ಉಡುಪಿ : ರಾಜ್ಯಾದ್ಯಂತ ನಿನ್ನೆಯಿಂದ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭವಾಗಿದ್ದು, ಹಿಜಾಬ್ ಗೆ ಅವಕಾಶ ನೀಡದ ಹಿನ್ನೆಲೆಯಲ್ಲಿ ಹಿಜಾಬ್ ಗಾಗಿ ಹೋರಾಟ ಮಾಡಿದ್ದ ಉಡುಪಿಯ ಎಲ್ಲಾ ವಿದ್ಯಾರ್ಥಿನಿಯರು ಪರೀಕ್ಷೆಗೆ ಗೈರಾಗಿದ್ದಾರೆ ಶಾಲಾ-ಕಾಲೇಜುಗಳಲ್ಲಿ ಹಿಜಾಬ್ ಧರಿಸದಂತೆ ಹೈಕೋರ್ಟ್ ಈಗಾಗಲೇ ತೀರ್ಪು ನೀಡಿದೆ.

ಅದರೂ ನಿನ್ನೆ ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ ಪರೀಕ್ಷೆ ಬರೆಯಲು ಬಂದಿದ್ದರು. ಹಿಜಾಬ್ ಧರಿಸಿ ಪರೀಕ್ಷೆ ಬರೆಯಲು ಅವಕಾಶ ನೀಡದ ಹಿನ್ನೆಲೆಯಲ್ಲಿ ಪರೀಕ್ಷೆ ಬರೆಯದೇ ವಾಪಸ್ ಆಗಿದ್ದರು.

BREAKING NEWS : ಮದ್ರಾಸ್ ಐಐಟಿಯಲ್ಲಿ ಮತ್ತೆ 25 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು!

ಇಂದು ಕೂಡ ಹಿಜಾಬ್ ಗೆ ಅವಕಾಶ ನೀಡದ ಹಿನ್ನೆಲೆಯಲ್ಲಿ ಹಿಜಾಬ್ ಗಾಗಿ ಹೈಕೋರ್ಟ್ ಮೆಟ್ಟಿಲೇರಿದ್ದ ಮೂವರು ವಿದ್ಯಾರ್ಥಿನಿಯರು ಪರೀಕ್ಷೆಗೆ ಗೈರಾಗಿದ್ದಾರೆ. ಇಂದು ಗಣಿತ ಪರೀಕ್ಷೆ ನಡೆಯುತ್ತಿದೆ. ಆದರೆ ಹಿಜಾಬ್ ಹಕ್ಕಿಹಾಗಿ ಹೋರಾಟ ಮಾಡುತ್ತಿರುವ ವಿದ್ಯಾರ್ಥಿನಿಯರು ಪರೀಕ್ಷೆ ಬರೆಯಲು ಬಂದಿಲ್ಲ. ಅಲ್ಮಾಸ್, ಆಯೇಷಾ, ಪರೀಕ್ಷೆಗೆ ಗೈರಾದರೆ ಹಜ್ರಾ, ಆಯೇಷಾ ಹಾಲ್ ಟಿಕೆಟ್ ಪಡೆದಿಲ್ಲ ಎಂಬ ಮಾಹಿತಿ ಲಭ್ಯವಾಗಿದೆ.

Post a Comment

Previous Post Next Post