*ಎಸ್.ಎಸ್ ಪ್ರಕಾಶಂ ಅವರ ನಿಧನಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಸಂತಾಪ*
ಬೆಂಗಳೂರು:
ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಕಾರ್ಮಿಕ ವಿಭಾಗದ ಅಧ್ಯಕ್ಷರಾದ ಎಸ್.ಎಸ್. ಪ್ರಕಾಶಂ ಅವರ ನಿಧನಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರು ಸಂತಾಪ ಸೂಚಿಸಿದ್ದಾರೆ.
'ಪ್ರಕಾಶಂ ಅವರು ಪಕ್ಷದ ನಿಷ್ಠವಂತ ನಾಯಕ ಹಾಗೂ ಕಾರ್ಯಕರ್ತರಾಗಿದ್ದು, ಅವರ ನಿಧನದ ಸುದ್ದಿ ಕೇಳಿ ತೀವ್ರ ಬೇಸರವಾಗಿದೆ. ಕಾರ್ಮಿಕರ ಪರ ಕಾಳಜಿ ಹೊಂದಿದ್ದ ಪ್ರಕಾಶಂ ಅವರು ಉತ್ತಮ ಸಂಘಟಕರರೂ ಹೌದು. ಅವರ ನಿಧನದಿಂದ ಪಕ್ಷಕ್ಕೆ ನಷ್ಟವಾಗಿದೆ.
ಅವರ ಆತ್ಮಕ್ಕೆ ಶಾಂತಿ ಸಿಗಲಿ, ಅವರ ಅಗಲಿಕೆಯ ನೋವನ್ನು ಕುಟುಂಬ ಸದಸ್ಯರು ಹಾಗೂ ಪಕ್ಷದ ಕಾರ್ಯಕರ್ತರಿಗೆ ಭರಿಸುವ ಶಕ್ತಿಯನ್ನು ಕರುಣಿಸಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ'ಎಂದು ಶಿವಕುಮಾರ್ ಅವರು ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.
Post a Comment