ಕೃಷ್ಣ ಭೂಮಿಯಲ್ಲಿ ರಾಜ್ಯ ಪದಾಧಿಕಾರಿಗಳ ಸಭೆ

10-05-2022
ಪ್ರಕಟಣೆಯ ಕೃಪೆಗಾಗಿ
ಕೃಷ್ಣ ಭೂಮಿಯಲ್ಲಿ ರಾಜ್ಯ ಪದಾಧಿಕಾರಿಗಳ ಸಭೆ 
ಬೆಂಗಳೂರು: ಬಿಜೆಪಿ ರಾಜ್ಯ ಪದಾಧಿಕಾರಿಗಳ ಸಭೆಯು ಇಂದು (10.05.2022) ಉಡುಪಿಯ ಕಿದಿಯೂರ್ ಹೋಟೆಲ್‍ನಲ್ಲಿ ನಡೆಯಿತು. ಈ ಸಭೆಯನ್ನು ಶಂಖನಾದವನ್ನು ಮೊಳಗಿಸುವ ಮೂಲಕ ಉದ್ಘಾಟಿಸಿದರು. 
ಈ ಉದ್ಘಾಟನಾ ಸಮಾರಂಭದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರು ಮತ್ತು ಸಂಸದರೂ ಆದ ನಳಿನ್‍ಕುಮಾರ್ ಕಟೀಲ್, ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್. ಅಂಗಾರ, ರಾಜ್ಯದ ಸಚಿವರಾದ ಸುನೀಲ್ ಕುಮಾರ್, ಮಂಗಳೂರು ವಿಭಾಗ ಪ್ರಭಾರಿಗಳಾದ ಉದಯಕುಮಾರ್ ಶೆಟ್ಟಿ, ಶಾಸಕರಾದ ರಘುಪತಿ ಭಟ್ಟ್, ಲಾಲಾಜಿ ಆರ್ ಮೆಂಡನ್ ಮತ್ತು ಜಿಲ್ಲಾಧ್ಯಕ್ಷರಾದ ಕುಯಿಲಾಡಿ ಸುರೇಶ್ ನಾಯಕ್ ಅವರು ಉದ್ಘಾಟನೆಯನ್ನು ನೆರವೇರಿಸಿದರು. ಈ ಸಂದರ್ಭದಲ್ಲಿ ರಾಜ್ಯ ಪದಾಧಿಕಾರಿಗಳು, ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.  
            


ಕರುಣಾಕರ ಖಾಸಲೆ
ಮಾಧ್ಯಮ ಸಂಚಾಲಕರು
ಬಿಜೆಪಿ ಕರ್ನಾಟಕ

Post a Comment

Previous Post Next Post