ಪ್ರಧಾನಿ ನರೇಂದ್ರ ಮೋದಿ ಅವರು ಉಕ್ರೇನ್‌ನಲ್ಲಿ ಪರಿಸ್ಥಿತಿಯನ್ನು ಅವಲೋಕಿಸಿದ್ದಾರೆ

 ಮಾರ್ಚ್ 04, 2022

,

7:57PM


ಪ್ರಧಾನಿ ನರೇಂದ್ರ ಮೋದಿ ಅವರು ಉಕ್ರೇನ್‌ನಲ್ಲಿ ಪರಿಸ್ಥಿತಿಯನ್ನು ಅವಲೋಕಿಸಿದ್ದಾರೆ

ಉಕ್ರೇನ್ ಪರಿಸ್ಥಿತಿಯನ್ನು ಪರಿಶೀಲಿಸಲು ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಸಭೆ ನಡೆಯಿತು. ಸಭೆಯಲ್ಲಿ ಕೇಂದ್ರ ಸಚಿವರಾದ ಡಾ ಎಸ್ ಜೈಶಂಕರ್ ಮತ್ತು ಪಿಯೂಷ್ ಗೋಯಲ್, ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್, ವಿದೇಶಾಂಗ ಕಾರ್ಯದರ್ಶಿ ಹರ್ಷವರ್ಧನ್ ಶ್ರಿಂಗ್ಲಾ ಮತ್ತು ಇತರ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.


ಎರಡು ದಿನಗಳ ಹಿಂದೆ, ಉಕ್ರೇನ್ ಬಿಕ್ಕಟ್ಟಿನ ಬಗ್ಗೆ ಪ್ರಧಾನಿ ಇದೇ ರೀತಿಯ ಸಭೆ ನಡೆಸಿದ್ದರು. ಸಂಘರ್ಷದ ಆರಂಭದಿಂದಲೂ ಉಕ್ರೇನ್ ಬಿಕ್ಕಟ್ಟಿನ ಕುರಿತು ಅವರು ನಿರಂತರವಾಗಿ ಉನ್ನತ ಮಟ್ಟದ ಸಭೆಗಳನ್ನು ನಡೆಸುತ್ತಿದ್ದಾರೆ.

--

Post a Comment

Previous Post Next Post