ಅಫ್ಘಾನಿಸ್ತಾನದ ಖೋಸ್ಟ್, ಕುನಾರ್ ಪ್ರಾಂತ್ಯಗಳಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಲ್ಲಿ ಕನಿಷ್ಠ 30 ಮಂದಿ ಸಾವನ್ನಪ್ಪಿದ್ದಾರೆ

 ಏಪ್ರಿಲ್ 16, 2022

,

8:39PM

ಅಫ್ಘಾನಿಸ್ತಾನದ ಖೋಸ್ಟ್, ಕುನಾರ್ ಪ್ರಾಂತ್ಯಗಳಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಲ್ಲಿ ಕನಿಷ್ಠ 30 ಮಂದಿ ಸಾವನ್ನಪ್ಪಿದ್ದಾರೆ

ಶುಕ್ರವಾರ ರಾತ್ರಿ ಪಾಕಿಸ್ತಾನಿ ವಾಯುಪಡೆಯ ವಿಮಾನವು ಖೋಸ್ಟ್ ಮತ್ತು ಕುನಾರ್ ಪ್ರಾಂತ್ಯಗಳ ಮೇಲೆ ವೈಮಾನಿಕ ದಾಳಿಯನ್ನು ಪ್ರಾರಂಭಿಸಿದ ನಂತರ ಅಫ್ಘಾನಿಸ್ತಾನದಲ್ಲಿ ಕನಿಷ್ಠ 30 ಜನರು ಸಾವನ್ನಪ್ಪಿದ್ದಾರೆ. ಶುಕ್ರವಾರ ರಾತ್ರಿ ಖೋಸ್ಟ್ ಪ್ರಾಂತ್ಯದ ಮೇಲೆ ಪಾಕಿಸ್ತಾನಿ ವಿಮಾನಗಳು ವೈಮಾನಿಕ ದಾಳಿ ನಡೆಸಿರುವುದನ್ನು ಅಫ್ಘಾನಿಸ್ತಾನದ ಸ್ಥಳೀಯ ಅಧಿಕಾರಿಗಳು ಖಚಿತಪಡಿಸಿದ್ದಾರೆ.


ವರದಿಗಳ ಪ್ರಕಾರ, ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ ಕನಿಷ್ಠ 30 ಜನರು ಸಾವನ್ನಪ್ಪಿದ್ದಾರೆ. ಕನಿಷ್ಠ 26 ಪಾಕಿಸ್ತಾನಿ ವಿಮಾನಗಳು ಖೋಸ್ಟ್ ಪ್ರಾಂತ್ಯದ ಸ್ಪುರಾ ಜಿಲ್ಲೆಯ ಮಿರ್ಪರ್, ಮಾಂಡೆ, ಶೈದಿ ಮತ್ತು ಕೈ ಗ್ರಾಮಗಳನ್ನು ಗುರಿಯಾಗಿಸಿಕೊಂಡಿವೆ. ಖೋಸ್ಟ್ ಪ್ರಾಂತ್ಯದ ತಾಲಿಬಾನ್ ಪೊಲೀಸರ ವಕ್ತಾರ ಮೊಸ್ಟಾಗ್ಫರ್ ಗೆರ್ಬ್ಜ್ ದಾಳಿಯ ಬಗ್ಗೆ ದೃಢಪಡಿಸಿದ್ದಾರೆ.


ಉತ್ತರ ವಜೀರಿಸ್ತಾನದ ಮೇಲೆ ಪಾಕಿಸ್ತಾನ ನಡೆಸಿದ ವೈಮಾನಿಕ ದಾಳಿಯಲ್ಲಿ ಹಲವಾರು ಸರ್ಕಾರಿ ವಿರೋಧಿ ಉಗ್ರರು ಹತರಾಗಿದ್ದಾರೆ ಎಂದು ಪಾಕಿಸ್ತಾನಿ ಮಾಧ್ಯಮಗಳು ವರದಿ ಮಾಡಿವೆ. ಆದರೆ, ಪಾಕಿಸ್ತಾನ ಸರ್ಕಾರ ಮತ್ತು ಅಫ್ಘಾನಿಸ್ತಾನದ ವಿದೇಶಾಂಗ ಸಚಿವಾಲಯ ಇದುವರೆಗೆ ಈ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

Post a Comment

Previous Post Next Post