CM, ಇಂದು ಎಲ್ಲೆಲ್ಲಿ... ಇಲ್ಲಿದೆ.. ನೋಡಿ...

[23/04, 1:06 PM] Gurulingswami. Holimatha. Vv. Cm: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಬೆಂಗಳೂರಿನಲ್ಲಿ ಭಾಗವಹಿಸಿದ್ದ ಜುಡಿಸಿಯಲ್ ಅಧಿಕಾರಿಗಳ ರಾಜ್ಯ ಮಟ್ಟದ ೨೦ ನೇ ದ್ವೈ ವಾರ್ಷಿಕ ಸಮ್ಮೇಳನವನ್ನು
ಸುಪ್ರೀಂ ಕೋರ್ಟ್ ನ್ಯಾಯಾಧೀಶರಾದ ಜಸ್ಟಿಸ್ ಧನಂಜಯ ಚಂದ್ರಚೂಡ್ ಅವರು ಉದ್ಘಾಟಿಸಿದರು. ಸುಪ್ರೀಂ ಕೋರ್ಟ್ ನ್ಯಾಯಾಧೀಶರಾದ ದಿನೇಶ್ ಮಹೇಶ್ವರಿ, ಸೋಮಯ್ಯ ಬೋಪಣ್ಣ  ಸೇರಿದಂತೆ ಇತರರು ಉಪಸ್ಥಿತರಿದ್ದರು.
[23/04, 1:10 PM] Gurulingswami. Holimatha. Vv. Cm: ಬೆಂಗಳೂರು, ಏಪ್ರಿಲ್ 23: *ಮಾನ್ಯ* *ಮುಖ್ಯಮಂತ್ರಿ ಶ್ರೀ* *ಬಸವರಾಜ ಬೊಮ್ಮಾಯಿ ಅವರು* ಕರ್ನಾಟಕ ರಾಜ್ಯ ನ್ಯಾಯಾಂಗ ಅಧಿಕಾರಿಗಳ ಸಂಘದ ವತಿಯಿಂದ *ಡಾ* *. ಬಾಬು ರಾಜೇಂದ್ರ* *ಪ್ರಸಾದ್ ಇಂಟರ್* *ನ್ಯಾಷನಲ್ ಕನ್ವೆನ್ಷನ್* ಸೆಂಟರ್, ಜಿಕೆವಿಕೆ ಇಲ್ಲಿ ಆಯೋಜಿಸಿರುವ *20ನೇ* *ದ್ವೈವಾರ್ಷಿಕ ರಾಜ್ಯ ಮಟ್ಟದ* *ನ್ಯಾಯಾಂಗ ಅಧಿಕಾರಿಗಳ* *ಸಮ್ಮೇಳನದಲ್ಲಿ ಪಾಲ್ಗೊಂಡು* ಮಾತನಾಡಿದರು.
[23/04, 1:22 PM] Gurulingswami. Holimatha. Vv. Cm: ಪಿ.ಎಸ್.ಐ.ನೇಮಕಾತಿ ಅಕ್ರಮ 
*ಆಡಿಯೋ ತನಿಖೆ ಮಾಡಿ ತಪ್ಪಿತಸ್ಥರ ವಿರುದ್ಧ ಕ್ರಮ*ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ*
ಬೆಂಗಳೂರು, ಎಪ್ರಿಲ್ 23: 

ಪಿಎಸ್ ಐ ನೇಮಕಾತಿಯ ಯಾವುದೇ ಬ್ಯಾಚ್ ನಲ್ಲಿ  ಅಕ್ರಮವಾಗಿದ್ದರೂ ತನಿಖೆ ಕೈಗೊಂಡು ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಅವರು ಇಂದು ತಮ್ಮ ನಿವಾಸದ ಬಳಿ  ಮಾಧ್ಯಮದವರೊಂದಿಗೆ ಮಾತನಾಡುತ್ತಿದ್ದರು. 

ಶಾಸಕ ಪ್ರಿಯಾಂಕ ಖರ್ಗೆ ಬಿಡುಗಡೆ ಮಾಡಿರುವ ಆಡಿಯೋ ನಾನು ಕೇಳಿಲ್ಲ.ಯಾವ ಮೆಟೀರಿಯಲ್ ಇದ್ದರೂ ತನಿಖೆಯಾಗುತ್ತದೆ. ಇಬ್ಬರ ನಡುವೆ ಮಾತುಕತೆಯಾಗಿದೆ. ಅವರಿಬ್ಬರು ಯಾರು, ಅವರ ಅರ್ಹತೆ ಏನು ಎನ್ನುವುದು ತನಿಖೆಯಲ್ಲಿ ತಿಳಿಯುತ್ತದೆ. ಆಡಿಯೋವನ್ನು ಸಹ ತನಿಖೆಗೆ ಒಳಪಡಿಸಿ ಯಾರೇ ತಪ್ಪಿತಸ್ಥರಿದ್ದರೂ, ಯಾವುದೇ ಬ್ಯಾಚ್ ಆಗಿದ್ದರೂ ಕ್ರಮ ತೆಗೆದುಕೊಳ್ಳಲಾಗುವುದು ಎಂದರು. 

*ಶಾಲೆಗಳಿಗೆ ಬೆದರಿಕೆ ಇ-ಮೇಲ್ : ಮೂಲ ಪತ್ತೆ ಹಚ್ಚಲಾಗುವುದು*
ಕಳೆದ 15 ದಿನಗಳ ಹಿಂದೆ ಶಾಲೆಗಳಿಗೆ   ಬಂದಿದ್ದ ಬೆದರಿಕೆ ಇ- ಮೇಲ್ ಸಿರಿಯಾ ಹಾಗೂ ಪಾಕಿಸ್ತಾನದಿಂದ  ಬಂದಿದೆ ಎಂಬ ಮಾಹಿತಿ ಬಂದಿದೆ ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿಗಳು ಈ ಬಗ್ಗೆ ಗೊತ್ತಿಲ್ಲ. ಪೊಲೀಸ್ ಆಯುಕ್ತರೊಂದಿಗೆ  ಮಾತನಾಡುವುದಾಗಿ ತಿಳಿಸಿದರು. ಇವೆಲ್ಲಾ ಆಗಾಗ್ಗೆ ಶಾಂತಿ ಕದಡಲು ಈ ರೀತಿಯ ಪ್ರಯತ್ನಗಳಾಗುತ್ತವೆ. ಕಳೆದ ವರ್ಷವೂ ಆಗಿದೆ. ಪ್ರಕರಣವನ್ನು  ಗಂಭೀರವಾಗಿ ಪರಿಗಣಿಸಲಾಗಿದೆ. ಇ- ಮೇಲ್ ಮೂಲವನ್ನು ಪತ್ತೆ ಹಚ್ಚಲಾಗುವುದು. ಯಾವ ದೇಶದಿಂದ ಬಂದಿದೆ ಎಂದು ಗೊತ್ತಾಗುತ್ತದೆ. ಕೆಲವು ಸಂದರ್ಭದಲ್ಲಿ ಆ ದೇಶದ ಅಧಿಕಾರಿಗಳಿಗೆ ತಿಳಿಸಿ, ಕೆಲವರನ್ನು ಬಂಧಿಸಲಾಗಿದೆ.  ಕ್ರಮ ತೆಗೆದುಕೊಳ್ಳಲಾಗುವುದು ಎಂದರು.
[23/04, 3:54 PM] Gurulingswami. Holimatha. Vv. Cm: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಹರಿಹರದ ಜಗದ್ಗುರು ಪಂಚಮಸಾಲಿ ಪೀಠದ ಆವರಣದಲ್ಲಿ ಆಯೋಜನೆ ಮಾಡಲಾಗಿದ್ದ ಉದ್ಯೋಗ ಮೇಳ ಹಾಗೂ ಸ್ವಾತಂತ್ರ್ಯೂತ್ಸವದ ಅಮೃತ ಮಹೋತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಉನ್ನತ ಶಿಕ್ಷಣ ಹಾಗೂ ಕೌಶಲ್ಯ ಅಭಿವೃದ್ಧಿ ಸಚಿವ ಡಾ. ಸಿ ಎನ್ ಅಶ್ವತ್ಥ ನಾರಾಯಣ, ಸಕ್ಕರೆ ಮತ್ತು ಜವಳಿ ಸಚಿವ ಶಂಕರ ಪಾಟೀಲ್ ಮುನೇನಕೊಪ್ಪ,  ವಚನಾನಂದ ಸ್ವಾಮೀಜಿ, ಸಂಸದ ಜಿಬೆಂ ಸಿದ್ದೇಶ್ವರ, ಶಾಸಕ ಎಸ್ ಎ ರವೀಂದ್ರ ನಾಥ ಸೇರಿದಂತೆ ಇತರೆ ಪ್ರಮುಖ ನಾಯಕರು ಉಪಸ್ಥಿತರಿದ್ದರು.
[23/04, 5:57 PM] Gurulingswami. Holimatha. Vv. Cm: *ದಾವಣಗೆರೆ* ( *ಹರಿಹರ),* ಏಪ್ರಿಲ್ 23: ಮಾನ್ಯ ಮುಖ್ಯಮಂತ್ರಿ ಶ್ರೀ ಬಸವರಾಜ ಬೊಮ್ಮಾಯಿ ಅವರು *ಪಂಚಮಸಾಲಿ ಜಗದ್ಗುರು* *ಪೀಠ, ಹರಕ್ಷೇತ್ರ,* *ಹರಿಹರ* ಇವರ ವತಿಯಿಂದ ಪಂಚಮಸಾಲಿ ಗುರುಪೀಠ ಇಲ್ಲಿ ಆಯೋಜಿಸಿರುವ ಸ್ವಾತಂತ್ರ್ಯದ *ಅಮೃತ ಮಹೋತ್ಸವ -2022ರ* *ಬೃಹತ್ ಉದ್ಯೋಗ* *ಮೇಳ* ಹಾಗೂ *ರಾಷ್ಟ್ರೀಯ* *ಶಿಕ್ಷಣ ನೀತಿ,  ಕೌಶಲ್ಯ* ಮತ್ತು *ಕೃಷಿ *ಸಮಾವೇಶದಲ್ಲಿ** ಪಾಲ್ಗೊಂಡು ಮಾತನಾಡಿದರು.
[23/04, 6:24 PM] Gurulingswami. Holimatha. Vv. Cm: ಬೆಂಗಳೂರು, ಏಪ್ರಿಲ್ 23:  ಹಾವೇರಿಯಲ್ಲಿ 86 ನೇ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಆಯೋಜಿಸುವ ಸಂಬಂಧ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ಇಂದು  ಪೂರ್ವಭಾವಿ ಸಭೆ ಜರುಗಿತು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸುನೀಲ್ ಕುಮಾರ್, ಕಾರ್ಮಿಕ ಸಚಿವ ಶಿವರಾಂ ಹೆಬ್ಬಾರ್, ಕೃಷಿ ಸಚಿವ ಬಿ.ಸಿ.ಪಾಟೀಲ್, ಸಂಸದ  ಶಿವಕುಮಾರ್ ಉದಾಸಿ, ಶಾಸಕ ನೆಹರು ಒಲೆಕಾರ್, ವಿಧಾನ ಪರಿಷತ್ ಸದಸ್ಯ ಸಲೀಂ ಅಹಮದ್,  ಕ.ಸಾ.ಪ ಅಧ್ಯಕ್ಷ ಮಹೇಶ್ ಜೋಶಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ  ಕಾರ್ಯದರ್ಶಿ ಎನ್.ಮಂಜುಳಾ, ಹಾವೇರಿ ಜಿಲ್ಲಾಧಿಕಾರಿ ಡಾ. ಸಂಜಯ ಶೆಟ್ಟೆಣ್ಣವರ್ ಮೊದಲಾದವರು  ಉಪಸ್ಥಿತರಿದ್ದರು
[23/04, 7:31 PM] Gurulingswami. Holimatha. Vv. Cm: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ 86ನೇ  ಕನ್ನಡ ಸಾಹಿತ್ಯ ಸಮ್ಮೇಳನದ ಪೂರ್ವಭಾವಿ  ಸಭೆ:

*ಸೆಪ್ಟೆಂಬರ್ 23 ರಿಂದ 25 ರವರೆಗೆ 86 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಆಯೋಜಿಸಲು ತೀರ್ಮಾನ*
ಬೆಂಗಳೂರು, ಏಪ್ರಿಲ್ 23: ಹಾವೇರಿಯಲ್ಲಿ ಸೆಪ್ಟೆಂಬರ್ 23, 24 ಹಾಗೂ 25 ರಂದು ಮೂರು ದಿನಗಳ ಕಾಲ  86 ನೇ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಆಯೋಜಿಸಲು ತೀರ್ಮಾನಿಸಲಾಯಿತು. 

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ಇಂದು ನಡೆದ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಪೂರ್ವಭಾವಿ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಯಿತು. 

*ಅರ್ಥಪೂರ್ಣ ಗೋಷ್ಠಿ ಆಯೋಜಿಸಿ*
ಗೋಷ್ಠಿಗಳಲ್ಲಿ ಹೆಚ್ಚಿನ ಜನ ಭಾಗವಹಿಸುವಂತಾಗಬೇಕು ಹಾಗೂ ಅವು  ಅರ್ಥಪೂರ್ಣವಾಗಿರಬೇಕು. 
ಸಮಿತಿಗಳಲ್ಲಿ ಸಕ್ರಿಯವಾಗಿರುವ ಸ್ಥಳೀಯ ಜನರನ್ನು ತೊಡಗಿಸಿಕೊಳ್ಳಬೇಕು. ಗೋಷ್ಠಿಗಳಲ್ಲಿಯೂ ಸ್ಥಳೀಯರಿಗೆ ಅವಕಾಶ ನೀಡಬೇಕು. ಎಲ್ಲಾ ತಾಲ್ಲೂಕುಗಳ  ಸ್ವಯಂಸೇವಕರು ಭಾಗವಹಿಸಬೇಕು. ಈ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿಗಳು ಸೂಚಿಸಿದರು. 

*ಸೂಕ್ತ ವಸತಿ ವ್ಯವಸ್ಥೆ*
ಸಾಹಿತ್ಯ ಸಮ್ಮೇಳನಕ್ಕೆ ಆಗಮಿಸುವವರಿಗೆ ವಸತಿ ವ್ಯವಸ್ಥೆಯಾಗಬೇಕು. ಎಲ್ಲಿ, ಎಷ್ಟು ಜನರಿಗೆ ವಸತಿ ವ್ಯವಸ್ಥೆಯಾಗಿದೆ ಎಂಬ ಬಗ್ಗೆ ನಿಖರವಾಗಿ ಯೋಚಿಸಿ. ಹಾಸ್ಟೆಲ್ ಗಳು ಮತ್ತು ಡಾರ್ಮಿಟರಿಗಳನ್ನು ವಸತಿ ಶಾಲೆಗಳನ್ನು ಸದುಪಯೋಗಿಸಿಕೊಳ್ಳಬೇಕು. ಪ್ರಮುಖ ಕಲ್ಯಾಣ ಮಂಟಪಗಳನ್ನು ಗುರುತಿಸಿ ಎಂದು ಸಿಎಂ ಸೂಚಿಸಿದರು. ಹುಬ್ಬಳ್ಳಿ  ಮತ್ತು  ದಾವಣಗೆರೆಯಲ್ಲಿಯೂ ವಸತಿಗೆ ವ್ಯವಸ್ಥೆ ಕಲ್ಪಿಸಬೇಕು ಎಂದರು. 
ಮಾರ್ಗ ಮಧ್ಯೆಯೂ ಉತ್ತಮ ಹೋಟೆಲ್ ಗಳಿವೆ, ಖಾಸಗಿ ಶಾಲೆಗಳನ್ನು ಸಹ ಬಳಕೆ ಮಾಡಿಕೊಳ್ಳಬಹುದು ಎಂದು ಸೂಚಿಸಿದರು. ತುರ್ತು ಪರಿಸ್ಥಿತಿಗಳಲ್ಲಿ ಬಳಕೆ ಮಾಡಲು ಕುಂಭಮೇಳದಲ್ಲಿ ಆಯೋಜಿಸಿದಂತೆ ಟೆಂಟ್ ಗಳನ್ನು ಉಪಯೋಗಿಸಬಹುದು. ಇವುಗಳ ಬಗ್ಗೆ ಸೂಕ್ತ ನೀಲನಕ್ಷೆ ಸಿದ್ಧಪಡಿಸಲು ತಿಳಿಸಿದರು. 

ಊಟ, ಕುಡಿಯುವ ನೀರು, ಶೌಚಾಲಯ ವ್ಯವಸ್ಥೆಯ ಬಗ್ಗೆಯೂ  ಸೂಕ್ತ ಯೋಜನೆಗಳನ್ನು ರೂಪಿಸಬೇಕು ಎಂದು ಮುಖ್ಯಮಂತ್ರಿಗಳು ಸೂಚಿಸಿದರು. 

ಸಿದ್ಧತೆಗಳ ಬಗ್ಗೆ ಜಿಲ್ಲಾ ಮಟ್ಟದಲ್ಲಿ  ಮತ್ತೊಂದು ಸಭೆ ಕರೆದು, ಅಂತಿಮಗೊಳಿಸುವುದು. ಬಜೆಟ್ ನಲ್ಲಿ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ 20 ಕೋಟಿ ರೂ.ಗಳನ್ನು ಒದಗಿಸಲಾಗಿದೆ ಎಂದರು.

*ಪರಿಸರ ಸ್ನೇಹಿ ಸಮ್ಮೇಳನ*
ಸಮ್ಮೇಳನವನ್ನು ಪರಿಸರಸ್ನೇಹಿಯಾಗಿಸಲು ಫ್ಲೆಕ್ಸ್ ಗಳ ಬಳಕೆಯನ್ನು ನಿಷೇಧಿಸಿ ಜಾಹೀರಾತು ಫಲಕಗಳನ್ನು ಬಳಸುವಂತೆ ಮುಖ್ಯ ಮಂತ್ರಿಗಳು ಸೂಚಿಸಿದರು. 
ಸಭೆಯಲ್ಲಿ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತರು ಹಾಗೂ ಕೇಂದ್ರ ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾದ ಚಂದ್ರಶೇಖರ್ ಕಂಬಾರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸುನೀಲ್ ಕುಮಾರ್, ಕಾರ್ಮಿಕ ಸಚಿವ ಶಿವರಾಂ ಹೆಬ್ಬಾರ್, ಕೃಷಿ ಸಚಿವ ಬಿ.ಸಿ.ಪಾಟೀಲ್, ಸಂಸದ  ಶಿವಕುಮಾರ್ ಉದಾಸಿ, ಶಾಸಕರಾದ  ಅರುಣ್ ಕುಮಾರ್ ಪೂಜಾರ್, ನೆಹರು ಒಲೆಕಾರ್, ವಿಧಾನ ಪರಿಷತ್ ಸದಸ್ಯ ಸಲೀಂ ಅಹಮದ್,  ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಮಹೇಶ್ ಜೋಶಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ  ಕಾರ್ಯದರ್ಶಿ ಎನ್.ಮಂಜುಳಾ, ಹಾವೇರಿ ಜಿಲ್ಲಾಧಿಕಾರಿ ಡಾ. ಸಂಜಯ ಶೆಟ್ಟೆಣ್ಣವರ್ ಮೊದಲಾದವರು  ಉಪಸ್ಥಿತರಿದ್ದರು.
[23/04, 7:57 PM] Gurulingswami. Holimatha. Vv. Cm: *ಮೌಲ್ಯಯುತ ಸಮಾಜ ನಿರ್ಮಾಣ ಇಂದಿನ ಅಗತ್ಯ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ*

ಬೆಂಗಳೂರು,ಏಪ್ರಿಲ್ 23 : 

 ಮೌಲ್ಯಯುತ ವ್ಯವಸ್ಥೆ ಹೊಂದಿರುವ ಸಮಾಜವನ್ನು ನಿರ್ಮಿಸುವುದು ಇಂದಿನ ಅಗತ್ಯವಾಗಿದೆ. ಸಮಾಜದಲ್ಲಿ ಉತ್ತಮ ಮೌಲ್ಯಗಳನ್ನು ಪುರಸ್ಕರಿಸುವ ಮೂಲಕ ಸೌಹಾರ್ದತೆಯನ್ನು ಕಾಪಾಡಬಹುದಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

 ಅವರು ಇಂದು 20ನೇ ದ್ವೈವಾರ್ಷಿಕ ರಾಜ್ಯ ಮಟ್ಟದ ನ್ಯಾಯಾಂಗ ಅಧಿಕಾರಿಗಳ ಸಮ್ಮೇಳನದಲ್ಲಿ ಪಾಲ್ಗೊಂಡು ಮಾತನಾಡಿದರು.

ಸಮಾಜದಲ್ಲಿ ಜನರ ಪ್ರಾಮಾಣಿಕತೆ ಹಾಗೂ ಒಳ್ಳೆಯತನವನ್ನು ಗುರುತಿಸಬೇಕು. ಒಬ್ಬರಿಗೆ ಸರಿ ಎಂದು ತೋರಿದ್ದು, ಮತ್ತೊಬ್ಬರಿಗೆ ತಪ್ಪೆಂದು ತೋರಬಹುದು. ಆದ್ದರಿಂದ  ಸಮಾಜದಲ್ಲಿ ಉತ್ತಮ ಗುಣಗಳ ಮೌಲ್ಯಗಳು ಬೆಳೆಯಲು ಪ್ರೋತ್ಸಾಹಿಸಬೇಕು. ನ್ಯಾಯಾಂಗವು ಸಾಮಾಜಿಕ ನ್ಯಾಯ ಹಾಗೂ ಮೌಲ್ಯವನ್ನು ಪ್ರೋತ್ಸಾಹಿಸುತ್ತ ಬಂದಿರುವುದು ಶ್ಲಾಘನೀಯ. ಕೆಟ್ಟ ಪ್ರವೃತ್ತಿಯನ್ನು ಸಮಾಜ ಗೌರವಿಸಿದರೆ ಆಗ ನ್ಯಾಯಾಂಗ ಕೇವಲ ಶಿಕ್ಷೆಯನ್ನೇ ಪ್ರಧಾನವಾಗಿಸಬೇಕಾಗುತ್ತದೆ. ಪ್ರಜಾಪ್ರಭುತ್ವದ ಕಾರ್ಯಾಂಗ, ನ್ಯಾಯಾಂಗ, ಆಡಳಿತಾಂಗದ ವ್ಯವಸ್ಥೆಗಳು ಸಾಮಾಜಿಕ ನ್ಯಾಯಕ್ಕಾಗಿ ದುಡಿಯಬೇಕಿದೆ. ಯಾವುದೇ ಕಾನೂನು ರೂಪಿಸಿದಾಗ ಅಸ್ಪಷ್ಟತೆ ಇರಬಾರದು. ಆಗಮಾತ್ರ ಯಾವುದೇ ಕಾನೂನು ಯಶಸ್ವಿಯಾಗಲು ಸಾಧ್ಯ ಎಂದರು.

*ಸಮಾಜದ ನ್ಯಾಯಕ್ಕೆ ಒತ್ತು ನೀಡಬೇಕು:*
ಆಡಳಿತಗಾರರು ಮತ್ತು ನ್ಯಾಯಾಧೀಶರು ಒಂದೇ ನೆಲಗಟ್ಟಿಗೆ ಸೇರಿದವರಾಗಿದ್ದಾರೆ. ನ್ಯಾಯಾಂಗದ ಮೂಲಕ ಸಮಾಜದಲ್ಲಿ ಮೌಲ್ಯಗಳು, ಶಾಂತಿ ಸುವ್ಯವಸ್ಥೆ, ನ್ಯಾಯ ಉಳಿಸುವಂತಹ ದೊಡ್ಡ ಬಳಗ ನಮ್ಮಲಿದೆ. ನ್ಯಾಯಮೂರ್ತಿಗಳ ಪ್ರಾಮಾಣಿಕತೆ, ನ್ಯಾಯನಿಷ್ಠುರತೆ ಬಗ್ಗೆ ಗೌರವ ಇದೆ.   ನ್ಯಾಯಪರ ಚಿಂತನೆ, ಗುಣಮಟ್ಟದ ತೀರ್ಪುಗಳಿಂದ ಭಾರತೀಯ ನ್ಯಾಯಾಂಗ ತನ್ನ ಘನತೆಯನ್ನು  ಕಾಪಾಡಿ ಕೊಂಡು ಬಂದಿದೆ. ಪ್ರಜಾಪ್ರಭುತ್ವದ ಯಶಸ್ಸಿಗೆ ಸ್ವತಂತ್ರವಾಗಿ ಕಾರ್ಯನಿರ್ವಹಿಸುವ ಶಾಸಕಾಂಗ, ಕಾರ್ಯಾಂಗ ಮತ್ತು ನ್ಯಾಯಾಂಗ ಪ್ರಮುಖ ಪಾತ್ರ ನಿರ್ವಹಿಸುತ್ತದೆ. ಇದರಿಂದಾಗಿ ವಿವಿಧ ಸಾಮಾಜಿಕ ವ್ಯವಸ್ಥೆಯ ನಡುವೆಯೂ ದೇಶದ ಭವಿಷ್ಯ ಭದ್ರವಾಗಿರಲು ಸಾಧ್ಯವಾಗಿದೆ. ನ್ಯಾಯಾಂಗದಲ್ಲಿ ಸಮಾಜದ ನ್ಯಾಯಕ್ಕೆ ಒತ್ತು ನೀಡಲಾಗಿದೆ ಎಂದರು.

*ನ್ಯಾಯಾಂಗದಲ್ಲಿ ಡಿಜಿಟಲೀಕರಣ :*
ಆಧುನಿಕ ಯುಗದಲ್ಲಿ ನ್ಯಾಯಾಂಗದಲ್ಲಿ ಡಿಜಿಟಲೀಕರಣದ ಅಗತ್ಯವಿದೆ. ಈಗ ಡಿಜಿಟಲೀಕರಣದಿಂದ ನ್ಯಾಯಾಂಗದಲ್ಲಿ ವೇಗ ಹೆಚ್ಚಿದೆ.
 ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ನ ಬಳಕೆ ಮಾಡಿಕೊಳ್ಳಬೇಕು. ನ್ಯಾಯ ಸಮ್ಮತವಾದ ತೀರ್ಪುಗಳನ್ನು ನೀಡುತ್ತಾ ಬಂದಿರುವ ಕೀರ್ತಿ ಭಾರತದ ನ್ಯಾಯಾಂಗಕ್ಕೆ ಸಲ್ಲುತ್ತದೆ ಎಂದರು ತಿಳಿಸಿದರು.
[23/04, 8:32 PM] Gurulingswami. Holimatha. Vv. Cm: *ಅಂತ:ಕರಣದಿಂದ ಮಾನವ ಸಂಬಂಧಗಳ ಪುನರ್ ಸ್ಥಾಪನೆ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ*

ದಾವಣಗೆರೆ, ಏಪ್ರಿಲ್ 23:

 ಅಂತ:ಕರಣದಿಂದ ಮಾನವ ಸಂಬಂಧಗಳ ಪುನರ್ ಸ್ಥಾಪನೆ ಸಾಧ್ಯ. ಮಠಗಳು ಮೌಲ್ಯಗಳನ್ನು ಪುನರ್ ಸ್ಥಾಪಿಸಿದರೆ ಮಾತ್ರ ಸಮಾಜದಲ್ಲಿ ಮಾನವ ಸಂಬಂಧಗಳು ಬೆಳೆಯುತ್ತವೆ.ಇದೆ ನಮ್ಮ ಅಂತರ್ಗತ, ಗುಣಧರ್ಮ ಮತ್ತು ಶಕ್ತಿ ಎಂದು  ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಅವರು ಇಂದು ಪಂಚಮಸಾಲಿ ಜಗದ್ಗುರು ಪೀಠ, ಹರಕ್ಷೇತ್ರ, ಹರಿಹರ ಇವರ ವತಿಯಿಂದ ಪಂಚಮಸಾಲಿ ಗುರುಪೀಠದಲ್ಲಿ ಆಯೋಜಿಸಿದ್ದ ಸ್ವಾತಂತ್ರ್ಯದ ಅಮೃತ ಮಹೋತ್ಸವ -2022, ಬೃಹತ್ ಉದ್ಯೋಗ ಮೇಳ ಹಾಗೂ ರಾಷ್ಟ್ರೀಯ ಶಿಕ್ಷಣ ನೀತಿ,  ಕೌಶಲ್ಯ ಮತ್ತು ಕೃಷಿ ಸಮಾವೇಶದಲ್ಲಿ ಪಾಲ್ಗೊಂಡು ಮಾತನಾಡಿದರು.
 
ಜಾಗತೀಕರಣವಾದ ನಂತರ ಸಂಬಂಧಗಳ ನಡುವೆ ಬಹಳಷ್ಟು ಬದಲಾವಣೆಗಳನ್ನು ಕಾಣುತ್ತಿದ್ದೇವೆ ಸಾಮಾಜಿಕ ಚಟುವಟಿಕೆಗಳು, ಸಂಸ್ಕೃತಿ, ಸಂಸ್ಕಾರ, ಧಾರ್ಮಿಕ ವಿಧಿವಿಧಾನಗಳನ್ನು ಮಾರುಕಟ್ಟೆ ತೀರ್ಮಾನ ಮಾಡುತ್ತದೆ.ಆತ್ಮೀಯ ಸಂಬಂಧಗಳು ದೂರವಾಗುತ್ತಿವೆ. ಸಂಬಂಧಗಳು ಪುನಃ ಸ್ಥಾಪನೆಯಾಗಬೇಕು. ಇದಕ್ಕೆ ಅಂತ:ಕರಣವನ್ನು ಪುನರ್ ಸ್ಥಾಪನೆ ಮಾಡಬೇಕು ಎಂದರು.
 
*ಮಾತೃಹೃದಯದ ಗುರುಗಳು  ಮುಖ್ಯ*
ಒಂದು ಮಠ ಮತ್ತು ಭಕ್ತರ ನಡುವೆ ಅನ್ಯೋನ್ಯ ಅಂತ:ಕರಣದ ಸಂಬಂಧ ಇರುತ್ತದೆ. ಮಾತೃಹೃದಯದ ಗುರುಗಳು ಬಹಳ ಮುಖ್ಯ. ಅಷ್ಟೇ ಭಕ್ತಿ ಭಾವದ ಶ್ರದ್ದೆಯೂ ಬಹಳ ಮುಖ್ಯ ಇವೆರಡೂ ಇಂದು ಮಠದಲ್ಲಿ ಕಾಣಲು ಸಿಕ್ಕಿದೆ.ಪರಮಪೂಜ್ಯರ ಅಪಾರ ಜ್ಞಾನ, ಯೋಗದ ಸಾಧನೆ,    ಅಂತರ್ಮುಖಿಯಾಗಿ ಆಧ್ಯಾತ್ಮಿಕ ಚಿಂತನೆ ಮೂಲಕ ಸಂಸ್ಕಾರ, ಸಂಸ್ಕೃತಿ ಯನ್ನು ರೂಪಿಸುವ  ಶಕ್ತಿ ಇದೆ. ಈ ಸಂದರ್ಭದಲ್ಲಿ ನಮ್ಮ ಸಮಾಜಕ್ಕೆ ಬೇಕಾಗಿರುವುದು ಸಂಸ್ಕಾರ, ಸಂಸ್ಕೃತಿ, ಶಿಕ್ಷಣ, ಉದ್ಯೋಗ, ಸ್ವಾವಲಂಬನೆ ಮತ್ತು ಸ್ವಾಭಿಮಾನ. ನಾವು 21 ನೇ ಶತಮಾನದಲ್ಲಿ ಇದ್ದೇವೆ. ಜಾಗತೀಕರಣ, ಉದಾರೀಕರಣ, ಖಾಸಗೀಕರಣಗಳಿಂದಾಗಿ ಎಲ್ಲವನ್ನು ಮಾರುಕಟ್ಟೆ ತೀರ್ಮಾನ ಮಾಡುತ್ತದೆ ಎಂದರು. 

ಹರಿಹರ ಪೀಠ ತನ್ನದೇ ಐತಿಹಾಸಿಕ ಪ್ರಾಮುಖ್ಯತೆಯನ್ನು ಹೊಂದಿದೆ.  ಜಗದ್ಗುರುಗಳ ಆಶೀರ್ವಾದ, ಎಲ್ಲಾ ಹಿರಿಯರು ಒಂದಾಗಿ ಪೀಠದ ಸ್ಥಾಪನೆ ಮಾಡಿದ್ದಾರೆ. ಪ್ರಥಮ ಪೀಠದ ಸಭೆ, ಆಂತರಿಕ ಸಭೆ ನಡೆದದ್ದು ಸಹ ನೆನಪಿದೆ. ಸಮಾಜಕ್ಕೆ ಒಂದೇ  ಪೀಠ ಇರಬೇಕೆಂಬ ಸಭೆಯಲ್ಲಿಯೂ ಭಾಗವಹಿಸಿದ್ದೆ ಎಂದು ಸ್ಮರಿಸಿದರು. ನಂತರ ಪೀಠವು ಸಮಾಜದಲ್ಲಿ ತನ್ನ ಹೆಜ್ಜೆ ಗುರುತುಗಳನ್ನು ಪ್ರಾರಂಭ ಮಾಡಿದೆ. ನಂತರ ಬದಲಾವಣೆಯ ಕಾಲ ಬಂದು ಪೀಠದ ಕಾಯಕಲ್ಪವು ಸಮಾಜಕ್ಕೆ ನೂತನ ದಿಕ್ಸೂಚಿ , ಮಾರ್ಗದರ್ಶನ ಮಾಡಲು ಸಾಧಕರಾಗಿ ವಚನಾನಂದ ಶ್ರೀಗಳು ದೊರೆತಿರುವುದು ನಮ್ಮೆಲ್ಲರ ಪುಣ್ಯ ಭಾಗ್ಯ ಎಂದರು. 
 
*ಸಮುದಾಯಕ್ಕೆ ಸಾಮಾಜಿಕ ನ್ಯಾಯ :*
ನ್ಯಾಯಾಲಯದಲ್ಲಿ ನ್ಯಾಯವಿದ್ದಂತೆ ಸಾಮಾಜಿಕ ನ್ಯಾಯವೂ ಮುಖ್ಯ.ಅವಕಾಶವಂಚಿತರಿಗೆ ಅವಕಾಶ ಸಿಗಬೇಕು. ಸಾಮಾಜಿಕವಾಗಿ ಅವಕಾಶ ದೊರೆಯಬೇಕು. ಪಂಚಮಸಾಲಿ ಸಮುದಾಯಕ್ಕೆ ಸಾಮಾಜಿಕ ನ್ಯಾಯ ದೊರಕಿಸಿಕೊಡಲು ಎಲ್ಲ ರೀತಿಯ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ. ಕನ್ನಡದ ನೆಲ ಜಲ, ಗಡಿ ಭಾಷೆಗಳ ವಿಷಯ ಬಂದಾಗ ಪಕ್ಷಾತೀತವಾಗಿ ತೀರ್ಮಾನಗಳನ್ನು ತೆಗೆದುಕೊಳ್ಳುತ್ತೇವೆ. ಸಮುದಾಯ ಹಾಗೂ ಸಮಾಜದ ಶ್ರೇಯೋಭಿವೃದ್ಧಿಗೆ ಕಂಕಣಬದ್ಧರಾಗಿದ್ದೇವೆ. ಸಮಾಜದಲ್ಲಿ ಎಲ್ಲರನ್ನೂ ಒಗ್ಗೂಡಿಸಿಕೊಂಡು ನಡೆದರೆ ಸಮಾಜದೊಂದಿಗೆ ನಮ್ಮ ವ್ಯಕ್ತಿತ್ವವೂ ಅಭಿವೃದ್ಧಿಯಾಗುತ್ತದೆ. ಕನ್ನಡ ನಾಡಿನ ಭವ್ಯ ಐತಿಹಾಸಿಕ ಪರಂಪರೆಯನ್ನು ಬಲ್ಲವರು ಮಾತ್ರ ನಾಡಿನ ಭವಿಷ್ಯವನ್ನು ನಿರ್ಮಿಸಲು ಸಾಧ್ಯ. ಇತಿಹಾಸದ ಭಾಗವಾಗಿ ಹೊಸ ಇತಿಹಾಸವನ್ನು ಸೃಷ್ಟಿಸುವ ಶಕ್ತಿ ಸಮುದಾಯಕ್ಕಿದೆ. ಸಾಧಕನಿಗೆ ಸಾವು ಅಂತ್ಯವಲ್ಲ, ಸಾವಿನ ನಂತರವೂ ಬದುಕು ಸಾಧಿಸಬಹುದು ಎನ್ನುವಂತೆ ಸಾಧನೆಯ ಸಮಾಜವನ್ನು ನಿರ್ಮಿಸಬೇಕಿದೆ ಎಂದರು.
[23/04, 9:47 PM] Gurulingswami. Holimatha. Vv. Cm: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಇಂದು ಬೆಂಗಳೂರಿನಲ್ಲಿ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಸಾಹಿತಿ ಡಾ. ಚಂದ್ರಶೇಖರ್ ಕಂಬಾರ ಅವರು ಸೌಜನ್ಯಯುತವಾಗಿ ಭೇಟಿ ಮಾಡಿ ಮಾತುಕತೆ ನಡೆಸಿದರು.
[23/04, 9:55 PM] Gurulingswami. Holimatha. Vv. Cm: *ಎಂ.ಎಸ್.ಬೋಜೇಗೌಡರ ನಿಧನಕ್ಕೆ ಮುಖ್ಯಮಂತ್ರಿಗಳ  ಸಂತಾಪ*

ಬೆಂಗಳೂರು, ಏಪ್ರಿಲ್ 23:ಕಾಫಿ  ಮಂಡಳಿ ಅಧ್ಯಕ್ಷರು ಹಾಗೂ ಚಿಕ್ಕಮಗಳೂರು  ಜಿಲ್ಲಾ ಬಿ.ಜೆ.ಪಿ ಮಾಜಿ ಅಧ್ಯಕ್ಷ ಎಂ.ಎಸ್.ಬೋಜೇಗೌಡರ ನಿಧನಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಘಾತ ವ್ಯಕ್ತಪಡಿಸಿದ್ದಾರೆ. 

ಬೋಜೇಗೌಡರು ಚಿಕ್ಕಮಗಳೂರು ಜಿಲ್ಲಾ ಬಿ.ಜೆ.ಪಿಯ ಅಧ್ಯಕ್ಷರಾಗಿ ಸಾಕಷ್ಟು ಸಕ್ರಿಯವಾಗಿ ಕೆಲಸ ಮಾಡಿದ್ದರು. ಅವರ ಆಕಸ್ಮಿಕ ಮರಣ ತೀವ್ರ ದು:ಖ ತಂದಿದೆ. ಮೃತರ ಆತ್ಮಕ್ಕೆ  ಶಾಂತಿ ದೊರಕಲಿ. ಅವರ ಕುಟುಂಬದವರಿಗೆ ದು:ಖ ಭರಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಪ್ರಾರ್ಥಿಸುವುದಾಗಿ ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.
[23/04, 10:41 PM] Gurulingswami. Holimatha. Vv. Cm: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಬೆಂಗಳೂರಿನ ಕೆಂಗೇರಿ ಬಡಾವಣೆಯ ಆದಿಶಕ್ತಿ ಶ್ರೀ ಯಲ್ಲಮ್ಮ ದೇವಿಯ 46ನೇ ಕರಗ ಮಹೋತ್ಸವದಲ್ಲಿ ಪಾಲ್ಗೊಂಡಿದ್ದರು. ಈ ಸಂದರ್ಭದಲ್ಲಿ ಸಹಕಾರ ಸಚಿವ ಎಸ್ ಟಿ  ಸೋಮಶೇಖರ್, ರುದ್ರೇಶ ಸೇರಿದಂತೆ ಇತರೆ ಬಿಜೆಪಿ ನಾಯಕರು ಉಪಸ್ಥಿತರಿದ್ದರು.
[23/04, 10:46 PM] Gurulingswami. Holimatha. Vv. Cm: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಬೆಂಗಳೂರಿನ ಕೆಂಗೇರಿ ಬಡಾವಣೆಯ ಆದಿಶಕ್ತಿ ಶ್ರೀ ಯಲ್ಲಮ್ಮ ದೇವಿಯ 46ನೇ ಕರಗ ಮಹೋತ್ಸವದಲ್ಲಿ ಪಾಲ್ಗೊಂಡಿದ್ದರು. ಈ ಸಂದರ್ಭದಲ್ಲಿ ಸಹಕಾರ ಸಚಿವ ಎಸ್ ಟಿ  ಸೋಮಶೇಖರ್, ರುದ್ರೇಶ ಸೇರಿದಂತೆ ಇತರೆ ಬಿಜೆಪಿ ನಾಯಕರು ಉಪಸ್ಥಿತರಿದ್ದರು.

Post a Comment

Previous Post Next Post