ರಾಜ್ಯ ಮಟ್ಟದಲ್ಲಿ ಪ್ರಾಯೋಗಿಕವಾಗಿ ಗೋ ಮಾತಾ ಸಹಕಾರ ಸಂಘ .... ಮೆಣಸಿನಕಾಯಿಯಿಂದ ಔಷಧಿಯುಕ್ತ ತೈಲ ಉತ್ಪಾದನೆಯ ಸಾಧ್ಯತೆಗಳ ಬಗ್ಗೆ ಕಾರ್ಯಸಾಧ್ಯತಾ ವರದಿ

[06/05, 8:28 PM] Gurulingswami. Holimatha. Vv. Cm: *ರಾಜ್ಯ ಮಟ್ಟದಲ್ಲಿ ಪ್ರಾಯೋಗಿಕವಾಗಿ ಗೋ ಮಾತಾ ಸಹಕಾರ ಸಂಘ ಸ್ಥಾಪಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚನೆ*

ಬೆಂಗಳೂರು, ಮೇ 6 :
 
ರಾಜ್ಯ ಮಟ್ಟದಲ್ಲಿ ಪ್ರಾಯೋಗಿಕವಾಗಿ ಗೋ ಮಾತಾ ಸಹಕಾರ ಸಂಘ ಸ್ಥಾಪಿಸಿ ಗೋ ಉತ್ಪನ್ನಗಳಿಗೆ ಮಾರುಕಟ್ಟೆ ಒದಗಿಸುವ ನಿಟ್ಟಿನಲ್ಲಿ  ರೂಪುರೇಷೆಗಳನ್ನು ಸಿದ್ದಪಡಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚಿಸಿದರು.

2022-23 ನೇ ಸಾಲಿನ ಆಯವ್ಯಯ ಘೋಷಣೆಗಳ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಅವರ ಅಧ್ಯಕ್ಷತೆಯಲ್ಲಿ ಇಂದು  ನಡೆದ ಪಶುಸಂಗೋಪನಾ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು. 

ಸಭೆಯ ಮುಖ್ಯಾಂಶಗಳು:

1.ಗ್ರಾಮೀಣ ಪ್ರದೇಶಗಳ ಪಶುಚಿಕಿತ್ಸಾಲಯಗಳನ್ನು ಹೊಸ ಮಾದರಿಯಲ್ಲಿ ಮಾಡಬೇಕು. ಸಿಬ್ಬಂದಿ ನೇಮಕಾತಿಗಾಗಿ ಡಿಪ್ಲೊಮಾ ವಿದ್ಯಾರ್ಥಿಗಳನ್ನು ಇದಕ್ಕಾಗಿ ನೇಮಿಸುವುದು. 50 ಪಶುಚಿಕಿತ್ಸಾಲಯಗಳನ್ನು ಬಾಡಿಗೆ ಆಧಾರದ ಮೇಲೆ ಪ್ರಾರಂಭಿಸಲು ಅನುಮತಿ ನೀಡುವುದು. 

2. ಜೆ.ಒ.ಸಿ ಮತ್ತು ಡಿಪ್ಲೊಮಾ ಮಾಡಿರುವ ಅಭ್ಯರ್ಥಿಗಳನ್ನು  ನೇಮಿಸಿಕೊಳ್ಳುವುದು.

3. ಹಾವೇರಿ ಜಿಲ್ಲೆಯಲ್ಲಿ ಒಂದು ಲಕ್ಷ ಲೀಟರ್ ಸಾಮರ್ಥ್ಯದ ಮೆಗಾ ಡೈರಿಯಡಿ  ಯುಹೆಚ್ ಟಿ ಘಟಕಕ್ಕೆ  ಅಗತ್ಯವಿರುವ 20 ಕೋಟಿ ರೂ.ಗಳ ಅನುದಾನವನ್ನು ಒದಗಿಸಲಾಗುವುದು. ಅದಕ್ಕೆ ಪ್ರಸ್ತಾವನೆಯನ್ನು ಸಲ್ಲಿಸುವುದು.  

4. ಗೋಶಾಲೆಗಳ ಸಂಖ್ಯೆಯನ್ನು 31 ರಿಂದ 100 ಕ್ಕೆ ಹೆಚ್ಚಿಸುವ ಸಂಬಂಧ 70 ಹೊಸ ಗೋಶಾಲೆಗಳನ್ನು ಸ್ಥಾಪಿಸಲು ನಿವೇಶನಗಳನ್ನು ಗೊತ್ತು ಮಾಡುವುದು

5. ಪುಣ್ಯಕೋಟಿ ದತ್ತು ಯೋಜನೆಯ ಪೋರ್ಟಲ್ ನ್ನು ಜೂನ್ ಮಾಹೆಯ ಅಂತ್ಯದಲ್ಲಿ  ಪ್ರಾರಂಭಿಸುವುದು. ಯಾವ ಗೋಶಾಲೆಯಲ್ಲಿ ಯಾವ ಗೋವುಗಳನ್ನು ದತ್ತು ಪಡೆಯಲಾಗಿದೆ ಎನ್ನುವುದನ್ನು ಪೋರ್ಟಲ್ ನಲ್ಲಿ ಬಿಂಬಿಸುವುದು

6.  ಗೋ ತಳಿಗಳನ್ನು ಸಂರಕ್ಷಿಸಲು ಮತ್ತು ಅವುಗಳ ಸಂತತಿಯನ್ನು ಹೆಚ್ಚಿಸಲು ಕೆಎಂಎಫ್ ಮೂಲಕ 2000 ಗೋ ತಳಿಗಳನ್ನು ರೈತರಿಗೆ ಹಂಚಿಕೆ ಮಾಡುವುದು. ಈ ವರ್ಷ ಇದಕ್ಕಾಗಿ  4 ಕೋಟಿ ಅನುದಾನ ಒದಗಿಸುವುದು.

7. ಶಿವಮೊಗ್ಗದ  ಪಶುವೈದ್ಯಕೀಯ ಕಾಲೇಜಿನಲ್ಲಿ ಗೋ ಉತ್ಪನ್ನಗಳ ತಾಂತ್ರಿಕತೆ ಮತ್ತು ಪ್ರಾಮಾಣೀಕರಣದ ಅಭಿವೃದ್ಧಿಗಾಗಿ  ಸಂಶೋಧನಾ  ಕೋಶವನ್ನು ಸ್ಥಾಪನೆಗೆ ಕ್ರಮ ವಹಿಸುವುದು.

8.ಕುರಿಗಾಹಿಗಳಿಗೆ  ವಸತಿ ಸೌಕರ್ಯದ ಜೊತೆಗೆ ಕುರಿ ದೊಡ್ಡಿ ನಿರ್ಮಿಸಲು ಐದು ಲಕ್ಷ ಸಹಾಯಧನ. ರಾಜೀವ್ ಗಾಂಧಿ ವಸತಿ ನಿಗಮಕ್ಕೆ ಈ ಕಾರ್ಯಕ್ರಮವನ್ನು ವಹಿಸಿ, ನಿವೇಶನವಿದ್ದವರಿಗೆ ಮನೆ ನಿರ್ಮಿಸಿಕೊಡುವುದು. ನರೇಗಾ ಮತ್ತು ರಾಜೀವ್ ಗಾಂಧಿ ವಸತಿ ನಿಗಮ ಸೇರಿಸಿ 5000 ಗುರಿ ನಿಗದಿಪಡಿಸಿಕೊಳ್ಳುವುದು.
[06/05, 8:40 PM] Gurulingswami. Holimatha. Vv. Cm: *ಮೆಣಸಿನಕಾಯಿಯಿಂದ  ಔಷಧಿಯುಕ್ತ ತೈಲ ಉತ್ಪಾದನೆಯ ಸಾಧ್ಯತೆಗಳ ಬಗ್ಗೆ ಕಾರ್ಯಸಾಧ್ಯತಾ ವರದಿ ಸಿದ್ಧಪಡಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚನೆ*

ಬೆಂಗಳೂರು, ಮೇ 06 :

 ಸೌಂದರ್ಯವರ್ಧಕಗಳಲ್ಲಿ ಹಾಗೂ ಔಷಧಗಳಲ್ಲಿ ಬಳಸಲಾಗುವ ಮೆಣಸಿನಕಾಯಿಯಿಂದ ಔಷಧಿಯುಕ್ತ ತೈಲ ಉತ್ಪಾದನೆಯ ಸಾಧ್ಯತೆಗಳ ಬಗ್ಗೆ ರೂಪುರೇಷೆ ಸಿದ್ಧಪಡಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚನೆ ನೀಡಿದರು.

2022-23 ನೇ ಸಾಲಿನ ಆಯವ್ಯಯ ಘೋಷಣೆಗಳ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಅವರ ಅಧ್ಯಕ್ಷತೆಯಲ್ಲಿ ಇಂದು  ನಡೆದ ತೋಟಗಾರಿಕಾ  ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.  
ಸಭೆಯ ಮುಖ್ಯಾಂಶಗಳು:

1. ಮೆಣಸು ಮತ್ತು ಇತರೆ ಸಾಂಬಾರು ಪದಾರ್ಥಗಳ ಗುಣಮಟ್ಟವನ್ನು ಹೆಚ್ಚಿಸಲು  ಬ್ಯಾಡಗಿಯಲ್ಲಿ ಸಂಶೋಧನಾ ಕೇಂದ್ರ ಸ್ಥಾಪಿಸುವ ಬಗ್ಗೆ  ವ್ಯಾಪಾರಸ್ಥರ ಸಲಹೆ ಪಡೆಯುವುದು.
  
2. ತೋಟಗಾರಿಕೆಯಲ್ಲಿ ವಿನೂತನ ತಂತ್ರಜ್ಞಾನ ಹಾಗೂ ಯಂತ್ರೋಪಕರಣಗಳನ್ನು ಅಳವಡಿಸುವ ನಿಟ್ಟಿನಲ್ಲಿ ಐಐಎಸ್ಸಿ ತಜ್ಞರಿಂದ ಸಲಹೆ ಪಡೆದುಕೊಳ್ಳುವುದು.

3. ಕೊಡಗು ಮತ್ತು ಜಾಂಬೋಟಿ ಜೇನುತುಪ್ಪಗಳನ್ನು ಜನಪ್ರಿಯಗೊಳಿಸಲು ಹಾಗೂ ಹೆಚ್ಚಿಸಲು ಸುಧಾರಿತ ಮಾರುಕಟ್ಟೆ ವ್ಯವಸ್ಥೆ ಕೈಗೊಳ್ಳಲು ಕ್ರಮ ವಹಿಸುವುದು.

4. ಬೆಂಗಳೂರಿನ ಯಲಹಂಕದಲ್ಲಿ ಅಟಲ್ ಬಿಹಾರಿ ವಾಜಪೇಯಿ ಉದ್ಯಾನವನವನ್ನು ಅಭಿವೃದ್ಧಿಪಡಿಸಲು ಉದ್ದೇಶಿಸಿದ್ದ ಸ್ಥಳವನ್ನು ತೋಟಗಾರಿಕೆ ಇಲಾಖೆಗೆ ಒಳಪಡುವ ಜಮೀನಿಗೆ ಬದಲಾಯಿಸಲು ಸೂಚಿಸಿದರು.
[06/05, 9:15 PM] Gurulingswami. Holimatha. Vv. Cm: *ಅಭಿವೃದ್ಧಿ ಆಕಾಂಕ್ಷಿ ತಾಲ್ಲೂಕುಗಳ ಅಭಿವೃದ್ಧಿ ಕಾರ್ಯಕ್ರಮಗಳಿಗೆ ನಿರ್ದಿಷ್ಟ ಮಾರ್ಗಸೂಚಿ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ*

ಬೆಂಗಳೂರು, ಮೇ 6 :  

 ಪ್ರಾದೇಶಿಕ ಸಮತೋಲನ ಯೋಜನೆಯಡಿ ನಿರ್ದಿಷ್ಟ ಕಾರ್ಯಕ್ರಮಗಳಿಗೆ ಮಾರ್ಗಸೂಚಿಗಳನ್ನು ರೂಪಿಸಿ ಅಭಿವೃದ್ಧಿ ಆಕಾಂಕ್ಷಿ ತಾಲ್ಲೂಕುಗಳಲ್ಲಿ ಯೋಜನೆಗಳನ್ನು ಅನುಷ್ಠಾನ ಮಾಡಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚನೆ ನೀಡಿದರು.

2022-23 ನೇ ಸಾಲಿನ ಆಯವ್ಯಯ ಘೋಷಣೆಗಳ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಅವರ ಅಧ್ಯಕ್ಷತೆಯಲ್ಲಿ ಇಂದು  ನಡೆದ ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.

ಸಭೆಯ ಮುಖ್ಯಾಂಶಗಳು:

1. ವಿಶೇಷ ಅಭಿವೃದ್ಧಿ ಯೋಜನೆಯಡಿ ಆರೋಗ್ಯ, ಶಿಕ್ಷಣ ಹಾಗೂ ಪೌಷ್ಟಿಕತೆಗೆ ಪ್ರಾಶಸ್ತ್ಯ  ನೀಡಲು ಸೂಚಿಸಿದರು.

2. ಕಲ್ಯಾಣ ಕರ್ನಾಟಕ ಪ್ರಾದೇಶಿಕ ಅಭಿವೃದ್ದಿ ಮಂಡಳಿಗೆ 1500 ಕೋಟಿ ರೂ.ಗಳ ಮಾಕ್ರೋ ಅನುದಾನ ಹಾಗೂ ಎಸ್.ಡಿ.ಪಿ ಯೋಜನೆಯಡಿ ಎಷ್ಟು ಶಾಲೆಗಳು, ಅಂಗನವಾಡಿಗಳಿಗೆ,  ಆರೋಗ್ಯ ಕೇಂದ್ರಗಳಿಗೆ ಅನುದಾನ ನೀಡಲಾಗಿದೆ ಹಾಗೂ ಇಲಾಖೆಗಳಿಂದ ನಿಯಮಿತ ಕಾರ್ಯಕ್ರಮಗಳಲ್ಲಿ ಎಷ್ಟು ಅನುದಾನ ವೆಚ್ಚವಾಗುತ್ತಿದೆ ಎನ್ನುವ ಕುರಿತು   ಮಾಸ್ಟರ್ ಪ್ಲಾನ್ ರೂಪಿಸಿ  ಮೇಲ್ವಿಚಾರಣೆ ಮಾಡುವುದು.

3. ಅವಲೋಕನ ತಂತ್ರಾಂಶದ ಮೂಲಕ ಜಿಲ್ಲೆ/ ತಾಲ್ಲೂಕುವಾರು ಆರ್ಥಿಕ ಮತ್ತು ಸುಸ್ಥಿರ ಅಭಿವೃದ್ಧಿ ಗುರಿಗಳ ಶ್ರೇಯಾಂಕವನ್ನು ತ್ರೈಮಾಸಿಕವಾಗಿ ಮಾಡುವುದು

4. ಎಸ್‍ಡಿಪಿ ಯಡಿ ಅನುದಾನವನ್ನು  ಅಭಿವೃದ್ಧಿ ಆಕಾಂಕ್ಷಿ ತಾಲ್ಲೂಕು/ ಜಿಲ್ಲೆಗಳಲ್ಲಿ ಕಾರ್ಯಕ್ರಮಗಳ ಅನುಷ್ಠಾನಕ್ಕೆ ಒದಗಿಸಬೇಕು. ಉಳಿದ ಇಲಾಖಾ ಕಾರ್ಯಕ್ರಮಗಳೊಂದಿಗೆ ಸೇರ್ಪಡೆ ಮಾಡಬಾರದು.

5.ಸಚಿವ ಸಂಪುಟ ಉಪಸಮಿತಿಯು ನೀತಿ ಆಯೋಗದ ಸೂಚಕಗಳ ಪ್ರಕಾರ ವಲಯವಾರು ಆರೋಗ್ಯ, ಕೃಷಿ, ಜಲಸಂಪನ್ಮೂಲ, ಆರ್ಥಿಕ ಸೇರ್ಪಡೆ ಮತ್ತು ಕೌಶಲ್ಯಾಭಿವೃದ್ಧಿ, ಮೂಲಸೌಕರ್ಯ ಸೇರಿದಂತೆ  3000 ಕೋಟಿ ರೂ.ಗಳ  ಅನುದಾನ ಹಂಚಿಕೆ ಮಾಡಲು ಶಿಫಾರಸ್ಸು ಮಾಡಿದೆ.
[06/05, 9:22 PM] Gurulingswami. Holimatha. Vv. Cm: *ಪ್ರತಿ ಕಂದಾಯ ವಿಭಾಗಗಳಲ್ಲಿನ ನೂರು ಗ್ರಾಮಗಳಲ್ಲಿ ಹೊಸ ಆರ್.ಟಿ.ಸಿಗಳನ್ನು*
*ಆಗಸ್ಟ್ ಒಳಗೆ ವಿತರಿಸಲು  ಕ್ರಮಕ್ಕೆ ಸೂಚನೆ*:  *ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚನೆ*

ಬೆಂಗಳೂರು, ಮೇ 06: ರಾಜ್ಯದ ಎಲ್ಲಾ ಕಂದಾಯ ವಿಭಾಗಗಳ ತಲಾ 100 ಗ್ರಾಮಗಳಲ್ಲಿ ಹೊಸ ಆರ್.ಟಿ.ಸಿಗಳನ್ನು ಆಗಸ್ಟ್ ಮಾಹೆಯೊಳಗೆ ವಿತರಿಸಲು ಕ್ರಮ ವಹಿಸಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚಿಸಿದರು.  

2022-23 ನೇ ಸಾಲಿನ ಆಯವ್ಯಯ ಘೋಷಣೆಗಳ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಅವರ ಅಧ್ಯಕ್ಷತೆಯಲ್ಲಿ ಇಂದು  ನಡೆದ ಕಂದಾಯ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.  

ಸಭೆಯ ಮುಖ್ಯಾಂಶಗಳು:  
1. ಕೃಷಿ ಜಮೀನು ಮತ್ತು ಇತರೆ ಸ್ವತ್ತುಗಳ ಡ್ರೋನ್ ಆಧಾರಿತ ಸರ್ವೆ ಕಾರ್ಯವನ್ನು ಕೈಗೊಂಡು ದಾಖಲೆಗಳ ಡಿಜಿಟಲೀಕರಣವಾಗಬೇಕು. ಪೋಡಿ ಕೆಲಸಗಳು ಸೂಕ್ತವಾಗಿ ಆಗಬೇಕು.

2. ವಿವಿಧ ಸಾಮಾಜಿಕ ಭದ್ರತಾ ಪಿಂಚಣಿ ಯೋಜನೆಗಳಡಿ 59.45 ಲಕ್ಷ  ಫಲಾನುಭವಿಗಳಿಗೆ ನೀಡುತ್ತಿರುವ  ಮಾಶಾಸನ ಹೆಚ್ಚಳವಾಗಿದೆ. ಅವಿವಾಹಿತ, ವಿಚ್ಛೇದಿತ ಮಹಿಳೆಯರಿಗೆ ಹಾಗೂ ಲಿಂಗತ್ವ ಅಲ್ಪಸಂಖ್ಯಾತರಿಗೆ 1.32 ಲಕ್ಷ ಫಲಾನುಭವಿಗಳಿಗೆ ಅನುಕೂಲವಾಗಲಿದೆ.  ಯೋಜನೆಗಳನ್ನು ಫಲಾನುಭವಿಗಳಿಗೆ ತಲುಪಿಸುವಲ್ಲಿ ಉತ್ತಮ ಕೆಲಸವಾಗಿರುವ ಬಗ್ಗೆ ಮುಖ್ಯಮಂತ್ರಿಗಳು ಮೆಚ್ಚುಗೆ ವ್ಯಕ್ತಪಡಿಸಿದರು.

3. ಆರ್.ಟಿ.ಸಿ ಗಳನ್ನು ಅಧಿಕೃತವಾಗಿ ನೀಡದಿದ್ದರೆ ವ್ಯಾಜ್ಯಗಳು ಬಗೆಹರಿಯುವುದಿಲ್ಲ. ಈ ಬಗ್ಗೆ ಪರಿಶೀಲನಾ ಕಾರ್ಯವನ್ನು ಹಂತ ಹಂತವಾಗಿ ಮಾಡಬೇಕು.   ಭೂ ವಿವಾದಗಳ ಪ್ರಕರಣಗಳಿಂದ ಜನರಿಗೆ ತೊಂದರೆಯಾಗದಂತೆ ಅಧಿಕಾರಿಗಳು ಸೂಕ್ತ ಗಮನ ಹರಿಸಬೇಕು.

4. ಬದಲಾದ ಸನ್ನಿವೇಶದಲ್ಲಿ ಬದಲಾದ ಆಡಳಿತ ವ್ಯವಸ್ಥೆ ಇರಬೇಕು. ಹಳೆ ವ್ಯವಸ್ಥೆಯಲ್ಲಿ ಪ್ರತಿದಿನಕ್ಕೆ 3-4 ನೋಂದಣಿಯಾಗುತ್ತದೆ.  

5. ರಾಜ್ಯದ ಪ್ರತಿ ವಿಭಾಗದಲ್ಲಿ   4 ಅಥವಾ 5 ತಾಲ್ಲೂಕಗಳಲ್ಲಿ ನೋಂದಣಿ   ಪ್ರಕ್ರಿಯೆಯನ್ನು  ಕೈಗೊಳ್ಳಲು ಸೂಚಿಸಿದರು.

6. ಸಾರ್ವಜನಿಕರಿಗೆ ಸೌಕರ್ಯಗಳನ್ನು ಒದಗಿಸುವ ನಿಟ್ಟಿನಲ್ಲಿ ಬೆಂಗಳೂರಿಗೆ ಹೆಚ್ಚಿನ ಉಪನೋಂದಣಾಧಿಕಾರಿಗಳ ಕಚೇರಿಯನ್ನು ಸ್ಥಾಪಿಸುವ ಬಗ್ಗೆ ಕ್ರಮ ವಹಿಸಬೇಕು.

7. ಎಲ್ಲಾ ಪಾರಂಪರಿಕ ನೋಂದಾಯಿತ ಶಾಶ್ವತ ದಾಖಲೆಗಳ ಆಧುನೀಕರಣ ಆಗಬೇಕು.

8. ಪಂಡರಾಪುರದಲ್ಲಿ 7.50 ಕೋಟಿ ರೂ.ಗಳ ವೆಚ್ಚದಲ್ಲಿ ಅತಿಥಿಗೃಹ ನಿರ್ಮಾಣದಲ್ಲಿ ಕರ್ನಾಟಕದ ಸ್ಥಳ ಲಭ್ಯವಿದ್ದು, ಡಾರ್ಮಿಟರಿಗಳನ್ನು ಕಟ್ಟಲು ಹೆಚ್ಚಿನ ಆದ್ಯತೆ ನೀಡುವುದು.  ಪ್ರಸ್ತಾವನೆ ಮರು ಯೋಜಿಸಿ ಜುಲೈ 2 ರೊಳಗೆ ಶಂಕುಸ್ಥಾಪನೆ ನೆರವೇರಿಸಲು ಕ್ರಮ ವಹಿಸುವುದು.  

8. ಸಣ್ಣ ತಾಲ್ಲೂಕುಗಳಿಗೆ ಮಿನಿವಿಧಾನಸೌಧ ವಿನ್ಯಾಸಗೊಳಿಸುವಾಗ ಅಗತ್ಯವಿರುವ ಇಲಾಖೆಗಳನ್ನು ಗಮನದಲ್ಲಿ ಇಟ್ಟುಕೊಳ್ಳುವುದು. ಲಭ್ಯವಿರುವ ಸ್ಥಳಗಳ ಪಟ್ಟಿ ನೀಡುವುದು ಹಾಗೂ ಎರಡು ವರ್ಷಗಳ ಅವಧಿಗೆ ಕಟ್ಟಡ ನಿರ್ಮಾಣ ಪೂರ್ಣಗೊಳ್ಳಬೇಕು. ಪ್ರಮುಖ ಇಲಾಖೆಗಳು ಕಟ್ಟಡದಲ್ಲಿ ಕಾರ್ಯನಿರ್ವಹಿಸಬೇಕು.

Post a Comment

Previous Post Next Post