ಬಿಜೆಪಿ ರಾಜ್ಯ ಕೋರ್ ಕಮಿಟಿ ಸಭೆ ವಿವರ ಗಳು ಇಲ್ಲಿವೆ

[14/05, 1:12 PM] Karunakar. Khasale. Bjp. Media: 14-05-2022
ಪ್ರಕಟಣೆಯ ಕೃಪೆಗಾಗಿ
ಬಿಜೆಪಿ ರಾಜ್ಯ ಕೋರ್ ಕಮಿಟಿ ಸಭೆ 
ಬೆಂಗಳೂರು: ಮಲ್ಲೇಶ್ವರದ ರಾಜ್ಯ ಬಿಜೆಪಿ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು ಪಕ್ಷದ ರಾಜ್ಯ ಕೋರ್ ಕಮಿಟಿ ಸಭೆ ನಡೆಯಿತು.
ಸಭೆಯಲ್ಲಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಮುಖ್ಯಮಂತ್ರಿ ಬಸವರಾಜ ಎಸ್. ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿಗಳಾದ ಬಿ. ಎಸ್. ಯಡಿಯೂರಪ್ಪ, ಜಗದೀಶ್ ಶೆಟ್ಟರ್, ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ, ರಾಜ್ಯ ಉಸ್ತುವಾರಿ ಅರುಣ್ ಸಿಂಗ್, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ, ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ, ಸಚಿವರಾದ ಎಂ. ಗೋವಿಂದ ಕಾರಜೋಳ, ಆರ್. ಅಶೋಕ್, ಡಾ. ಅಶ್ವತ್ಥನಾರಾಯಣ್, ಬಿ. ಶ್ರೀರಾಮುಲು, ವಿಧಾನ ಪರಿಷತ್ ಸದಸ್ಯ ಲಕ್ಷ್ಮಣ ಸವದಿ, ಪಕ್ಷದ ರಾಜ್ಯ ಉಪಾಧ್ಯಕ್ಷ ನಿರ್ಮಲ್ ಕುಮಾರ್ ಸುರಾಣಾ, ರಾಜ್ಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಅರುಣ್ ಕುಮಾರ್ ಅವರು ಉಪಸ್ಥಿತರಿದ್ದರು.                                                                                


                                                                                                                                                         

   ಕರುಣಾಕರ ಖಾಸಲೆ
 ಮಾಧ್ಯಮ ಸಂಚಾಲಕರು
    ಬಿಜೆಪಿ ಕರ್ನಾಟಕ
[14/05, 3:16 PM] Karunakar. Khasale. Bjp. Media: 14-05-2022
ಪ್ರಕಟಣೆಯ ಕೃಪೆಗಾಗಿ
ಹಿಂದುಳಿದ ವರ್ಗಗಳಿಗೆ ಮೀಸಲಾತಿ ತಪ್ಪಲು 
ಕಾಂಗ್ರೆಸ್ಸೇ ಕಾರಣ : ಸಿ.ಟಿ.ರವಿ
ಬೆಂಗಳೂರು: ಹಿಂದುಳಿದ ವರ್ಗಗಳಿಗೆ ಮೀಸಲಾತಿ ತಪ್ಪಲು ಕಾಂಗ್ರೆಸ್ಸೇ ಕಾರಣ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಅವರು ತಿಳಿಸಿದರು.
ಮಲ್ಲೇಶ್ವರದ ರಾಜ್ಯ ಬಿಜೆಪಿ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಮಹಾರಾಷ್ಟ್ರದ ಕಾಂಗ್ರೆಸ್ ಬೆಂಬಲಿತ ಸರಕಾರವು ಸರಿಯಾಗಿ ಸಮರ್ಥನೆ ಮಾಡಿ ಹಿಂದುಳಿದ ವರ್ಗದ ಹಿತಾಸಕ್ತಿಯನ್ನು ಎತ್ತಿ ಹಿಡಿಯದ ಕಾರಣ ಹೀಗಾಗಿದೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯರವರು ಸತ್ಯವನ್ನು ಮುಚ್ಚಿಡುವ ಕೆಲಸ ಮಾಡುತ್ತಿದ್ದು, ಇದು ಅವರ ವ್ಯಕ್ತಿತ್ವಕ್ಕೆ ಕಳಂಕ ತರುವಂತಿದೆ ಎಂದರು.
ನಮ್ಮ ಸರಕಾರ ಹಿಂದುಳಿದ ವರ್ಗಗಳ ಪರ ಇದೆ. ದೇಶದಲ್ಲಿ ಮೊದಲ ಬಾರಿಗೆ ಸಂವಿಧಾನಬದ್ಧವಾಗಿ ಹಿಂದುಳಿದ ವರ್ಗಗಳಿಗೆ ಆಯೋಗ ರಚಿಸಿದ ಬಿಜೆಪಿ ಸರಕಾರ; ನರೇಂದ್ರ ಮೋದಿಯವರ ಸರಕಾರ. ಹಿಂದುಳಿದ ವರ್ಗಗಳ ಹಿತಾಸಕ್ತಿ ಕಾಪಾಡಲು ನಾವು ಬದ್ಧರಿದ್ದೇವೆ ಎಂದು ತಿಳಿಸಿದರು.
ಮಹಾರಾಷ್ಟ್ರದ ನಿಮ್ಮದೇ ಸರಕಾರ ಮಾಡಿದ ತಪ್ಪಿನಿಂದ ಹೀಗಾಗಿದೆ ಎಂದು ಸಿದ್ದರಾಮಯ್ಯರಿಗೆ ನೆನಪು ಮಾಡುವುದಾಗಿ ತಿಳಿಸಿದರು. ನ್ಯಾಯಾಧೀಶರ ಪೀಠ ತಡೆಯಾಜ್ಞೆ ನೀಡಿದ್ದರಿಂದ ಬಿಬಿಎಂಪಿ ಚುನಾವಣೆ ಮಾಡಲು ಸಾಧ್ಯವಾಗಿಲ್ಲ ಎಂದು ಅವರು ಪ್ರಶ್ನೆಗೆ ಉತ್ತರಿಸಿದರು.
ರಾಜ್ಯಸಭೆಗೆ ಸ್ಪರ್ಧಿಸುವವರ ವಿವರವನ್ನು ಸಂಸದೀಯ ಮಂಡಳಿ ಅಂತಿಮಗೊಳಿಸಲಿದೆ ಎಂದು ಅವರು ಇನ್ನೊಂದು ಪ್ರಶ್ನೆಗೆ ಉತ್ತರ ನೀಡಿದರು. ರಾಷ್ಟ್ರಗೀತೆ, ಸಂವಿಧಾನವನ್ನು ವಿವಾದದ ವಿಷಯ ಮಾಡಬಾರದು. ಅದನ್ನು ಗೌರವಿಸಬೇಕು ಎಂದು ಮತ್ತೊಂದು ಪ್ರಶ್ನೆಗೆ ಉತ್ತರಿಸಿದರು.


                                                  

   ಕರುಣಾಕರ ಖಾಸಲೆ
 ಮಾಧ್ಯಮ ಸಂಚಾಲಕರು
    ಬಿಜೆಪಿ ಕರ್ನಾಟಕ
[14/05, 3:16 PM] Karunakar. Khasale. Bjp. Media: 14-05-2022
ಪ್ರಕಟಣೆಯ ಕೃಪೆಗಾಗಿ
ಸಚಿವಸಂಪುಟದ ಕುರಿತು ಸಿಎಂ ನಿರ್ಧಾರ- ಅರುಣ್ ಸಿಂಗ್
ಬೆಂಗಳೂರು: ರಾಜ್ಯ ಸಚಿವಸಂಪುಟ ಪುನಾರಚನೆ ಕುರಿತು ಮುಖ್ಯಮಂತ್ರಿ ಸಕಾಲದಲ್ಲಿ ನಿರ್ಧರಿಸಲಿದ್ದಾರೆ ಎಂದು ಬಿಜೆಪಿ ರಾಜ್ಯ ಉಸ್ತುವಾರಿ ಮತ್ತು ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ ಅವರು ತಿಳಿಸಿದರು.
ಮಲ್ಲೇಶ್ವರದ ರಾಜ್ಯ ಬಿಜೆಪಿ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು ಪತ್ರಕರ್ತರ ಪ್ರಶ್ನೆಗಳಿಗೆ ಉತ್ತರಿಸಿದರು. ಸಂಪುಟ ಪುನಾರಚನೆಯು ಮುಖ್ಯಮಂತ್ರಿಯ ಪರಮಾಧಿಕಾರ ಎಂದೂ ಅವರು ನಗುತ್ತ ನುಡಿದರು.
ರಾಜ್ಯಸಭಾ ಸದಸ್ಯರು, ವಿಧಾನಪರಿಷತ್ ಸದಸ್ಯತ್ವಕ್ಕೆ ಸ್ಪರ್ಧಿಸಲು ಬಯಸುವವರ ಪಟ್ಟಿಯನ್ನು ರಾಜ್ಯ ಕೋರ್ ಕಮಿಟಿ ಮತ್ತು ರಾಜ್ಯ ಚುನಾವಣಾ ಸಮಿತಿಯು ಕೇಂದ್ರ ಸಂಸದೀಯ ಮಂಡಳಿಗೆ ಶಿಫಾರಸು ಮಾಡುತ್ತದೆ. ಕೇಂದ್ರ ಸಂಸದೀಯ ಮಂಡಳಿಯು ರಾಜ್ಯಸಭಾ ಸದಸ್ಯರು, ವಿಧಾನಪರಿಷತ್ ಸದಸ್ಯತ್ವಕ್ಕೆ ಸ್ಪರ್ಧಿಸುವ ಅಭ್ಯರ್ಥಿಗಳ ಹೆಸರನ್ನು ಅಂತಿಮಗೊಳಿಸುತ್ತದೆ ಎಂದು ಅವರು ಇನ್ನೊಂದು ಪ್ರಶ್ನೆಗೆ ಉತ್ತರ ಕೊಟ್ಟರು.
ಕಾಂಗ್ರೆಸ್ ಪಕ್ಷದೊಳಗೆ ಗೊಂದಲಗಳಿವೆ. ಬಿಜೆಪಿಯಲ್ಲಿ ನಾಯಕತ್ವ ಮತ್ತಿತರ ಯಾವುದೇ ಗೊಂದಲಗಳಿಲ್ಲ ಎಂದೂ ಅವರು ಮತ್ತೊಂದು ಪ್ರಶ್ನೆಗೆ ಉತ್ತರಿಸಿದರು.
                      

   ಕರುಣಾಕರ ಖಾಸಲೆ
 ಮಾಧ್ಯಮ ಸಂಚಾಲಕರು
    ಬಿಜೆಪಿ ಕರ್ನಾಟಕ

Post a Comment

Previous Post Next Post