[29/04, 11:21 PM] Gurulingswami. Holimatha. Vv. Cm: ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ನಿನ್ನೆ ರಾತ್ರಿ ನವದೆಹಲಿಗೆ ಆಗಮಿಸಿದ ಸಂದರ್ಭದಲ್ಲಿ ನವದೆಹಲಿಯ ಕರ್ನಾಟಕ ಭವನದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿಧರು.
[30/04, 10:17 AM] Gurulingswami. Holimatha. Vv. Cm: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನವದೆಹಲಿಯಲ್ಲಿ ಇಂದು
(ಏ 30) ಕೇಂದ್ರ ಜವಳಿ, ವಾಣಿಜ್ಯ ಮತ್ತು ಕೈಗಾರಿಕೆ,ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರಗಳ ಸಚಿವ ಪಿಯೂಷ್ ಗೋಯಲ್ ಅವರನ್ನು ಭೇಟಿ ಮಾಡಿದರು.
[30/04, 10:34 AM] Gurulingswami. Holimatha. Vv. Cm: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ನವದೆಹಲಿಯಲ್ಲಿ ನಡೆದ ದೇಶದ ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳ ಹಾಗೂ ಹೈಕೋರ್ಟಿನ ಮುಖ್ಯ ನ್ಯಾಯಮೂರ್ತಿಗಳ ಸಭೆಯಲ್ಲಿ ಭಾಗವಹಿಸಿದ್ದರು.
[30/04, 2:02 PM] Gurulingswami. Holimatha. Vv. Cm: *ಗಲಭೆಕೋರರ ನೆರವಿಗೆ ನಿಲ್ಲುವುದು ಕಾಂಗ್ರೆಸ್ ನಿಲುವು*: *ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ*
ನವದೆಹಲಿ, ಏಪ್ರಿಲ್ 29: ಹುಬ್ಬಳ್ಳಿ ಗಲಭೆ ಪ್ರಕಾರದಲ್ಲಿ ಬಂಧಿತರ ನೆರವಿಗೆ ಧಾವಿಸಿರುವುದು ಶಾಸಕಾಂಜಮೀರ್ ಅಹಮದ್ ಹಾಗೂ ಅವರ ಪಕ್ಷದ ನಿಲುವು. ಗಲಭೆ ಮಾಡಿದವ ಜೊತೆ ನಿಲ್ಲುವ ಕೆಲಸವನ್ನು ಮೊದಲಿನಿಂದಲೂ ಮಾಡಿಕೊಂಡೇ ಬಂದಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ನವದೆಹಲಿಗೆ ಆಗಮಿಸಿ ಕರ್ನಾಟಕ ಭವನದಲ್ಲಿ ಅವರು ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದರು.
ಹುಬ್ಬಳ್ಳಿ ಪ್ರಕರಣದಲ್ಲಿ ಶಾಸಕ ಜಮೀರ್ ಅಹಮದ್ ಖಾನ್ ಅವರು ಬಂಧಿತರ ನೆರವಿಗೆ ಧಾವಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಇದು ಮೊದಲ ಬಾರಿ ಏನಲ್ಲ.ಡಿಜೆ ಹಳ್ಳಿ ಕೆಜೆ ಹಳ್ಳಿ ಪ್ರಕರಣದಲ್ಲಿಯೂ ಅದನ್ನೇ ಮಾಡಿದ್ದರು. ಅದು ಅವರ ಮತ್ತು ಅವರ ಪಕ್ಷದ ನಿಲುವು. ಅವರು ಕಾಂಗ್ರೆಸ್ ಪಕ್ಷದ ಶಾಸಕರು ಹಾಗೂ ಅವರ ನಾಯಕರು ಅದರ ಬಗ್ಗೆ ಯಾವುದೇ ಸ್ಪಷ್ಟೀಕರಣ ಕೂಡ ನೀಡದೇ ಇರುವುದರಿಂದ ಅವರ ನಿಲುವು ತಿಳಿಯುತ್ತದೆ ಎಂದರು.
ಕೇಂದ್ರ ಗೃಹ ಸಚಿವರು ರಾಜ್ಯಕ್ಕೆ ಭೇಟಿ ನೀಡುವ ಸಂದರ್ಭದಲ್ಲಿ ಪಿ.ಎಫ್ .ಐ, ಎಸ್.ಡಿ.ಪಿ.ಐ ಸಂಘಟನೆಗಳನ್ನು ಬ್ಯಾನ್ ಮಾಡುವ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿ, ಅಲ್ಲಿ ಚರ್ಚೆಯಾಗುವುದಿಲ್ಲ. ಪಿ.ಎಫ್.ಐ ಕರ್ನಾಟಕದಲ್ಲಿ ಮಾತ್ರವಲ್ಲ ಅವರ ಚಟುವಟಿಕೆಗಳು ಸೀಮಿತವಾಗಿಲ್ಲ.ಉತ್ತರಪ್ರದೇಶ, ಕೇರಳ ಮಹಾರಾಷ್ಟ್ರದಲ್ಲಿಯೂ ಇದೆ. ಅದರ ಸಮಗ್ರ ಚಟುವಟಿಕೆಗಳ ಗೃಹ ಇಲಾಖೆ ಕ್ರಮ ಕೈಗೊಳ್ಳುತ್ತದೆ ಎಂದರು.
[30/04, 4:54 PM] Gurulingswami. Holimatha. Vv. Cm: *ಕೊಳದ ಮಠದ ಪೀಠಾಧ್ಯಕ್ಷ ಶಾಂತವೀರ ಮಹಾಸ್ವಾಮಿಗಳ ನಿಧನಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಂತಾಪ*
ಬೆಂಗಳೂರು: ಏಪ್ರಿಲ್ 30 : ಬೆಂಗಳೂರಿನ ಕೊಳದ ಮಠ ಮಹಾಸಂಸ್ಥಾನ ಮಠದ ಶಿವಾನುಭವ ಚರಮೂರ್ತಿ ಶ್ರೀ ಮ.ನಿ.ಪ್ರ ಡಾ: ಶ್ರೀ ಶಾಂತವೀರ ಮಹಾಸ್ವಾಮಿಗಳ ನಿಧನಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಯಿ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಧರ್ಮಜಾಗೃತಿ, ಸಮಾಜ ಸುಧಾರಣೆಯಲ್ಲಿ ನಿರತರಾಗಿದ್ದ ಸ್ವಾಮಿಗಳು ಬಸವ ತತ್ವಗಳ ಅನುಷ್ಠಾನಕ್ಕೆ ಶ್ರಮಿಸಿದ್ದರು. ಅವರ ನಿಧನದಿಂದ ಸಮಾಜಕ್ಕೆ ಅಪಾರ ನಷ್ಟವಾಗಿದೆ. ಅವರ ಆತ್ಮಕ್ಕೆ ಸದ್ಗತಿ ದೊರಕಲಿ. ಭಕ್ತರಿಗೆ ಅವರ ಅಗಲಿಕೆಯ ನೋವನ್ನು ಭರಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಮುಖ್ಯಮಂತ್ರಿಗಳು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.
[30/04, 5:46 PM] Gurulingswami. Holimatha. Vv. Cm: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ನವದೆಹಲಿಯಲ್ಲಿ ನಡೆದ ದೇಶದ ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳ ಹಾಗೂ ಹೈಕೋರ್ಟಿನ ಮುಖ್ಯ ನ್ಯಾಯಮೂರ್ತಿಗಳ ಸಭೆಯಲ್ಲಿ ಭಾಗವಹಿಸಿದ ನಂತರ ಕರ್ನಾಟಕ ಭವನದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ವಿಡಿಯೋ ಬೈಟ್..
[30/04, 6:34 PM] Gurulingswami. Holimatha. Vv. Cm: *ನವದೆಹಲಿ* ಏಪ್ರಿಲ್ 30 .. *ಮುಖ್ಯಮಂತ್ರಿ ಬಸವರಾಜ* *ಬೊಮ್ಮಾಯಿ ಅವರು ಇಂದು* *ನವದೆಹಲಿಯಲ್ಲಿ ನಡೆದ ದೇಶದ* *ಎಲ್ಲ ರಾಜ್ಯಗಳ* *ಮುಖ್ಯಮಂತ್ರಿಗಳ ಹಾಗೂ* *ಹೈಕೋರ್ಟಿನ ಮುಖ್ಯ* *ನ್ಯಾಯಮೂರ್ತಿಗಳ ಸಭೆಯಲ್ಲಿ* ಭಾಗವಹಿಸಿದ ನಂತರ *ಕರ್ನಾಟಕ ಭವನದಲ್ಲಿ* *ಮಾಧ್ಯಮದವರೊಂದಿಗೆ* ಮಾತನಾಡಿದರು
Post a Comment