7:52PM
ಕೋವಿಡ್ ಸಾಂಕ್ರಾಮಿಕದ ನಂತರ ಆರ್ಥಿಕತೆಯು ಸ್ಥಿತಿಸ್ಥಾಪಕತ್ವವನ್ನು ತೋರಿಸುತ್ತಿದೆ ಎಂದು ಹಣಕಾಸು ಸಚಿವಾಲಯ ಹೇಳಿದೆ; 2021-22ರಲ್ಲಿ ನೇರ ತೆರಿಗೆ ಸಂಗ್ರಹದಲ್ಲಿ 49%, ಪರೋಕ್ಷ ತೆರಿಗೆ ಸಂಗ್ರಹದಲ್ಲಿ 20% ಬೆಳವಣಿಗೆ ದಾಖಲಾಗಿದೆ
ಕೋವಿಡ್ ಸಾಂಕ್ರಾಮಿಕದ ನಂತರ ದೇಶದ ಆರ್ಥಿಕತೆಯು ಸ್ಥಿತಿಸ್ಥಾಪಕತ್ವವನ್ನು ತೋರಿಸುತ್ತಿದೆ ಮತ್ತು ಕಳೆದ ಆರ್ಥಿಕ ವರ್ಷದಲ್ಲಿ ತೆರಿಗೆ ಸಂಗ್ರಹವು ದೃಢವಾಗಿದೆ ಮತ್ತು ನೇರ ಮತ್ತು ಪರೋಕ್ಷ ತೆರಿಗೆಗಳಲ್ಲಿ ಬೆಳವಣಿಗೆಯಾಗಿದೆ ಎಂದು ಕೇಂದ್ರ ಹಣಕಾಸು ಸಚಿವಾಲಯ ಹೇಳಿದೆ. 2021-22ನೇ ಹಣಕಾಸು ವರ್ಷದಲ್ಲಿ ನೇರ ತೆರಿಗೆ ಸಂಗ್ರಹದಲ್ಲಿ ಶೇ 49 ಮತ್ತು ಪರೋಕ್ಷ ತೆರಿಗೆ ಸಂಗ್ರಹದಲ್ಲಿ ಶೇ 20ರಷ್ಟು ಬೆಳವಣಿಗೆ ದಾಖಲಾಗಿದೆ ಎಂದು ಹಣಕಾಸು ಸಚಿವಾಲಯ ತಿಳಿಸಿದೆ.
ಶುಕ್ರವಾರ ನವದೆಹಲಿಯಲ್ಲಿ ಮಾಧ್ಯಮಗಳಿಗೆ ಮಾಹಿತಿ ನೀಡಿದ ಹಣಕಾಸು ಸಚಿವಾಲಯದ ಕಂದಾಯ ಕಾರ್ಯದರ್ಶಿ ತರುಣ್ ಬಜಾಜ್, ಕಾರ್ಪೊರೇಷನ್ ತೆರಿಗೆ, ನೇರ ತೆರಿಗೆ ಮತ್ತು ಪರೋಕ್ಷ ತೆರಿಗೆ ಸಂಗ್ರಹದಲ್ಲಿ ಬೆಳವಣಿಗೆಯನ್ನು ದಾಖಲಿಸಲಾಗಿದೆ.
ಶ್ರೀ ಬಜಾಜ್ ಹೇಳಿದರು, ಕಳೆದ ಆರ್ಥಿಕ ವರ್ಷವು ಅತ್ಯಧಿಕ ತೆರಿಗೆ-ಜಿಡಿಪಿ ಅನುಪಾತ 11.7 ಶೇಕಡಾವನ್ನು ಗುರುತಿಸುತ್ತದೆ. ಕೇಂದ್ರ ಬಜೆಟ್ 2021-22 ರ ಅಂದಾಜು 22 ಲಕ್ಷ 17 ಸಾವಿರ ಕೋಟಿ ರೂಪಾಯಿಗಳ ವಿರುದ್ಧ, ಪೂರ್ವ ವಾಸ್ತವಿಕ ಅಂಕಿಅಂಶಗಳ ಪ್ರಕಾರ ಆದಾಯ ಸಂಗ್ರಹವು 27 ಲಕ್ಷ ಕೋಟಿ ರೂಪಾಯಿಗಳಿಗಿಂತ ಹೆಚ್ಚು ಎಂದು ಅವರು ಹೇಳಿದರು.
ಸಾಂಕ್ರಾಮಿಕ ರೋಗದ ನಡುವೆಯೂ ಕಳೆದ ಹಣಕಾಸು ವರ್ಷದಲ್ಲಿ ಜಿಎಸ್‌ಟಿ ಅನುಕರಣೀಯ ಬೆಳವಣಿಗೆಯನ್ನು ಕಂಡಿದೆ ಎಂದು ಹಣಕಾಸು ಸಚಿವಾಲಯ ಹೇಳಿದೆ. 2020-21ರಲ್ಲಿ 94 ಸಾವಿರದ 734 ಕೋಟಿ ರೂಪಾಯಿಗಳಿಗೆ ಹೋಲಿಸಿದರೆ 2021-22ರಲ್ಲಿ ಸರಾಸರಿ ಮಾಸಿಕ ಒಟ್ಟು ಜಿಎಸ್‌ಟಿ ಆದಾಯವು ಒಂದು ಲಕ್ಷದ 23 ಸಾವಿರ ಕೋಟಿ ರೂಪಾಯಿಗಳು.
Post a Comment