ಕೆಂಗೇರಿ ಮೆಟ್ರೋ ನಿಲ್ದಾಣನಿಂದ ಬೈಯಪ್ಪನಹಳ್ಳಿ ಕಡೆಗೆ ಕೊನೆಯ ರೈಲು ರಾತ್ರಿ 8.30 ಕ್ಕೆ ಹೊರಡಲಿದ್ದು ಇದು ಕೊನೆ ಸೇವೆಯಾಗಿದೆ. ಭಾನುವಾರದಂದು ನೇರಳೆ ಹಾಗೂ ಹಸಿರು ಮಾರ್ಗದ ಮೆಟ್ರೋ ಸೇವೆಯಲ್ಲಿ ಯಾವುದೇ ವ್ಯತ್ಯಯವಿರುವುದಿಲ್ಲ ಎಂದು ಬಿಎಂಆರ್ಸಿಎಲ್ ಮಾಧ್ಯಮ ಪ್ರಕಟಣೆ ತಿಳಿಸಿದೆ.

ಬೆಂಗಳೂರು: ಇಂದಿರಾನಗರ ಮತ್ತು ಸ್ವಾಮಿ ವಿವೇಕಾನಂದ ಮೆಟ್ರೋ (Metro) ನಿಲ್ದಾಣದ ಮಧ್ಯೆ ಸಿವಿಲ್ ನಿರ್ವಹಣೆ ಕಾಮಗಾರಿ ಹಿನ್ನಲೆ ಇಂದು (ಏಪ್ರಿಲ್ 23) ರಾತ್ರಿ 9.30ರಿಂದ ತಾತ್ಕಾಲಿಕವಾಗಿ ಮೆಟ್ರೋ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ. ಈ ವೇಳೆ ಪ್ರಯಾಣಿಕರಿಗೆ ಎಂಜಿ ರಸ್ತೆ ಮತ್ತು ಕೆಂಗೇರಿ ಮೆಟ್ರೋ ನಿಲ್ದಾಣದ ನಡುವೆ ಮೆಟ್ರೋ ಸೇವೆ ಸಿಗಲಿದೆ. ಕೆಂಗೇರಿ ಮೆಟ್ರೋ ನಿಲ್ದಾಣನಿಂದ ಬೈಯಪ್ಪನಹಳ್ಳಿ ಕಡೆಗೆ ಕೊನೆಯ ರೈಲು ರಾತ್ರಿ 8.30 ಕ್ಕೆ ಹೊರಡಲಿದ್ದು ಇದು ಕೊನೆ ಸೇವೆಯಾಗಿದೆ. ಭಾನುವಾರದಂದು ನೇರಳೆ ಹಾಗೂ ಹಸಿರು ಮಾರ್ಗದ ಮೆಟ್ರೋ ಸೇವೆಯಲ್ಲಿ ಯಾವುದೇ ವ್ಯತ್ಯಯವಿರುವುದಿಲ್ಲ ಎಂದು ಬಿಎಂಆರ್​ಸಿಎಲ್ ಮಾಧ್ಯಮ ಪ್ರಕಟಣೆ ತಿಳಿಸಿದೆ.

ಕಾಮಗಾರಿಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿ ನಮ್ಮ ಮೆಟ್ರೋ ಸಂಚಾರದಲ್ಲಿ ವ್ಯತ್ಯಯವಾಗಿದೆ. ಬೈಯ್ಯಪ್ಪನಹಳ್ಳಿ-ವೈಟ್​ಫೀಲ್ಡ್​​ ಮಾರ್ಗದಲ್ಲಿ ಮೆಟ್ರೋ ಕಾಮಗಾರಿ ನಡೆಯುತ್ತಿದೆ. ಹೀಗಾಗಿ ನೇರಳೆ ಮಾರ್ಗದ (ಪರ್ಪಲ್ ಲೈನ್) ರೈಲುಗಳ ಕಾರ್ಯಾಚರಣೆ ಆರಂಭವಾಗುವ ಬೈಯ್ಯಪ್ಪನಹಳ್ಳಿ ನಿಲ್ದಾಣದಲ್ಲಿ ಮೆಟ್ರೋ ಸಂಚಾರ ವ್ಯತ್ಯಯವಾಗಿದೆ. ಪ್ಲಾಟ್​ಫಾರಂ 3ರಿಂದ ಮಾತ್ರವೇ ಆಗಮನ, ನಿರ್ಗಮನ ಸಂಚಾರ ನಿರ್ವಹಿಸಲಾಗುತ್ತಿದೆ. ಮಾರ್ಚ್ 2ರಿಂದ ಆರಂಭಿಸಿ ಮುಂದಿನ 6 ತಿಂಗಳ ಕಾಲದಲ್ಲಿ ಸಂಚಾರದಲ್ಲಿ ವ್ಯತ್ಯಯವಾಗಲಿದೆ ಎಂದು ನಮ್ಮ ಮೆಟ್ರೋ ಮಾಧ್ಯಮ ಪ್ರಕಟಣೆ ನೀಡಿದೆ.

ಜನರ ಸಮಸ್ಯೆಗಳಿಗೆ ಸ್ಪಂದಿಸಿದ ಮೆಟ್ರೊ

ಬೆಂಗಳೂರಿನ ಹಲವೆಡೆ ಮೆಟ್ರೋ ವಿಸ್ತರಣೆ ಕಾಮಗಾರಿಗಳು ಭರದಿಂದ ಸಾಗಿವೆ. ರಾತ್ರಿ ವೇಳೆ ನಡೆಯುತ್ತಿರುವ ಕಾಮಗಾರಿಗಳಿಂದ ತೊಂದರೆಯಾಗುತ್ತಿದೆ ಎಂದು ಬೆಂಗಳೂರಿನ ವಿವಿಧೆಡೆ ಜನರು ದೂರು ಸಲ್ಲಿಸಿದ್ದರು. ಮಕ್ಕಳು ಮತ್ತು ಹಿರಿಯ ನಾಗರಿಕರಿಗೆ ತೊಂದರೆಯಾಗುತ್ತಿದೆ ಎಂಬ ಆಕ್ಷೇಪಗಳು ವ್ಯಕ್ತವಾದ ಹಿನ್ನೆಲೆಯಲ್ಲಿ ನಮ್ಮ ಮೆಟ್ರೋ ನಿಗಮವು ರಾತ್ರಿ ಕಾಮಗಾರಿಗಳನ್ನು ಸ್ಥಗಿತಗೊಳಿಸಲು ನಿರ್ಧರಿಸಿದೆ.

Post a Comment

Previous Post Next Post