ಕಾಂಗ್ರೆಸ್, ಇಂದು

[22/04, 2:47 PM] +91 90088 29855: ಬೆಂಗಳೂರು ಸಿಟಿ ಸಿವಿಲ್ ಕೋರ್ಟ್ ಆವರಣದಲ್ಲಿರುವ ನ್ಯಾಯಮಿತ್ರ ಬ್ಯಾಂಕ್ ಅಧ್ಯಕ್ಷರಾದ ರಮೇಶಬಾಬು ಅವರು ಸಂಘದ ಆವರಣದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರನ್ನು ಶುಕ್ರವಾರ ಸನ್ಮಾನಿಸಿದರು.
[22/04, 3:10 PM] +91 90088 29855: *ಕೆಪಿಸಿಸಿ ಕಚೇರಿಯಲ್ಲಿ ಡಿ.ಕೆ. ಶಿವಕುಮಾರ್ ಅವರು ಶುಕ್ರವಾರ ನೀಡಿದ ಮಾಧ್ಯಮ ಪ್ರತಿಕ್ರಿಯೆ:*

'ನಾವು ದೇಶದ ರೈತರ ಪರವಾಗಿ ಹೋರಾಟ ಮಾಡಿದ ವಿಚಾರವಾಗಿ ನಮ್ಮ ಮೇಲೆ ದೂರು ದಾಖಲಾಗಿದ್ದು, ಜನ ಪ್ರತಿನಿಧಿಗಳ ನ್ಯಾಯಾಲಯದಲ್ಲಿ ವಾರೆಂಟ್ ಆಗಿತ್ತು.

ದಾಖಲಾದ ದೂರಿನಲ್ಲಿ ದಿನಾಂಕ 20-01-21 ರಂದು ಫ್ರೀಡಂ ಪಾರ್ಕ್ ನಲ್ಲಿ 10 ಸಾವಿರ ಜನರನ್ನು ಸೇರಿಸಿ ಪ್ರತಿಭಟನೆ ಮಾಡಿದ್ದು, ವಿಪತ್ತು ನಿರ್ವಹಣೆ ಕಾಯ್ದೆ ಅಡಿಯಲ್ಲಿ 6 ಜನರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಮೊದಲ ಆರೋಪಿ ನಾನಾಗಿದ್ದು, ಉಳಿದಂತೆ ಸಲೀಂ ಅಹ್ಮದ್, ಈಶ್ವರ್ ಖಂಡ್ರೆ, ಮಂಜುನಾಥ್, ಶಫಿವುಲ್ಲಾ ಹಾಗೂ ಬಸನಗೌಡ ಬಾದರ್ಲಿ ಅವರ ಹೆಸರನ್ನು ಸೇರಿಸಲಾಗಿತ್ತು.

ಪ್ರತಿಭಟನೆಯಲ್ಲಿ 10 ಸಾವಿರ ಜನ ಸೇರಿದ್ದರೂ ಕೇವಲ ನಮ್ಮ ಮೇಲೆ ಉದ್ದೇಶ ಪೂರ್ವಕವಾಗಿ ಪ್ರಕರಣ ದಾಖಲಿಸಿದ್ದಾರೆ. 

ನಾವು ಕಾನೂನು ಗೌರವಿಸಿ ಜಾಮೀನು ಪಡೆದು ಬಂದಿದ್ದೇವೆ. ಅದು ಬೇರೆ ವಿಚಾರ. ಆದರೆ ಪ್ರತಿವೊಂದು ಪ್ರಕರಣದಲ್ಲೂ ನಮ್ಮ ಮೇಲೆ ಮಾತ್ರ ಪ್ರಕರಣ ದಾಖಲಿಸಲಾಗುತ್ತಿದೆ.

ಮೇಕೆದಾಟು ಪಾದಯಾತ್ರೆ ಸಂಬಂಧ ರಾಮನಗರ, ಕನಕಪುರ, ಬೆಂಗಳೂರಲ್ಲಿ ಕೆಲವರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

ನಮಗೆ ತೊಂದರೆ ನೀಡಿ, ಕೋರ್ಟ್ ಗೆ ಅಲೆಸಬೇಕು ಎಂದು ದ್ವೇಷದ ರಾಜಕಾರಣ ಮಾಡುತ್ತಿದ್ದಾರೆ. ಈಶ್ವರಪ್ಪ ಹಾಗೂ ರಾಘವೇಂದ್ರ ಅವರು ಸೆಕ್ಷನ್ 144 ಉಲ್ಲಂಘನೆ ಮಾಡಿದ್ದರಲ್ಲ, ಅಲ್ಲಿ ನ್ಯಾಯಾಲಯ, ಕಾನೂನು ಇರಲಿಲ್ಲವೇ? ಅಲ್ಲಿ ಕಾನೂನು ಉಲ್ಲಂಘನೆ ಆಗಿಲ್ಲವೇ?

ನಾವು ಹೋರಾಟ ಮಾಡಿದ ಪರಿಣಾಮದಿಂದ ಪ್ರಧಾನಮಂತ್ರಿಗಳು ಕರಾಳ ಕೃಷಿ ಕಾಯ್ದೆಗಳನ್ನು ಹಿಂಪಡೆದರು. ರಾಜ್ಯದಲ್ಲಿ ಇನ್ನೂ ಕಾಯ್ದೆ ಹಿಂಪಡೆದಿಲ್ಲ. ರೈತರ ಪರ ಧ್ವನಿ ಎತ್ತುವ ಕಾಂಗ್ರೆಸ್ ಧ್ವನಿ ಅಡಗಿಸುವ ಪ್ರಯತ್ನ ಇದಾಗಿದೆ.'

ಇನ್ನು ಪಿಎಸ್ ಐ ನೇಮಕಾತಿ ಹಗರಣ ವಿಚಾರವಾಗಿ ಕೇಳಿದ ಪ್ರಶ್ನೆಗೆ, 'ಈ ಹಗರಣದ ಬಗ್ಗೆ ಪ್ರಿಯಾಂಕ್ ಖರ್ಗೆ ಅವರು ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ್ದು, ನಾವೇ ಇದನ್ನು ಮೊದಲು ಬೆಳಕಿಗೆ ತಂದಿದ್ದೇವೆ. ಈ ಹಗರಣ ನಡೆದ ಶಿಕ್ಷಣ ಸಂಸ್ಥೆ ಸಂಸ್ಥಾಪಕರು ಗೃಹ ಸಚಿವರ ಜತೆ ಉತ್ತಮ ಒಡನಾಟ ಇಟ್ಟುಕೊಂಡಿರುವ ಫೋಟೋಗಳು ಬಂದಿವೆ. ಪೊಲೀಸರು ಪ್ರಾಥಮಿಕ ತನಿಖೆ ನಡೆಸುತ್ತಿದ್ದು, ಪರೀಕ್ಷೆ ಬರೆದ 52 ಸಾವಿರ ಅಭ್ಯರ್ಥಿಗಳಿಗೆ ಮೋಸ ಆಗಿದೆ. ಪ್ರತಿ ಹುದ್ದೆಗೆ 70-80 ಲಕ್ಷ ಹಣ ಕೊಟ್ಟಿರುವ ವರದಿ ಬಂದಿದೆ. ಇದೊಂದು ಭ್ರಷ್ಟ ಸರ್ಕಾರ. ಈ ಸರ್ಕಾರ ಕೋವಿಡ್ ಬೆಡ್, ಔಷಧಿ, ನೇಮಕಾತಿ, ಮಠಗಳಿಂದಲೂ ಕಮಿಷನ್ ನಿಂದ ಹಿಡಿದು, ಬೆಂಗಳೂರು ಪಾಲಿಕೆ ಕಸ ಗುಡಿಸುವ ವಿಚಾರದವರೆಗೂ ಭ್ರಷ್ಟಾಚಾರ ಎಲ್ಲೆಡೆ ತಾಂಡವವಾಡುತ್ತಿದೆ' ಎಂದು ಉತ್ತರಿಸಿದರು.
[22/04, 8:56 PM] +91 90088 29855: https://twitter.com/inckarnataka/status/1517511393289056256?s=21&t=ar4CQRHuf1OYfGBcrdtkKwರೈತ ವಿರೋಧಿ ಕಾಯ್ದೆಗಳ ವಿರುದ್ಧ ಸಾವಿರಾರು ರೈತರೊಂದಿಗೆ ರಾಜಭವನ ಚಲೋ ಕಾರ್ಯಕ್ರಮ ನಡೆಸಿತ್ತು ಕಾಂಗ್ರೆಸ್.

ಬಿಜೆಪಿ ಸರ್ಕಾರ 
@DKShivakumar
 
ಸೇರಿದಂತೆ 6 ಜನರ ಮೇಲೆ ಪ್ರಕರಣ ದಾಖಲಿಸಿ ತನ್ನ ದ್ವೇಷ ರಾಜಕಾರಣವನ್ನು ಸಾಬೀತುಪಡಿಸಿದೆ.

ಇಂತಹ ದುರುದ್ದೇಶಪೂರಿತ
ಕೇಸ್‌ಗಳಿಂದ ನಮ್ಮ ಹೋರಾಟದ ಧ್ವನಿ ಕುಗ್ಗಿಸುವ ಬಿಜೆಪಿಯ ತಂತ್ರ ನಡೆಯದು
Karnataka Congress
@INCKarnataka
·
1h
Replying to 
@INCKarnataka
ಸಾವಿರಾರು ರೈತರು, ಬೆಂಗಳೂರಿನ ರಸ್ತೆಗಳಲ್ಲಿ ಜನಸಾಗರ, ಎಲ್ಲೆಲ್ಲೂ ಹಸಿರು ಟವೆಲ್‌ನ ಹೋರಾಟದ ಕಿಚ್ಚು.

ಇದೆಲ್ಲದರ ನಡುವೆ ಬಿಜೆಪಿ ಸರ್ಕಾರಕ್ಕೆ ಪ್ರಕರಣ ದಾಖಲಿಸಲು ಕಂಡಿದ್ದು ಕೇವಲ 6 ಜನರು ಮಾತ್ರ!
ಇದು ಶುದ್ದ ದ್ವೇಷ ರಾಜಕೀಯದ ಪರಮಾವಧಿ ಅಲ್ಲದೆ ಮತ್ತೇನು.

ಇಂತಹ ನೂರು ಕೇಸ್ ಹಾಕಿದರೂ ಕಾಂಗ್ರೆಸ್ ಪಕ್ಷದ ಹೋರಾಟವನ್ನು ಕುಗ್ಗಿಸಲಾಗದು.

Post a Comment

Previous Post Next Post