[13/05, 11:23 AM] Gurulingswami. Holimatha. Vv. Cm: *ವಿಧಾನ ಪರಿಷತ್ ಹಾಗೂ ರಾಜ್ಯಸಭೆ ಚಿನಾವಣೆ*: *ನಾಳೆ ಕೋರ್ ಕಮಿಟಿ ಸಭೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ*
ಬೆಂಗಳೂರು, ಮೇ 13 :
ನಾಳೆ ಬೆಂಗಳೂರಿನಲ್ಲಿ ರಾಜ್ಯ ಬಿಜೆಪಿ ಕೋರ್ ಕಮಿಟಿ ಸಭೆ ನಡೆಯಲಿದ್ದು, ಅದೇ ಸಭೆಯಲ್ಲಿ ವಿಧಾನ ಪರಿಷತ್ ಹಾಗೂ ರಾಜ್ಯ ಸಭೆಗೆ ನಡೆಯಲಿರುವ ಚುನಾವಣೆ ಬಗ್ಗೆ ಚರ್ಚೆ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಅವರು ಇಂದು ಬೆಂಗಳೂರಿನ ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡುತ್ತಿದ್ದರು.
ನೆನ್ನೆ ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ ಕುಮಾರ ಕಟೀಲ ಅವರವಜತೆ ಬೇರೆ ವಿಚಾರ ಚರ್ಚೆ ಆಗಿದೆ. ಕೋರ್ ಕಮೀಟಿ ಸಭೆಯಲ್ಲಿ ಈ ಬಗ್ಗೆ ಸಮಗ್ರವಾಗಿ ಚರ್ಚೆ ನಡೆಯಲಿದೆ ಎಂದು ಅವರು ಹೇಳಿದರು.
ಹಿಂದುಳಿದ ವರ್ಗಗಳ ಮೀಸಲಾತಿಗೆ ಸಂಬಂಧಿಸಿದಂತೆ ಬಿಬಿಎಂಪಿ ಪ್ರಕರಣ ಸರ್ವೋಚ್ಚ ನ್ಯಾಯಾಲಯದಲ್ಲಿ ವಿಚಾರಣೆಗೆ ಬಾಕಿ ಇದೆ. ಜಿಲ್ಲಾ ಪಂಚಾಯತ್ ಹಾಗೂ ತಾಲ್ಲೂಕು ಪಂಚಾಯತ್ ಬಗ್ಗೆ ಕಾನೂನಾತ್ಮಕವಾಗಿ ಹಾಗೂ ಸಂವಿಧಾನಾತ್ಮಕವಾಗಿ ಒಬಿಸಿ ಮೀಸಲಾತಿ ಮಾಡಲೇಬೇಕಿದೆ. ಅದಕ್ಕೆ ಈಗಾಗಲೇ ರಚಿಸಲಾಗಿರುವ ಸಮಿತಿ ತನ್ನ ವರದಿ ಸಲ್ಲಿಸಲು ಸಮಯಾವಕಾಶ ನೀಡುವಂತೆ ಅಥವಾ ಹಳೆಯ ಮೀಸಲಾತಿ ಪ್ರಕಾರ ಚುನಾವಣೆ ಮಾಡಲು ಅವಕಾಶ ನೀಡುವಂತೆ ಕೋರಲಾಗಿದೆ. ಇದಕ್ಕೆ ಬಹುತೇಕ ಅವಕಾಶ ಸಿಗುವ ಭರವಸೆ ಇದೆ ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
[13/05, 11:24 AM] Gurulingswami. Holimatha. Vv. Cm: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು 4 ನೇ ವಿಶ್ವ ಮಾದಿಗ ದಿನದ ಅಂಗವಾಗಿ ಬೆಂಗಳೂರಿನಲ್ಲಿ ಆಯೋಜಿಸಲಾಗಿದ್ದ ರಾಷ್ಟ್ರೀಯ ಸಮಾವೇಶವನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಕೇಂದ್ರ ಸಚಿವ ಎ. ನಾರಾಯಣಸ್ವಾಮಿ, ಜಲ ಸಂಪನ್ಮೂಲ ಸಚಿವ ಗೋವಿಂದ ಕಾರಜೋಳ, ಲೋಕೋಪಯೋಗಿ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಅನಿಲಕುಮಾರ, ಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮಿಗಳು, ಮಾಜಿ ಸಚಿವ ಎಚ್ ಆಂಜನೇಯ, ರಾಜ್ಯ ಸರ್ಕಾರದ ನಿವೃತ್ತ ಮುಖ್ಯ ಕಾರ್ಯದರ್ಶಿ ರತ್ನಪ್ರಭಾ ಮತ್ತು ಇತರರು ಉಪಸ್ಥಿತರಿದ್ದರು.
[13/05, 11:38 AM] Gurulingswami. Holimatha. Vv. Cm: ಬೆಂಗಳೂರು, ಮೇ 13: ಇಂದು *ಮಾನ್ಯ ಮುಖ್ಯಮಂತ್ರಿ ಶ್ರೀ* *ಬಸವರಾಜ ಬೊಮ್ಮಾಯಿ ಅವರು* ಬೆಂಗಳೂರಿನ ಹೊಟೇಲ್ *ಲಲಿತ್* *ಅಶೋಕ್‍ನಲ್ಲಿ* *Intellectual Forum – MAC* (R) *Karnataka and National* *Intellectual Forum* – *MAC* *Visakhapatnam* ಇವರ ವತಿಯಿಂದ *ಆಯೋಜಿಸಿರುವ 4* *ನೇ* *ವಿಶ್ವ ಮಾದಿಗ ದಿನಾಚರಣೆ* ಹಾಗೂ *ಮಾದಿಗ* *ಸಮುದಾಯದ ಚಿಂತಕರ ಮತ್ತು* *ಬುದ್ದಿಜೀವಿಗಳ* ಕಾರ್ಯಾಗಾರ ಉದ್ಘಾಟನಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು *ಮಾತನಾಡಿದರು.*
[13/05, 12:49 PM] Gurulingswami. Holimatha. Vv. Cm: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಸಮಾಜ ಕಲ್ಯಾಣ ಇಲಾಖೆ ಡಾ. ಬಾಬು ಜಗಜೀವನ್ ರಾಮ್ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮ ಆಯೋಜಿಸಿದ್ದ ರಾಜ್ಯ ಮಟ್ಟದ ಚರ್ಮ ಕುಶಲಕರ್ಮಿಗಳ ಸಮಾವೇಶ ಹಾಗೂ ಚರ್ಮ ಕರಕುಶಲ ವಸ್ತು ಪ್ರದರ್ಶನ ಮತ್ತು ಮಾರಾಟ ಮೇಳವನ್ನು ನಗಾರಿ ಬಾರಿಸುವ ಮೂಲಕ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಕೇಂದ್ರ ಸಾಮಾಜಿಕ ನ್ಯಾಯ ಸಚಿವ ಎ ನಾರಾಯಣಸ್ವಾಮಿ,
ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಜಲ ಸಂಪನ್ಮೂಲ ಸಚಿವರಾದ ಗೋವಿಂದ ಕಾರಜೋಳ, ಉನ್ನತ ಶಿಕ್ಷಣ ಸಚಿವ ಡಾ. ಸಿಎನ್ ಅಶ್ವತ್ಥ ನಾರಾಯಣ, ಡಾ.ಬಾಬು ಜಗಜೀವನ್ ರಾಂ ಅಭಿವೃದ್ಧಿ ನಿಗಮದ ಅಧ್ಯಕ್ಷ ಲಿಂಗಣ್ಣ, ಸಂಸದ ಪಿ ಸಿ ಮೋಹನ್, ಶಾಸಕ ರಮೇಶಗೌಡ,ಎಂ ಸಿ ಆಂಡ ಎ ಸಂಸ್ಥೆ ಅಧ್ಯಕ್ಷ ಮುನಿಕೃಷ್ಣ ಮತ್ತು ಇತರರು ಉಪಸ್ಥಿತರಿದ್ದರು.
[13/05, 1:30 PM] Gurulingswami. Holimatha. Vv. Cm: *ಶಿಕ್ಷಣ, ಉದ್ಯೋಗ, ಮತ್ತು ಸಬಲೀಕರಣದ ಮೂಲಕ ಬದಲಾವಣೆ ಸಾಧ್ಯ*
ಬೆಂಗಳೂರು:
ಈ ದೇಶದ ಆರ್ಥಿಕತೆಯನ್ನು ಬಂಡವಾಳಶಾಹಿಗಳು ಮುನ್ನಡೆಸುತ್ತಿಲ್ಲ. ದುಡಿಯುವ ವರ್ಗ ದೇಶದ ಆರ್ಥಿಕತೆಯನ್ನು ಮುನ್ನಡೆಸುತ್ತಿದೆ. ಪಿರಾಮಿಡ್ ನ ತಳಹಂತದಲ್ಲಿರುವವರು ದೇಶವನ್ನು ನೈಜವಾಗಿ ಮುನ್ನಡೆಸುವವರು. ಅದಕ್ಕಾಗಿ ದುಡಿಯುವ ವರ್ಗಕ್ಕೆ ಅತಿ ಹೆಚ್ವಿನ ಕಾರ್ಯಕ್ರಮ ಹಾಗೂ ಅನುದಾನವನ್ನು ನನ್ನ ಸರ್ಕಾರ ಒದಗಿಸಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಅವರು ಇಂದು Intellectual Forum – MAC* ,Karnataka, and National Intellectual Forum , MAC, ವಿಶಾಖಪಟ್ಟಣಂ, ಇವರ ವತಿಯಿಂದ ಆಯೋಜಿಸಿದ್ದ 4 ನೇ ವಿಶ್ವ ಮಾದಿಗ ದಿನಾಚರಣೆ ಹಾಗೂ ಮಾದಿಗ ಸಮುದಾಯದ ಚಿಂತಕರ ಮತ್ತು ಬುದ್ದಿಜೀವಿಗಳ ಕಾರ್ಯಾಗಾರ ಉದ್ಘಾಟನಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.
ಕಷ್ಟಪಡುವ ಸಮುದಾಯಗಳಲ್ಲಿ ಬೆಳವಣಿಗೆ ತರುವ ಕೆಲಸ ಮಾಡುತ್ತಿದ್ದೇವೆ. ಶಿಕ್ಷಣ, ಉದ್ಯೋಗ, ಮತ್ತು ಸಬಲೀಕರಣದ ಮೂಲಕ ಅವರಲ್ಲಿ ಬದಲಾವಣೆ ತರಲು ಸಾಧ್ಯ. ಈ ಮೂಲಕ ಪರಿಶಿಷ್ಟ ಜಾತಿ ಮತ್ತು ಪಂಗಡಗಳಿಗೆ ವಿಶೇಷ ಕಾರ್ಯಕ್ರಮಗಳನ್ನು ರೂಪಿಸಲಾಗುತ್ತಿದೆ. ಸೈದ್ಧಾಂತಿಕವಾಗಿ ಕಾರ್ಯಕ್ರಮ ಗಳನ್ನು ರೂಪಿಸಲಾಗುತ್ತಿದೆ ಎಂದು ಅವರು ಹೇಳಿದರು.
ಸಾಮಾಜಿಕ ವ್ಯವಸ್ಥೆ ಯಾವಾಗಲೂ ಯಥಾಸ್ಥಿತಿ ಕಾಪಾಡುವ ಪ್ರಯತ್ನ ಮಾಡುತ್ತದೆ. ಯಾವುದೇ ಬದಲಾವಣೆ ಆಗದಂತೆ ನೋಡಿಕೊಳ್ಳುವ ಹಿತಾಸಕ್ತಿವ್ಯವಸ್ಥೆ ಇದೆ. ಸ್ವಾತಂತ್ರ್ಯ ಪೂರ್ವ ದಲ್ಲಿ ಇದು ಪ್ರಬಲವಾಗಿತ್ತು. ಈ ವರ್ಗೀಕರಣದ ವ್ಯವಸ್ಥೆಯಲ್ಲಿ ಎಣಿ ಇರಲಿಲ್ಲ. ಕೆಳಗಿದ್ದವರಿಗೆ ಮೇಲಿರುವ ಅವಕಾಶಗಳಿರಲಿಲ್ಲ. ಸ್ವಾತಂತ್ರ್ಯ ಬಂದ ನಂತರ ಸಂವಿಧಾನಕಾರರು ಇದನ್ನು ಗಮನಿಸಿ ಇದಕ್ಕೆ ಚಲನಾ ಶಕ್ತಿಯನ್ನು ನೀಡಲು ಸಂವಿಧಾನದಲ್ಲಿ ಹಲವಾರು ಅವಕಾಶಗಳನ್ನು ಕಲ್ಪಿಸಿದರು. ಈ ವರ್ಗಗಳೂ ಸಹ ಮಾನವನ ಸಹಜ ಗುಣವಾದ ಅಭಿವೃದ್ಧಿ ಹೊಂದಬೇಕು ಎಂದು ಸಂವಿಧಾನದ ಹಕ್ಕನ್ನು ನೀಡಲಾಗಿದೆ.
ಸಂವಿಧಾನದ ಸದುದ್ದೇಶಗಳು ಎಷ್ಟರಮಟ್ಟಿಗೆ ಸಾಕಾರಗೊಳ್ಳುತ್ತದೆ ಎನ್ನುವುದು ಸಂವಿಧಾನವನ್ನು ಅನುಷ್ಠಾನ ಗೊಳಿಸುವವರ ಮೇಲೆ ಅವಲಂಬಿಸಿದೆ ಎಂದರು.
*ಶ್ರೇಷ್ಠ ಸಂವಿಧಾನ*
ಭಾರತದ ಸಂವಿಧಾನ ವಿಶ್ವದಲ್ಲಿಯೇ ಅತ್ಯಂತ ಶ್ರೇಷ್ಠವಾದ ಸಂವಿಧಾನ. ಸಾಮಾಜಿಕ, ಆರ್ಥಿಕ, ಶೈಕ್ಷಣಿಕ, ಧಾರ್ಮಿಕ, ಎಲ್ಲಾ ರಂಗಗಳ ಆಗುಹೋಗುಗಳ ತಕ್ಕ ಹಾಗೆ ನಾವು ಅದನ್ನು ಬದಲಾವಣೆ ಮಾಡುವ ಕ್ರಿಯಾಶೀಲತೆ ಸಂವಿಧಾನದಲ್ಲಿದೆ ಎಂದರು.
*ದುಡಿಯುವ ವರ್ಗದ ಭವಿಷ್ಯ ರೂಪಿಸಲು ವೇದಿಕೆ ಚಿಂತಿಸಬೇಕು*
ಜಾಗತೀಕರಣ,ಉದಾರೀಕರಣ, ಖಾಸಗೀಕರಣವಾದಾಗ ಮಾರುಕಟ್ಟೆ ನಿಯಂತ್ರಣದ ನೀತಿಗಳು ಅಸ್ತಿತ್ವಕ್ಕೆ ಬಂದಿತು. ಮಾರುಕಟ್ಟೆಯ ವ್ಯವಸ್ಥೆಯಲ್ಲಿ ಸಮಾನತೆ ಪಡೆಯಲು ಸಾಧ್ಯವಿಲ್ಲ. ಬಲಿಷ್ಠರು ಮಾತ್ರ ಅದರ ಲಾಭವನ್ನು ಪಡೆಯುತ್ತಾರೆ. ದಿನನಿತ್ಯ ದುಡಿಯುವ ದೊಡ್ಡ ವರ್ಗಕ್ಕೆ ಮಾರ್ಗದರ್ಶನ ಅಗತ್ಯವಿದೆ. ದುಡಿಯುವ ವರ್ಗದ ಭವಿಷ್ಯವನ್ನು ಯಾವ ರೀತಿ ರೂಪಿಸಬೇಕೆಂಬ ಚಿಂತನೆ ಮಾಡುವ ವೇದಿಕೆ ಅಗತ್ಯವಿತ್ತು . ಬದಲಾಗುತ್ತಿರುವ ಸಾಮಾಜಿಕ ವ್ಯವಸ್ಥೆಗೆ ತಕ್ಕ ಹಾಗೆ ಸಮಾಜವನ್ನು ಸಿದ್ಧಪಡಿಸುವ ಕೆಲಸಕ್ಕೆ ಈ ವೇದಿಕೆ ಕೆಲಸ ಮಾಡಬೇಕು ಎಂದು ಮುಖ್ಯಮಂತ್ರಿಗಳು ತಿಳಿಸಿದರು.
*ಮುಖ್ಯವಾಹಿನಿಗೆ ಬರಬೇಕು*
ಶಿಕ್ಷಣ ಮೂಲಕ ಸಮಾಜದ ಮುಖ್ಯ ವಾಹಿನಿಗೆ ತಳ ಸಮುದಾಯ ಬರಬೇಕಾಗಿದೆ. ಅದರಿಂದ ನಿಮ್ಮ ಹಕ್ಕುಗಳ ಬಗ್ಗೆ ತಿಳಿಯುತ್ತದೆ, ಅವಕಾಶಗಳು ಸಿಗುತ್ತದೆ, ಉದ್ಯೋಗ ದೊರೆತು, ಸ್ವಾವಲಂಬನೆಯ , ಸ್ವಾಭಿಮಾನದ ಬದುಕು ಕಟ್ಟಿಕೊಳ್ಳಲು ಸಾಧ್ಯ. ಡಾ: ಬಿ.ಆರ್.ಅಂಬೇಡ್ಕರ್ ಹಾಗೂ ಬಾಬು ಜಗಜೀವನ್ ರಾಮ್ ಅವರು ನಮಗೆಅ ದನ್ನು ತಿಳಿಸಿಕೊಟ್ಟಿರುವುದು. ಸಂವಿಧಾನದ ಮೂಲಕ ಸಮಾನ ಹಕ್ಕುಗಳನ್ನು ನೀಡಿದ ಮಹಾ ಚೇತನ ಬಾಬಾ ಸಾಹೇಬ್ ಅಂಬೇಡ್ಕರ್ ಮತ್ತೊಂದೆಡೆ ದೇಶದಲ್ಲಿ ಅನ್ನಕ್ಕೆ ಕೊರತೆ ಉಂಟಾದ ಸಂದರ್ಭದಲ್ಲಿ ಹಸಿರು ಕ್ರಾಂತಿಯ ಮೂಲಕ ಅನ್ನ ಕೊಟ್ಟು ದೇಶವನ್ನು ಸ್ವಾವಲಂಬಿ, ಸ್ವಾಭಿಮಾನಿ ದೇಶವನ್ನಾಗಿಸಿದ ಬಾಬು ಜಗಜೀವನ್ ರಾಮ್. ಇವರಿಗಿಂತ ದೊಡ್ಡ ಪ್ರೇರಣೆಯನ್ನು ಪಡೆಯಲು ಸಾಧ್ಯವಿಲ್ಲ ಎಂದರು. ಇವರಿಂದ ಪ್ರೇರಣೆಯನ್ನು ಪಡೆದಿದ್ದೇನೆ. ಅಂಥ ಒಂದು ಸಮುದಾಯಕ್ಕೆ ಸೇರಿರುವುದಕ್ಕೆ ಅಭಿಮಾನ ಪಡಬೇಕು ಎಂದರು.
*ಪ್ರಮುಖ ಸಮಸ್ಯೆಗಳನ್ನು ಬಗೆಹರಿಸಬೇಕು*
ಮಾಕ್ಯ್ -ಕರ್ನಾಟಕ ಶಾಖೆಯು ಮೆದುಳು, ಸಮಾಜದ ಗುರುಗಳು ಹೃದಯ ಉಳಿದವರು ಶಕ್ತಿ ಕೊಡುವ ಕೈಗಳು. ಇವೆಲ್ಲಾ ಒಂದಾಗಿ ಸಮಾಜದ ಪ್ರಮುಖ ಸಮಸ್ಯೆಗಳನ್ನು ಬಗೆಹರಿಸಬೇಕು. ಹಲವಾರು ವರ್ಷಗಳ ಆಂತರಿಕ ಮೀಸಲಾತಿಯ ಬೇಡಿಕೆ ಇದೆ. ಈ ಈ ವೇದಿಕೆ ಸಮಾಜಕ್ಕೆ ಮೀಸಲಾತಿಯೂ ಸೇರಿದಂತೆ ಮುಂದಿನ ದಾರಿಯನ್ನು ತೋರಬೇಕು. ಯಾರಿಗೂ ಅನ್ಯಾಯವಾಗದಂತೆ ಯಾವ ರೀತಿ ಮಾಡಬಹುದು ಎನ್ನುವುದರ ಬಗ್ಗೆ ಮಾರ್ಗದರ್ಶನ ಮಾಡಿದರೆ ಸಾಮಾಜಿಕ ಸಾಮರಸ್ಯದಿಂದ ನ್ಯಾಯ ಕೊಡುವ ಕೆಲಸವನ್ನು ಮಾಡುತ್ತೇವೆ ಎಂದರು.
*ಸರ್ಕಾರ ನಿಮ್ಮೊಂದಿಗಿದೆ*
ಶೈಕ್ಷಣಿಕವಾಗಿ ಔದ್ಯಮಿಕವಾಗಿ ಅವಕಾಶ ನೀಡಬೇಕೆನ್ನುವುದು ನನ್ನ ಗಮನದಲ್ಲಿದೆ. ಸರ್ಕಾರದ ಕಾರ್ಯಕ್ರಮಗಳಲ್ಲದೆ ಏನು ಮಾಡಬೇಕೆಂದು ಸಲಹೆ ನೀಡಿದರೆ ಅನುಷ್ಠಾನಕ್ಕೆ ಸಿದ್ದ. ಇದಕ್ಕೆ ನಮ್ಮ ಮನೆ ಮತ್ತು ಹೃದಯದ ಬಾಗಿಲುಗಳು ತೆರೆದಿದೆ. ಸರ್ಕಾರ ನಿಮ್ಮೊಂದಿಗಿದೆ ಎಂದರು.
[13/05, 3:54 PM] Gurulingswami. Holimatha. Vv. Cm: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಬೆಂಗಳೂರಿನಲ್ಲಿ ಹಲೋ ಕಂದಾಯ ಸಚಿವರೆ ( ೭೨ ಗಂಟೆಗಳಲ್ಲಿ ಮನೆ ಬಾಗಿಲಿಗೆ ಪಿಂಚಣಿ) ಸಹಾಯ ವಾಣಿಯನ್ನು ಲೋಕಾರ್ಪಣೆ ಮಾಡಿದರು. ಆಸಿಡ್ ದಾಳಿಗೆ ಒಳಗಾಗಿರುವ ಮಹಿಳೆಯರಿಗೆ ನೀಡಲಾಗುತ್ತಿದ್ದ ೩ ಸಾವಿರ ಮಾಸಾಶನವನ್ನು ೧೦ ಸಾವಿರ ರೂಪಾಯಿಗೆ ಹೆಚ್ಚಿಸಲಾಗಿದ್ದು, ಸಂತ್ರಸ್ತ ಫಲಾನುಭವಿಗಳಿಗೆ ಪ್ರಮಾಣಪತ್ರ ವಿತರಿಸಿದರು. ಈ ಸಂದರ್ಭದಲ್ಲಿ ಕಂದಾಯ ಸಚಿವ ಆರ್ ಅಶೋಕ್, ಶಾಸಕರಾದ ಎಂ ಕೃಷ್ಣಪ್ಪ, ರಿಜ್ವಾನ್ ಅರ್ಷದ್, ಎಂ ಪಿ ಕುಮಾರಸ್ವಾಮಿ, ಸಂಸದ ಪಿ ಸಿ ಮೋಹನ್, ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಮಂಜುನಾಥ ಪ್ರಸಾದ, ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ಅನಿಲಕುಮಾರ, ಬೆಂಗಳೂರು ಜಿಲ್ಲಾಧಿಕಾರಿ ಮಂಜುನಾಥ ಮತ್ತು ಇತರರು ಉಪಸ್ಥಿತರಿದ್ದರು.
[13/05, 3:56 PM] Gurulingswami. Holimatha. Vv. Cm: *ಲಿಡ್ಕರ್ ಮೂಲಕ ಸ್ವಯಂ ಉದ್ಯೋಗ ಒದಗಿಸಲು ಆದ್ಯತೆ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ*
ಬೆಂಗಳೂರು, ಮೇ 13:
ರಾಜ್ಯದ ಪ್ರತಿ ತಾಲ್ಲೂಕಿನಲ್ಲಿ 100 ಹೆಚ್ಚುವರಿ ಸ್ವಯಂ ಉದ್ಯೋಗಕ್ಕೆ ಪ್ರೋತ್ಸಾಹ ನೀಡಲು ತೀರ್ಮಾನಿಸಲಾಗಿದ್ದು, ಲಿಡ್ಕರ್ ಯುವಕರಿಗೆ ಉದ್ಯೋಗವನ್ನು ಕಲ್ಪಿಸಲು ಆದ್ಯತೆ ನೀಡಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಲಿಡ್ಕರ್ ನಿಗಮಕ್ಕೆ ಈ ಬಾರಿ 25 ಕೋಟಿ ರೂ.ಗಳ ಅನುದಾನವನ್ನು ಮೀಸಲಿಡಲಾಗಿದೆ. ನಿಗಮವು ಹೆಚ್ಚಿನ ಉದ್ಯೋಗಾವಕಾಶಗಳನ್ನು ಒದಗಿಸಿದ್ದಲ್ಲಿ ಪೂರಕ ಬಜೆಟ್ ನಲ್ಲಿ ಹೆಚ್ಚಿನ ಅನುದಾನವನ್ನು ನೀಡಲಾಗುವುದು. ಯುವಕರಿಗೆ ಉದ್ಯೋಗ ನೀಡುವ ಮೂಲಕ ಸ್ವಾಭಿಮಾನದ ಸ್ವಾವಲಂಬಿ ಬದುಕು ನಡೆಸಲು ಅನುವು ಮಾಡಿಕೊಡಬೇಕು. ಚರ್ಮೋದ್ಯಮದ ಆಧುನೀಕರಣದಲ್ಲಿ ದೊಡ್ಡ ಬದಲಾವಣೆ ಆಗಿದೆ. ಅಂತರರಾಷ್ಟ್ರೀಯ ಮಟ್ಟದ ವಿನ್ಯಾಸವಿರುವ ಪೀಠೋಪಕರಣಗಳು ಪ್ರದರ್ಶನದಲ್ಲಿ ಲಭ್ಯವಿದೆ. ಪೀಠೋಪಕರಣ ಉದ್ಯಮ ವಿಸ್ತಾರವಾದದ್ದು, ಅವುಗಳಿಗೆ ಬ್ರ್ಯಾಡಿಂಗ್ ಮಾಡುವ ಉತ್ತಮ ಬೆಲೆ ಹಾಗೂ ಮಾರುಕಟ್ಟೆ ಸಿಗುತ್ತದೆ. ಈ ಬಗ್ಗೆ ಹೆಚ್ಚಿನ ಗಮನ ನೀಡುವಂತೆ ನಿಗಮದ ವ್ಯವಸ್ಥಾಪಕ ನಿರ್ದೇಶಕರಿಗೆ ಸಲಹೆ ನೀಡಿದರು.
*33000 ಉದ್ಯಮಗಳಿಗೆ ಸಹಾಯ:*
ಚರ್ಮೋದ್ಯಮ ಅನಾದಿಕಾಲದಿಂದಲೂ ಇದೆ. ಚರ್ಮ ಕುಶಲಕರ್ಮಿಗಳು ಸಾಮಾಜಿಕ, ಶೈಕ್ಷಣಿಕ, ಆರ್ಥಿಕವಾಗಿ ಮುಂದುವರಿಯಬೇಕು. ಇದಕ್ಕಾಗಿ ಚರ್ಮೋದ್ಯಮದಲ್ಲಿ ನೂತನ ತಂತ್ರಜ್ಞಾನ, ಯಂತ್ರೋಪಕರಣಗಳನ್ನು ಬಳಸುವ ಮೂಲಕ ಚರ್ಮದ ಉತ್ಪನ್ನ ಹಾಗೂ ಉತ್ಪಾದನೆಯನ್ನು ಹೆಚ್ಚಿಸಿಕೊಳ್ಳಬೇಕು. ಶಿಕ್ಷಣವನ್ನು ಪಡೆದು ಸಮಾಜದಲ್ಲಿ ಇತತರಿಗೆ ಪ್ರೇರಣೆಯನ್ನು ನೀಡುವಂತೆ ಬಾಳಬೇಕು. ಈ ದಿಸೆಯಲ್ಲಿ ಲಿಡ್ಕರ್ ಪಾತ್ರ ದೊಡ್ಡದಿದೆ. ಚರ್ಮೋದ್ಯಮದಲ್ಲಿ ಉದ್ಯೋಗ, ಉತ್ಪಾದನೆಗಳನ್ನು ಹೆಚ್ಚಿಸಲು ಎಲ್ಲ ಕ್ರಮಗಳನ್ನು ಸರ್ಕಾರ ತೆಗೆದುಕೊಳ್ಳಲಿದೆ. ಲಿಡ್ಕರ್ ನಿಗಮದ ಅಭಿವೃದ್ಧಿಗೆ ಸರ್ಕಾರ ಬದ್ಧವಾಗಿದೆ. ಲಿಡ್ಕರ್ ಸಂಸ್ಥೆಯನ್ನು ಸಮಾಜ ಕಲ್ಯಾಣ ಇಲಾಖೆಗೆ ಸೇರಿಸಿ ಕಳೆದ ಐದು ವರ್ಷಗಳಿಂದ 237 ಕೋಟಿ ರೂ. ಅನುದಾನ ಒದಗಿಸುವ ಮೂಲಕ 33000 ಉದ್ಯಮಗಳಿಗೆ ಸಹಾಯವನ್ನು ಮಾಡಲಾಗಿದೆ ಎಂದರು.
*ಯುವಕರಿಗೆ ಉದ್ಯೋಗ ಸೃಷ್ಟಿ ಆದ್ಯತೆ :*
ಎಸ್ ಸಿ, ಎಸ್ ಟಿ ಅಭಿವೃದ್ಧಿಗೆ ಸರ್ಕಾರ ಬದ್ಧವಾಗಿದೆ. ಪರಿಶಿಷ್ಟ ಜಾತಿಯವರು ಜಮೀನು ಖರೀದಿಗೆ ಇದ್ದ 15 ಲಕ್ಷ ಅನುದಾನವನ್ನು 20 ಲಕ್ಷ ರೂ.ಗಳಿಗೆ ಹೆಚ್ಚಿಸಲಾಗಿದೆ. ಪರಿಶಿಷ್ಟ ಜಾತಿಯ 30 ಲಕ್ಷಕ್ಕಿಂತ ಹೆಚ್ಚಿನ ಮನೆಗಳಿಗೆ 75 ಲಕ್ಷ ಯೂನಿಟ್‍ವರೆಗೆ ಉಚಿತ ವಿದ್ಯುತ್ ನೀಡುವ ವಿನೂತನ ಕಾರ್ಯಕ್ರಮ ಪ್ರಾರಂಭಿಸಲಾಗಿಗೆ. ಶಿಕ್ಷಣ, ಉದ್ಯೋಗ, ಸಬಲೀಕರಣ ನೀತಿಯ ಆಧಾರದ ಮೇಲೆ ಕೆಲಸ ಮಾಡಲಾಗುತ್ತಿದೆ. ಎಸ್ ಸಿ, ಎಸ್ ಟಿ, ಓಬಿಸಿ ಜನಾಂಗದ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ರಾಜ್ಯದ ಪ್ರಮುಖ ಶೈಕ್ಷಣಿಕ ಕೇಂದ್ರಗಳಲ್ಲಿ 1000 ಕೊಠಡಿಗಳ ಹಾಸ್ಟೆಲ್‍ಗಳನ್ನು ನಿರ್ಮಿಸಲಾಗುವುದು. ಸ್ವಯಂ ಉದ್ಯೋಗಕ್ಕೆ ಪ್ರೋತ್ಸಾಹ, ಯುವಕರಿಗೆ ಉದ್ಯೋಗ ಸೃಷ್ಟಿ ಆದ್ಯತೆ ನೀಡಲಾಗಿದೆ. ಸರ್ಕಾರದ ಸಾಲ ಸೌಲಭ್ಯದ ಯೋಜನೆಗಳು ಜನರಿಗೆ ಒದಗಿಸಲು ಜಿಲ್ಲೆಗೊಂದಂತೆ ಆಂಕರ್ ಬ್ಯಾಂಕ್ ಮಾಡಲು ಆದೇಶ ನೀಡಲಾಗಿದೆ ಎಂದರು.
Post a Comment