ಸಿದ್ದಗಂಗಾ ಮಠದ ಶಿವಕುಮಾರ ಸ್ವಾಮೀಜಿ ಅವರ ಜನ್ಮದಿನದ ಪ್ರಯುಕ್ತ ಶುಕ್ರವಾರ ಪ್ರಧಾನಿ ನರೇಂದ್ರ ಮೋದಿ ಅವರು ಗೌರವ ನಮನ

ನವದೆಹಲಿ, ಏಪ್ರಿಲ್‌ 1: ಕರ್ನಾಟಕದ ಸಿದ್ದಗಂಗಾ ಮಠದ ಶಿವಕುಮಾರ ಸ್ವಾಮೀಜಿ ಅವರ ಜನ್ಮದಿನದ ಪ್ರಯುಕ್ತ ಶುಕ್ರವಾರ ಪ್ರಧಾನಿ ನರೇಂದ್ರ ಮೋದಿ ಅವರು ಗೌರವ ನಮನ ಸಲ್ಲಿಸಿದ್ದಾರೆ. ಅಪ್ರತಿಮ ಸಮಾಜ ಸೇವೆಯನ್ನು ನಾವು ಸದಾ ಸ್ಮರಿಸುತ್ತೇವೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ.

"ಪೂಜನೀಯರಾದ ಗೌರವಾನ್ವಿತ ಡಾ.ಶ್ರೀ ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿಯವರ ಜಯಂತಿಯಂದು ನಾನು ನನ್ನ ಗೌರವ ನಮನ ಸಲ್ಲಿಸುವೆ. ಸ್ವಾಮೀಜಿಯವರು ಅಸಂಖ್ಯಾತ ಜನರ ಹೃದಯದಲ್ಲಿ ಅಮರರಾಗಿದ್ದಾರೆ," ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಕನ್ನಡದಲ್ಲಿಯೇ ಟ್ವೀಟ್ ಮಾಡಿದ್ದಾರೆ.


Post a Comment

Previous Post Next Post