ಕಾಂಗ್ರೆಸ್ ನಲ್ಲಿ ಇಂದೇನು... ಇಲ್ಲಿದೆ...

[12/04, 12:19 PM] +91 90088 29855: *ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ ರಣದೀಪ್ ಸಿಂಗ್ ಸುರ್ಜೇವಾಲ ಅವರ ಮಾಧ್ಯಮ ಪ್ರತಿಕ್ರಿಯೆ*

‘ಬೊಮ್ಮಾಯಿ ಅವರ ನೇತೃತ್ವದ ರಾಜ್ಯ ಬಿಜೆಪಿ ಸರ್ಕಾರ 40% ಕಮಿಷನ್ ಪಡೆಯುವ ಮೂಲಕ ಭ್ರಷ್ಟಾಚಾರದಲ್ಲಿ ಹೊಸ ಮೈಲುಗಲ್ಲು ಸಾಧಿಸಿದೆ. ಕೋಮುಗಲಭೆಗಳ ಮೂಲಕ ಬೊಮ್ಮಾಯಿ ಅವರು ಅಡಗಿ ಕುಳಿತುಕೊಳ್ಳುತ್ತಿರುವುದೇಕೆ? ಬೊಮ್ಮಾಯಿ ಅವರು ಹಾಗೂ ಬಿಜೆಪಿಯ ಗೂಂಡಾಗಳು ಅಲ್ಪಸಂಖ್ಯಾತರ ವಿರುದ್ಧ ನಿತ್ಯ ದಾಳಿ ಮಾಡುತ್ತಿದ್ದಾರೆ.

ಬೊಮ್ಮಾಯಿ ಅವರು, ಬಿಜಪಿ ಹಾಗೂ ಬಜರಂಗದಳದವರು, ಪಿಎಫ್ ಐ, ಸಿಎಫ್ ಐ ಹಾಗೂ ಎಸ್ ಡಿಪಿಐ ಜತೆ ಸೇರಿಕೊಂಡು ರಾಜ್ಯದಲ್ಲಿ ದಿನನಿತ್ಯ ಬಿಗುವಿನ ವಾತಾವರಣ ಸೃಷ್ಟಿಸುತ್ತಿದೆ. ಆದರೆ ಬೊಮ್ಮಾಯಿ ಅವರು ತಮ್ಮ ಸರ್ಕಾರದ ಮೇಲಿನ ಭ್ರಷ್ಟಾಚಾರದ ಆರೋಪದ ಬಗ್ಗೆ ಸ್ಪಷ್ಟ ಉತ್ತರ ನೀಡಿಲ್ಲ. 

ಈ 40% ಕಮಿಷನ್ ಸರ್ಕಾರದ ವಿರುದ್ಧ ರಾಜ್ಯದ 50 ಸಾವಿರ ಗುತ್ತಿಗೆದಾರರು ಪ್ರತಿಭಟನೆಗೆ ಮುಂದಾಗಿದ್ದಾರೆ. ಇನ್ನು ರಾಜ್ಯ ಸರ್ಕಾರದ ಸಚಿವರ ಮೇಲೆ 40% ಕಮಿಷನ್ ಪಡೆದ ಆರೋಪ ಕೇಳಿಬಂದಿದೆ. ಮುಖ್ಯಮಂತ್ರಿಗಳು ದುರ್ಬಲವಾಗಿದ್ದು, ಸಚಿವರ ವಿರುದ್ಧ ಕ್ರಮಕೈಗೊಳ್ಳಲು ಮುಂದಾಗುತ್ತಿಲ್ಲ. ಬಿಜೆಪಿ ಸದಸ್ಯರೇ ಸಚಿವರ ವಿರುದ್ಧ 40% ಕಮಿಷನ್ ಆರೋಪ ಮಾಡಿದ್ದು, ಈ ಆರೋಪವನ್ನು ಕಾಂಗ್ರೆಸ್ ಪಕ್ಷದ ಸದಸ್ಯರಾಗಲಿ, ಗುತ್ತಿಗೆದಾರರ ಸಂಘದವರಾಗಲಿ ಈ ಆರೋಪ ಮಾಡಿಲ್ಲ.

ಇನ್ನು ಸಚಿವರ ವಿರುದ್ಧ ಯಾವುದೇ ಕ್ರಮ ತೆಗೆದುಕೊಳ್ಳದ ಪರಿಣಾಮ ತನಗೆ ಬೆದರಿಕೆ ಕರೆಗಳು ಬರುತ್ತಿವೆ ಎಂದು ಭಯಭೀತವಾಗಿರುವ ಬಿಜೆಪಿ ಕಾರ್ಯಕರ್ತ ಆತ್ಮಹತ್ಯೆ ಪತ್ರ ಬರೆದಿದ್ದಾನೆ. ಇದು ಬೊಮ್ಮಾಯಿ ಅವರು ಭ್ರಷ್ಟಾಚಾರವನ್ನು ನಿಯಂತ್ರಿಸುತ್ತಿದ್ದಾರೆಯೇ ಅಥವಾ ಭ್ರಷ್ಟಾಚಾರಕ್ಕೆ ಪ್ರೋತ್ಸಾಹ ನೀಡುತ್ತಿದ್ದಾರೆಯೇ ಎಂಬುದಕ್ಕೆ ಈ ಬೆಳವಣಿಗೆ ಸಾಕ್ಷಿಯಾಗಿದೆ. ಈ 40% ಸರ್ಕಾರ ಅಲ್ಪಸಂಖ್ಯಾತರ ಮೇಲೆ ದಾಳಿ ಮಾಡಿ ತನ್ನ ವೈಫಲ್ಯಗಳನ್ನು, ದುರಾಡಳಿತವನ್ನು ಮುಚ್ಚಿಕೊಳ್ಳಲು ಸಾಧ್ಯವಿಲ್ಲ. ಈ ಸರ್ಕಾರ ತೊಲಗಲೇಬೇಕು.

ಈ ಸರ್ಕಾರದಲ್ಲಿ ಬಹುತೇಕ ಸಚಿವರು ಕಳಂಕಿತರು. ಕೆಲವರು ಜಾಮೀನಿನ ಮೇಲೆ ಹೊರಗಿದ್ದರೆ, ಮತ್ತೆ ಕೆಲವರು ಜಾಮೀನಿನ ನಿರೀಕ್ಷಣೆಯಲ್ಲಿದ್ದಾರೆ. ಅವರನ್ನು ವಜಾಗೊಳಿಸಬೇಕು. ಒಂದು ವೇಳೆ ವಜಾಗೊಳಿಸದಿದ್ದರೆ ಬೊಮ್ಮಾಯಿ ಅವರು ರಾಜೀನಾಮೆ ಕೊಡಬೇಕು.’
[12/04, 1:24 PM] +91 90088 29855: *ಗುತ್ತಿಗೆದಾರ ಸಂತೋಷ್ ಪಾಟೀಲ್ ಸಾವಿನ ವಿಚಾರವಾಗಿ ಡಿ.ಕೆ. ಶಿವಕುಮಾರ್ ಅವರ ಮಾಧ್ಯಮ ಪ್ರತಿಕ್ರಿಯೆ:*

ಆತ್ಮಹತ್ಯೆಯಾಗಿರುವ ವ್ಯಕ್ತಿ ತನ್ನ ಸಾವಿಗೆ ಕಾರಣ ಯಾರು ಎಂಬುದನ್ನು ಡೆತ್ ನೋಟ್ ನಲ್ಲಿ ಸ್ಪಷ್ಟವಾಗಿ ತಿಳಿಸಿದ್ದು, ಕೂಡಲೇ ಆರೋಪ ಹೊತ್ತಿರುವ ಸಚಿವ ಈಶ್ವರಪ್ಪ ವಿರುದ್ಧ ಐಪಿಸಿ ಸೆಕ್ಷನ್ 302 ಅಡಿಯಲ್ಲಿ ಕೊಲೆ ಪ್ರಕರಣ ದಾಖಲಿಸಿ ಅವರನ್ನು ಬಂಧಿಸಬೇಕು. ಕೂಡಲೇ ಆತನನ್ನು ಸಚಿವ ಸ್ಥಾನದಿಂದ ವಜಾಗೊಳಿಸಬೇಕು.

ಆರೋಪಿ ಸಚಿವನ ವಿರುದ್ಧ ಭ್ರಷ್ಟಾಚಾರ ಪ್ರಕರಣ ದಾಖಲಿಸಬೇಕು. ಈ 40% ಕಮಿಷನ್ ಆರೋಪ ಮಾಡಿರುವುದು ನಾವ್ಯಾರೂ ಅಲ್ಲ. ಗುತ್ತಿಗೆದಾರರ ಸಂಘ, ಗುತ್ತಿಗೆದಾರರು ಹಾಗೂ ಬಿಜೆಪಿ ಕಾರ್ಯಕರ್ತರೇ ಸರ್ಕಾರದ ಭ್ರಷ್ಟಾಚಾರ ಬಗ್ಗೆ ಈ ಆರೋಪ ಮಾಡಿದ್ದಾರೆ.

ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಮಾಡಿಕೊಂಡಿರುವ ಪ್ರಕರಣದಲ್ಲಿ ಮುಖ್ಯಮಂತ್ರಿಗಳು ಯಾರ ರಕ್ಷಣೆಯನ್ನೂ ಮಾಡಬಾರದು. ಕೇವಲ ಮೌಖಿಕವಾಗಿ ತನಿಖೆ ಮಾಡುತ್ತೇವೆ, ಸತ್ಯಾಂಶ ತಿಳಿಯುತ್ತೇವೆ ಎಂದು ಕಾಲಹರಣ ಮಾಡಬಾರದು. ಕೂಡಲೇ ಎಫ್ಐಆರ್ ದಾಖಲಿಸಿ, ಈಶ್ವರಪ್ಪನನ್ನು ಬಂಧಿಸಬೇಕು. ಈ ಹಿಂದೆ ಸಚಿವರುಗಳ ವಿರುದ್ಧದ ಪ್ರಕರಣದಲ್ಲಿ ಸರ್ಕಾರ ತನಿಖೆಯಲ್ಲಿ ಹಸ್ತಕ್ಷೇಪ ಮಾಡಿ ಬಿ ರಿಪೋರ್ಟ್ ಹಾಕಿ ರಕ್ಷಣೆ ಮಾಡಿದ್ದು, ಈ ಪ್ರಕರಣದಲ್ಲಿ ಆ ರೀತಿ ಮಾಡಬಾರದು.

ಈ ಹಿಂದೆ ಇಂತಹ ಪ್ರಕರಣಗಳಲ್ಲಿ ಅನೇಕ ಸಚಿವರುಗಳ ರಾಜೀನಾಮೆ ಪಡೆಯಲಾಗಿದೆ. ಈಗಲೂ ಆರೋಪ ಹೊತ್ತಿರುವ ಸಚಿವನ ವಿರುದ್ದ ಪ್ರಕರಣ ದಾಖಲಿಸಿ, ಆತನನ್ನು ವಜಾಗೊಳಿಸಬೇಕು, ಬಂಧಿಸಬೇಕು ಎಂದು ಆಗ್ರಹಿಸುತ್ತೇನೆ.

ಇದು ಕೇವಲ ಆತ್ಮಹತ್ಯೆ ಪ್ರಕರಣವಲ್ಲ. ಇದೊಂದು ಕೊಲೆ ಪ್ರಕರಣ. ಈ ಸಾವಿಗೆ ಕಾರಣ ಯಾರು ಎಂದು ಬರೆದಿಟ್ಟು ಸಂತೋಷ್ ಸಾವಿಗೆ ಶರಣಾಗಿದ್ದಾರೆ. ಈ ಸಾವಿಗೆ ಕಾರಣ ಏನು ಎಂಬುದು ಇಡೀ ರಾಜ್ಯಕ್ಕೆ ತಿಳಿದಿದೆ. ಹೀಗಾಗಿ ಈಗ ರಾಜ್ಯದಲ್ಲಿ ಕಾನೂನನ್ನು ಯಾವ ರೀತಿ ಜಾರಿಗೆ ತರಲಾಗುತ್ತದೆ ಎಂಬುದಷ್ಟೇ ಈಗ ಉಳಿದಿರುವ ವಿಚಾರ.
[12/04, 1:58 PM] +91 90088 29855: ಎಐಸಿಸಿ ಪ್ರಧಾನ ಕಾರ್ಯದರ್ಶಿ, ಕರ್ನಾಟಕದಲ್ಲಿ ಪಕ್ಷದ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ ಅವರ ನೇತೃತ್ವದಲ್ಲಿ ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಮಂಗಳವಾರ ನಡೆದ ಜಿಲ್ಲಾವಾರು ಪಕ್ಷದ ಮುಖಂಡರ ಸಭೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಬಿ.ಕೆ. ಹರಿಪ್ರಸಾದ್, ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ. ಪಾಟೀಲ್, ಕಾರ್ಯಧ್ಯಕ್ಷರಾದ ರಾಮಲಿಂಗಾರೆಡ್ಡಿ,ಸಲೀಂ ಅಹ್ಮದ್ ಮತ್ತಿತರರು ಭಾಗವಹಿಸಿದ್ದರು.
[12/04, 3:25 PM] +91 90088 29855: *ಗುತ್ತಿಗೆದಾರ ಸಂತೋಷ್ ಪಾಟೀಲ್ ಸಾವಿನ ವಿಚಾರವಾಗಿ ಕಾಂಗ್ರೆಸ್ ನಾಯಕರ ಮಾಧ್ಯಮ ಪ್ರತಿಕ್ರಿಯೆ:*

*ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ:*

ಕರ್ನಾಟಕ ರಾಜ್ಯದಲ್ಲಿ ಭ್ರಷ್ಟಾಚಾರ ಬೊಮ್ಮಾಯಿ ಅವರ ಸರ್ಕಾರವನ್ನು ಸಂಪೂರ್ಣವಾಗಿ ಆವರಿಸಿದೆ. ಬಿಜೆಪಿ ಸರ್ಕಾರದ ಅಡಿಯಿಂದ ಮುಡಿವರೆಗೂ ಭ್ರಷ್ಟಾಚಾರದಲ್ಲಿ ಮುಳುಗಿದೆ. ಬಿಜೆಪಿ ಸರ್ಕಾರದ ಎಲ್ಲ ವಿಭಾಗಗಳಲ್ಲಿ ಭ್ರಷ್ಟಾಚಾರ ಆರೋಪ ಕೇಳಿಬರುತ್ತಿದೆ.

40% ಕಮಿಷನ್ ಆರೋಪ ಕೇವಲ ಒಬ್ಬ ಸಚಿವರ ವಿರುದ್ಧ ಕೇಳಿ ಬಂದಿಲ್ಲ. ಇಡೀ ರಾಜ್ಯ ಸರ್ಕಾರದ ವಿರುದ್ಧವೇ ಕೇಳಿ ಬಂದಿರುವ ಆರೋಪ. ಅಧಿಕಾರದಲ್ಲಿ ಕೂತು ರಾಜ್ಯವನ್ನು ಲೂಟಿ ಮಾಡುತ್ತಿರುವ ಬಿಜೆಪಿ ಸರ್ಕಾರ ತನ್ನ ಕಾರ್ಯಕರ್ತನನ್ನು ಬಿಡದಿರುವ ಮಟ್ಟಿಗೆ ಭ್ರಷ್ಟಾಚಾರ ಮಾಡುತ್ತಿದೆ. ಸಂತೋಷ್ ಪಾಟೀಲ್ ಅವರ ಆರೋಪ ಇದಕ್ಕೆ ಸಾಕ್ಷಿ. ಅವರು ಅಧಿಕೃತ ಪತ್ರದ ಮೂಲಕ ಸಚಿವ ಈಶ್ವರಪ್ಪ ಅವರು ತಮ್ಮ ಬಳಿ 40% ಕಮಿಷನ್ ಕೇಳುತ್ತಿದ್ದಾರೆ ಎಂದು ಆರೋಪ ಮಾಡಿದ್ದರು. 


ಬೊಮ್ಮಾಯಿ ಅವರ ಭ್ರಷ್ಟ ಸರ್ಕಾರ ತನ್ನ ಕಾರ್ಯಕರ್ತರನ್ನೇ ಬಿಟ್ಟಿಲ್ಲ ಎಂದಾದರೆ ಜನಸಾಮಾನ್ಯರನ್ನು ಇನ್ಯಾವ ಮಟ್ಟಿಗೆ ಲೂಟಿ ಮಾಡುತ್ತಿರಬಹುದು. ಸರ್ಕಾರ ವಿರುದ್ಧ 40% ಕಮಿಷನ್ ಆರೋಪ ಕೇಳಿ ಬಂದಾಗ ಬೊಮ್ಮಾಯಿ ಅವರು ಮೌನಕ್ಕೆ ಶರಣಾದರು, ಅಮಿತ್ ಶಾ ಅವರು ಕ್ರಮ ಕೈಗೊಳ್ಳಲು ನಿರಾಕರಿಸಿದರು. ಪ್ರಧಾನ ಮಂತ್ರಿಗಳಂತೂ ಯಾವುದೇ ಪ್ರತಿಕ್ರಿಯೆ ನೀಡದ ಪರಿಣಾಮ ಅಂತಿಮವಾಗಿ ಬಿಜೆಪಿ ಕಾರ್ಯಕರ್ತ ಆತ್ಮಹತ್ಯೆಗೆ ಶರಣಾಗಿದ್ದು, ತನ್ನ ಸಾವಿಗೆ ಸಚಿವರೇ ಕಾರಣ ಎಂದು ಸ್ಪಷ್ಟವಾಗಿ ತಿಳಿಸಿದ್ದಾರೆ. ಇದೊಂದು ಭ್ರಷ್ಟಾಚಾರ, ಕೊಲೆ ಪ್ರಕರಣವಾಗಿದೆ. 

ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವರ ವಿರುದ್ಧ ಐಪಿಸಿ ಸೆಕ್ಷನ್ 302 ಅಡಿಯಲ್ಲಿ ಕೊಲೆ ಪ್ರಕರಣ, ಭ್ರಷ್ಟಾಚಾರ ಪ್ರಕರಣ ದಾಖಲಿಸಬೇಕು. ಅವರನ್ನು ಸಚಿವ ಸ್ಥಾನದಿಂದ ವಜಾಗೊಳಿಸಬೇಕು. ಕೂಡಲೇ ಅವರನ್ನು ಬಂಧಿಸಬೇಕು. ಮುಖ್ಯಮಂತ್ರಿಗಳು ಅಗತ್ಯ ಕ್ರಮ ಕೈಗೊಳ್ಳದಿದ್ದರೆ, ಅವರೂ ಕೂಡ ಈ ಭ್ರಷ್ಟಾಚಾರದಲ್ಲಿ ಭಾಗಿಯಾಗಿದ್ದಾರೆ ಎಂಬುದು ಸಾಬೀತಾಗುತ್ತದೆ. ಸದಾ ನಾ ಖಾವೂಂಗಾ ನಾ ಖಾನೇದೂಂಗಾ ಎಂದು ಹೇಳುವ ಪ್ರಧಾನ ಮೋದಿಗಳು ಅವರ ಮೂಗಿನ ಕೆಳಗೆ ರಾಜ್ಯದಲ್ಲಿ ಖಾವೂಂಗಾ, ಖಿಲಾವೂಂಗಾ ನಡುತ್ತಿದ್ದರೂ ಅದಕ್ಕೆ ಪ್ರತಿಕ್ರಿಯಿಸುತ್ತಿಲ್ಲ. 

ಬೊಮ್ಮಯಾ ಹಾಗೂ ಬಿಜೆಪಿ ಮುಂದೆ ಪರೀಕ್ಷೆ ಇದ್ದು, ಅವರ ನಡೆ ಏನು ಎಂಬುದು ಸಾಬೀತಾಗಲಿದೆ. ಕೇವಲ ಅಲ್ಪಸಂಖ್ಯಾತರ ವಿರುದ್ಧ ದಾಳಿ ಕೋಮು ಗಲಭೆಗಳ ಮೂಲಕ ಈ ವಿಚಾರಗಳನ್ನು ಮರೆಮಾಚುವ ಇವರ ಪ್ರಯತ್ನ ಬಹಿರಂಗವಾಗಲಿದೆ. ಮುಖ್ಯಮಂತ್ರಿಗಳು ಇವರ ವಿರುದ್ಧ ಸಂಜೆ ಒಳಗಾಗಿ ಈಶ್ವರಪ್ಪನ ವಿರುದ್ಧ ಭ್ರಷ್ಟಾಚಾರ, ಕೊಲೆ ಪ್ರಕರಣ ದಾಖಲಿಸಿ, ಅವರನ್ನು ವಾಜಗೊಳಿಸಿ, ಬಂಧಿಸಿ ಕಾನೂನು ಕ್ರಮ ಕೈಗೊಳ್ಳಲಿದ್ದರೆ ನಾವು ಮುಖ್ಯಮಂತ್ರಿಗಳಿಗೆ ಘೆರಾವ್ ಹಾಕಿ ಅವರ ರಾಜೀನಾಮೆಗೆ ಆಗ್ರಹಿಸುತ್ತೇವೆ.

*ವಿಧಾನಸಭೆ ವಿರೋಧ ಪಕ್ಷದ ನಾಯಕ:*

ಸಂತೋಷ್ ಪಾಟೀಲ್ ಬಿಜೆಪಿ ಕಾರ್ಯಕರ್ತ. ಇವರು ಗ್ರಾಮೀಣ ಅಭಿವೃದ್ಧಿ ಸಚಿವ ಈಶ್ವರಪ್ಪನವರ ಬಳಿ ರಸ್ತೆ ಕೆಲಸ ಪಡೆದಿದ್ದು, ಕಮಿಷನ್ ಕೂಡ ನೀಡಿರುತ್ತಾರೆ. ಈಶ್ವರಪ್ಪನವರು ಹೆಚ್ಚು ಕಮಿಷನ್ ಬೇಡಿಕೆ ಇಟ್ಟಿದ್ದಾರೆ ಎಂಬ ಆರೋಪ ಮಾಡಿದ್ದರು. ಈಗ ಸಂತೋಷ್ ಅವರು ಆತ್ಮಹತ್ಯೆ ಮಾಡಿಕೊಂಡಿದ್ದು, ವಾಟ್ಸಪ್ ಸಂದೇಶದಲ್ಲಿ ತಮ್ಮ ಸಾವಿಗೆ ಸಚಿವ ಈಶ್ವರಪ್ಪನವರೇ ನೇರ ಹೊಣೆ ಎಂದು ಹೇಳಿದ್ದಾರೆ. 

ಈ ರೀತಿ ನೇರ ಆರೋಪ ಮಾಡಿರುವುದು ಡೆತ್ ನೋಟ್ ಇದ್ದಂತೆ. ಹಿಂದೆ ಪೋಲೀಸ್ ಅಧಿಕಾರಿ ಗಣಪತಿ ಅವರ ಪ್ರಕರಣದಲ್ಲಿ ಆಗಿನ ಸಚಿವರಾಗಿದ್ದ ಕೆ.ಜೆ ಜಾರ್ಜ್ ಅವರು ರಾಜೀನಾಮೆ ನೀಡಿದ್ದರು. ಈಗ ಸಂತೋಷ್ ಪಾಟೀಲ್ ಅವರು ನೇರವಾಗಿ ಈಶ್ವರಪ್ಪ ಅವರೇ ಕಾರಣ ಎಂದು ಹೇಳಿದ್ದು, ಈ ಪ್ರಕರಣ ಐಪಿಸಿ ಸೆಕ್ಷನ್ 300 ಅಡಿಯಲ್ಲಿ ದಾಖಲಾಗಿ, ಐಪಿಸಿ ಸೆಕ್ಷನ್ 302 ಅಡಿಯಲ್ಲಿ ಶಿಕ್ಷೆ ಆಗಬೇಕು. 

ಈಶ್ವರಪ್ಪ ಅವರ ವಿರುದ್ಧ ಸೆಕ್ಷನ್ 302 ಪ್ರಕರಣ ದಾಖಲಾಗಬೇಕು. ಕೂಡಲೇ ಬಂಧನವಾಗಿ, ಸಚಿವ ಸಂಪುಟದಿಂದ ವಜಾಗೊಳಿಸಬೇಕು. ಮುಖ್ಯಮಂತ್ರಿ ಬೊಮ್ಮಾಯಿ ಅವರು ಈಶ್ವರಪ್ಪನವರು ಕೊಲೆ ಆರೋಪ ಹೊತ್ತಿರುವ ಹಿನ್ನೆಲೆಯಲ್ಲಿ ತಮ್ಮ ಸಚಿವ ಸಂಪುಟದಲ್ಲಿ ಮುಂದುವರಿಯಲು ಅವಕಾಶ ನೀಡಬಾರದು. ಇದೊಂದು ದೊಡ್ಡ ಅಪರಾಧ. ಇದಕ್ಕೆ ಜೀವಾವಧಿ ಶಿಕ್ಷೆ ಅಥವಾ ಮರಣದಂಡಣೆ ಶಿಕ್ಷೆ ನೀಡುವ ಅಪರಾಧವಾಗಿದೆ.

ಈಶ್ವರಪ್ಪನವರು ಮಾನಹಾನಿ ಪ್ರಕರಣ ದಾಖಲಿಸಿರುವುದಕ್ಕೂ ಇದಕ್ಕೂ ಸಂಬಂಧವಿಲ್ಲ. ಸತ್ತಿರುವ ವ್ಯಕ್ತಿ ತನ್ನ ಸಾವಿಗೆ ಈಶ್ವರಪ್ಪ ಕಾರಣ, ಅವರ ಕಿರುಕುಳದಿಂದ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ನೇರ ಆರೋಪ ಮಾಡಿರುವ ಹಿನ್ನೆಲೆಯಲ್ಲಿ ಇದಕ್ಕಿಂತ ದೊಡ್ಡ ಸಾಕ್ಷಿ ಮತ್ತೇನು ಬೇಕು? ಹೀಗಾಗಿ ಅವರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು.
[12/04, 5:08 PM] +91 90088 29855: *ಮಾಧ್ಯಮ ಆಹ್ವಾನ*

ಆತ್ಮೀಯರೇ,

40% ಕಮಿಷನ್ ಗಾಗಿ ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆಗೆ ಕಾರಣರಾಗಿರುವ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್ ಈಶ್ವರಪ್ಪ ಅವರನ್ನು ಸಚಿವ ಸಂಪುಟದಿಂದ ವಜಾಗೊಳಿಸಬೇಕು, ಅವರ ವಿರುದ್ಧ ಭ್ರಷ್ಟಾಚಾರ ಹಾಗೂ ಕೊಲೆ ಪ್ರಕರಣ ದಾಖಲಿಸಬೇಕು, ಅವರನ್ನು ಬಂಧಿಸಿ ವಿಚಾರಣೆ ನಡೆಸಬೇಕು ಎಂದು ಆಗ್ರಹಿಸಿ ಕಾಂಗ್ರೆಸ್ ಮುಖಂಡರ ನಿಯೋಗವು ಏಪ್ರಿಲ್ 13, 2022ರ ಬುಧವಾರ ಬೆಳಗ್ಗೆ 9.00 ಗಂಟೆಗೆ ರಾಜಭವನಕ್ಕೆ ತೆರಳಿ ರಾಜ್ಯಪಾಲರಿಗೆ ಮನವಿ ಸಲ್ಲಿಸಲಿದ್ದಾರೆ.

ನಿಯೋಗದಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ, ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ. ಶಿವಕುಮಾರ್, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಬಿ.ಕೆ. ಹರಿಪ್ರಸಾದ್, ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ ಪಾಟೀಲ್, ಪಕ್ಷದ ಕಾರ್ಯಾಧ್ಯಕ್ಷರುಗಳಾದ ರಾಮಲಿಂಗಾರೆಡ್ಡಿ, ಸಲೀಂ ಅಹ್ಮದ್, ಈಶ್ವರ್ ಖಂಡ್ರೆ, ಧೃವನಾರಾಯಣ್, ಸತೀಶ್ ಜಾರಕಿಹೊಳಿ ಅವರು ಇರುವರು.

ಮಾಧ್ಯಮ ಮಿತ್ರರು ಆಗಮಿಸಲು ಈ ಮೂಲಕ ಮನವಿ.

Post a Comment

Previous Post Next Post