ ಕಟೀಲ್ ಅವರು ಸಂತಾಪ ಸೂಚನಾ ಸಂದೇಶದಲ್ಲಿ ತಿಳಿಸಿದ್ದಾರೆ. ನವೀನ್ ಅವರ ಆತ್ಮಕ್ಕೆ ಶಾಂತಿ ಸಿಗಲಿ. ಅವರ ಪೆÇೀಷಕರು ಹಾಗೂ ಸಂಬಂಧಿಗಳಿಗೆ ದುಃಖವನ್ನು ಸಹಿಸಿಕೊಳ್ಳುವ ಶಕ್ತಿಯನ್ನು ದೇವರು ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ತಿಳಿಸಿದ್ದಾರೆ.
ಉಕ್ರೇನ್‍ನಲ್ಲಿ ಸಿಲುಕಿರುವ ಭಾರತೀಯರನ್ನು ಸುರಕ್ಷಿತವಾಗಿ ಸ್ವದೇಶಕ್ಕೆ ಕರೆತರಲು ಕೇಂದ್ರ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳುತ್ತಿದೆ. ಆದರೂ ಉಕ್ರೇನ್‍ನಲ್ಲಿರುವ ಭಾರತೀಯರು ಆದಷ್ಟು ಜಾಗ್ರತೆ ವಹಿಸುವುದು ಅತ್ಯಂತ ಅಗತ್ಯವಾಗಿದೆ ಎಂದು ಕಿವಿಮಾತು ಹೇಳಿದ್ದಾರೆ.
(ಕರುಣಾಕರ ಖಾಸಲೆ)
ಮಾಧ್ಯಮ ಸಂಚಾಲಕರು
ಬಿಜೆಪಿ ಕರ್ನಾಟಕ
-----+
*ಉಕ್ರೇನ್ ನಲ್ಲಿ ಹಾವೇರಿ ವಿದ್ಯಾರ್ಥಿ ನವೀನ್ ಬಲಿ; ಡಿ.ಕೆ. ಶಿವಕುಮಾರ್ ಅವರ ಮಾಧ್ಯಮ ಪ್ರತಿಕ್ರಿಯೆ:*
'ನಮ್ಮ ವಿದ್ಯಾರ್ಥಿ ಉಕ್ರೇನ್ ನಲ್ಲಿ ಬಲಿಯಾಗಿರುವುದು ಬಹಳ ಆತಂಕ ಮೂಡಿಸಿದೆ.
ನಮ್ಮ ಮಕ್ಕಳು ವಿದ್ಯಾಭ್ಯಾಸಕ್ಕಾಗಿ ಅಲ್ಲಿಗೆ ತೆರಳಿದ್ದಾರೆ. ನಮ್ಮಲ್ಲಿ ಸಾಕಷ್ಟು ಮೆಡಿಕಲ್ ಕಾಲೇಜುಗಳಿದ್ದರೂ ಬೇಡಿಕೆ ಹೆಚ್ಚಾಗಿರುವುದರಿಂದ ಸಾಕಷ್ಟು ನಮ್ಮ ವಿದ್ಯಾರ್ಥಿಗಳು ಉಕ್ರೇನ್ ಗೆ ತೆರಳಿ ವಿದ್ಯಾಭ್ಯಾಸ ಮಾಡುತ್ತಿದ್ದಾರೆ.
ವಿಶ್ವದ ಇತರೆ ದೇಶಗಳು ತಮ್ಮ ವಿದ್ಯಾರ್ಥಿಗಳನ್ನು ವಾಪಸ್ ಕರೆಸಿಕೊಂಡಿದ್ದರೆ, ನಮ್ಮ ದೇಶದ ಸರ್ಕಾರ ಇನ್ನೂ ಮೀನಾಮೇಷ ಎಣಿಸುತ್ತಿದೆ.
ಕೇಂದ್ರ ಸರಕಾರ ನಿನ್ನೆಯಷ್ಟೇ ನಾಲ್ವರು ಸಚಿವರನ್ನು ವಿದ್ಯಾರ್ಥಿಗಳ ರಕ್ಷಣಾ ಕಾರ್ಯಕ್ಕೆ ನಿಯೋಜಿಸಿದೆ. ಕೇಂದ್ರ ಸರ್ಕಾರಕ್ಕೆ ಎಷ್ಟು ಬೇಜವಾಬ್ದಾರಿ ಇದೆ ಎಂಬುದನ್ನು ಇದು ತೋರುತ್ತದೆ.
ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ನಮ್ಮ ವಿದ್ಯಾರ್ಥಿಗಳ ರಕ್ಷಣೆ ವಿಚಾರದಲ್ಲಿ ವಿಫಲವಾಗಿವೆ. ಇನ್ನಾದರೂ ತುರ್ತು ಕ್ರಮ ಕೈಗೊಂಡು ಭಾರತೀಯರನ್ನು ತಾಯ್ನಾಡಿಗೆ ವಾಪಸ್ ಕರೆಸಿಕೊಳ್ಳಬೇಕು.
ಪ್ರಧಾನಿಗಳು ತಾವು ವಿಶ್ವಗುರು ಎಂದು ಬಿಂಬಿಸಿಕೊಳ್ಳುತ್ತಾರೆ. ಇದೇನಾ ವಿಶ್ವಗುರುವಿನ ಲಕ್ಷಣ? ಈ ವಿಚಾರವನ್ನು ನಿಮಗೆ ಬಿಡುತ್ತೇನೆ.
ವಿದ್ಯಾರ್ಥಿಗಳ ಪೋಷಕರ ದುಃಖ, ದುಮ್ಮಾನವನ್ನು ನೀವು ನೋಡುತ್ತಿದ್ದೀರಿ. ಕೇವಲ ಬಾಯಿ ಮಾತಲ್ಲಿ ರಕ್ಷಣೆ ಮಾಡುತ್ತೇವೆ ಎಂದರೆ ಸಾಲದು, ಅದನ್ನು ಕಾರ್ಯರೂಪಕ್ಕೆ ತರಬೇಕು.
ನಮ್ಮ ವಿದೇಶಾಂಗ ನೀತಿ ಸಂಪೂರ್ಣ ವಿಫಲವಾಗಿದ್ದು, ಭಾರತೀಯರು ಆತ್ಮವಿಶ್ವಾಸ ಕಳೆದುಕೊಂಡಿದ್ದಾರೆ. ಸರ್ಕಾರ ಈ ಕೂಡಲೇ ಯುದ್ಧದಲ್ಲಿ ಸಿಲುಕಿರುವ ಭಾರತೀಯರನ್ನು ರಕ್ಷಿಸಬೇಕು.'
Post a Comment