ಬಿಜೆಪಿ ರಾಜ್ಯ ವಿಶೇಷ ಕಾರ್ಯಕಾರಿಣಿ ಸಭೆಯು 16 ಮತ್ತು 17ರಂದು ಹೊಸಪೇಟೆಯ ಆಂಜನೇಯ ಭಟ್ಟರ ಹಳ್ಳಿ ಸಮೀಪ ನಡೆಯುತ್ತಿದೆ

16-04-2022
ಪತ್ರಿಕಾ ಆಹ್ವಾನ 
ಬೆಂಗಳೂರು: ಬಿಜೆಪಿ ರಾಜ್ಯ ವಿಶೇಷ ಕಾರ್ಯಕಾರಿಣಿ ಸಭೆಯು 16 ಮತ್ತು 17ರಂದು ಹೊಸಪೇಟೆಯ ಆಂಜನೇಯ ಭಟ್ಟರ ಹಳ್ಳಿ ಸಮೀಪ ನಡೆಯಲಿದೆ. ಇಂದು (16.04.2022) ಶನಿವಾರ ಬೆಳಿಗ್ಗೆ 10.00 ಗಂಟೆಗೆ ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ಬಿ.ಎಲ್. ಸಂತೋಷ್, ಬಿಜೆಪಿ ರಾಜ್ಯಾಧ್ಯಕ್ಷರು ಮತ್ತು ಸಂಸದರೂ ಆದ ಶ್ರೀ ನಳಿನ್‍ಕುಮಾರ್ ಕಟೀಲ್ ಮತ್ತು ಕರ್ನಾಟಕದ ಉಸ್ತುವಾರಿಗಳು ಹಾಗೂ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ಅರುಣ್ ಸಿಂಗ್ ಅವರು ಪ್ರದರ್ಶನೀಯ ಉದ್ಘಾಟನೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.  
ಮಧ್ಯಾಹ್ನ 2.30ಕ್ಕೆ ಬಿಜೆಪಿ ರಾಜ್ಯಾಧ್ಯಕ್ಷರು ಮತ್ತು ಸಂಸದರೂ ಆದ ಶ್ರೀ ನಳಿನ್‍ಕುಮಾರ್ ಕಟೀಲ್, ರಾಜ್ಯದ ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಬಸವರಾಜ ಬೊಮ್ಮಾಯಿ, ಕರ್ನಾಟಕದ ಉಸ್ತುವಾರಿಗಳು ಹಾಗೂ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ಅರುಣ್ ಸಿಂಗ್ ಅವರು ಧ್ವಜಾರೋಹಣವನ್ನು ನೆರವೇರಿಸಲಿದ್ದಾರೆ ಮತ್ತು ವಿಶೇಷ ರಾಜ್ಯ ಕಾರ್ಯಕಾರಿಣಿ ಸಭೆಯ ಉದ್ಘಾಟನೆಯನ್ನು ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಬಸವರಾಜ ಬೊಮ್ಮಾಯಿ ಅವರು ನೆರವೇರಿಸಲಿದ್ದಾರೆ.
ತಮ್ಮ ಪತ್ರಿಕೆಯ ವರದಿಗಾರರು, ಛಾಯಾಗ್ರಾಹಕರು ಮತ್ತು ಟಿ.ವಿ. ಮಾಧ್ಯಮಗಳ ವರದಿಗಾರರು ಈ ಸಂದರ್ಭದಲ್ಲಿ ಭಾಗವಹಿಸಿ ಸೂಕ್ತ ಪ್ರಚಾರ ನೀಡಬೇಕಾಗಿ ವಿನಂತಿ. 



 ಕರುಣಾಕರ ಖಾಸಲೆ
ಮಾಧ್ಯಮ ಸಂಚಾಲಕರು
ಬಿಜೆಪಿ ಕರ್ನಾಟಕ

Post a Comment

Previous Post Next Post