ಅಸ್ಪøಶ್ಯತೆ ನಿವಾರಿಸಲು ವಿನಯ ಸಾಮರಸ್ಯ ಯೋಜನೆ – ಸಚಿವ ಕೋಟ ಶ್ರೀನಿವಾಸ ಪೂಜಾರಿ

18-04-2022
ಪ್ರಕಟಣೆಯ ಕೃಪೆಗಾಗಿ
ಅಸ್ಪøಶ್ಯತೆ ನಿವಾರಿಸಲು ವಿನಯ ಸಾಮರಸ್ಯ ಯೋಜನೆ – ಸಚಿವ ಕೋಟ ಶ್ರೀನಿವಾಸ ಪೂಜಾರಿ 
ಚಿತ್ರದುರ್ಗ: ಅಸ್ಪøಶ್ಯತೆ ನಿವಾರಣೆಗಾಗಿ “ವಿನಯ ಸಾಮರಸ್ಯ ಯೋಜನೆ”ಯನ್ನು ಜಾರಿಗೆ ತರುವ ಚಿಂತನೆ ನಡೆಸಲಾಗಿದೆ ಎಂದು ಹಿಂದುಳಿದ ವರ್ಗ ಹಾಗೂ ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ತಿಳಿಸಿದರು.
ಚಿತ್ರದುರ್ಗದ ಮುರುಘಾಮಠದಲ್ಲಿ ಇಂದು ಹಮ್ಮಿಕೊಂಡಿದ್ದ ಅಂತ್ಯೋದಯ ಪಂಚಾಯತ್ ರಾಜ್ ಹಾಗೂ ನಗರ ಸ್ಥಳೀಯ ಸಂಸ್ಥೆಗಳ ಜನಪ್ರತಿನಿಧಿಗಳಿಗೆ ವಿವಿಧ ಯೋಜನೆಗಳ ರಾಜ್ಯ ಮಟ್ಟದ ಕಾರ್ಯಾಗಾರದಲ್ಲಿ ಮಾತನಾಡಿದ ಅವರು, ರಾಜ್ಯ ಸೇರಿದಂತೆ ದೇಶದೆÀಲ್ಲೆಡೆ ಅಸ್ಪø್ರಶ್ಯತೆ ತಾಂಡವವಾಡುತ್ತಿದೆ. ಇದನ್ನು ಹೋಗಲಾಡಿಸಲು ಮೊದಲಿನಿಂದಲು ಹಲವಾರು ಜನರು ಸಾಕಷ್ಟು ಯೋಜನೆಗಳನ್ನು ರೂಪಿಸಿದ್ದರು. ಯೋಜನೆ ಫಲಕೊಟ್ಟಿಲ್ಲ. ಈ ಹಿನ್ನೆಲೆಯಲ್ಲಿ ನಮ್ಮ ಇಲಾಖೆಯಿಂದ ಅಸ್ಪøಶ್ಯತೆ ನಿವಾರಣೆಗೆಗಾಗಿ ವಿನಯ ಸಾಮರಸ್ಯ ಯೋಜನೆಯನ್ನು ಜಾರಿಗೆ ತರುವ ಮೂಲಕ ರಾಜ್ಯದಿಂದಲೇ ಅಸ್ಪøಶ್ಯತೆ ನಿವಾರಣೆ ಮಾಡಬೇಕು ಎಂದು ಪಣ ತೊಟ್ಟಿದ್ದು, ಶೀಘ್ರವೇ ಯೋಜನೆಯನ್ನು ಅನುಷ್ಠಾನಗೊಳಿಸಲಾಗುವುದು ಎಂದು ಹೇಳಿದರು. 
ಇಲಾಖೆಯಿಂದ ನೀಡಲಾಗುವ ಪ್ರಶಸ್ತಿಗಳಿಗೆ ಸಾಕಷ್ಟು ಜನರು ಅರ್ಜಿಗಳನ್ನು ಹಾಕುತ್ತಿದ್ದರು. ಇದರಿಂದ ಸಾಧಕರನ್ನು ಗುರುತಿಸಲು ಕಷ್ಟವಾಗುತ್ತಿತ್ತು. ಇದನ್ನು ಸರಿಪಡಿಸಿ, ನಮ್ಮ ಇಲಾಖೆಯಿಂದಲೇ ಯಾರು ಸಮಾಜದಲ್ಲಿ ಉತ್ತಮ ಕಾರ್ಯಗಳನ್ನು ಮಾಡುತ್ತಿದ್ದಾರೆ ಎಂಬುದನ್ನು ಗುರುತಿಸಿ ಅವರಿಗೆ ಪ್ರಶಸ್ತಿಗಳನ್ನು ನೀಡುವ ಕೆಲಸ ಮಾಡಲಾಗಿದೆ. ಇದೇ ರೀತಿ ಮುಂದಿನ ದಿನಗಳಲ್ಲೂ ನಡೆಯುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ವಿವರಿಸಿದರು.
ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಯೋಜನೆಗಳು ತಲುಪಬೇಕು. ಈ ಹಿನ್ನೆಲೆಯಲ್ಲಿ ಯೋಜನೆಗಳನ್ನು ರೂಪಿಸಿ ಕಾರ್ಯರೂಪಕ್ಕೆ ತರಲಾಗುತ್ತಿದ್ದು, 6 ತಿಂಗಳಲ್ಲಿ ಪಾರದರ್ಶಕತೆ ಮೂಲಕ ಆಡಳಿತ ನಡೆಸಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ವರದಿ ನೀಡುತ್ತೇನೆ ಎಂದು ತಿಳಿಸಿದರು.
ಅಂತ್ಯೋದಯ ಎಂದರೆ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಸರ್ಕಾರದ ಯೋಜನೆಯನ್ನು ತಲುಪಿಸಿ ಸಮಾಜದ ಮುಖ್ಯವಾಹಿನಿಗೆ ತರಬೇಕು ಎಂಬುವುದಾಗಿದೆ. ಇದಕ್ಕೆ ಗ್ರಾಮ ಪಂಚಾಯತಿಯ ಪ್ರತಿಯೊಬ್ಬರು ಕೈಜೋಡಿಸಬೇಕು ಎಂದು ಮನವಿ ಮಾಡಿದರು.
ಜಿಲ್ಲೆಯಲ್ಲಿ ಇಂದು ನಡೆಸುತ್ತಿರುವುದು ರಾಜ್ಯ ಮಟ್ಟದ 6 ನೇ ಕಾರ್ಯಕ್ರಮವಾಗಿದ್ದು, ಮುಂದಿನ ದಿನಗಳಲ್ಲಿ ಎಲ್ಲಾ ಜಿಲ್ಲೆಗಳಲ್ಲೂ ಇಂತ ಕಾರ್ಯಕ್ರಮಗಳನ್ನು ರೂಪಿಸಲಾಗುವುದು ಎಂದು ಹೇಳಿದರು.
ವಿಧಾನ ಪರಿಷತ್ ಸದಸ್ಯರಾದ ಕೆ.ಎಸ್.ನವೀನ್ ಅವರು ಮಾತನಾಡಿ, ಉತ್ತಮ ಕಾರ್ಯ ಮಾಡುವ ಗ್ರಾಮ ಪಂಚಾಯಿತಿಯನ್ನು ಗುರುತಿಸಿ ಪ್ರಶಸ್ತಿಯನ್ನು ನೀಡುವ ಕೆಲಸ ಈ ವರ್ಷದಿಂದಲೇ ಆರಂಭಗೊಳ್ಳಲಿದೆ.  ಡಿಸೆಂಬರ್ ಅಂತ್ಯದವರೆಗೂ ಪರಿಶೀಲನೆ ನಡೆಸಿ ಮಾರ್ಚ್ ತಿಂಗಳಲ್ಲಿ ಪ್ರಶಸ್ತಿ ನೀಡಲಾಗುವುದು ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಸಿ.ಪಾಟೀಲ್, ಶಾಸಕರಾದ ಜಿ.ಹೆಚ್.ತಿಪ್ಪಾರೆಡ್ಡಿ, ಗೂಳಿಹಟ್ಟಿ ಡಿ.ಶೇಖರ್, ರಘುಮೂರ್ತಿ, ವಿಧಾನಪರಿಷತ್ ಸದಸ್ಯರಾದ ಎನ್. ರವಿಕುಮಾರ್, ಚಿದಾನಂದಗೌಡ ಸೇರಿದಂತೆ ಇತರರು ಭಾಗವಹಿಸಿದ್ದರು. 



(ಕರುಣಾಕರ ಖಾಸಲೆ)
ಮಾಧ್ಯಮ ಸಂಚಾಲಕರು
ಬಿಜೆಪಿ ಕರ್ನಾಟಕ

Post a Comment

Previous Post Next Post