[27/04, 12:44 PM] Gurulingswami. Holimatha. Vv. Cm: ಬೆಂಗಳೂರು, ಏಪ್ರಿಲ್ 27: ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಇಂದು ದೇಶದ ವಿವಿಧ ರಾಜ್ಯಗಳ ಮುಖ್ಯ ಮಂತ್ರಿಗಳೊಂದಿಗೆ ಕೋವಿಡ್ ಪರಿಸ್ಥಿತಿ ಕುರಿತು ನಡೆಸಿದ ವೀಡಿಯೋ ಕಾನ್ಫರೆನ್ಸ್ ನಲ್ಲಿ ರಾಜ್ಯದ ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬೆಂಗಳೂರಿನ ಗೃಹ ಕಚೇರಿ ಕೃಷ್ಣಾದಿಂದ ಪಾಲ್ಗೊಂಡರು.
ಆರೋಗ್ಯ ಸಚಿವ ಡಾ:ಕೆ.ಸುಧಾಕರ್, ವಸತಿ ಸಚಿವ ವಿ.ಸೋಮಣ್ಣ, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್, ಗೃಹ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್, ಮುಖ್ಯಮಂತ್ರಿಗಳ ಪ್ರಧಾನ ಮಂಜುನಾಥ್ ಪ್ರಸಾದ್, ಆರೋಗ್ಯ ಇಲಾಖೆ ಆಯುಕ್ತ ಡಿ. ರಂದೀಪ್, ಪ್ರಧಾನ ಕಾರ್ಯದರ್ಶಿ ಟಿ.ಕೆ ಅನಿಲ್ ಕುಮಾರ್, ರಾಷ್ಟ್ರೀಯ ಆರೋಗ್ಯ ಮಿಷನ್ ನಿರ್ದೇಶಕಿ ಡಾ: ಅರುಂಧತಿ ಚಂದ್ರಶೇಖರ್, ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ತುಷಾರ ಗಿರಿನಾಥ, ಗುಪ್ತ ವಾರ್ತೆ ಎಡಿಜಿಪಿ ದಯಾನಂದ ಸೇರಿದಂತೆ ಇತರರು ಉಪಸ್ಥಿತರಿದ್ದರು.
[27/04, 2:04 PM] Gurulingswami. Holimatha. Vv. Cm: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಕೋವಿಡ್ ಸ್ಥಿತಿಗತಿ ಕುರಿತು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ನಡೆಸಿದ ವಿಡಿಯೋ ಕಾನ್ಫರೆನ್ಸ್ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು.
Post a Comment