*50 ಕೋಟಿ ರೂ. ಗಿಂತ ಹೆಚ್ಚಿನ ಮೊತ್ತದ ಟೆಂಡರ್ ಗಳ ಪರಿಶೀಲನೆಗೆ ಉನ್ನತ ಮಟ್ಟದ ಸಮಿತಿ ರಚನೆ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ*

[20/04, 3:52 PM] Gurulingswami. Holimatha. Vv. Cm: *50 ಕೋಟಿ ರೂ. ಗಿಂತ ಹೆಚ್ಚಿನ ಮೊತ್ತದ ಟೆಂಡರ್ ಗಳ ಪರಿಶೀಲನೆಗೆ ಉನ್ನತ ಮಟ್ಟದ ಸಮಿತಿ ರಚನೆ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ*

ಶಿವಮೊಗ್ಗ, ಏಪ್ರಿಲ್ 20 : 

50 ಕೋಟಿ ರೂ. ಗಿಂತ ಹೆಚ್ಚಿನ ಮೊತ್ತದ ಟೆಂಡರ್ ಗಳ ಪರಿಶೀಲನೆಗೆ ನಿವೃತ್ತ ಹೈಕೋರ್ಟ್ ನ್ಯಾಯಾಧೀಶರು, ಆರ್ಥಿಕ ತಜ್ಞರು ಮತ್ತು ಸಂಬಂಧಪಟ್ಟ ಇಲಾಖೆಯ ತಾಂತ್ರಿಕ ತಜ್ಞರನ್ನು ಒಳಗೊಂಡಿರುವ  ಉನ್ನತ ಮಟ್ಟದ ಸಮಿತಿ ರಚಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

 ಅವರು ಇಂದು ಶಿವಮೊಗ್ಗದ ಬಿ.ಜೆ.ಪಿ ಕಚೇರಿಯಲ್ಲಿ  ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದರು.

 ಉನ್ನತ ಮಟ್ಟದ ಸಮಿತಿಯನ್ನು ಕೆಟಿಟಿಪಿ ಕಾಯ್ದೆಯನ್ವಯ ರಚಿಸಲಾಗಿದೆ . ಸಮಿತಿಯು ಕಾಮಗಾರಿಯ ಅಂದಾಜು ಮೊತ್ತ, ಕೆಟಿಟಿಪಿ ಕಾಯ್ದೆಯನ್ವಯ ಟೆಂಡರ್ ನಿಯಮಗಳು ಇವುಗಳನ್ನು ಪರಿಶೀಲಿಸಿದ ನಂತರವೇ ಟೆಂಡರ್ ಪ್ರಕ್ರಿಯೆ ಪ್ರಾರಂಭವಾಗಬೇಕು. ಈ ಸಮಿತಿಯು ಕೆಲವೇ ದಿನಗಳಲ್ಲಿ ಕಾರ್ಯಾರಂಭ ಮಾಡಲಿದೆ. ಸರ್ಕಾರದ ಎಲ್ಲ ಇಲಾಖೆಗಳ 50 ಕೋಟಿ ರೂ. ಮೀರಿದ ಟೆಂಡರ್ ಗಳಿಗೂ ಈ ನಿಯಮ ಜಾರಿಯಾಗುತ್ತದೆ. ಟೆಂಡರ್ ಗಳು ಹೆಚ್ಚಾದ ಸಂದರ್ಭದಲ್ಲಿ ಶೀಘ್ರ ಟೆಂಡರ್ ಪರಿಶೀಲನೆಗೆ ಅನುಕೂಲವಾಗುವಂತೆ ಪರ್ಯಾಯ ಸಮಿತಿಯೊಂದನ್ನೂ ರಚಿಸಲಾಗುವುದು ಎಂದರು.

*ಮೌಖಿಕ ಆದೇಶದ ಮೇಲೆ ಕಾಮಗಾರಿಗಳು ಮಾಡುವಂತಿಲ್ಲ:*
ನಗರಾಭಿವೃದ್ಧಿ ಹಾಗೂ ಗ್ರಾಮೀಣಾಭಿವೃದ್ಧಿ ಇಲಾಖೆಗಳ ಕಾಮಗಾರಿಗಳು ಮೌಖಿಕ ಆದೇಶಗಳ ಮೇಲೆ ಮಾಡಬಾರದು ಎಂದು ಸೂಚನೆ ನೀಡಲಾಗಿದೆ. ಆದರೂ ಈ ರೀತಿ ನಡೆದರೆ ಸಂಬಂಧಪಟ್ಟ ಇಂಜಿನಿಯರ್, ಅಸಿಸ್ಟೆಂಟ್ ಇಂಜಿನಿಯರ್, ಎಇಇ,ಶಾಖಧಿಕಾರಿಗಳು ಜವಾಬ್ದಾರರಾಗುತ್ತಾರೆ. ಗ್ರಾಮೀಣ ಪ್ರದೇಶದಲ್ಲಿ  ಪಿಡಿಓ ಮತ್ತು ಇಓಗಳು ಜವಾಬ್ದಾರರಾಗುತ್ತಾರೆ ಎಂದು ಸ್ಪಷ್ಟವಾದ ಲಿಖಿತ ಸೂಚನೆ ನೀಡಲಾಗುವುದು ಎಂದರು.

*ಸಂತೋಷ್ ಪಾಟೀಲ್ ಪ್ರಕರಣ-ತನಿಖೆ ನಡೆಯುತ್ತಿದೆ :*
ಟೆಂಡರ್ ಪ್ರಕ್ರಿಯೆ ಹಾಗೂ  ಪರ್ಸೆಂಟೇಜ್ ರಹಿತ ವ್ಯವಸ್ಥೆಗೆ ಸರ್ಕಾರ ಕ್ರಮ ಕೈಗೊಂಡಿದೆಯೇ, ಸಂತೋಷ್ ಪಾಟೀಲ್ ಆತ್ಮಹತ್ಯೆ ಒಂದು ಪಾಠವಾಗಿ ಇವೆಲ್ಲಕ್ಕೆ ಒಂದು ತಾತ್ವಿಕ ಅಂತ್ಯ ಕಾಣಬೇಕು ಎಂಬುದಕ್ಕೆ ಪ್ರತಿಕ್ರಯಿಸಿ ಪರ್ಸಂಟೇಜ್ ಅನ್ನುವಂಥದ್ದು ವ್ಯಾಪಕವಾಗಿ ಮಾತನಾಡುವಂತಹ ವಿಚಾರ. ಇದನ್ನು ನಿಯಂತ್ರಿಸುವುದು ಬಹಳ ಮುಖ್ಯ. ಸಂತೋಷ್ ಪಾಟೀಲ್ ಪ್ರಕರಣ ಪ್ರತ್ಯೇಕವಾದುದು. ಇದರಲ್ಲಿ ಕಾರ್ಯಾದೇಶವಿಲ್ಲದೇ ಕೆಲಸ ಮಾಡಿ ಬಿಲ್ ಕ್ಲೇಮು ಮಾಡಿರುವುದು ಆದ್ದರಿಂದ ಈ ಬಗ್ಗೆ ಆರ್ ಡಿ ಪಿಆರ್ ನಿಂದ ಹಿಡಿದು ಪೊಲೀಸ್ ಇಲಾಖೆವರೆಗೆ ತನಿಖೆ ನಡೆಯುತ್ತಿದೆ. ಇವೆರಡೂ ವಿಷಯಗಳಿಗೆ ಹೋಲಿಕೆ ಇಲ್ಲ ಎಂದರು.   

*ಅಭಿವೃದ್ಧಿ ಕೆಲಸಗಳು ಕುಂಠಿತವಾಗಬಾರದು:*
ಸಂತೋಷ್ ಪಾಟೀಲ್ ಅವರ 2 ರಿಂದ 3 ಕೋಟಿ ರೂ.ಗಳ ಕಾಮಗಾರಿ ಪ್ರಕರಣವಾಗಿದೆ. ಆದ್ದರಿಂದ ಜಿಲ್ಲಾ ಮಟ್ಟದಲ್ಲಿ 50 ಕೋಟಿ ರೂ. ಕ್ಕಿಂತ ಕಡಿಮೆ ಇರುವ ಟೆಂಡರ್ ಗಳೂ ಪರಿಶೀಲನೆಗೆ ಒಳಪಡಲು ಜಿಲ್ಲಾ ಮಟ್ಟದ ಸಮಿತಿಯನ್ನು ರಚಿಸಬಹುದಲ್ಲವೇ ಎಂಬ ಪ್ರಶ್ನೆಗೆ ಉತ್ತರಿಸಿ, ಉನ್ನತ ಮಟ್ಟದ ಸಮಿತಿ ಕಾರ್ಯನಿರ್ವಹಣೆಯನ್ನು ಗಮನಿಸಿ ನಂತರ ಅವಶ್ಯಕತೆ ಇದ್ದಲ್ಲಿ ಜಿಲ್ಲಾ ಮಟ್ಟದಲ್ಲಿಯೂ ಸಮಿತಿಯನ್ನು ರಚಿಸಲಾಗುವುದು. ಅಭಿವೃದ್ಧಿ ಕೆಲಸಗಳ ವೇಗವೂ ಕುಂಠಿತವಾಗಬಾರದು ಎಂದರು.

*ಮಲೆನಾಡು ಪ್ರದೇಶದಲ್ಲಿ ಭೂಕುಸಿತ ಸಮಸ್ಯೆಗೆ ಪೂರ್ವಭಾವಿ ಕ್ರಮ:*

ಮಲೆನಾಡು ಪ್ರದೇಶದಲ್ಲಿ ಮಳೆಗಾಲದಲ್ಲಿ ಭೂಕುಸಿತದ ಸಮಸ್ಯೆಯ ಇರುವ ಬಗ್ಗೆ ಪ್ರಶ್ನಿಸಿದಾಗ, ಪಶ್ಚಿಮಘಟ್ಟ  ದುರ್ಬಲವಾದ ವಲಯವಾಗಿದೆ. ಜಿಯೋ ಫಿಸಿಕಲ್ ಸರ್ವೆ ಮಾಡಿ ಸೂಕ್ಷ್ಮ ಪ್ರದೇಶಗಳನ್ನು ಗುರುತಿಸಲಾಗಿದೆ. ಭೂಕುಸಿತ ಉಂಟಾಗದಂತೆ ಮುನ್ನೆಚ್ಚರಿಕಾ ಕ್ರಮಗಳ ಬಗ್ಗೆ ತಿಳಿಸಿದ್ದಾರೆ. ಈ ವರದಿಯನ್ನು ಪರಿಶೀಲಿಸಿದ ನಂತರ ಪೂರ್ವಭಾವಿ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು. ವಿಶೇಷವಾಗಿ ತಳಮಟ್ಟದಲ್ಲಿ ಇರುವ ಮನೆಗಳಿರುವ ಪ್ರದೇಶಗಳಲ್ಲಿ ವಿಶೇಷ ಕ್ರಮವನ್ನು ತೆಗೆದುಕೊಳ್ಳಬೇಕಾಗುತ್ತದೆ. ದುರ್ಬಲ ವಲಯವಿರುವ ನಿಸರ್ಗವನ್ನು ತಡೆಯಲು ಸಾಧ್ಯವಿಲ್ಲ. ಆದ್ದರಿಂದ ಸೂಕ್ತ ಪ್ಲಾನಿಂಗ್ ನ ಅವಶ್ಯಕತೆ ಇದೆ ಎಂದರು.
 
*ಗ್ರಾಮೀಣ ಭಾಗದಲ್ಲಿ ವಿದ್ಯತ್ಛಕ್ತಿ ವಿತರಣೆ :*
ಗ್ರಾಮೀಣ ಭಾಗದಲ್ಲಿ ವಿದ್ಯುತ್ಛಕ್ತಿಯ ಸಮಸ್ಯೆ ಹೆಚ್ಚಿದೆ ಎಂಬುದಕ್ಕೆ ಉತ್ತರಿಸಿ, ಕರ್ನಾಟಕದಲ್ಲಿ ವಿದ್ಯುತ್ ಹೇರಳವಾಗಿದೆ. ಆದರೆ ವಿತರಣೆಯ ಸಮಸ್ಯೆಯಿದೆ. ಬಹಳ ವರ್ಷಗಳಿಂದ ಸರ್ಕಾರಗಳು ವಿತರಣಾ ವ್ಯವಸ್ಥೆ , ಟ್ರಾನ್ಸ್ಮಿಷನ್ ಬಗ್ಗೆ ಗಮನಹರಿಸಿಲ್ಲ. ಆದ್ದರಿಂದ 100 ವಿದ್ಯುತ್ ಸ್ಟೇಷನ್ ಗಳ ಸ್ಥಾಪನೆಗೆ ಮಂಜೂರಾತಿ ನೀಡಿದ್ದು ಕಾಮಗಾರಿಗಳು ಪ್ರಾರಂಭವಾಗಲಿವೆ. ಉತ್ತರ ಕರ್ನಾಟಕ ಪ್ರದೇಶದಲ್ಲಿ ವಿದ್ಯುತ್ ವಿತರಣೆಯಲ್ಲಿ ಸಮಸ್ಯೆ ಇದೆ.ಇಂತಹ ಪ್ರದೇಶದಲ್ಲಿ  ಸ್ಟೇಷನ್ ಮತ್ತು ಟ್ರಾನ್ಸ್ ಮಿಷನ್  ವ್ಯವಸ್ಥೆಗೆ ಹೆಚ್ಚಿನ ಅನುದಾನವನ್ನು ನೀಡಿ ಕಾಮಗಾರಿಗಳನ್ನು ಪೂರೈಸಲಾಗುವುದು. ಸಣ್ಣಪುಟ್ಟ ಸಮಸ್ಯೆಗಳಿಂದ ಕೆಲವೆಡೆ ಸ್ಟೇಷನ್ ಸ್ಥಾಪನೆ ವಿಳಂಬವಾಗುತ್ತಿದ್ದು, ಭೂ ಸ್ವಾಧೀನ ಸೇರಿದಂತೆ ಇತರೆ ಸಮಸ್ಯೆಗಳನ್ನು ತಕ್ಷಣ ನಿವಾರಿಸಿ, ಕಾಮಗಾರಿಯನ್ನು ಆದಷ್ಟು ಬೇಗನೇ ಪೂರ್ಣಗೊಳಿಸಲು ಸಂಬಂಧಪಟ್ಟ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದರು.

*ಸೌರ ಪಂಪ್ ಗಳ ಸ್ಥಾಪನೆಗೆ ಸಹಾಯಧನ :*
ಕೇಂದ್ರ ಸರ್ಕಾರದ ಯೋಜನೆಯಂತೆ ಯಾವೆಲ್ಲಾ ಗ್ರಿಡ್ ಗಳಲ್ಲಿ ಸೌರಶಕ್ತಿಯ ಬಳಕೆ ಮಾಡಬಹುದು ಅಂತಹ ಗ್ರಿಡ್ ಗಳಲ್ಲಿ ಸೌರಶಕ್ತಿಯ ಸರಬರಾಜಿಗೆ  ಅವಕಾಶ ಕಲ್ಪಿಸಿದ್ದಾರೆ. ಸೋಲಾರ್ ಪಂಪ್ ಗಳನ್ನು ಪ್ರತ್ಯೇಕವಾಗಿ ಸ್ಥಾಪಿಸಲು ವಿಶೇಷ ರಿಯಾಯಿತಿಯನ್ನು ನೀಡಿದ್ದಾರೆ. ಈ ಸೋಲಾರ್ ವ್ಯವಸ್ಥೆಗೆ ಸಹಾಯಧನ ನೀಡುವ ಮೂಲಕ ಪ್ರೋತ್ಸಾಹ ನೀಡಲಾಗುವುದು. ಇವೆಲ್ಲಾ ಕ್ರಮಗಳಿಂದ ವಿದ್ಯುತ್ಛಕ್ತಿ ಸಬರಾಜಿನ ಸಮಸ್ಯೆಯನ್ನು ನಿವಾರಿಸಲಾಗುವುದು  ಎಂದರು.

*ಜಾತಿಗಣತಿ ವರದಿ:*
ಜಾತಿಗಣತಿ ವರದಿ ಇನ್ನೂ ಬಹಿರಂಗವಾಗದಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ವರದಿ ಪೂರ್ಣ ಪ್ರಮಾಣದಲ್ಲಿ ಮಂಡನೆಯಾಗಿಲ್ಲ. ಈ ಬಗ್ಗೆ ಹಿಂದುಳಿದ ವರ್ಗದ ಆಯೋಗಕ್ಕೆ ವರದಿ ಮಂಡನೆಗೆ ಸೂಚನೆ ನೀಡಲಾಗಿದೆ.ದೀರ್ಘಕಾಲೀನ ಪರಿಣಾಮಗಳಿರುವಂತಹ ಇಂತಹ ವಿಷಯಗಳ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದರು.

*ಸಂಪುಟ ಪುನರ್ರಚನೆ :*
ಸಂಪುಟ ಪುನರಚನೆ ಅಥವಾ ವಿಸ್ತರಣೆ ಬಗೆಗಿನ ಪ್ರಶ್ನೆಗೆ ಉತ್ತರಿಸಿ, ಪರಮಾಧಿಕಾರದ ಪ್ರಶ್ನೆ ಅಲ್ಲ. ರಾಜಕಾರಣದಲ್ಲಿ ಸರಿಯಾದ ನಿರ್ಧಾರವನ್ನು ಸರಿಯಾದ ಸಮಯದಲ್ಲಿ ತೆಗೆದುಕೊಳ್ಳಬೇಕು ಎಂದರು.

*ಭದ್ರಾವತಿಯ ವಿಐಎಸ್ ಎಲ್ ಪುನಶ್ಚೇತನ :*
ಭದ್ರಾವತಿಯ ವಿಐಎಸ್ ಎಲ್ ಪುನಶ್ಚೇತನ ಬಗ್ಗೆ ಪ್ರತಿಕ್ರಿಯೆ ನೀಡಿ, ಕೇಂದ್ರದಲ್ಲಿ ಚರ್ಚಿಸಿದಂತೆ, ವಿಐಎಸ್ಎಲ್ ಖಾಸಗೀಕರಣಕ್ಕೆ  ಕ್ರಮ ಕೈಗೊಳ್ಳಲು ತಿಳಿಸಿದ್ದು, ಕಾರ್ಖಾನೆಗೆ ಸೂಕ್ತ ಸ್ಥಳಾವಕಾಶ ಜಾಗವಿಟ್ಟುಕೊಂಡು, ಉಳಿದ ಜಾಗವನ್ನು ಇತರೆ ಕಾರ್ಖಾನೆಗಳ ಸ್ಥಾಪನೆಗೆ ಬಳಸಿಕೊಳ್ಳಲು ಅನುಮತಿ ನೀಡಲು ಪ್ರಸ್ತಾವನೆ ಸಲ್ಲಿಸಲಾಗಿದೆ. ಎನ್ ಪಿ ಎಂ  ಪುನಶ್ಚೇತನವನ್ನು ರಾಜ್ಯಮಟ್ಟದಲ್ಲಿ ಮಾಡಬೇಕಾಗಿದ್ದು, ಟೆಂಡರ್ ಪ್ರಕ್ರಿಯೆಗೆ ಯಾವುದದೇ ರೆಸ್ಪಾನ್ಸ್ ಬಂದಿಲ್ಲ.ಇದರ ಬಗ್ಗೆ ಉನ್ನತ ಮಟ್ಟದ ಸಮಿತಿಯಲ್ಲಿ ತೀರ್ಮಾನ ಕೈಗೊಳ್ಳಲಾಗುವುದು ಎಂದರು ತಿಳಿಸಿದರು.

ರಾಜ್ಯದ ಮಸೀದಿಗಳಲ್ಲಿನ ಮೌಲ್ವಿಗಳ ಮಾಹಿತಿಗಳನ್ನುಬಹಿರಂಗಗೊಳಿಸಬೇಕು ಎಂದು ವಿರೋಧಪಕ್ಷಗಳು ಒತ್ತಾಯಿಸುತ್ತಿದ್ದಾರೆ ಎಂಬುದಕ್ಕೆ ಪ್ರತಿಕ್ರಿಯೆ ನೀಡಿ, ಗುಪ್ತ ದಳ ಹಾಗೂ ಪೊಲೀಸ್ ಇಲಾಖೆಯವರು ಹಲವಾರು ಕ್ರಮಗಳನ್ನು ಈ ಬಗ್ಗೆ ತೆಗೆದುಕೊಳ್ಳುತ್ತಿದ್ದಾರೆ. ಇವೆಲ್ಲ ಮಾಹಿತಿಯನ್ನು ಸರ್ಕಾರ ಬಹಿರಂಗಗೊಳಿಸುವ ಅವಶ್ಯಕತೆ ಇಲ್ಲ ಎಂದು ತಿಳಿಸಿದರು.
[20/04, 4:53 PM] Gurulingswami. Holimatha. Vv. Cm: *ಅರಣ್ಯ ಇಲಾಖೆಗೆ ಸಂಬಂಧಿಸಿದಂತೆ ಮೇ ಮೊದಲ ವಾರದಲ್ಲಿ ವಿಶೇಷ ಸಭೆ*: *ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ*

ಶಿವಮೊಗ್ಗ, ಏಪ್ರಿಲ್ 20: ಅರಣ್ಯ ಇಲಾಖೆಗೆ ಸಂಬಂಧಿಸಿದ ವಿಚಾರಗಳನ್ನು ಕಾನೂನಾತ್ಮಕವಾಗಿ  ಕೈಗೆತ್ತಿಕೊಳ್ಳಲು  ಮೇ ಮೊದಲನೇ ವಾರದಲ್ಲಿ ಜಿಲ್ಲೆಯ ಜನಪ್ರತಿನಿಧಿಗಳು, ಅಡ್ವೋಕೇಟ್  ಜನರಲ್  ಹಾಗೂ ಅಧಿಕಾರಿಗಳೊಂದಿಗೆ ವಿಶೇಷ ಸಭೆಯನ್ನು ಕರೆಯಲಾಗುವುದು ಎಂದು ಮುಖ್ಯಮಂತ್ರಿ. ಬಸವರಾಜ ಬೊಮ್ಮಾಯಿ ತಿಳಿಸಿದರು. 

ಅವರು ಇಂದು ಶಿವಮೊಗ್ಗದಲ್ಲಿ ಕರೆಯಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ.ಮಾತನಾಡುತ್ತಿದ್ದರು. 

 ಶಿವಮೊಗ್ಗ, ಚಿಕ್ಕಮಗಳೂರು,ದಕ್ಷಿಣ ಕನ್ನಡ, ಉತ್ತರ ಕನ್ನಡ ,  ಉಡುಪಿ, ಕೊಡಗು  ಜಿಲ್ಲೆಗಳ ಮಲೆನಾಡು ಮತ್ತು ಅರೆ ಮಲೆನಾಡು ಪ್ರದೇಶಗಳ ಸಮಸ್ಯೆಗಳಿಗೆ ಕೆಲವು ಸ್ಪಷ್ಟನೆ ನೀಡಬೇಕು. ಕೆಲವು ಕಾನೂನಾತ್ಮಕ ಬದಲಾವಣೆಗಳನ್ನು ತರಬೇಕು. ಕೇಂದ್ರ ಸರ್ಕಾರ ನಿರ್ಣಯ ತೆಗೆದುಕೊಳ್ಳುವುದಿದೆ. ಅವೆಲ್ಲಕೂ ಕ್ರಮ ಜರುಗಿಸಲಾಗುವುದು ಎಂದರು.  ಕೆಲವು ವಿಷಯಗಳಿಗೆ ತಕ್ಷಣವೇ ಪರಿಹಾರ ನೀಡಲಾಗುವುದು. ಕೆಲವು ಸರ್ವೋಚ್ಚ ನ್ಯಾಯಾಲಯ ಹಾಗೂ ಕೇಂದ್ರ ಸರ್ಕಾರದಿಂದ ತೀರುವಳಿ ಪಡೆಯಲು ಪ್ರಯತ್ನ ಮಾಡಲಾಗುವುದು ಎಂದರು.  

ಶಿವಮೊಗ್ಗದಲ್ಲಿ ಎರಡು ಪ್ರಮುಖ ಯೋಜನೆಗಳಿವೆ. ಈ ಪೈಕಿ ವಿಮಾನ ನಿಲ್ದಾಣ ಕಾಮಗಾರಿ ಹಾಗೂ ಸ್ಮಾರ್ಟ್ ಸಿಟಿ ಕಾಮಗಾರಿಯನ್ನು  ವೀಕ್ಷಣೆ ಮಾಡಲಿದ್ದೇನೆ ಎಂದರು.  ಜೋಗ ಜಲಪಾತದ ಸಮಗ್ರ ಅಭಿವೃದ್ಧಿಗೆ  ಆಡಳಿತಾತ್ಮಕ ಮಂಜೂರಾತಿಯನ್ನು ನೀಡಲಾಗಿದೆ.   ಕಾಮಗಾರಿಯನ್ನು ತುರ್ತಾಗಿ ಕೈಗೆತ್ತಿಕೊಂಡು ಅಂತರರಾಷ್ಟ್ರೀಯ ಮಟ್ಟದ ಪ್ರವಾಸೋದ್ಯಮ ಕೇಂದ್ರವನ್ನಾಗಿ ಅದನ್ನು ಪರಿವರ್ತಿಸಲು ಬಹಳ ದಿನಗಳಿಂದ  ಈ ಭಾಗದ ಜನ ಇಚ್ಛೆಯಿದೆ. ಅದಕ್ಕೆ ಖಂಡಿತವಾಗಿಯೂ ಸ್ಪಂದಿಸಲಾಗುವದು ಎಂದರು. 

*ಕೈಗಾರಿಕೋದ್ಯಮಕ್ಕೆ ಆದ್ಯತೆ*
 ಕೈಗಾರಿಕೋದ್ಯಮಕ್ಕೆ ಶಿವಮೊಗ್ಗದಲ್ಲಿ ವಿಪುಲ ಅವಕಾಶಗಳಿದ್ದು,  ಈ ಬಗ್ಗೆಯೂ ವಿಶೇಷ  ಗಮನ ಹರಿಸಲಾಗುವುದು. ' ಬಿಯಾಂಡ್ ಬೆಂಗಳೂರು'  ಕಾರ್ಯಕರ್ಮದಡಿ ಎಲ್ಲಾ  ಮೂಲಭೂತ ಸೌಕರ್ಯಗಳು ಇಲ್ಲಿವೇ. ಹೆಚ್ಚಿನ ಸೌಲಭ್ಯಗಳನ್ನು ಸೇರಿಸಿದರೆ, ದೊಡ್ಡ ಪ್ರಮಾಣದಲ್ಲಿ ಕೈಗಾರಿಕೆಗಳನ್ನು ಆಕರ್ಷಿಸಲು  ಸಾಧ್ಯವಿದೆ. ಇಲ್ಲಿ ಕೌಶಲ್ಯವೂ ಇದ್ದು, ಇದರ ಸದುಪಯೋಗ ಪಡೆಯಲು ವಿಶೇಷ ಅಭಿಯಾನ ಕೈಗೊಳ್ಳಲಾಗುವುದು   ಎಂದರು. 

ಮುಂದಿನ ತಿಂಗಳಲ್ಲಿ ಬೆಂಗಳೂರಿನಲ್ಲಿ ನಡೆಯಲಿರುವ ಟೆಕ್ ಸಮಿಟ್ ನಲ್ಲಿ ಐ.ಟಿ. ಬಿ.ಟಿ ಪ್ರಮುಖರು ಆಗಮಿಸುತ್ತಾರೆ. ಅವರಿಗೆ ಬಿಯಾಂಡ್ ಬೆಂಗಳೂರು ವಿಚಾರ ತಿಳಿಸಿ,ಐ.ಟಿ ಗೆ ಮೀಸಲಿಟ್ಟಿರುವ ಸ್ಥಳದ ಉಪಯೋಗ ಮಾಡಿಕೊಂಡು   ಟೈಯರ್ - 2 ನಗರಗಳಲ್ಲಿ ಐಟಿ ಸಂಸ್ಥೆಗಳ ಸ್ಥಾಪನೆಗೆ ಪ್ರಯತ್ನಿಸಲಾಗುವುದು. 

*ಬಜೆಟ್ ಯೋಜನೆಗಳ ಅನುಷ್ಠಾನಕ್ಕೆ ಸರ್ಕಾರಿ ಆದೇಶ*
ಸಮಗ್ರ ಕರ್ನಾಟಕ ಅಭಿವೃದ್ಧಿ ಯಾಗಬೇಕು ಎಂಬ ಚಿಂತನೆ ಇದೆ. ನಮ್ಮ ಬಜೆಟ್ ಕೂಡ  ರೂಪುರೇಷೆಗಳನ್ನು ಇಟ್ಟು ಕೊಂಡು ಸಿದ್ಧವಾಗಿದೆ.     ಈಗಾಗಲೇ ಬಜೆಟ್ಟಿನ ಶೇ 75 ರಷ್ಟು ಯೋಜನೆಗಳಿಗೆ ಸರ್ಕಾರಿ ಆದೇಶಗಳಾಗಿವೆ.  ಇನ್ನು 20 ರಷ್ಟು ಯೋಜನೆಗಳಿಗೆ ಈ ತಿಂಗಳೊಳಗೆ ಆದೇಶಗಳನ್ನು ನೀಡಲಾಗುವುದು. ಪ್ರಥಮ ಬಾರಿಗೆ ರಾಜ್ಯದಲ್ಲಿ  ಬಜೆಟ್ಟಿನ ಘೋಷಣೆಗಳಿಗೆ ಒಂದು ತಿಂಗಳಲ್ಲಿ ಆದೇಶಗಳನ್ನು ಹೊರಡಿಸಲಾಗಿದೆ. ಇದು ಬಜ್ಜೆತ್ತಿನ ಅನುಷ್ಠಾನ ಮಾಡಲು ಸರ್ಕಾಕ್ಕೆ ಇರುವ ಬದ್ಧತೆಯನ್ನು ತೋರಿಸುತ್ತದೆ ಎಂದರು. ಜನರ ಅನುಕೂಲಕ್ಕಾಗಿ ರೂಪಿಸಿರುವ ಯೋಜನೆಗಳ ಅನುಷ್ಠಾನಕ್ಕೆ  ಕ್ರಮ ಕೈಗೊಳ್ಳಲಾಗುವುದು ಎಂದರು. 

*ಗ್ರಾಮೀಣ ಮತ್ತು ಸಣ್ಣ ನಗರಗಳನ್ನು ಭೂಕಬಳಿಕೆ ನ್ಯಾಯಾಲಯದ  ವ್ಯಾಪಿಯಿಂದ ಹೊರಗಿಟ್ಟು ಆದೇಶ*
ಭೂಗಳ್ಳತನಕ್ಕೆ ಸಂಬಂಧಿಸಿದಂತೆ  ರೈತರು ಬೆಂಗಳೂರಿಗೆ ಓಡಾಡುತ್ತಿರುವ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿ, ವಿಷಯ ನಮ್ಮ ಗಮನಕ್ಕೆ ಬಂದಿದೆ. ವಿಧಾನಸಭೆಯಲ್ಲಿಯೂ ಚರ್ಚೆಯಾಗಿದೆ. ಸರ್ಕಾರ ಆದಷ್ಟೂ ಬೇಗನೆ ಈ ಬಗ್ಗೆ ತೀರ್ಮಾನ ಮಾಡಲಿದೆ. ಭೂಮಿ ಕಬಳಿಕೆ ಪ್ರಾರಂಭವಾಗಿದ್ದು ಬೆಂಗಳೂರಿನಲ್ಲಿ. ಕಾನೂನು ರೂಪಿಸುವಾಗ ಇಡೀ ಕರ್ನಾಟಕದ ವ್ಯಾಪ್ತಿಗೆ ರೂಪಿಸಲಾಗಿದೆ. ಬೆಂಗಳೂರಿನಲ್ಲಿ ಭೂಗಳ್ಳತನ ಪ್ರಕರಣಗಳು ಹೆಚ್ವಿವೆ. ಗ್ರಾಮೀಣ ಪ್ರದೇಶಗಳಲ್ಲಿ ಜೀವನೋಪಾಯಕ್ಕಾಗಿ  ಒಕ್ಕಲುತನ ಅಥವಾ ಸಣ್ಣ ನಿವೇಶನಗಳನ್ನು ಮಾಡಿಕೊಂಡಿರಬಹುದು. ಹೀಗಾಗಿ  ಇದನ್ನು ಭೂಕಬಳಿಕೆ ಹೋಲಿಸುವುದು ಸರಿಯಲ್ಲ ಎಂಬ ಅಭಿಪ್ರಾಯ ಬಂದಿದ್ದರಿಂದ  ಕಾನೂನನ್ನು ಇಡೀ ರಾಜ್ಯಕ್ಕೆ ರೂಪಿಸಿರುವುದು ಸರಿಯಲ್ಲ. ಜನ ಬೆಂಗಳೂರಿಗೆ ಬರಬೇಕಾಗುತ್ತದೆ. ನಿರ್ಧಾರಗಳೂ ಆಗಿಲ್ಲ. ಆದಷ್ಟು ಬೇಗ ಈ ಬಗ್ಗೆ ಆದೇಶ ಹೊರಡಿಸಲಾಗುವುದು.  ಭೂಗಳ್ಳತನ ಬೆಂಗಳೂರು ಮತ್ತು ಇತರ ಮೆಟ್ರೋಪಾಲಿಟನ್   ನಗರಗಳಿಗೆ ಸೀಮಿತವಾಗಿಸಿ, ಗ್ರಾಮೀಣ ಮತ್ತು ಸಣ್ಣ ನಗರಗಳನ್ನು ಈ ಭೂಕಬಳಿಕೆ ನ್ಯಾಯಾಲಯದ  ವ್ಯಾಪಿಯಿಂದ ಹೊರಗಿಟ್ಟು ಆದೇಶ ಹೊರಡಿಲಾಗುವುದು ಎಂದರು. 

*ಗುರಿ ಮೀರಿ ಆದಾಯ ಸಂಗ್ರಹ*
 ಆಗಸ್ಟ್ 2021 ರವರೆಗೂ ನಮ್ಮ ಸಂಪನ್ಮೂಲ ಕ್ರೋಢೀಕರಣ ಕೋವಿಡ್ ಕಾರಣದಿಂದ 5 ಸಾವಿರ ಕೋಟಿ ಕಡಿಮೆಯಿತ್ತು. ಹಲವಾರು ಸಭೆಗಳನ್ನು ಕರೆದು ಸಂಪನ್ಮೂಲ ಕ್ರೋಢೀಕರಣಕ್ಕೆ ಕಟ್ಟುನಿಟ್ಟಿನ ಸೂಚನೆ ನೀಡದ ಮೇಲೆ ವಾಣಿಜ್ಯ ತೆರಿಗೆ ಒಂದರಲ್ಲೇ 11 ಸಾವಿರ ಕೋಟಿ ರೂ.ಗಳನ್ನು  ಗುರಿ ಮೀರಿ ಸಂಗ್ರಹ ಮಾಡಲಾಗಿರುವುದು ದಾಖಲೆ. ಒಟ್ಟು 15 ಸಾವಿರ ಕೋಟಿ ನಮ್ಮ ಗುರಿಗಿಂತ ಹೆಚ್ಚು ಸಂಗ್ರಹ ವಾಗಿದೆ. ಒಟ್ಟಾರೆ ಆರ್ಥಿಕತೆ ಹೆಚ್ಚಾಗಿದ್ದರಿಂದ ಕೇಂದ್ರ ಸರ್ಕಾರ ದಿಂದಲೂ ಹೆಚ್ಚು ಅನುದಾನ ಬಂದಿದೆ. ಮಾರ್ಚ್ 29 ರಂದು 23 ಸಾವಿರ ಕೋಟಿ ಅಧಿಕವಾಗಿರುವ    ಪೂರಕ ಆಯವ್ಯಯವನ್ನು ಮಂಡಿಸಲಾಗಿದೆ. ಕರ್ನಾಟಕದಲ್ಲಿ ಮೊದಲ ಬಾರಿಗೆ ಈಗಾಗಲೇ ಬೊಕ್ಕಸಕ್ಕೆ ವಂದಿರುವ ಹಣದಲ್ಲಿ ಇದನ್ನು ಖರ್ಚು ಮಾಡಲಾಗುವುದು. 2023 ರಲ್ಲಿಯೂ ಇದೆ ಮಾದರಿಯನ್ನು ಅನುಸರಿಸಲು ಕಟ್ಟುನಿಟ್ಟಿನ ಕ್ರಮ ಜರುಗಿಸಲಾಗುವುದು ಎಂದರು. ಒಟ್ಟಾರೆ ಆರ್ಥಿಕತೆ ಉತ್ತಮವಾಗಿದೆ. ತೆರಿಗೆ ಸಂಗ್ರಹಕ್ಕೆ ಶ್ರಮ ಕೂಡ ಹೆಚ್ಚಾಗಿದೆ ಎಂದರು. ಆರ್ಥಿಕ ಪರಿಸ್ಥಿತಿ ಉತ್ತಮಗೊಳ್ಳುವ ಬಗ್ಗೆ ವಿಶ್ವಾಸ ವ್ಯಕ್ತಪಡಿಸಿದರು. 

*ಆರ್ಥಿಕ ಶಿಸ್ತಿಗೆ ಒತ್ತು*
ಕಳೆದ ವರ್ಷ ಬಜೆಟ್ ನಲ್ಲಿ  67, 100 ಕೋಟಿ  ರೂ ಸಾಲ ಪಡೆಯುವುದಾಗಿ ಹೇಳಲಾಗಿತ್ತು. ಆದರೆ  ಆರ್ಥಿಕತೆ ಚೇತರಿಕೆ ಕಂಡಿದ್ದರಿಂದ ನಾವು 63, 100 ಕೋಟಿ ರೂ.ಗಳ ಸಾಲ ಮಾತ್ರ ಪಡೆಯಲಾಗಿದೆ. 4 ಸಾವಿರ ಕೋಟಿ ಸಾಲ ಪಡೆಯಲು ಅವಕಾಶವಿದ್ದರೂ ನಿಯಂತ್ರಣ ಮಾಡಲಾಗಿದೆ. ಈ ವರ್ಷ ಕೇಂದ್ರ ಸರ್ಕಾರ ನೀಡಿರುವ 3.5 % ಗುರಿಯ  ಒಳಗೆ  3.2% ಗೆ ನಿಯಂತ್ರಿಸಿ ನಾವು ನಮ್ಮ ಬಜೆಟ್ ಮಂಡಿಸಿದ್ದೇವೆ. ಸಾಲವನ್ನ ಕೂಡ ಕಡಿಮೆ ಮಾಡಬಹುದು.ಕಳೆದ ವರ್ಷ  ವಿತ್ತೀಯ ಕೊರತೆ ಇತ್ತು. 15 ಸಾವಿರ ಕೋಟಿ ರೂ.ಗಳ ಕೊರತೆಯಾಗಬಹುದು ಎಂಬ ನಿರೀಕ್ಷೆ ಇತ್ತು. ವರ್ಷಾಂತ್ಯಕ್ಕೆ  6 ಸಾವಿರ ಕೋಟಿ ಮಾತ್ರ ಕೊರತೆಯಾಗಿದೆ. 9 ಸಾವಿರ ಕೋಟಿ ರೂ. ಗಳನ್ನು ಪಡೆಯಲು ಸಾಧ್ಯವಾಗಿದೆ. ಈ ವರ್ಷವೂ ಕೂಡ ವಿತ್ತೀಯ ಕೊರತೆ ನೀಗಿಸಲು ಎಲ್ಲಾ ಕೆಮಗಳನ್ನು ತೆಗೆದುಕೊಳ್ಳಲಾಗುವುದು. ಆರ್ಥಿಕ ಶಿಸ್ತು ತರಲಾಗುತ್ತಿದೆ. ತೆರಿಗೆಯೇತರ  ಆದಾಯವನ್ನು ಹೆಚ್ಚಿಸಲು ಪ್ರಯತ್ನಿಸಲಾಗುತ್ತಿದೆ. ಕಳೆದ ವರ್ಷ 94%  ಬದ್ಧತಾ ವೆಚ್ಚವಿತ್ತು ಈ ವರ್ಷ 89% ಗೆ ಇಳಿಸಲಾಗಿದೆ. ಈ ವರ್ಷ ಇನ್ನಷ್ಟು  ಇಳಿಸಿ, ಅಭಿವೃದ್ಧಿಗೆ ಹಣ ದೊರೆಯುವಂತೆ ಮಾಡಲಾಗುವುದು ಎಂದರು. 

ಕೇಂದ್ರ ಸರ್ಕಾರದಿಂದ ಬರಬೇಕಿರುವ  ಅನುದಾನದಲ್ಲಿ  ಕಳೆದ ವರ್ಷ ಸಾಲದ ರೂಪದಲ್ಲಿ 11 ಸಾವಿರ ಕೋಟಿ ರೂ.ಗಳು ಬರಬಹುದೆಂಬ ನಿರೀಕ್ಷೆ ಇತ್ತು. 10 ಸಾವಿರ ಕೋಟಿ ರೂ.ಬಂದಿದೆ. ಸುಮಾರು  18 ಸಾವಿರ ಕೋಟಿ ರೂ.ಗಳನ್ನು  ಬಡ್ಡಿ ರಹಿತವಾಗಿ ಮತ್ತು ಸೆಸ್ ರೂಪದಲ್ಲಿ  ಬಂದಿದೆ. ಈ ವರ್ಷ ಜೂನ್ ನಲ್ಲಿ ಬರಬೇಕಿರುವ ಮೊತ್ತ ಬಿಡುಗಡೆ ಮಾಡುವುದಾಗಿ ಕೇಂದ್ರ ಹಣಕಾಸು ಸಚಿವರೂ ತಿಳಿಸಿದ್ದಾರೆ ಎಂದರು. 


ಭಾ.ಜ.ಪ ಸಂಘಟನಾತ್ಮಕ ಚಟುವಟಿಕೆಗಳನ್ನು ಕೈಗೊಳ್ಳಲು ಶಿವಮೊಗ್ಗಕ್ಕೆ ಆಗಮಿಸಿದ್ದು, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳ ಎರಡು ಕೋರ್ ಸಮಿತಿ ಸಭೆಗಳಾಗಿವೆ. ಮೂರೂ ಜಿಲ್ಲೆಗಳ ಸಂಘಟನಾತ್ಮಕ ವಿಚಾರಗಳ ಬಗ್ಗೆ ಚರ್ಚೆಯಾಗಿದೆ. ಶಕ್ತಿ ಕೇಂದ್ರ ಹಾಗೂ  ಮೇಲ್ಪಟ್ಟ ಸಭೆಗಳು ನಡೆದಿವೆ. ಶಿವಮೊಗ್ಗದಲ್ಲಿ ಸಂಘಟನೆ ಗಟ್ಟಿಯಾಗಿದೆ. ಇನ್ನಷ್ಟು ಗಟ್ಟಿ ಗೊಳಿಸಲು ಹಲವಾರು ಸೂಚನೆಗಳನ್ನು ನೀಡಲಾಗಿದೆ. ವಿಶೇಷ ಕಾರ್ಯಕ್ರಮಗಳನ್ನು ರೂಪಿಸಲು ನಿರ್ದೇಶನ ನೀಡಲಾಗಿದೆ.

ಶಿವಮೊಗ್ಗ ಜಿಲ್ಲೆಯ ಅಭಿವೃದ್ಧಿಯ ಬಗ್ಗೆಯೂ ಚರ್ಚೆಯಾಗಿದೆ. ಬಹಳಷ್ಟು ದಿನಗಳಿಂದ ಬಾಕಿ ಇರುವ ಕೆಲಸಗಳನ್ನು  ಬಗೆಹರಿಸಬೇಕು. ಪ್ರಸ್ತುತ ಚಾಲ್ತಿಯಲ್ಲಿರುವ ಕಾಮಗಾರಿಗಳನ್ನು ಚುರುಕುಗೊಳಿಸಬೇಕು ಎಂದು ಚರ್ಚೆಯಾಗಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಮಟ್ಟದಲ್ಲಿ ಹಲವಾರು ತೀರ್ಮಾನಗಳನ್ನು ತೆಗೆದುಕೊಳ್ಳಬೇಕಿದೆ ಎಂದರು.

Post a Comment

Previous Post Next Post