ಇದೇ ವರ್ಷ ಮೈಸೂರಿನಲ್ಲಿ ಚಿತ್ರ ನಗರಿ ಕಾಮಗಾರಿ ಪ್ರಾರಂಭ : ಬಸವರಾಜ ಬೊಮ್ಮಾಯಿ

[24/04, 9:32 PM] Gurulingswami. Holimatha. Vv. Cm: ಇದೇ ವರ್ಷ ಮೈಸೂರಿನಲ್ಲಿ ಚಿತ್ರ ನಗರಿ ಕಾಮಗಾರಿ ಪ್ರಾರಂಭ : ಬಸವರಾಜ ಬೊಮ್ಮಾಯಿ

ಬೆಂಗಳೂರು, ಏಪ್ರಿಲ್ 24 ( ಕರ್ನಾಟಕ ವಾರ್ತೆ ) : 

ಇದೇ ವರ್ಷ ಮೈಸೂರಿನಲ್ಲಿ ಚಿತ್ರ ನಗರಿ ಕಾಮಗಾರಿಗಳನ್ನು ಪ್ರಾರಂಭಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಲ್ಲಿ ಇಂದು ಪ್ರಕಟಿಸಿದರು.

ನಟಸಾರ್ವಭೌಮ ಡಾ ರಾಜಕುಮಾರ್ ಅವರ 94 ನೇ ಜನ್ಮದಿನಾಚರಣೆ ಹಾಗೂ 2017 ನೇ ದಿನದರ್ಶೀ ವರ್ಷದ ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪಾಲ್ಗೊಂಡು ಅವರು ಮಾತನಾಡುತ್ತಿದ್ದರು. 

ಯಾರೂ ಮನವಿ ಅಥವಾ ಬೇಡಿಕೆ ಸಲ್ಲಿಸದಿದ್ದರೂ ಪ್ರಸಕ್ತ 2022-23 ನೇ ಸಾಲಿನ ರಾಜ್ಯ  ಆಯವ್ಯಯದಲ್ಲಿ ತಾವು 125 ಕನ್ನಡ ಮತ್ತು ಪ್ರಾದೇಶಿಕ ಚಲನಚಿತ್ರಗಳಿಗೆ ಬದಲಾಗಿ 200 ಚಲನಚಿತ್ರಗಳಿಗೆ ಸಹಾಯಧನ ನೀಡಲು ಅವಕಾಶ ಕಲ್ಪಿಸಿರುವುದಾಗಿ ತಿಳಿಸಿದರು.

ಕಾಡುಗಳ್ಳ ವೀರಪ್ಪನ್ ಅವರಿಂದ ಬಂಧಮುಕ್ತರಾದ ನಂತರ ಡಾ ರಾಜ್ ಕುಮಾರ್ ಅವರೊಂದಿಗೆ ಮಾತುಕತೆ ನಡೆಸಿದ ಸಂದರ್ಭದಲ್ಲಿ ಯಾವುದೇ ಕಹಿ ಘಟನೆಗಳನ್ನು ಸ್ಮರಿಸದೆಯೇ ಕೆಟ್ಟ ವಿಚಾರಗಳನ್ನು ಪ್ರಸ್ತಾಪಿಸದ ಡಾ ರಾಜ್ ಕುಮಾರ್ ಅವರ ಉದಾತ್ತ ಮನೋಭಾವವನ್ನು ಕೊಂಡಾಡಿದರು.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಜೀವಿತಾವಧಿ ಸಾಧನೆಗಾಗಿ ಸುಪ್ರಸಿದ್ಧ ನಟಿ ಲಕ್ಷ್ಮೀ ಅವರಿಗೆ ಡಾ ರಾಜಕುಮಾರ್ ಪ್ರಶಸ್ತಿ ಹಾಗೂ ಹೆಸರಾಂತ ನಿರ್ದೇಶಕ ಎಸ್ ನಾರಾಯಣ್ ಅವರಿಗೆ ಪುಟ್ಟಣ್ಣ ಕಣಗಾಲ್ ಪ್ರಶಸ್ತಿ ನೀಡಿ  ಗೌರವಿಸಿದರು. 

ಇದೇ ಸಂದರ್ಭದಲ್ಲಿ ಡಾ ರಾಜ್ ಕುಮಾರ್ ಅವರ ಹೆಸರಿನ ಪ್ರಶಸ್ತಿ ತಮಗೆ ಲಭಿಸುತ್ತಿರುವುದು ರಾಜ್ ಅವರ ಆಶೀರ್ವಾದ ಲಭಿಸಿದಂತೆ ಎಂದು ನಟಿ ಲಕ್ಷ್ಮೀ ಅವರು ಭಾವುಕರಾಗಿ ನುಡಿದರು.

ಕೆಲಸ ಕಲಿಯಲು ಪುಟ್ಟಣ್ಣ ಕಣಗಾಲ್ ಅವರಲ್ಲಿ ತಾವು ಅವಕಾಶ ಕೋರಿದ ದಿನಗಳನ್ನು ಸ್ಮರಿಸಿದ ನಟ-ನಿರ್ದೇಶಕ ಎಸ್ ನಾರಾಯಣ್ ಅವರು ಪುಟ್ಟಣ್ಣ ಅವರ ಹೆಸರಿನ ಪ್ರಶಸ್ತಿ ತಮಗೆ ದೊರೆತಿರುವುದು ತಮ್ಮ ಸೌಭಾಗ್ಯ ಹಾಗೂ ಈ ದಿನ ತಮ್ಮ ಪಾಲಿನ ಸುದಿನ ಎಂದು ಬಣ್ಣಿಸಿದರು.

ಕನ್ನಡ ಚಲನಚಿತ್ರ ರಂಗಕ್ಕೆ ಹಲವು  ಸದಭಿರುಚಿಯ ಚಿತ್ರಗಳ ಕೊಡುಗೆ ನೀಡಿದ ನಿರ್ಮಾಪಕ ಹಾಗೂ ವಿಷ್ಣುವರ್ಧನ್ ಪ್ರಶಸ್ತಿಗೆ ಭಾಜನರಾಗಿದ್ದ ಜಿ ಎನ್ ಲಕ್ಷ್ಮೀಪತಿ ಅವರು ನಿಧನರಾಗಿರುವ ಹಿನ್ನೆಲೆಯಲ್ಲಿ ಲಕ್ಷ್ಮೀಪತಿ ಅವರ ಪುತ್ರ ರಾಮಪ್ರಸಾದ್ ಅವರು ತಮ್ಮ ತಂದೆಯ ಪರವಾಗಿ ಮುಖ್ಯಮಂತ್ರಿಯವರಿಂದ ವಿಷ್ಣುವರ್ಧನ್ ಪ್ರಶಸ್ತಿ ಸ್ವೀಕರಿಸಿದರು. 

ಡಾ ರಾಜಕುಮಾರ್ ಪ್ರಶಸ್ತಿ, ಪುಟ್ಟಣ್ಣ ಕಣಗಾಲ್ ಪ್ರಶಸ್ತಿ ಹಾಗೂ ವಿಷ್ಣುವರ್ಧನ್ ಪ್ರಶಸ್ತಿ ವಿಜೇತರಿಗೆ ತಲಾ ಐದು ಲಕ್ಷ ರೂಪಾಯಿ ನಗದು, ಐವತ್ತು ಗ್ರಾಂ ಚಿನ್ನದ ಪದಕ, ಪ್ರಶಸ್ತಿ ಫಲಕ, ಸ್ಮರಣಿಕೆ ಮತ್ತು ಫಲ ತಾಂಬೂಲ ನೀಡಿ ಮುಖ್ಯಮಂತ್ರಿ ಗೌರವಿಸಿದ್ದು ಗಮನಾರ್ಹ.

ಉತ್ತಮ ನಟ, ಉತ್ತಮ ನಟಿ ಮೊದಲ, ಎರಡನೇ ಮತ್ತು ಮೂರನೇ ಅತ್ಯುತ್ತಮ ಚಿತ್ರಗಳ ಹಾಗೂ ಇತರೆ ತಾಂತ್ರಿಕ ವರ್ಗದವರಿಗೆ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಡಾ ರಾಜ್ ಕುಮಾರ್ ಅವರ  
ಪುತ್ರ ರಾಘವೇಂದ್ರ ರಾಜ್ ಕುಮಾರ್ ಅವರು ತಮ್ಮ ತಂದೆ ರಾಜ್ ಕುಮಾರ್ ಹಾಗೂ ಕಿರಿಯ ಸಹೋದರ ಪುನೀತ್ ರಾಜ್ ಕುಮಾರ್ ಅವರ ಸರಳತೆ ಮತ್ತು ಮಾನವೀಯತೆಯ ಗುಣಗಳನ್ನು ಅನಾವರಣ ಗೊಳಿಸಿದರು.

ಕರ್ನಾಟಕ ಚಲನಚಿತ್ರ ಅಕಾಡೆಮಿಯ ಅಧ್ಯಕ್ಷ ಸುನೀಲ್ ಪುರಾಣಿಕ್, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಅಧ್ಯಕ್ಷ ಡಿ ಆರ್ ಜೈರಾಜ್, ಹೆಸರಾಂತ ನಿರ್ಮಾಪಕ ಎಸ್ ಎ ಚಿನ್ನೇಗೌಡ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿ ಹಾಗೂ ಮುಖ್ಯಮಂತ್ರಿ ಪ್ರಧಾನ ಕಾರ್ಯದರ್ಶಿ ಎನ್ ಮಂಜುನಾಥ್ ಪ್ರಸಾದ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತ ಡಾ ಪಿ ಎಸ್ ಹರ್ಷ ಅವರೂ ಸೇರಿದಂತೆ ಹಲವು ಗಣ್ಯರು ವೇದಿಕೆಯನ್ನು ಅಲಂಕರಿಸಿದ್ದರು.

ಸಮಾರಂಭಕ್ಕೆ ಮುನ್ನ ಆಯೋಜಿಸಿದ್ದ ಸಾಂಸ್ಕೃತಿಕ ಕಾರ್ಯಕ್ರಮಗಳ ರಸದೌತಣ ಪ್ರೇಕ್ಷಕರ ಮನತಣಿಸಿತು.

*******
ಡಿ ಪಿ ಎಂ
[24/04, 9:58 PM] Gurulingswami. Holimatha. Vv. Cm: *ಭಾರತೀಯ ಚಿತ್ರರಂಗದ ಅತ್ಯಂತ ಶ್ರೇಷ್ಠ ಶೋಮ್ಯಾನ್ ಡಾ.ರಾಜ್ ಕುಮಾರ್: ಮುಖ್ಯಮಂತ್ರಿ ಬಸವರಾಜ್ ಮೊಮ್ಮಾಯಿ*

ಬೆಂಗಳೂರು, ಏಪ್ರಿಲ್ 24 :

 ಭಾರತೀಯ ಚಿತ್ರರಂಗದಲ್ಲಿ ಡಾ.ರಾಜ್ ಕುಮಾರ್ ರವರು ಅತ್ಯಂತ ಶ್ರೇಷ್ಟ ಶೋಮ್ಯಾನ್ ಆಗಿದ್ದರು.ಅವರ ಸಹಜತೆಯೇ ಅವರ ಪ್ರತಿಭೆಯಾಗಿತ್ತು ಎಂದು ಮುಖ್ಯಮಂತ್ರಿ ಬಸವರಾಜ್ ಮೊಮ್ಮಾಯಿ ತಿಳಿಸಿದರು.

ಅವರು ಇಂದು ರವೀಂದ್ರ ಕಲಾಕ್ಷೇತ್ರದಲ್ಲಿ 2017ನೇ ಸಾಲಿನ ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು.

 ಅದ್ಭುತ ನಟನಾ ಕೌಶಲ್ಯದಿಂದ ತನ್ನದೆ ಆದ ಛಾಪನ್ನು ಮೂಡಿಸಿದ ಡಾ.ರಾಜ್ ಕುಮಾರ್ ಅವರು ಪೌರಾಣಿಕ, ಸಾಮಾಜಿಕ ಪಾತ್ರಗಳಲ್ಲಿ ಪರಕಾಯ ಪ್ರವೇಶ ಮಾಡುತ್ತಿದ್ದರು. ಮಗುವಿನ ಮುಗ್ಧತೆಯನ್ನು ಜೀವನಪರ್ಯಂತ ಉಳಿಸಿಕೊಂಡು, ಸಮಚಿತ್ತತೆ ಹಾಗೂ ಸ್ಥಿತಪ್ರಜ್ಞತೆ ಕಾಯ್ದುಕೊಳ್ಳುತ್ತಿದ್ದ ಡಾ.ರಾಜ್ ಕುಮಾರ್ ಅವರ ಸಾಧನೆ ದೊಡ್ಡದು. ಕನ್ನಡದ ಮಣ್ಣಿನಲ್ಲಿ ಹುಟ್ಟಿ ಸಾಧನೆ ಮಾಡಿ ನಮೆಗೆಲ್ಲರಿಗೂ ಆದರ್ಶವಾಗಿರುವುದು ನಮ್ಮ ಪುಣ್ಯಭಾಗ್ಯ ಎಂದರು.

*ಡಾ. ರಾಜ್ ಕುಮಾರ್ ಒಂದು ದಂತಕಥೆ :*
ನನಗೆ ಬಹಳ ಆಯಾಸವಾದಾಗ ಡಾ.ರಾಜ್ ಅವರ ಹಾಡುಗಳನ್ನು ಕೇಳಿ ಸಂತೃಪ್ತಿಯನ್ನು ಕಂಡಿದ್ದೇನೆ. ಡಾ. ರಾಜ್ ಕುಮಾರ್ ಒಂದು ದಂತಕಥೆ ಅವರು ನಮ್ಮನ್ನು ಬಿಟ್ಟುಹೋಗಿಲ್ಲ. ಅವರು ಕಥೆಗಾರರಿಗೆ ಪ್ರೇರಣೆಯಾಗಿದ್ದರು. ಸ್ವಾಮಿ ವಿವೇಕಾನಂದರು ಹೇಳಿದಂತೆ ಸಾಧಕನಿಗೆ ಸಾವು ಅಂತ್ಯವಲ್ಲ, ಸಾವಿನ ನಂತರವೂ ಬದುಕುವವನು ಸಾಧಕ.  ಪ್ರತಿ ಯಶಸ್ವಿ ಪುರುಷನ ಹಿಂದೆ ಒಬ್ಬ ಮಹಿಳೆಯಿರುತ್ತಾಳೆ ಎಂಬ ಮಾತಿಗೆ ಪಾರ್ವತಮ್ಮನವರು ಅನ್ವರ್ಥವಾಗಿದ್ದರು ಡಾ.ರಾಜ್ ಕುಮಾರ್ ಆಗಿ ಬೆಳೆಯಲು ಪಾರ್ವತಮ್ಮ ರಾಜ್ ಕುಮಾರ್ ರವರು ಮಹತ್ವದ ಪಾತ್ರ ವಹಿಸಿದ್ದರು ಎಂದರು.

*ಯಾರ ಮನಸ್ಸನ್ನೂ ನೋಯಿಸದ ಡಾ.ರಾಜ್ ಕುಮಾರ್ :*
ಹೈಸ್ಕೂಲ್ ಹುಡುಗನಾಗಿದ್ದಾಗ ಡಾ.ರಾಜ್ ಅವರನ್ನು ಕಂಠೀರವ ಸ್ಟುಡಿಯೋದಲ್ಲಿ ಮೊದಲ ಬಾರಿ  ಕಂಡಿದ್ದು. ಅವರ ಜೊತೆ ಅಭಿನಯಿಸಿದ ಬಹಳಷ್ಟು ನಟರನ್ನು, ಸಹಕಲಾವಿದರನ್ನು ಒಳ್ಳೆಯ ರೀತಿಯಲ್ಲಿ ನಡೆಸಿಕೊಳ್ಳುತ್ತಿದ್ದರು. ಯಾರ ಮನಸ್ಸನ್ನೂ ನೋಯಿಸದ ಡಾ.ರಾಜ್ ಕುಮಾರ್ ರವರು ವೀರಪ್ಪನ್ ನವರೊಂದಿಗೆ ಕಾಡಿನಲ್ಲಿದ್ದು ಬಂದ ಮೇಲೆ ಒಮ್ಮೆ ಭೇಟಿಯಾಗಿ, ವೀರಪ್ಪನ್ ಬಗ್ಗೆ ಕೇಳಿದಾಗ ಒಂದು ಶಬ್ಧವನ್ನು ಅವರ ಬಗ್ಗೆ ಕೆಟ್ಟದಾಗಿ ಮಾತನಾಡಲಿಲ್ಲ ಎಂದು ಸ್ಮರಿಸಿದರು.

*ಡಾ.ಪುನೀತ್ ರಾಜ್ ಕುಮಾರ್- ಭಾವನಾತ್ಮಕ ಸಂಬಂಧ :*
ಡಾ.ಪುನೀತ್ ರಾಜ್ ಕುಮಾರ್ ರವರು  ತನ್ನ ತಂದೆಯ ಸೂಕ್ಷ್ಮತೆಯನ್ನು ಅಳವಡಿಸಿಕೊಂಡಿದ್ದರು. ಪುನೀತ್ ರೊಂದಿಗೆ ಅಭಿಮಾನಿಗಳೊಂದಿಗೆ ಭಾವನಾತ್ಮಕ ಸಂಬಂಧವಿದೆ. ಸಣ್ಣ ವಯಸ್ಸಿನಲ್ಲಿ ಪುನೀತ್ ರವರು ಮಾಡಿರುವ  ಸಾಧನೆಯಿಂದ ಚಿರಸ್ಥಾಯಿಯಾಗಿದ್ದಾರೆ, ಕರ್ನಾಟಕ ರತ್ನನ ಪುತ್ರನಿಗೆ ಕರ್ನಾಟಕ ರತ್ನ ನೀಡುವ ಸೌಭಾಗ್ಯ ನಮ್ಮ ಸರ್ಕಾರದ್ದು. ಡಾ.ಪುನೀತ್ ರಾಜ್ ಕುಮಾರ್ ರವರಿಗೆ ಮರಣೋತ್ತರ ಕರ್ನಾಟಕ ಪ್ರಶಸ್ತಿ ನೀಡುವ ಸಮಾರಂಭದಲ್ಲಿ ಸಧ್ಯದಲ್ಲಿಯೇ ಆಯೋಜಿಸಲಾಗುವುದು.  ಕನ್ನಡ ಚಿತ್ರರಂಗ ಉತ್ಕೃಷ್ಟವಾದ ಎತ್ತರಕ್ಕೆ ಬೆಳೆಯಲು ಸರ್ಕಾರದ ಬೆಂಬಲ ಸದಾ ಇರಲಿದೆ ಎಂದು ತಿಳಿಸಿದರು.

Post a Comment

Previous Post Next Post