CM, ಇಂದು

[22/04, 11:05 AM] Gurulingswami. Holimatha. Vv. Cm: ಕಲಬುರಗಿ, ಏಪ್ರಿಲ್ 22: ರಾಜ್ಯದ ಗ್ರಾಮೀಣ ಭಾಗದ ಯುವ ಜನತೆಗೆ ಇರುವಲ್ಲಿಯೇ  ತೆರಳಿ ಸೂಕ್ತ ಕೌಶಲ್ಯ ತರಬೇತಿ ಮೂಲಕ ಜೀವನೋಪಾಯ ಕಲ್ಪಿಸುವ *ಕೌಶಲ್ಯ ರಥ - Skill on Wheels* ನ್ನು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು  ಉದ್ಘಾಟಿಸಿದರು. 

ಸಚಿವರಾದ ಡಾ: ಸಿ.ಎನ್.ಅಶ್ವತ್ಥ್ ನಾರಾಯಣ್, ಮುರುಗೇಶ್ ನಿರಾಣಿ, ಮಾಜಿ ಡಿಸಿಎಂ ಲಕ್ಷ್ಮಣ ಸವದಿ, ಶಾಸಕ ದತ್ತಾತ್ರೇಯ ಪಾಟೀಲ ರೇವೂರ,ರಾಜೂ ಗೌಡ,  ಸಂಸದ ಉಮೇಶ್ ಜಾಧವ್,   ಮೊದಲಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
[22/04, 11:10 AM] Gurulingswami. Holimatha. Vv. Cm: *ಅಜಾನ್: ಸೌಹಾರ್ದತೆಯಿಂದ ಸಮಸ್ಯೆ ಬಗೆಹರಿಸಲು ಸೂಚನೆ*
*ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ*

ಕಲಬುರಗಿ, ಏಪ್ರಿಲ್ 22: ಆಜಾನ್ ಕುರಿತಂತೆ  ಪೊಲೀಸ್ ಠಾಣೆಯಲ್ಲಿ ಶಾಂತಿ ಸಭೆಗಳನ್ನು ನಡೆಸಿ  ಸೌಹಾರ್ದತೆಯಿಂದ  ಸಮಸ್ಯೆ ಗಳನ್ನು ಬಗೆಹರಿಸಲು ಸೂಚನೆ ನೀಡಲಾಗಿದೆ. ಈ  ಪ್ರಕ್ರಿಯೆ ನಡೆಯುತ್ತಿದೆ. ಕಾನೂನನ್ನು ಎಲ್ಲರೂ ಪಾಲಿಸಬೇಕು ಎಂದು  ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು. 

ಅವರು ಇಂದು ಕಲಬುರಗಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. 


ಆಜಾನ್ ಬಗ್ಗೆ ಉಚ್ಛ ನ್ಯಾಯಾಲಯದ ಆದೇಶವಿದೆ. ಆ ಪ್ರಕಾರ ಸುತ್ತೋಲೆಯನ್ನು ಈಗಾಗಲೇ ಹೊರಡಿಸಲಾಗಿದೆ. ಯಾವ ಯಾವ ಸಂದರ್ಭದಲ್ಲಿ ಎಷ್ಟು ಡೆಸಿಬಲ್ ಇರಬೇಕು ಎಂದು ಕಾನೂನು ಇದೆ.  ಡಿಜಿಯವರು ಸುತ್ತೋಲೆ ಹೊರಡಿಸಿದ್ದಾರೆ ಎಂದರು. 

*ಪಕ್ಷದಲ್ಲಿ ಹಿಂದೆಂದಿಗಿಂತಲೂ ಹೆಚ್ಚಿನ ಒಗ್ಗಟ್ಟು ಇದೆ. ಪಕ್ಷದಲ್ಲಿ ಯಾವ ಅಸಮಾಧಾನವೂ ಇಲ್ಲ. ಕೆಲವು ವಿಚಾರಗಳನ್ನು ಚರ್ಚೆ ಮಾಡಿ ಬಗೆಹರಿಸಿಕೊಂಡಿದ್ದೇವೆ. ಹಿಂದೆಂದಿಗಿಂತಲೂ ಹೆಚ್ಚಿನ ಒಗ್ಗಟ್ಟು ನಮ್ಮಲ್ಲಿದೆ. ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಹೆಚ್ಚಿನ ಕಾಳಜಿ ವಹಿಸಲಾಗಿದೆ. ಎಲ್ಲರನ್ನು ವಿಶ್ವಾಸಕ್ಕೆ  ತೆಗೆದುಕೊಂಡು ಹೋಗುವ ವಿಶ್ವಾಸವಿದೆ ಎಂದರು.
[22/04, 1:40 PM] Gurulingswami. Holimatha. Vv. Cm: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲಿ ಇಂದು ಕಲಬುರ್ಗಿಯಲ್ಲಿ ಕಲಬುರ್ಗಿ ವಿಭಾಗ ಮಟ್ಟದ ಬಿಜೆಪಿ ಕಾರ್ಯಕರ್ತರ ಸಮಾವೇಶ ನಡೆಯಿತು. ಸಮಾವೇಶದಲ್ಲಿ ಸಚಿವರಾದ ಮುರುಗೇಶ್ ನಿರಾಣಿ, ಡಾ. ಸಿ ಎನ್ ಅಶ್ವಥನಾರಾಯಣ, ಬಿ ಶ್ರೀರಾಮುಲು, ಶಾಸಕರಾದ ದತ್ತಾತ್ರೇಯ ಪಾಟೀಲ್ ರೇವೂರ್, ರಾಜಕುಮಾರ್ ಪಾಟೀಲ್ ತೇಲ್ಕೂರ್, ಮಾಜಿ ಡಿಸಿಎಂ ಲಕ್ಷ್ಮಣ ಸವದಿ, ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿವೈ ವಿಜಯೇಂದ್ರ, ಮಾಜಿ ಶಾಸಕ ಸುನೀಲ್ ವಲ್ಲಾಪುರೆ ಸೇರಿದಂತೆ ಪಕ್ಷದ ಮುಖಂಡರು ಉಪಸ್ಥಿತರಿದ್ದರು.
[22/04, 3:16 PM] Gurulingswami. Holimatha. Vv. Cm: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಜಗದ್ಗುರು ಶ್ರೀ ರೇಣುಕಾಚಾರ್ಯ ಜಯಂತಿ ಆಚರಣೆಯ ನಿರ್ಧಾರ ಕೈಗೊಂಡ ಹಿನ್ನೆಲೆಯಲ್ಲಿ  ಅಖಿಲ ಭಾರತ ವೀರಶೈವ ಮಹಾಸಭಾ ಕಲಬುರ್ಗಿ ವತಿಯಿಂದ ಕಲಬುರ್ಗಿಯಲ್ಲಿ ಇಂದು ಏರ್ಪಡಿಸಲಾಗಿದ್ದ ಸಮಾರಂಭದಲ್ಲಿ ಅಭಿನಂದನೆ ಸ್ವೀಕರಿಸಿದರು. ಸಮಾರಂಭದಲ್ಲಿ ರಂಭಾಪುರಿ ಪೀಠದ ಜಗದ್ಗುರುಗಳು, ಸಚಿವರಾದ ಮುರುಗೇಶ್ ನಿರಾಣಿ, ಶಾಸಕರಾದ ದತ್ತಾತ್ರೇಯ ಪಾಟೀಲ್ ರೇವೂರ್, ರಾಜಕುಮಾರ್ ಪಾಟೀಲ್ ತೇ ಲ್ಕೂರ,  ಅಖಿಲ ಭಾರತ ವೀರಶೈವ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ಸೇರಿದಂತೆ ಇತರೆ ಪ್ರಮುಖ ನಾಯಕರು ಉಪಸ್ಥಿತರಿದ್ದರು.
[22/04, 3:39 PM] Gurulingswami. Holimatha. Vv. Cm: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಬಾದಾಮಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಉಗಲವಾಟ ಗ್ರಾಮದಲ್ಲಿ ಕೆರೂರು ಏತ ನೀರಾವರಿ ಯೋಜನೆಗೆ ಶಂಕುಸ್ಥಾಪನೆ ನೆರವೇರಿಸಿದರು. ಈ ಸಂದರ್ಭದಲ್ಲಿ ವಿಧಾನಸಭೆ ಪ್ರತಿಪಕ್ಷದ ನಾಯಕ ಹಾಗೂ ಬಾದಾಮಿ ಕ್ಷೇತ್ರದ ಶಾಸಕ ಸಿದ್ದರಾಮಯ್ಯ, ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ, ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ, ಲೋಕೋಪಯೋಗಿ ಸಚಿವ ಸಿ ಸಿ ಪಾಟೀಲ್, ಶಾಸಕರಾದ ಹನುಮಂತ ನಿರಾಣಿ, ಪ್ರಕಾಶ್ ರಾಥೋಡ್, ಸಂಸದ ಪಿಸಿ ಗದ್ದಿಗೌಡರ್, ಜಲಸಂಪನ್ಮೂಲ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್ ಸೇರಿದಂತೆ ಇತರರು ಉಪಸ್ಥಿತರಿದ್ದರು.
[22/04, 3:53 PM] Gurulingswami. Holimatha. Vv. Cm: *ಕಲ್ಯಾಣ ಕರ್ನಾಟಕ ಭಾಗದಲ್ಲಿ   ಕೌಶಲ್ಯ ಕ್ರಾಂತಿಯಾಗಲಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ*

ಕಲಬುರಗಿ, ಎಪ್ರಿಲ್ 22:  ಕಲ್ಯಾಣ ಕರ್ನಾಟಕ ಭಾಗದಲ್ಲಿ   ಕೌಶಲ್ಯ ಕ್ರಾಂತಿಯಾಗಲಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕರೆ  ನೀಡಿದರು. 

ಅವರು ಇಂದು ಕಲಬುರಗಿಯಲ್ಲಿ ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮ ಹಾಗೂ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆಯ  *ಕೌಶಲ್ಯ ರಥ* ಲೋಕಾರ್ಪಣೆ ನೆರವೇರಿಸಿ ಮಾತನಾಡುತ್ತಿದ್ದರು. 


ಕೌಶಲ್ಯ ಬಹಳ ಪ್ರಮುಖ ಪಾತ್ರವನ್ನು ವಹಿಸುತ್ತದೆ. ವಿಶ್ವದಲ್ಲಿ ಅತಿ ಹೆಚ್ಚು ಯುವಕರಿರುವ ದೇಶ ಭಾರತ. ಸುಮಾರು 46% ರಷ್ಟು ಜನಯುವಕರಿಗೆ ಭವಿಷ್ಯವನ್ನು ನಿರ್ಮಿಸುವ ಸಲುವಾಗಿ ವಿದ್ಯೆ ಮತ್ತು ಕೌಶಲ್ಯ ಎರಡೂ ಇದ್ದರೆ ಉದ್ಯೋಗ ದೊರೆಯುತ್ತದೆ. ದೀನ್ ದಯಾಳ್ ಉಪಾಧ್ಯಾಯ ಅವರ ಹೆಸರಿನಲ್ಲಿ ಕೇಂದ್ರ ಸರ್ಕಾರದ ಕಾರ್ಯಕ್ರಮ ಇದಾಗಿದೆ. ಕರ್ನಾಟಕ ಸರ್ಕಾರ ಸಹ ಕೌಶಲ್ಯಾಭಿವೃದ್ಧಿ ಇಲಾಖೆ ವತಿಯಿಂದ ಕೌಶಲ್ಯಾಭಿವೃದ್ಧಿ ಕೈಗೊಂಡಿದೆ ಎಂದು ತಿಳಿಸಿದರು. 

ಪ್ರತಿ ವರ್ಷ ಸಾವಿರಾರು ಯುವಕರಿಗೆ ಬೇರೆ ಬೇರೆ ಕಸುಬಿನಲ್ಲಿ ತರಬೇತಿ ಕೊಟ್ಟು ಅವರಿಗೆ ತಮ್ಮ ಸ್ವಂತ ಕಾಲಿನ ಮೇಲೆ ನಿಲ್ಲುವ ಶಕ್ತಿ ಯನ್ನು ತುಂಬುವ ಕೆಲಸ ಇಲಾಖೆ ಮಾಡುತ್ತಿದೆ. ಇದನ್ನು ಇನ್ನಷ್ಟು ವ್ಯಾಪಕವಾಗಿ ಯುವಕರು ಇರುವಲ್ಲಿಯೇ ತರಬೇತಿ ಯನ್ನು ನೀಡಬೇಕು ಎನ್ನುವ ಮಹತ್ವಾಕಾಂಕ್ಷೆಯಿಂದ ಕೌಶಲ್ಯ ರಥವನ್ನು ಉದ್ಘಾಟಿಸಲಾಗಿದೆ.  ಎಲೆಕ್ಟ್ರಿಷಿಯನ್  ಹಾಗೂ ಬ್ಯುಟೀಷಿಯನ್ ಕೋರ್ಸುಗಳನ್ನು  ಆಕಾಂಕ್ಷಿಗಳು ಕೈಗೊಳ್ಳಬಹುದು. ಗ್ರಾಮೀಣ ಪ್ರದೇಶದ ಪ್ರತಿ ಪಂಚಾಯತಿಯಲ್ಲಿ ತರಬೇತಿ ಕೊಟ್ಟು ಸ್ವಯಂ ಉದ್ಯೋಗ ಕೈಗೊಳ್ಳಲು ಅನುಕೂಲ ಕಲ್ಪಿಸುವ ಯೋಜನೆ ಇದಾಗಿದೆ ಎಂದರು.  

*ಕಲ್ಯಾಣ ಕರ್ನಾಟಕದ ಯುವಕರ ಭವಿಷ್ಯವನ್ನು ಉಜ್ವಲಗೊಳಿಸಲು ಸರ್ಕಾರ ದಿಟ್ಟ ಹೆಜ್ಜೆ*

ಕಲ್ಯಾಣ ಕರ್ನಾಟಕ ಭಾಗದಲ್ಲಿ ಶಿಕ್ಷಣ ಹಾಗೂ ಕೌಶಲ್ಯ ಪಡೆಯುವವರ ಸಂಖ್ಯೆ ಹೆಚ್ಚಾಗಿ ಅವರು ಸ್ವಯಂ ಉದ್ಯೋಗ ಕೈಗೊಳ್ಳುವಂತಾಗಬೇಕು. ಅದಕ್ಕೆ ಇಲ್ಲಿ ವಿಪುಲ ಅವಕಾಶಗಳಿಗೆ.  ಹಳ್ಳಿಗಳಲ್ಲಿ  ಸರಿಯಾದ ಮೋಟಾರ್ ವೈಂಡರ್ ಸಿಗುವುದಿಲ್ಲ. ಅದಕ್ಕೆ ತಾಲ್ಲೂಕು ಕೇಂದ್ರಕ್ಕೆ ಹೋಗಬೇಕು. ಅದನ್ನು ತಪ್ಪಿಸಲು ಪ್ರತಿ ಗ್ರಾಮದಲ್ಲಿ ಎಲೆಕ್ಟ್ರೀಷಿಯನ್, ಪ್ಲಂಬರ್, ರಿಪೇರಿ ಮುಂತಾದ ಕೌಶಲ್ಯ ವಿರುವ ಯುವಕರ ಪಡೆಯ ಅಗತ್ಯವಿದೆ.  ಆ ನಿಟ್ಟಿನಲ್ಲಿ ಕೆಲಸವನ್ನು ಪ್ರಾರಂಭಿಸಲಾಗಿದೆ. ಈ ವರ್ಷ 2.50 ಲಕ್ಷ ಕ್ಕೂ ಹೆಚ್ಚು ಜನರಿಗೆ ತರಬೇತಿ ನೀಡುವ ಗುರಿಯಿದೆ. ಜೀವನೋಪಾಯಕ್ಕಾಗಿ ಹಲವಾರು ಕಾರ್ಯಕ್ರಮಗಳನ್ನು ರೂಪಿಸಲಾಗಿದೆ. ಅದರಲ್ಲಿ  ಇದೂ ಕೂಡ ಪ್ರಮುಖ ಪಾತ್ರ ವಹಿಸುತ್ತದೆ. ಕಲ್ಯಾಣ ಕರ್ನಾಟಕದ ಯುವಕರ ಭವಿಷ್ಯವನ್ನು ಉಜ್ವಲಗೊಳಿಸಲು ಸರ್ಕಾರ ದಿಟ್ಟ ಹೆಜ್ಜೆ ಎಂದರು. 

*ಪ್ರತಿ ಗ್ರಾಮದಲ್ಲಿ ಕೌಶಲ್ಯಭರಿತ ಪಡೆ*
ಕೌಶಲ್ಯಾಭಿವೃದ್ಧಿಗೆ ಕಲ್ಯಾಣ ಕರ್ನಾಟಕದಲ್ಲಿ ವಿಶೇಷ ಒತ್ತು ನೀಡಲಾಗುವುದು.  ಮುಂಬರುವ ದಿನಗಳಲ್ಲಿ ಪ್ರತಿ ಗ್ರಾಮದಲ್ಲಿ ಕೌಶಲ್ಯ ಭರಿತ ಪಡೆ  ನಿರ್ಮಿಸಿ ಸ್ವಯಂ ಉದ್ಯೋಗ ಕೈಗೊಳ್ಳುವಂತೆ ಮಾಡುವುದು ಹಾಗೂ ತರಬೇತಿಯ ನಂತರ ಪ್ರಮುಖ ಸಂಸ್ಥೆಗಳಲ್ಲಿ ಈ ಯುವಕರನ್ನು ತೊಡಗಿಸಬೇಕು ಎಂದೂ ಸಹ ಸೂಚನೆ ನೀಡಲಾಗಿದೆ ಎಂದರು. 

*ಟ್ರಾನ್ಸ್ ಫಾರ್ಮರ್  ದುರಸ್ತಿ*
ಪ್ರತಿ ಗ್ರಾಮ ಪಂಚಾಯ್ತಿಯಲ್ಲಿ ಟ್ರಾನ್ಸ್ ಫಾರ್ಮರ್  ದುರಸ್ತಿಗೆ ವಿಶೇಷ ತರಬೇತಿ ನೀಡಲು ಸೂಚನೆ ನೀಡಲಾಗಿದೆ. ಇದರಿಂದ ರೈತಾಪಿ ವರ್ಗಕ್ಕೆ ಸಹಾಯವಾಗಲಿದೆ.  ಆ ನಿಟ್ಟಿನಲ್ಲಿ ಕೌಶಲ್ಯ ಅಭಿವೃದ್ಧಿ ನಿಗಮ ಮತ್ತು ಇಲಾಖೆ ಕೆಲಸ ಮಾಡಬೇಕು. ಸಚಿವರ ದಕ್ಷ ನೇತೃತ್ವದಲ್ಲಿ ಹೊಸ ಆವಿಷ್ಕಾರ ಹಾಗೂ  ವಿಧಾನವನ್ನು ಅವರು ರಾಜ್ಯಕ್ಕೆ ನೀಡುತ್ತಿದ್ದಾರೆ. ವಿನೂತನ ಕೌಶಲ್ಯ ಅಭಿವೃದ್ಧಿ,  ಬಡತನ ನಿರ್ಮೂಲನೆ ಐಟಿ ಇಲಾಖೆಗೆ ಸಂಯೋಜಿಸುವ ಕೆಲಸವನ್ನು ದೊಡ್ಡ ಪ್ರಮಾಣದಲ್ಲಿ ಮಾಡುತ್ತಿದ್ದಾರೆ ಎಂದರು. 

ಕೈಗಾರಿಕಾ ಸಚಿವರು ಸಹ  ಈ ವಿಷಯದಲ್ಲಿ ಆಸಕ್ತಿ ಹೊಂದಿದ್ದು, ಅವರ ಸಂಸ್ಥೆಗಳಲ್ಲಿಯೂ ಸಾಕಷ್ಟು ಕೌಶಲ್ಯಾಭಿವೃದ್ಧಿಯನ್ನು ಮಾಡುತ್ತಿದ್ದಾರೆ ಎಂದು ತಿಳಿಸಿದರು.
[22/04, 4:22 PM] Gurulingswami. Holimatha. Vv. Cm: *ಮೂರು ಆಯಾಮಗಳಲ್ಲಿ ಕಲ್ಯಾಣ ಕರ್ನಾಟಕದ ಸಮಗ್ರ ಅಭಿವೃದ್ಧಿ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ*

ಕಲ್ಬುರ್ಗಿ, ಏಪ್ರಿಲ್ 22 :

 ಕೆಕೆಆರ್‍ಡಿಬಿ, ನಂಜುಡಪ್ಪ ವರದಿ ಅನುಷ್ಠಾನ, ಹಿಂದುಳಿದ ತಾಲೂಕುಗಳ ಅಭಿವೃದ್ಧಿಗಳ ಆಯಾಮಗಳಲ್ಲಿ ಕಲ್ಯಾಣ ಕರ್ನಾಟಕದ ಸಮಗ್ರ ಅಭಿವೃದ್ಧಿ ಮಾಡಲಾಗುವುದು. ಶಿಕ್ಷಣ, ಆರೋಗ್ಯ, ಮೂಲಭೂತ ಸೌಕರ್ಯ,ಮಹಿಳಾ ಸಬಲೀಕರಣ, ಪೌಷ್ಟಿಕತೆ ಕ್ಷೇತ್ರಗಳಿಗೆ ಹೆಚ್ಚಿನ ಪ್ರಾಶಸ್ತ್ಯ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಅವರು ಇಂದು ಕಲ್ಬುರ್ಗಿಯಲ್ಲಿ ಪತ್ರಿಕಾಗೋಷ್ಟಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಯೋಜನೆಗಳಿಗಾಗಿ ಕೆಕೆಆರ್‍ಡಿಬಿಗೆ 3000 ಕೋಟಿ ರೂ. ಅನುದಾನ ಮೀಸಲಿದೆ. ಶಿಕ್ಷಣ, ಆರೋಗ್ಯ, ಮೂಲಸೌಕರ್ಯ, ಪೌಷ್ಟಿಕತೆ, ಮಾನವ ಸಂಪನ್ಮೂಲ ಕೌಶಲ್ಯ ಒತ್ತು ನೀಡಲಾಗುವುದು. ರಾಜ್ಯದ ಸರಾಸರಿಗಿಂತ ಕಡಿಮೆ ಸಾಧನೆ ಮಾಡಿರುವ ತಾಲ್ಲೂಕುಗಳನ್ನು ಅಭಿವೃದ್ಧಿ ಆಕಾಂಕ್ಷಿ 104 ತಾಲ್ಲೂಕುಗಳನ್ನು  ಹಾಗೂ 100 ತಾಲ್ಲೂಕುಗಳನ್ನು ಆರೋಗ್ಯ ಸೇವೆ ಬಲಪಡಿಸಲು ಗುರುತಿಸಲಾಗಿದೆ. ಇದರಲ್ಲಿ ಹೆಚ್ಚು ತಾಲ್ಲೂಕುಗಳು ಕಲ್ಯಾಣ ಕರ್ನಾಟಕ ಭಾಗದಲ್ಲಿವೆ. 371 ಜೆ ಅನುಷ್ಠಾನದಲ್ಲಿನ ಸಮಸ್ಯೆಗಳನ್ನು ಸರಿಪಡಿಸಲು ಕ್ರಮ ತೆಗೆದುಕೊಳ್ಳಲಾಗುತ್ತಿದೆ. ನಂಜುಡಪ್ಪ ವರದಿ ಅನುಷ್ಟಾನಕ್ಕೆ ಸಚಿವ ಸಂಪುಟದ ಉಪಸಮಿತಿ ಶಿಫಾರಸ್ಸು ಮಾಡಿದೆ. ಎಸ್‍ಡಿಪಿ ಯೋಜನೆ ಪ್ರಕಾರ ಹೆಚ್ಚು ಹಣವನ್ನು ನೀಡಲಾಗುವುದು. ಕಳೆದ ವರ್ಷದ ಅನುದಾನ 14192 ಕೋಟಿ ರೂ. ಜನವರಿಯಲ್ಲಿಯೇ ಬಿಡುಗಡೆ ಮಾಡಲಾಗಿದೆ. ಈ ಭಾಗದ ಯೋಜನೆಗಳಿಗೆ ಹಣದ ಕೊರತೆ ಆಗುವುದಿಲ್ಲ. ಕೆಕೆಆರ್‍ಡಿಬಿ ಕ್ರಿಯಾ ಯೋಜನೆಗಳ ಅನುಮೋದನೆಯನ್ನು ಏಪ್ರಿಲ್ 30ರೊಳಗೆ ಮಾಡಬೇಕೆಂದು ಸ್ಪಷ್ಟ ಸೂಚನೆ ನೀಡಲಾಗಿದೆ ಎಂದರು.

*ಮೆಗಾ ಟೆಕ್ಸ್ ಟೈಲ್ ಪಾರ್ಕ್ :*
ಕರ್ನಾಟಕ ಗಾರ್ಮೆಂಟ್ಸ್ ಕ್ಷೇತ್ರದಲ್ಲಿ ಮುಂಚೂಣಿಯಲ್ಲಿದೆ. ಕಲ್ಬುರ್ಗಿ ಹಾಗೂ ವಿಜಯಪುರಲದಲ್ಲಿ ಮೆಗಾ ಟೆಕ್ಸ್‍ಟೈಲ್ ಪಾರ್ಕ್ ಸ್ಥಾಪಿಸಲು ಕೇಂದ್ರ ಸರ್ಕಾರದಿಂದ ಮೂಲಸೌಕರ್ಯ ಸೇರಿದಂತೆ ಎಲ್ಲ ನೆರವು ಕೋರಲಾಗಿದೆ ಎಂದರು.

*ಇಎಸ್‍ಐ ಆಸ್ಪತ್ರೆಗೆ ಏಮ್ಸ್ ಮಾನ್ಯತೆ :*
ಕಲ್ಬುರ್ಗಿಗೆ ಇಎಸ್‍ಐ ಆಸ್ಪತ್ರೆಯನ್ನು ಧಾರವಾಡಕ್ಕೆ ತೆಗೆದುಕೊಂದು ಹೋಗುವ ಪ್ರಯತ್ನವಾಗಿದೆಯೇ ಎಂಬುದಕ್ಕೆ ಪ್ರತಿಕ್ರಿಯೆ ನೀಡಿ,ಏಮ್ಸ್ ಆಸ್ಪತ್ರೆಯ ಬೇಡಿಕೆ ಇದೆ. ಕಲ್ಬುರ್ಗಿಯಲ್ಲಿ ಮೂಲಸೌಕರ್ಯಗಳಿರುವ ಇಎಸ್‍ಐ ಆಸ್ಪತ್ರೆ ಪೂರ್ಣಪ್ರಮಾಣದ ಬಳಕೆಯಾಗಬೇಕಾದರೆ ಏಮ್ಸ್ ಆಸ್ಪತ್ರೆಯ ಮಾನ್ಯತೆ ದೊರೆತರೆ, ಗುಣಮಟ್ಟದ ಆಸ್ಪತ್ರೆಯಾಗುತ್ತದೆ ಎಂಬ ಬೇಡಿಕೆಯನ್ನು ಕೇಂದ್ರ ಸರ್ಕಾರಕ್ಕೆ ಇಡಲಾಗಿದೆ. 371 ಜೆ, ಇ,ಡಿ ಪ್ರದೇಶಗಳಲ್ಲಿ ಇಎಸ್‍ಐ ಆಸ್ಪತ್ರೆಗಳ ಸ್ಥಾಪನೆಯನ್ನು ಕಡ್ಡಾಯಗೊಳಿಸಬೇಕೆಂದು ಸಲಹೆ ನೀಡಿದ್ದೇನೆ ಎಂದರು.

*2024ರೊಳಗೆ ಮನೆಮನೆಗೆ ನೀರು ಪೂರ್ಣಗೊಳಿಸುವ ಗುರಿ:*
ಕಲ್ಬುರ್ಗಿ ತಾಲ್ಲೂಕುಗಳಲ್ಲಿ ಉತ್ತಮ ಮೂಲಭೂತ ಸೌಕರ್ಯ, ಕುಡಿಯುವ ನೀರಿನ ವ್ಯವಸ್ಥೆ ಇಲ್ಲ ಎನ್ನುವುದಕ್ಕೆ ಉತ್ತರಿಸಿ, ಜಲಜೀವನ್ ಮಿಷನ್ ಅಡಿ ಮನೆ ಮನೆಗೆ ನೀರು ತಲುಪಿಸುವ ಕಾರ್ಯವನ್ನು ನಮ್ಮ ಪ್ರಧಾನಿಗಳು ಮಾಡಿದ್ದಾರೆ. ಕಳೆದ ವರ್ಷದಂತೆ ಈ ವರ್ಷವೂ 25 ಲಕ್ಷ ಮನೆಗಳಿಗೆ ಕುಡಿಯುವ ನೀರಿನ ಸಂಪರ್ಕ ನೀಡಲಾಗುವುದು. 2024ರೊಳಗೆ ರಾಜ್ಯದಲ್ಲಿ ಎಲ್ಲ ಮನೆಗಳಿಗೆ ಕುಡಿಯುವ ನೀರಿನ ಸಂಪರ್ಕ ನೀಡುವ ಗುರಿ ಹೊಂದಲಾಗಿದೆ ಎಂದರು.

*ಕಲ್ಯಾಣ ಕರ್ನಾಟಕದಲ್ಲಿ ಹೆಚ್ಚು ಸ್ಥಾನಗಳನ್ನು ಗೆಲ್ಲುವ ಆತ್ಮವಿಶ್ವಾಸ :*
ಪಕ್ಷದ ಸಂಘಟನೆ, ಬೂತ್ ಮಟ್ಟದ ಸಂಘಟನೆ ಬಗ್ಗೆ ಸುದೀರ್ಘ ಚರ್ಚೆಗಳಾಗಿದೆ. ಬರುವ ದಿನಗಳಲ್ಲಿ ತಳಹಂತದಿಂದ ಪಕ್ಷದ ಸಂಘಟನೆ ಇನ್ನಷ್ಟು ಬಲಿಷ್ಟವಾಗಿ ಮಾಡಬೇಕು ಎಂದು ನಿರ್ಧಾರವಾಗಿದೆ. ಎಲ್ಲ ಕ್ಷೇತ್ರಗಳಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಸಾಧನೆಗಳನ್ನು ಜನರಿಗೆ ತಿಳಿಹೇಳಬೇಕು. ಪಕ್ಷದ ಶಾಸಕರ ನಡುವೆ ಸಮನ್ವಯ ಕೊರತೆ ಕಾಣುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಪಕ್ಷದ ಶಾಸಕರ ನಡುವೆ ಯಾವುದೇ ಭಿನ್ನಾಭಿಪ್ರಾಯ ಇಲ್ಲ. ಸಕಾರಾತ್ಮಕ ಹಾಗೂ ಆರೋಗ್ಯಕರ ಚರ್ಚೆಯಾಗಿದೆ. ಪಕ್ಷ ಸಂಘಟನೆ ಹಾಗೂ ಜನಪರ ಕೆಲಸಗಳಿಂದ ಕಲ್ಯಾಣ ಕರ್ನಾಟಕ ಭಾಗದಲ್ಲಿ ಅತಿ ಹೆಚ್ಚು ಸ್ಥಾನಗಳನ್ನು ಗೆಲ್ಲುವ ಆತ್ಮವಿಶ್ವಾಸವಿದೆ. ಚುನಾವಣೆಯ ರಣತಂತ್ರವನ್ನು ರಚಿಸಲಾಗುವುದು ಎಂದರು.

*ಮಾಹಿತಿ ನೀಡಿದರೆ ಪೂರ್ಣ ಪ್ರಮಾಣದ ತನಿಖೆ :*
ದಿಂಗಾಲೇಶ್ವರ ಸ್ವಾಮೀಜಿಗಳ ಆರೋಪದ ಬಗ್ಗೆ ಪ್ರತಿಕ್ರಯಿಸಿ, ಶ್ರೀಗಳ ಬಗ್ಗೆ ಗೌರರವಿದೆ. ಈ ಪ್ರಕರಣದಲ್ಲಿ ಅವರಿಗೆ ಯಾವ ವರ್ಷದಲ್ಲಿ ಅನುದಾನ ಬಿಡುಗಡೆಯಾಯಿತು, ಯಾರು ಕಮಿಷನ್ ಕೇಳಿದ್ದಾರೆ ಎಂಬ ವಿವರಗಳನ್ನು ಅವರು ನೀಡಿದರೆ, ಪೂರ್ಣ ಪ್ರಮಾಣದ ತನಿಖೆಯನ್ನು ಮಾಡಿಸಲಾಗುವುದು ಎಂದರು. 

*ಕಾನೂನು ರೀತ್ಯ ಕ್ರಮ :*
ಹುಬ್ಬಳ್ಳಿ ಪ್ರಕರಣದಲ್ಲಿ ಮಧ್ಯಪ್ರದೇಶ ಮತ್ತು ಉತ್ತರಪ್ರದೇಶದಲ್ಲಿ ತೆಗೆದುಕೊಂಡಿರುವ ಕ್ರಮದಂತೆಯೇ ತೆಗೆದುಕೊಳ್ಳಲಾಗುವುದೇ ಎಂಬುದಕ್ಕೆ ಉತ್ತರಿಸಿ, ಕಾನೂನು ರೀತ್ಯ ಕ್ರಮ ತೆಗೆದುಕೊಳ್ಳಲಾಗುವುದು. ಡಿಜಿ ಹಳ್ಳಿ ಕೆಜಿ ಹಳ್ಳೀ ಪ್ರಕರಣದಲ್ಲಿ ಆದ ನಷ್ಟಕ್ಕೆ ಅವರ ಆಸ್ತಿಗಳನ್ನು ಮುಟ್ಟುಗೋಲು ಹಾಕಿಕೊಳ್ಳಲು ಸಮಿತಿ ರಚಿಸಿ ಕಾರ್ಯನಿರ್ವಹಿಸುತ್ತಿದೆ ಎಂದರು.

*ಶಾಂತಿ ಸೌಹಾರ್ದತೆಯಿಂದ ಸಮಸ್ಯೆಗೆ ಪರಿಹಾರ :*
ಧಾರ್ಮಿಕ ಕೇಂದ್ರಗಳಲ್ಲಿ ಧ್ವನಿವರ್ಧಕಗಳ ಬಳಕೆ ಸಂಬಂಧ ನೋಟೀಸ್ ನೀಡಲಾಗಿದೆ. ಪೊಲೀಸ್ ಠಾಣೆ ವ್ಯಾಪ್ತಿಯಡಿ ಬರುವ ಧಾರ್ಮಿಕ ಕೇಂದ್ರಗಳ ಮೈಕ್ ಧ್ವನಿ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಲು ಹಾಗೂ ಶಾಂತಿ ಸೌಹಾರ್ದತೆ, ಮಾತುಕತೆಯಿಂದ ಸಮಸ್ಯೆ ಬಗೆಹರಿಸಿಕೊಳ್ಳಲು ಸೂಚನೆ ನೀಡಲಾಗಿದೆ.
[22/04, 5:21 PM] Gurulingswami. Holimatha. Vv. Cm: *ಮನುಷ್ಯರಿಂದ ಮಾನವರಾಗುವತ್ತ ನಮ್ಮ ಗುರಿ ಇರಬೇಕು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ*
ಕಲಬುರಗಿ, ಏಪ್ರಿಲ್ 22:  ಮನುಷ್ಯರಿಂದ ಮಾನವರಾಗುವತ್ತ ನಮ್ಮ ಗುರಿ ಇರಬೇಕು. ಮನುಷ್ಯರಿಂದ ಮಾನವರಾಗುವತ್ತ ನಮ್ಮ ಪಯಣಕ್ಕೆ ವೀರಶೈವ ಧರ್ಮ, ಸಂಸ್ಕøತಿ, ಸಂಸ್ಕಾರ, ಗುರುಗಳ ಆಶೀರ್ವಾದ, ಮಾರ್ಗದರ್ಶನ ಸದಾಕಾಲ ಇದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಅವರು ಇಂದು ಜಗದ್ಗುರು ರೇಣುಕಾಚಾರ್ಯ ಜಯಂತ್ಯೋತ್ಸವ ಹಾಗೂ ಜಗದ್ಗುರು ರೇಣುಕಾಚಾರ್ಯ ಜಯಂತಿ ಆಚರಣೆಯನ್ನು ಘೋಷಿಸಿದ ಕಾಗಿ ಅಖಿಲ ಭಾರತ ವೀರಶೈವ ಮಹಾಸಭಾದ ವತಿಯಿಂದ ಅಭಿನಂದನೆ ಸ್ವೀಕರಿಸಿ ಅವರು ಮಾತನಾಡಿದರು.

ಆದಿ ರೇಣುಕಾಚಾರ್ಯರ ಆಶೀರ್ವಾದ ಸದಾ ಕಾಲ ನಮ್ಮ ಮೇಲೆ ಇದೆ. ಅದೇ ನಮ್ಮ ಹೆಮ್ಮೆ. ನಿಮ್ಮೆಲ್ಲರ ಆಶೀರ್ವಾದದಿಂದ ಮುಖ್ಯಮಂತ್ರಿಯಾಗಿದ್ದೇನೆ. ನಾವು ಮಾಡುವ ಕೆಲಸ ದೊಡ್ಡದಲ್ಲ. ಅದನ್ನುಆಚರಣೆಗೆ ತರುವಲ್ಲಿ ತಮ್ಮೆಲ್ಲರ ಕರ್ತವ್ಯಪ್ರಜ್ಞೆ ದೊಡ್ಡದು ಎಂದರು. ಸಮಾಜದ ಏಳಿಗೆಗೆ ಏನೆಲ್ಲಾ ಮಾಡಲು ಸಾಧ್ಯವೋ ಅದನ್ನು ಪ್ರಾಮಾಣಿಕವಾಗಿ ಮಾಡುತ್ತೇನೆ. ನಮ್ಮ ನಾಯಕರಾದ ಬಿ.ಎಸ್.ಯಡಿಯೂರಪ್ಪ ಅವರೂ ನಮಗೆ ಇದನ್ನೇ  ಹೇಳಿಕೊಟ್ಟಿದ್ದಾರೆ ಎಂದರು.

*ಹುಟ್ಟು ಮತ್ತು ಸಾವಿನಲ್ಲಿ ನಾವು ಸಮಾನರು*
ವೀರಶೈವ ಧರ್ಮಕ್ಕೆ ಮಾರ್ಗದರ್ಶನ ಅಗತ್ಯವಿದ್ದಾಗ ಹಾಗೂ ಈ ಸಮಾಜವನ್ನು ಮುನ್ನಡೆಸುವ ಸಂದರ್ಭಗಳಲ್ಲಿ, ಪರಮಪೂಜ್ಯ 1008 ಡಾ: ಪ್ರಸನ್ನ ವೀರಮಹಾಸ್ವಾವಿಗಳ ಪ್ರಾಂಜಲ ಮನಸ್ಸಿನಿಂದ ನೀಡಿರುವ ಕೃಪಾಶೀರ್ವಾದ ನಿರಂತರವಾಗಿ ನಮಗೆ ರಕ್ಷಾಕವಚವಾಗಿದೆ. ಆದಿಗುರು ರೇಣುಕಾರ್ಚಾಯರು ಮಾನವ ಧರ್ಮಕ್ಕೆ ಜಯವಾಗಲಿ ಎಂಬ ಮಾತನ್ನು ನಮಗೆ ನೀಡಿದ್ದಾರೆ. ಈ ಬಗ್ಗೆ ನಾವು ಯೋಚನೆ ಮಾಡಬೇಕು.  ಮಾನವ ಧರ್ಮಕ್ಕೆ  ಜಯವಾಗಲಿ ಎಂದಿದ್ದಾರೆ. ನಾವ್ಯಾರೂ ಕೂಡ ಅರ್ಜಿ ಹಾಕಿ ಹುಟ್ಟಲಿಲ್ಲ. ಹುಟ್ಟಿನಿಂದ ನಾವು ಸಮಾನರು.  ಸಾವಿನಲ್ಲೂ ಸಮಾನರು. ಹುಟ್ಟು ಆಕಸ್ಮಿಕ, ಸಾವು ನಿಶ್ಚಿತ, ಬದುಕು ಪ್ರಸ್ತುತ. ಎಲ್ಲರೂ ಮನುಷ್ಯರಾಗಿ ಹುಟ್ಟಿರುತ್ತೇವೆ. ಕೆಲವರು ತಮ್ಮ ಆತ್ಮಶುದ್ದಿಯಿಂದ, ನಡೆನುಡಿ ಶುದ್ದಿಯಿಂದ ಮನುಷ್ಯರಾಗಿ ಮಾನವರಾಗುತ್ತಾರೆ. ಮನುಷ್ಯ ಮತ್ತು ಮಾನವರ ನಡುವಿನ ವ್ಯತ್ಯಾಸವಿದೆ. ಕಾಮ, ಕ್ರೋಧ, ಮದ ಮಾತ್ಸರ್ಯಗಳ ಸಂಕೋಲೆಯಲ್ಲಿ ಸಿಕ್ಕವನು ಮನುಷ್ಯ. ಇವುಗಳಿಂದ ಬಿಡುಗಡೆಗೊಂಡು ಸತ್ಯ, ಧರ್ಮ, ನ್ಯಾಯ, ನೀತಿ, ಪ್ರೀತಿ, ವಿಶ್ವಾಸಗಳ  ಸಂಕೋಲೆಯಲ್ಲಿ ಸಿಕ್ಕವನು ಮಾನವ. ಮನುಷ್ಯನಿಂದ ಮಾನವನೆಡೆಗಿನ ಪಯಣಕ್ಕೆ ಗುರುಗಳ ಆಶೀರ್ವಾದ ಮತ್ತು ಮಾರ್ಗದರ್ಶನ ಅಗತ್ಯ.  ಗುರುವಿನಲ್ಲಿ ಭಕ್ತಿ ಇಟ್ಟವರಿಗೆ ಸಕಲವೂ ಪ್ರಾಪ್ತಿಯಾಗುತ್ತದೆ. ಭಕ್ತಿ ಎಂದರೆ ಉತ್ಕøಷ್ಟವಾದ ಪ್ರೀತಿ. ಉತ್ಕøಷ್ಟವಾದ ಪ್ರೀತಿ ಎಂದರೆ ಕರಾರುರಹಿತ ಪ್ರೀತಿ ಎಂದರು.

*ಗುರುವಿನಲ್ಲಿ ಸಮರ್ಪಣಾ ಭಾವ ಇರಬೇಕು*
ಭಕ್ತ ಭಗವಂತನಲ್ಲಿ ಯಾವುದನ್ನೂ ಬೇಡುವ ಅವಶ್ಯಕತೆ ಇಲ್ಲ. ಅವನ ಆಶೀರ್ವಾದ ಎಲ್ಲರ ಮೇಲೂ ಇರುತ್ತದೆ. ಯಾವ ಇಚ್ಛೆಯನ್ನೂ ವ್ಯಕ್ತಪಡಿಸದಿದ್ದರೂ ದೇವರ ಆಶೀರ್ವಾದ ಕಡಿಮೆಯಾಗುವುದಿಲ್ಲ ಎನ್ನುವ ಒಂದು ಮಾತಿದೆ. ಗುರುವಿನಲ್ಲಿ ಸಮರ್ಪಣಾ ಭಾವ ಇದ್ದರೆ ದೇವರ ಆಶೀರ್ವಾದ ಸಿಕ್ಕೇ ಸಿಗುತ್ತದೆ.  ಇರಬೇಕು. ಗುರುವಿನಲ್ಲಿ ಸಮರ್ಪಣಾ ಭಾವನೆಯಿಂದ ಸಂಪೂರ್ಣವಾಗಿ ಕರಗಿ ಲೀನವಾಗಬೇಕು. ಈ ಪ್ರಕ್ರಿಯೆಯಲ್ಲಿ ಬದುಕಿನ ಒಂದು ಹಂತದಲ್ಲಿ ನಮ್ಮನ್ನು ನಾವು ತೊಡಗಿಸಿಕೊಂಡಿರುತ್ತೇವೆ. ನಾವು ಯಾರೂ ನಮ್ಮ ಕರ್ತವ್ಯ, ಕರ್ಮ, ಕಾಯಕವನ್ನು ಬಿಟ್ಟು ಮಾಡಬೇಕು ಎಂದು ಹೇಳಿಲ್ಲ. ಕಾಯಕವೇ ಕೈಲಾಸ ಎಂದು ಬಸವಣ್ಣ ಹೇಳಿದ್ದಾರೆ. ಮಾನವ ಧರ್ಮಕ್ಕೆ ಜಯವಾಗಲಿ ಎಂದಂತೆಯೇ  ಕಾಯಕಧರ್ಮವನ್ನು ತೋರಿಸಿದ್ದಾರೆ.   ಇವೆಲ್ಲವೂ ನಮ್ಮ ಬದುಕಿಗೆ  ಒಂದು ದಿಕ್ಸೂಚಿಯಾಗಿದೆ ಎಂದರು.

*ಎಲ್ಲರನ್ನೂ ಒಳಗೊಂಡ ವೀರಶೈವ ಸಮಾಜ*
ಇಂಥ  ಸಂಸ್ಕøತಿ, ಸಂಸ್ಕಾರದ ಎಲ್ಲರಿಗೂ ಮಾದರಿಯಾಗಿರುವ, ಎಲ್ಲರನ್ನೂ ಒಳಗೊಂಡ ಸಮಾಜ ಎಲ್ಲರನ್ನೂ  ಒಪ್ಪಿ, ಅಪ್ಪುವ, ಹೃದಯವಂತ ಸಮಾಜ ವೀರಶೈವ ಸಮಾಜ. ನಮ್ಮ ಗುರುಗಳು ಸಹ ಹೃಯದವಂತರು. ನನ್ನ ಸಾರ್ವಜನಿಕ ಜೀವನದಲ್ಲಿ  ಹಲವಾರು ಆಯಾಮಗಳಲ್ಲಿ ನನಗೆ ಅವರ ಮಾರ್ಗದರ್ಶನ ಸಿಕ್ಕಿದ್ದು, ನಾನು ಪುಣ್ಯವಂತ ಎಂದು ಭಾವಿಸಿದ್ದೇನೆ. ಸಿದ್ಧಾಂತ ಶಿಖಾಮಣಿಯಲ್ಲಿ ಯಾವ ವಿಚಾರಗಳನ್ನು ಯಾವ ಸ್ವರೂಪದಲ್ಲಿ  ಹೇಳಿದ್ದಾರೆ.  ಅವುಗಳನ್ನು ಕಾರ್ಯರೂಪಕ್ಕೆ ತರುವ ಲಿಂಗಪೂಜೆಯಿಂದ ಹಿಡಿದು ಆತ್ಮ ಪೂಜೆಯವರೆಗಿನ ವಿಧಿವಿಧಾನಗಳನ್ನು ಪರಿಪಾಲನೆ ಮಾಡುವ ಚೌಕಟ್ಟು. ಆ ಚೌಕಟ್ಟನ್ನು ಮೀರಿ ನಡೆಯಬಾರದು ಎನ್ನುವುದನ್ನು ನೆನಪುಮಾಡಿಕೊಡುವ  ಸಿದ್ಧಾಂತ ಶಿಖಾಮಣಿಯ ಎಲ್ಲಾ ಆಚಾರವಿಚಾರಗಳನ್ನು ನಾವು ಪರಿಪಾಲನೆ ಮಾಡಿದರೆ ಇಡೀ ಸಮಾಜ ಹಾಗೂ ಮನುಕುಲಕ್ಕೆ ಒಂದು ದಾರಿದೀಪವಾಗುತ್ತದೆ. ಅದನ್ನೇ ನಮ್ಮ ಗುರುಗಳಾದ ರಂಭಾಪುರಿ ಶ್ರೀಗಳು ಮಾರ್ಗದರ್ಶನ ಮಾಡಿದ್ದಾರೆ ಎಂದರು.
[22/04, 5:25 PM] Gurulingswami. Holimatha. Vv. Cm: *ಬಾಗಲಕೋಟೆ* ( *ಬಾದಾಮಿ* ), ಏಪ್ರಿಲ್ 22: *ಮಾನ್ಯ ಮುಖ್ಯಮಂತ್ರಿ ಶ್ರೀ* *ಬಸವರಾಜ್ ಬೊಮ್ಮಾಯಿ ಅವರು* *ಜಲಸಂಪನ್ಮೂಲ* ಇಲಾಖೆ ಹಾಗೂ *ಕೃಷ್ಣಾ ಭಾಗ್ಯ* ಜಲ ನಿಗಮ ನಿಯಮಿತದ ವತಿಯಿಂದ *ಬಾದಾಮಿಯ ಉಗಲವಾಟ* ಗ್ರಾಮದಲ್ಲಿ ಆಯೋಜಿಸಿರುವ “ *ಕೆರೂರು ಏತ ನೀರಾವರಿ”* *ಯೋಜನೆಯ ಶಂಕುಸ್ಥಾಪನಾ* ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದರು.
[22/04, 7:47 PM] Gurulingswami. Holimatha. Vv. Cm: ಕೆರೂರು ಏತ ನೀರಾವರಿ ಯೋಜನೆಗೆ ಮುಖ್ಯಮಂತ್ರಿಗಳಿಂದ ಶಂಕುಸ್ಥಾಪನೆ
*ನೆಲ ಜಲಗಳ ವಿಚಾರದಲ್ಲಿ ಪಕ್ಷಾತೀತವಾಗಿ ಕಾರ್ಯನಿರ್ವಹಿಸುವ ಪರಂಪರೆ ಕರ್ನಾಟಕದಲ್ಲಿದೆ*:
*ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ*
ಬಾಗಲಕೋಟೆ, ಏಪ್ರಿಲ್ 22 : ರೈತ, ನೆಲ ಜಲಗಳ ವಿಚಾರದಲ್ಲಿ ಪಕ್ಷಾತೀತವಾಗಿ ಕಾರ್ಯನಿರ್ವಹಿಸುವ ಪರಂಪರೆ ಕರ್ನಾಟಕದಲ್ಲಿ ಇದೆ. ಅಭಿವೃದ್ಧಿ ಕಾರ್ಯಕ್ರಮಗಳು ನಿಗದಿತ ಅವಧಿಯಲ್ಲಿ ಆಗಬೇಕು. ಕೆರೂರು ಏತ ನೀರಾವರಿ ಯೋಜನೆಯ ಎರಡನೇ ಹಂತದ ಕಾಮಗಾರಿಯ ಅನುಮೋದನೆಗೂ ಕ್ರಮ ವಹಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಅವರು ಇಂದು ಬಾದಾಮಿಯ ಉಗಲವಾಟ ಗ್ರಾಮದಲ್ಲಿ ಕೆರೂರು ಏತ ನೀರಾವರಿ ಯೋಜನೆಗೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡುತ್ತಿದ್ದರು.

ಕೃಷ್ಣಾ ಮೇಲ್ದಂಡೆ ಯೋಜನೆಯಲ್ಲಿ ಬಿಟ್ಟುಹೋಗಿರುವ ಸುಮಾರು 40 ಸಾವಿರ ಹೆಕ್ಟೇರ್ ಪ್ರದೇಶಕ್ಕೆ 528 ಕೋಟಿ ರೂ. ವೆಚ್ಚದಲ್ಲಿ ಕೆರೂರು ಯೋಜನೆ ಕೈಗೆತ್ತಿಕೊಳ್ಳಲಾಗಿದೆ. ನೀರಾವರಿ ಯೋಜನೆಗಳಿಗೆ ದೂರದೃಷ್ಟಿ, ಬದ್ದತೆ ಹಾಗೂ ಎಲ್ಲರ ಸಹಕಾರ ಬೇಕು.  ಸವಣೂರ ಏತನೀರಾವರಿ ಯೋಜನೆಗೆ ಸಿದ್ಧರಾಮಯ್ಯನವರು ಅಡಿಗಲ್ಲು ಹಾಕಿದರು. ಈಗ ಬಾದಾಮಿ ತಾಲ್ಲೂಕಿನಲ್ಲಿ ಕೆರೂರು ಏತ ನೀರಾವರಿ ಯೋಜನೆಗೆ ನಾನು ಮುಖ್ಯಮಂತ್ರಿಯಾಗಿ ಅಡಿಗಲ್ಲು ಹಾಕಿದ್ದೇನೆ. ಪಕ್ಷ, ಪಂಗಡಗಳನ್ನು ನೋಡದೇ ಅಭಿವೃದ್ಧಿ ಕೆಲಸ ನಿರಂತರವಾಗಿ ಸಾಗಬೇಕು ಎಂದರು.

*ಆಲಮಟ್ಟಿ ಸಂಗ್ರಹ ಮಟ್ಟ ಎತ್ತರಿಸಲು ಸರ್ವಪ್ರಯತ್ನ*

ಬೀಳಗಿ ಮತ್ತು ಬಾದಾಮಿ ತಾಲ್ಲೂಕಿನ 40 ಸಾವಿರ ಹೆಕ್ಟೇರ್ ಪ್ರದೇಶಕ್ಕೆ  ಹಸಿರು ಸೀರೆ ಉಡಿಸುವ ಕನಸು ಕಾಣುತ್ತಿದ್ದೇವೆ. ಆ ಕೆಲಸವಾಗುವವರೆಗೂ ನಾವು ವಿಶ್ರಮಿಸುವುದಿಲ್ಲ. ಕರ್ನಾಟಕದ ನೀರಾವರಿ ಯೋಜನೆಗಳು ಮಹಾರಾಷ್ಟ್ರ, ಆಂಧ್ರಪ್ರದೇಶ, ತೆಲಂಗಾಣ ರಾಜ್ಯಗಳ ನಡುವೆ ಸಿಲುಕಿದೆ. ಅಂತರರಾಜ್ಯನದಿ ವಿವಾದಗಳಿಂದ ಹಲವಾರು ತೊಂದರೆಗಳನ್ನು ಅನುಭವಿಸುತ್ತಿದ್ದೇವೆ. ಆದಾಗ್ಯೂ ಕೂಡ ಕೃಷ್ಣಾ ಮೇಲ್ದಂಡೆ ಯೋಜನೆ ಹಂತ 1 ಮತ್ತು 2 ಈಗಾಗಲೇ ಪೂರ್ಣಗೊಂಡಿದೆ. ಹಂತ 3 ಯೋಜನೆಗಳಡಿ ಮೂಲಭೂತಸೌಕರ್ಯಕ್ಕೆ ಅಗತ್ಯವಿರುವ ಕೆಲಸವನ್ನು ಮಾಡಲಾಗಿದೆ.  2009 ರಲ್ಲಿ ಜಲಸಂಪನ್ಮೂಲ ಸಚಿವನಾಗಿದ್ದ ಸಂದರ್ಭದಲ್ಲಿ  ಮುಳವಾಡ, ಗುತ್ತಿ ಬಸವಣ್ಣ, ಚಿಮ್ಮಲಗಿ ಏತನೀರಾವರಿ ಯೋಜನೆಗೆ ಅನುಮೋದನೆ ನೀಡಲಾಗಿತ್ತು. ಈಗ ಅದಕ್ಕೆ ನ್ಯಾಯಾಧಿಕರಣದ ಆದೇಶದಂತೆ ಅಧಿಸೂಚನೆ ಪಡೆದು ಯು.ಕೆ.ಪಿ ಹಂತ -3 ಯೋಜನೆ ಆಗಬೇಕಾದರೆ ಆಲಮಟ್ಟಿ  ಜಲಾಶಯದ ನೀರಿನ ಸಂಗ್ರಹ ಮಟ್ಟ 524 ಮೀ.ವರೆಗೆ  ಎತ್ತರಿಸಬೇಕು. ಅದಕ್ಕೆ ಸರ್ವ ಪ್ರಯತ್ನಗಳನ್ನು ನಾವು ಮಾಡುತ್ತಿದ್ದು, ಅನುಮತಿಯನ್ನು ಪಡೆದುಕೊಳ್ಳಲಾಗುವುದು ಎಂದರು.

*ಕೃಷ್ಣಾ ಮೇಲ್ದಂಡೆ  ಯೋಜನೆಯಿಂದ  ಉತ್ತರ ಕನಾಟಕ ಭಾಗ್ಯದ ಬಾಗಿಲು ತೆರೆಯುತ್ತದೆ*
ಮುಳುಗಡೆಯಾದ ಪ್ರದೇಶಕ್ಕೆ ಪರಿಹಾರ ನೀಡಿ, ಈ ಭಾಗದ ಬಹುದಿನಗಳ ಬೇಡಿಕೆಯಂತೆ  13 ಲಕ್ಷ ಹೆಕ್ಟೇರ್ ಪ್ರದೇಶಕ್ಕೆ ನೀರಾವರಿ ಸೌಲಭ್ಯ ಕಲ್ಪಿಸಿದಂತಾಗುತ್ತದೆ. ಇಡೀ ಉತ್ತರ ಕನಾಟಕ ಭಾಗ್ಯದ ಬಾಗಿಲು ತೆರೆಯುತ್ತದೆ ಎಂದರು. ಆ ನಿಟ್ಟಿನಲ್ಲಿ ನಮ್ಮೆಲ್ಲರ ಪ್ರಯತ್ನ  ನಿರಂತರವಾಗಿ ಇರುತ್ತದೆ. ಅದು ನಮ್ಮ ಬದ್ಧತೆ ಎಂದರು. ಜಲಸಂಪನ್ಮೂಲ ಸಚಿವ ಕಾರಜೋಳ ಅವರು ಈ ಯೋಜನೆಗಳಿಗೆ  ವೇಗ ನೀಡಲು ಕಾರಣೀಭೂತರಾಗಿದ್ದಾರೆ. ಸಚಿವ ನಿರಾಣಿಯವರೂ ಸಹ ಒತ್ತಾಯ ಮಾಡಿ ಯೋಜನೆಗಳ  ಅನುಮೋದನೆಗೆ ಕಾರಣೀಭೂತರಾಗಿದ್ದಾರೆ. ಬರುವ ದಿನಗಳಲ್ಲಿ ನೀರಾವರಿಯ ಹಲವು ಯೋಜನೆಗಳಿಗೆ ಆದ್ಯತೆಯ ಮೇರೆಗೆ ಒತ್ತು ನೀಡಲಾಗುವುದು.

*ಬದಾಮಿ ಪ್ರವಾಸೋದ್ಯಮ ಅಭಿವೃದ್ಧಿಗೆ ನವೀಕೃತ ಮಾಸ್ಟರ್ ಪ್ಲಾನ್*
ಬಾದಾಮಿ ಕ್ಷೇತ್ರ ಅಂತರರಾಷ್ಟ್ರೀಯ ಮಟ್ಟದಲ್ಲಿ ಪ್ರವಾಸೊದ್ಯಮಕ್ಕೆ ಪ್ರಸಿದ್ಧವಾಗಿದೆ. ಇದರ ಬೆಳವಣಿಗೆಯ ಅವಶ್ಯಕತೆ ಇದೆ. ಈಗಾಗಲೇ ಹಲವಾರು ಕಾರ್ಯಕ್ರಮಗಳನ್ನು ರೂಪಿಸಲಾಗಿದೆ. ಇನ್ನಷ್ಟು ಅಭಿವೃದ್ಧಿ ಮಾಡಲು ನವೀಕೃತ ಮಾಸ್ಟರ್ ಪ್ಲಾನ್ ರೂಪಿಸಿ ಸಮಗ್ರ ಅಭಿವೃದ್ಧಿಗೆ ಒತ್ತು ನೀಡಲಾಗುವುದು ಎಂದರು.  

--
[22/04, 8:11 PM] Gurulingswami. Holimatha. Vv. Cm: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಮುಧೋಳ ಪಟ್ಟಣದಲ್ಲಿ  ಹಲವಾರು ಅಭಿವೃದ್ಧಿ ಕಾಮಗಾರಿಗಳಿಗೆ ಶಿಲಾನ್ಯಾಸ ಹಾಗೂ ಶಂಕುಸ್ಥಾಪನೆ ನೆರವೇರಿಸಿದರು.

 ಈ ಸಂದರ್ಭದಲ್ಲಿ ಸಚಿವರಾದ ಗೋವಿಂದ ಕಾರಜೋಳ, ಮುರುಗೇಶ್ ನಿರಾಣಿ, ಸಿ ಸಿ ಪಾಟೀಲ್ , ಸಂಸದ ಪಿ ಸಿ ಗದ್ದಿಗೌಡರ್ , ಶಾಸಕರಾದ ವೀರಣ್ಣ ಚರಂತಿಮಠ, ದೊಡ್ಡನಗೌಡ ಪಾಟೀಲ್, ಸಿದ್ದು ಸವದಿ, ಅರುಣ್ ಶಾಹಪೂರ, ಹನುಮಂತ ನಿರಾಣಿ,, ಬಿಜೆಪಿ ಮುಖಂಡರಾದ ಪಿಎಚ್ ಪೂಜಾರ್, ಗುರುಪಾದ ಕೊಳಲಿ ಮುಂತಾದವರು ಉಪಸ್ಥಿತರಿದ್ದರು.

Post a Comment

Previous Post Next Post