ಕಾಂಗ್ರೇಸ್ ಏನು ಹೇಳಿದೆ...

[15/04, 12:54 PM] +91 90088 29855: *ಕಳಂಕಿತ ಸಚಿವರ ರಕ್ಷಣೆಗೆ ನಿಂತು ಸಿಎಂ ಬೊಮ್ಮಾಯಿ ಅವರು ಬಹುದೊಡ್ಡ ಅಪರಾಧ ಮಾಡುತ್ತಿದ್ದಾರೆ: ಡಿ.ಕೆ. ಶಿವಕುಮಾರ್*

ಬೆಂಗಳೂರು:

'ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆಗೆ ಪ್ರೇರಣೆ ನೀಡಿರುವ ಸಚಿವ ಈಶ್ವರಪ್ಪ ಅವರು ಯಾವುದೇ ತಪ್ಪು ಮಾಡಿಲ್ಲ ಎಂದು ಹೇಳುವ ಮೂಲಕ ಸಿಎಂ ಬಸವರಾಜ ಬೊಮ್ಮಾಯಿ ಅವರು ಕಳಂಕಿತರ ರಕ್ಷಣೆಗೆ ಮುಂದಾಗಿದ್ದಾರೆ. ಆ ಮೂಲಕ ಅವರು ಬಹುದೊಡ್ಡ ಅಪರಾಧ ಮಾಡುತ್ತಿದ್ದಾರೆ' ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಕಿಡಿಕಾರಿದ್ದಾರೆ.

ಈಶ್ವರಪ್ಪ ಬಂಧನಕ್ಕೆ ಆಗ್ರಹಿಸಿ ವಿಧಾನಸೌಧದಲ್ಲಿ ನಡೆಸುತ್ತಿರುವ ಅಹೋರಾತ್ರಿ ಧರಣಿ ಸಂದರ್ಭದಲ್ಲಿ ಶುಕ್ರವಾರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಶಿವಕುಮಾರ್ ಅವರು ಹೇಳಿದ್ದಿಷ್ಟು;

'ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆಗೆ ಸಚಿವ ಈಶ್ವರಪ್ಪ ಹಾಗೂ ಅವರ ಆಪ್ತ ಸಹಾಯಕರ 40 % ಲಂಚದ ಕಿರುಕುಳವೇ ಕಾರಣ ಎಂದು ಮೃತ ವ್ಯಕ್ತಿ ವಾಟ್ಸಾಪ್ ಸಂದೇಶ ರವಾನಿಸಿದ್ದಾನೆ.  ಜತೆಗೆ ಮೃತನ ಪತ್ನಿ, ತಾಯಿ ಹಾಗೂ ಪಂಚಾಯ್ತಿ ಅಧ್ಯಕ್ಷರು ಪ್ರತ್ಯಕ್ಷದರ್ಶಿಗಳಾಗಿ ಇದೇ ಹೇಳಿಕೆ ನೀಡಿದ್ದಾರೆ. ಮೃತನ ಸಹೋದರ ಪೊಲೀಸರಿಗೆ ನೀಡಿರುವ ದೂರಿನಲ್ಲೂ ಇದನ್ನೇ ಹೇಳಿದ್ದಾರೆ.

ಆದರೂ, ಈ ಪ್ರಕರಣದ ತನಿಖೆ ನಡೆಯುವ ಮುನ್ನವೇ ಮುಖ್ಯಮಂತ್ರಿಗಳು ಈಶ್ವರಪ್ಪ ಯಾವುದೇ ತಪ್ಪು ಮಾಡಿಲ್ಲ ಎಂದು ಹೇಳಿದ್ದಾರೆ. ಹೀಗಾಗಿ ಪೊಲೀಸರು ಈ ಪ್ರಕರಣದ ನ್ಯಾಯಯುತ ತನಿಖೆ ನಡೆಸಲು ಹೇಗೆ ಸಾಧ್ಯ? ಸಚಿವರ ರಕ್ಷಣೆಗಾಗಿ ಮುಖ್ಯಮಂತ್ರಿಗಳು ಕೊಟ್ಟಿರುವ ಹೇಳಿಕೆ ಪೊಲೀಸ್ ತನಿಖೆ ಮೇಲೆ ಪ್ರಭಾವ ಬೀರುವುದಿಲ್ಲವೇ? ಬೊಮ್ಮಾಯಿ ಅವರು ಗೃಹಮಂತ್ರಿ ಆಗಿದ್ದವರು. ಈ ರೀತಿ ಹೇಳಿಕೆ ಕೊಡಬಾರದು ಎಂಬುದು ಅವರಿಗೆ ಗೊತ್ತಿಲ್ಲವೇ? ಅವರೇ ಪ್ರಕರಣದಲ್ಲಿ ದಿಕ್ಕು ತಪ್ಪಿಸುತ್ತಿದ್ದಾರೆ. ಆ ಮೂಲಕ ಆರೋಪಿಗಿಂತಲೂ ಬಹುದೊಡ್ಡ ಅಪರಾಧ ಮಾಡುತ್ತಿದ್ದಾರೆ.

ಮೃತ ಸಂತೋಷ್ ಸಹೋದರ ಕೊಟ್ಟಿರುವ ದೂರಿನಲ್ಲಿ 40% ಲಂಚದ ಕಿರುಕುಳದ ಪ್ರಸ್ತಾಪವಾಗಿದ್ದು, ಆರೋಪಿ ವಿರುದ್ಧ ಭ್ರಷ್ಟಾಚಾರ ನಿಗ್ರಹ ಕಾಯ್ದೆ ಅಡಿಯಲ್ಲಿ ಎಫ್ ಐಆರ್ ದಾಖಲಾಗಿಲ್ಲ ಯಾಕೆ?

ನಾವು ಈಶ್ವರಪ್ಪ ಅವರ ರಾಜೀನಾಮೆಗೆ ಒತ್ತಾಯ ಮಾಡುತ್ತಿಲ್ಲ. ಇದೇ ರೀತಿಯ ಬೇರೆ ಪ್ರಕರಣಗಳಲ್ಲಿ ಹೇಗೆ ಕ್ರಮ ಕೈಗೊಂಡು, ಕಾನೂನು ಪಾಲನೆ ಮಾಡಲಾಗುತ್ತದೆಯೋ ಅದೇ ರೀತಿ ಈ ಪ್ರಕರಣದಲ್ಲೂ ಕಾನೂನು ಪಾಲನೆ ಆಗಬೇಕು. ಸಚಿವ ಈಶ್ವರಪ್ಪ ಬಂಧನ ಆಗಬೇಕು. ಅಲ್ಲಿಯವರೆಗೂ ನಮ್ಮ ಹೋರಾಟ   ನಡೆಯಲಿದೆ.

ಈಶ್ವರಪ್ಪ ರಾಜೀನಾಮೆ ನೀಡುತ್ತಾರೋ ಇಲ್ಲವೋ ಬೇರೆ ವಿಚಾರ. ಅವರು ಯಾವತ್ತೂ ನುಡಿದಂತೆ ನಡೆದಿಲ್ಲ. ಈಶ್ವರಪ್ಪ ಸುಳ್ಳಿನ ಕಾರ್ಖಾನೆ ಮಾಲೀಕ ಇದ್ದಂತೆ. ಈ ಪ್ರಕರಣದ ಆರಂಭದಲ್ಲಿ ಸಂತೋಷ್ ಯಾರೆಂದು ಗೊತ್ತೇ ಇಲ್ಲ ಎಂದು ಸುಳ್ಳು ಹೇಳಿದ್ದರು. ನಂತರ ಮಾಧ್ಯಮಗಳಲ್ಲಿ ಅವರು ಸಂತೋಷ್ ಅವರನ್ನು ಭೇಟಿಯಾಗಿರುವ ಫೋಟೋಗಳು ಬಿತ್ತರವಾದವು. 

ನಾನು ವರ್ಕ್ ಆರ್ಡರ್ ಕೊಟ್ಟೇ ಇಲ್ಲ ಎಂದರು. ಆದರೆ ಸಂತೋಷ್ ಗೆ ಕೆಲಸ ಮಾಡಲು ಈಶ್ವರಪ್ಪನವರು ಹೇಳಿದ್ದಕ್ಕೆ ನಾನೇ ಸಾಕ್ಷಿ ಎಂದು ಗ್ರಾಮ ಪಂಚಾಯ್ತಿ ಅಧ್ಯಕ್ಷರು ಹೇಳಿದ್ದಾರೆ.

ಹೀಗೆ ಸುಳ್ಳನ್ನೇ ನೂರು ಬಾರಿ ಹೇಳಿ ನಿಜ ಮಾಡುವ ಕೆಲಸ ಅವರದು. ಅವರು ಯಾವುದೋ ಕಾರ್ಯಕ್ರಮದಲ್ಲಿ ಸುಳ್ಳು ಹೇಳಿಯಾದರು ಕೆಲಸ ಸಾಧಿಸಬೇಕು ಎಂದು ಅವರ ಪಕ್ಷದ ಕಾರ್ಯಕರ್ತರಿಗೆ ಸಂದೇಶ ಕೊಟ್ಟಿದ್ದಾರೆ. ಇಂತಹ ವ್ಯಕ್ತಿಯಿಂದ ನಿಜ ನಿರೀಕ್ಷೆ ಮಾಡಲು ಹೇಗೆ ಸಾಧ್ಯ?

ಅವರ ರಾಜಿನಾಮೆಗಾಗಿ ನಾವು ಹೋರಾಟ ಮಾಡುತ್ತಿಲ್ಲ. ಅವರ ವಿರುದ್ಧದ ದೂರಿನಲ್ಲಿ ಭ್ರಷ್ಟಾಚಾರ ಆರೋಪ ಕೇಳಿ ಬಂದಿದ್ದು, ಆ ಪ್ರಕಾರ ಕೇಸ್ ದಾಖಲಾಗಿ, ಅವರ ಬಂಧನವಾಗಬೇಕು. ಹೈಕೋರ್ಟ್ ನ್ಯಾಯಾಧೀಶರ ಮೇಲ್ವಿಚಾರಣೆಯಲ್ಲಿ ತನಿಖೆ ನಡೆಯಬೇಕು ಎಂಬುದು ನಮ್ಮ ಆಗ್ರಹ.

ಈ ವಿಚಾರದಲ್ಲಿ ನಮ್ಮ ಹೋರಾಟ ನಿರಂತರವಾಗಿ ಮುಂದುವರಿಯಲಿದೆ.'

ರಮೇಶ್ ಜಾರಕಿಹೊಳಿ ಏನೂ ಬೇಕಾದರೂ ಮಾಡಿಕೊಳ್ಳಲಿ. ಎದುರಿಸಲು ನಾನು ರೆಡಿ. ಏನೂ ಬೇಕಾದರೂ ಬಿಚ್ಚಿ ತೋರಿಸಲಿ. ಅವರು ಏನೇನು ಬಿಚ್ಚಿದರು ಅಂತ ಜನ ಈಗಾಗಲೇ ನೋಡಿದ್ದಾರೆ.

_---------

[15/04, 1:34 PM] +91 90088 29855: *ವಿಧಾನಸೌಧದಲ್ಲಿ ಶುಕ್ರವಾರ ನಡೆದ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಡಿ.ಕೆ. ಶಿವಕುಮಾರ್ ಅವರ ಮಾತುಗಳು:*

'ಇದು ನಮ್ಮ ಪಕ್ಷದ ಅಥವಾ ನಮ್ಮ ವೈಯಕ್ತಿಕ ವಿಚಾರವೂ ಅಲ್ಲ. ರಾಷ್ಟ್ರದಲ್ಲಿ ಆಗುತ್ತಿರುವ ಬಿಜೆಪಿ ಆಳ್ವಿಕೆ ಬಗ್ಗೆ ಜನ ನೊಂದಿದ್ದಾರೆ. 

ರಾಜ್ಯದಲ್ಲಿ 2 ಲಕ್ಷ ನೋಂದಾಯಿತ ಗುತ್ತಿಗೆದಾರರಿದ್ದು, ಹಳ್ಳಿಗಳಲ್ಲಿ ನೋಂದಣಿ ಆಗದ ಸಾಕಷ್ಟು ಗುತ್ತಿಗೆದಾರರು ಇದ್ದಾರೆ. ಅವರ ಪರಿಸ್ಥಿತಿಯೂ ಇದೇ ಆಗಿದೆ.

ಕಳೆದ ವರ್ಷ ಜೂನ್ 7 ರಂದು ಕೆಂಪಣ್ಣನವರು ಪ್ರಧಾನಿಗಳಿಗೆ ಪತ್ರ ಬರೆದ ನಂತರ ಏನೆಲ್ಲಾ ಆಗಿದೆ ಎಂದು ನೋಡಿದ್ದೀರಿ. ಪ್ರಧಾನಿಗಳು ಈ 40% ಕಮಿಷನ್ ವಿಚಾರವಾಗಿ ಒಂದು ಚೂರು ಚಿಂತನೆ ಮಾಡಿದ್ದರೆ vishayada ಗಂಭೀರತೆ ಈ ಮಟ್ಟಕ್ಕೆ ಹೋಗುತ್ತಿರಲಿಲ್ಲ.

ಸಂತೋಷ್ ಪಾಟೀಲ್ ಅವರು ಕೂಡ ಪತ್ರ ಬರೆದಿದ್ದು, ಮಾಧ್ಯಮಗಳಿಗೆ ಹೇಳಿಕೆ ಕೊಟ್ಟು, ಸ್ವತಃ ಬಿಜೆಪಿ ಕಾರ್ಯಕರ್ತನಿಗೆ ಯಾವ ರೀತಿ ತೊಂದರೆ ಆಗಿದೆ ಎಂದು ಸರ್ಕಾರದ ಗಮನ ಸೆಳೆದಿದ್ದರು.

ಅವರ ಧರ್ಮಪತ್ನಿ ನೋವು ತೋಡಿಕೊಂಡಿದ್ದು, ಪಂಚಾಯ್ತಿ ಅಧ್ಯಕ್ಷರು ಸಚಿವರು ಕಾಮಗಾರಿ ನಡೆಸಲು ಸೂಚನೆ ಕೊಟ್ಟ ಬಗ್ಗೆ ಹೇಳಿದ್ದಾರೆ. 

ಈ 40% ಕಮಿಷನ್ ವಿಚಾರವನ್ನು ಭ್ರಷ್ಟಾಚಾರ ನಿಗ್ರಹ ಕಾಯ್ದೆ ಅಡಿಯಲ್ಲಿ ತನಿಖೆ ಮಾಡಬೇಕು. ಎಫ್ ಐಆರ್ ನಲ್ಲಿ 40 % ಲಂಚದ ಕಿರುಕುಳ ವಿಚಾರ ಸ್ಪಷ್ಟವಾಗಿದೆ.

ಈ ಎಫ್ ಐಆರ್ ನಲ್ಲಿ ನೀವು ಯಾಕೆ ಭ್ರಷ್ಟಾಚಾರ ನಿಗ್ರಹ ಕಾಯ್ದೆ ಅಡಿ ಪ್ರಕರಣ ಸೇರಿಸಿಲ್ಲ? ಯಾಕೆ ಮುಚ್ಚಿಟ್ಟಿದ್ದೀರಿ? ನೀವೇ ಸಚಿವರು ಯಾವುದೇ ತಪ್ಪು ಮಾಡಿಲ್ಲ ಎಂದು ನ್ಯಾಯಾಧೀಶರಂತೆ ತೀರ್ಪು ನೀಡುತ್ತಿದ್ದೀರಿ? ಎಂದು
ನಾನು ಸಿಎಂ ಅವರನ್ನು ಪ್ರಶ್ನಿಸಲು ಬಯಸುತ್ತೇನೆ.

ಇಡೀ ದೇಶ ನೋಡುತ್ತಿದೆ. ದೇಶದಲ್ಲೇ ಕರ್ನಾಟಕ ಭ್ರಷ್ಟಾಚಾರದ ಮಹಾ ರಾಜಧಾನಿ ಆಗಿದೆ. ನೀವು ನಿಮ್ಮ ಅಧಿಕಾರದ ಅವಧಿಯಲ್ಲಿ ನೈತಿಕ ಪೊಲೀಸ್ ಗಿರಿಗೆ ಬೆಂಬಲ ಕೊಟ್ಟಿರಿ, ನಂತರ ನಡೆದ ಘಟನೆಗಳು, ಯಾರು ಏನೆಲ್ಲ ಹೇಳಿದ್ದಾರೆ ಎಂದು ನೀವೂ ನೋಡಿದ್ದೀರಿ. ಆ ಮೂಲಕ ರಾಜ್ಯದಲ್ಲಿ ಕಾನೂನು ವ್ಯವಸ್ಥೆ ಹಾಳು ಮಾಡುತ್ತಿದ್ದೀರಿ.

ಭ್ರಷ್ಟಾಚಾರದ ಬಗ್ಗೆ ಪ್ರಧಾನಿಗಳು, ನಡ್ಡಾ ಅವರು ಪ್ರಶ್ನಿಸದೆ, ಸಮ್ಮತಿ ನೀಡಿದ್ದೀರಿ. ಸದನದಲ್ಲಿ ಸಿದ್ದರಾಮಯ್ಯ ಅವರು ಈ ವಿಚಾರವಾಗಿ ಗೊತ್ತುವಳಿ ಸೂಚನೆ ನೀಡಿದಾಗ ಚರ್ಚೆಗೆ ಅವಕಾಶ ಕೊಟ್ಟಿದ್ದರೆ, ಈ ಬಗ್ಗೆ ಮನವರಿಕೆ ಮಾಡಿಕೊಡುತ್ತಿದ್ದೆವು. ಆದರೆ ಕಾಗೇರಿ ಅವರು ಸರ್ಕಾರದ ಒತ್ತಡದ ಮೇಲೆ ವಿಚಾರವನ್ನು ಪಕ್ಕಕ್ಕೆ ಸರಿಸಿ ಚರ್ಚೆಗೆ ಅವಕಾಶ ನೀಡಲಿಲ್ಲ.

ಅದರ ಪರಿಣಾಮ ಇಂದು ಬಿಜೆಪಿ ಕಾರ್ಯಕರ್ತನ ಜೀವ ಬಲಿಯಾಗಿದೆ. ನಾವು 3 ದಿನಗಳಿಂದ ಸಚಿವರ ರಾಜೀನಾಮೆ ಬಗ್ಗೆ ಮಾತನಾಡಿಲ್ಲ. ಮೊದಲು ಭ್ರಷ್ಟಾಚಾರ ಆರೋಪದಲ್ಲಿ ಪ್ರಕರಣ ದಾಖಲಿಸಿ ಕಾನೂನು ಕ್ರಮ ಕೈಗೊಳ್ಳಬೇಕು ಎಂಬುದು ನಮ್ಮ ಪ್ರಮುಖ ಬೇಡಿಕೆ. 

ಇವುಗಳಿಗಾಗಿ ನಾವು ನಾಳೆಯಿಂದ ಜಿಲ್ಲಾ ಮಟ್ಟದಲ್ಲಿ 9 ತಂಡಗಳಲ್ಲಿ ವಿವಿಧ ಜಿಲ್ಲೆಗಳಿಗೆ ಹೋಗಿ 40% ಲಂಚದ ವಿಚಾರವಾಗಿ ಬೆಳಕು ಚೆಲ್ಲುವ ಕಾರ್ಯಕ್ರಮ ಮಾಡುತ್ತೇವೆ.

ನಂತರ ಪ್ರತಿ ವಿಧಾನಸಭಾ ಕ್ಷೇತ್ರಗಳಲ್ಲೂ ಈ ರಾಜ್ಯವನ್ನು ಭ್ರಷ್ಟಾಚಾರದ ರಾಜಧಾನಿಯಾಗಿ ಮಾಡಿರುವ ಬಗ್ಗೆ ಅರಿವು ಮೂಡಿಸಲಾಗುವುದು. ಇದು ನಮ್ಮ ಮುಂದಿನ ಹೋರಾಟ. 

ಮುಖ್ಯಮಂತ್ರಿಗಳು  ಹಾಗೂ ಯಡಿಯೂರಪ್ಪನವರು ಈಗಲೇ ತೀರ್ಪು ನೀಡುತ್ತಿದ್ದಾರೆ. ಮೃತನ ಕುಟುಂಬ ಸದಸ್ಯರು ಯಡಿಯೂರಪ್ಪನವರಿಂದ ನ್ಯಾಯ ಸಿಗುವ ನಿರೀಕ್ಷೆಯಲ್ಲಿದ್ದು, ಆದರೆ ಯಡಿಯೂರಪ್ಪನವರು 3 ತಿಂಗಳಲ್ಲಿ ಈಶ್ವರಪ್ಪನವರು ಮತ್ತೆ ಮಂತ್ರಿಯಾಗುತ್ತಾರೆ ಎಂದು ಹೇಳುತ್ತಿದ್ದಾರೆ. ಇವರಿಂದ ನ್ಯಾಯ ಸಿಗುವುದಿಲ್ಲ, ಹೈಕೋರ್ಟ್ ನ್ಯಾಯಾಧೀಶರ ಮೇಲುಸ್ತುವಾರಿಯಲ್ಲಿ ಈ ಪ್ರಕರಣದ ತನಿಖೆ ನಡೆಯಬೇಕು.

ಕೆಂಪಣ್ಣ ಅವರ ಆರೋಪದ ಬಗ್ಗೆ ನಾವು ಮುಂದೆ ಮಾತನಾಡುತ್ತೇವೆ.'

Post a Comment

Previous Post Next Post