CM ವಿಶೇಷ

[05/05, 11:22 AM] Gurulingswami. Holimatha. Vv. Cm: ಬೆಂಗಳೂರು, ಮೇ 03 : ಮಾಜಿ *ಮುಖ್ಯಮಂತ್ರಿ ಕೆ.ಸಿ..ರೆಡ್ಡಿ ಅವರ*  *120 ನೇ* *ಜನ್ಮದಿನಾಚಾರಣೆಯ ಅಂಗವಾಗಿ* *ಮುಖ್ಯಮಂತ್ರಿ* *ಬಸವರಾಜ ಬೊಮ್ಮಾಯಿ ಅವರು* ಇಂದು *ವಿಧಾನಸೌಧದಲ್ಲಿರುವ* ಅವರ *ಪ್ರತಿಮೆಗೆ ಮಾಲಾರ್ಪಣೆ ಮಾಡಿ* *ಪುಷ್ಪನಮನ ಸಲ್ಲಿಸಿ  *ಮಾತನಾಡಿದರು*
[05/05, 11:38 AM] Gurulingswami. Holimatha. Vv. Cm: ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಇಂದು ಮಾಜಿ ಮುಖ್ಯಮಂತ್ರಿ ದಿವಂಗತ ಕೆ ಸಿ ರೆಡ್ಡಿ ಅವರ 12೦ನೇ ಜನ್ಮದಿನದ ಅಂಗವಾಗಿ ಇಂದು ವಿಧಾನ ಸೌಧದ ಆವರಣದಲ್ಲಿ ಇರುವ ಕೆ ಸಿ ರೆಡ್ಡಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿದರು. ಈ ಸಂದರ್ಭದಲ್ಲಿ ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ,
ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ ರವಿಕುಮಾರ್, ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಮಂಜುನಾಥ ಪ್ರಸಾದ್, ಕೆ ಸಿ ರೆಡ್ಡಿ ಅವರ ಸಂಬಂಧಿ ಕವಿತಾ ರೆಡ್ಡಿ ಸೇರಿದಂತೆ ಇತರರು ಉಪಸ್ಥಿತರಿದ್ದರು.
[05/05, 11:48 AM] Gurulingswami. Holimatha. Vv. Cm: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಇಟಲಿ ದೇಶದ ವಿದೇಶಾಂಗ ವ್ಯವಹಾರಗಳ ಖಾತೆ ಸಚಿವರಾದ ಲುಯ್ಗಿ ಡಿ ಮಾಯಿಒ ( LUIGI DI MAIO) ನೇತೃತ್ವದ ನಿಯೋಗದ ಜತೆ ಇಂದು ಬೆಂಗಳೂರಿನಲ್ಲಿ ಸೌಹಾರ್ದಯುತವಾಗಿ ಭೇಟಿ ಮಾಡಿ ಚರ್ಚೆ ನಡೆಸಿದರು. ಈ ಸಂದರ್ಭದಲ್ಲಿ ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ, ರಾಜ್ಯ ಸರ್ಕಾರದ ಮುಖ ಕಾರ್ಯದರ್ಶಿ ಪಿ ರವಿಕುಮಾರ್, ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಮಂಜುನಾಥ ಪ್ರಸಾದ ಸೇರಿದಂತೆ ರಾಜ್ಯ ಸರ್ಕಾರದ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
[05/05, 12:51 PM] Gurulingswami. Holimatha. Vv. Cm: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ಇಂದು ಬೆಂಗಳೂರಿನಲ್ಲಿ ಉನ್ನತ ಶಿಕ್ಷಣ ಇಲಾಖೆಯ ಬಜೆಟ್ ಘೋಷಣೆಗಳ ಕಾರ್ಯಾದೇಶ ಹಾಗೂ ಅನುಷ್ಠಾನ ಕುರಿತು ಸಭೆ ನಡೆಯಿತು. ಈ ಸಂದರ್ಭದಲ್ಲಿ ಉನ್ನತ ಶಿಕ್ಷಣ ಸಚಿವ ಡಾ. ಸಿ ಎನ್ ಅಶ್ವತ್ಥ ನಾರಾಯಣ, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ ರವಿಕುಮಾರ್, ಅಭಿವೃದ್ಧಿ ಆಯುಕ್ತೆ ವಂದಿತಾ ಶರ್ಮಾ, ಯೊಇಜನಾ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ, ಹಣಕಾಸು ಇಲಾಖೆ ಎಸಿಎಸ್ ಐಎಸ್ಎನ್ ಪ್ರಸಾದ, 
ಉನ್ನತ ಶಿಕ್ಷಣ ಇಲಾಖೆ ಆಯುಕ್ತ ಪ್ರದೀಪ ಮತ್ತು ಇತರರು ಉಪಸ್ಥಿತರಿದ್ದರು.
[05/05, 1:44 PM] Gurulingswami. Holimatha. Vv. Cm: *ಕೆ.ಸಿ.ರೆಡ್ಡಿ ಆಧುನಿಕ ಕರ್ನಾಟಕ ಹಾಗೂ ಬೆಂಗಳೂರಿನ ಬೇರುಗಳಿಗೆ ನೀರು ಹಾಕಿ ಬೆಳೆಸಿದವರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ*

ಬೆಂಗಳೂರು, ಮೇ 05 :  ಆಧುನಿಕ ಕರ್ನಾಟಕ ಹಾಗೂ ಬೆಂಗಳೂರಿನ ಬೇರುಗಳಿಗೆ ನೀರು ಹಾಕಿ ಬೆಳೆಸಿದವರು ಕೆ.ಸಿ.ರೆಡ್ಡಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. 


ಅವರು ಇಂದು ಮಾಜಿ ಮುಖ್ಯಮಂತ್ರಿ ಕೆ.ಸಿ.ರೆಡ್ಡಿ ಅವರ  120 ನೇ ಜನ್ಮದಿನಾಚಾರಣೆಯ ಅಂಗವಾಗಿ ಇಂದು ವಿಧಾನಸೌಧದಲ್ಲಿರುವ  ಅವರ ಭಾವಚಿತ್ರಕ್ಕೆ  ಪುಷ್ಪಾರ್ಚಣೆ ಮಾಡಿ ಅವರು  ಮಾತನಾಡಿದರು. 

*ಅಮೋಘವಾದ ಸಾರ್ವಜನಿಕ ಜೀವನ*
ಕರ್ನಾಟಕದ ಮೊಟ್ಟ ಮೊದಲ ಮುಖ್ಯಮಂತ್ರಿ ಕೆ.ಸಿ.ರೆಡ್ಡಿಯವರು ಕರ್ನಾಟಕದ ಮೈಸೂರು ಪ್ರಜಾಪ್ರತಿನಿಧಿಯ ಸದಸ್ಯರಿಂದ ಕರ್ನಾಟಕದ ಮುಖ್ಯಮಂತ್ರಿಗಳಾಗುವವರೆಗೆ ಅಮೋಘವಾದ ಸಾರ್ವಜನಿಕ ಜೀವನ ನಡೆಸಿದವರು. ಭಾರತದ ಸ್ವಾತಂತ್ರ್ಯದ ನಂತರ ಕರ್ನಾಟಕದ ಅಭಿವೃದ್ಧಿಗೆ ಭದ್ರ ಬುನಾದಿ ಹಾಕಿದ್ದಾರೆ. ಇಂದು ದೊಡ್ಡ ಪ್ರಮಾಣದಲ್ಲಿ ಬಿ.ಹೆಚ್.ಇ. ಎಲ್, ಬಿ.ಇ. ಎಲ್, ಹೆಚ್.ಎಂ.ಟಿ ಮುಂತಾದ ಸಾರ್ವಜನಿಕ ಉದ್ದಿಮೆಗಳನ್ನು ಸ್ಥಾಪಿಸಲು ಅಂದಿನ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದರು. ಉತ್ತಮ ಆಡಳಿತಗಾರ, ಎಲ್ಲರನ್ನೂ ಸಮಾನತೆ, ಪ್ರೀತಿ ವಿಶ್ವಾಸದಿಂದ ಕಂಡವರು. ಮಾದರಿ ಆಡಳಿತ ನೀಡಿದ ಅವರ ಹೆಸರು ಕರ್ನಾಟಕದ ಇತಿಹಾಸದಲ್ಲಿ ಅಚ್ಚಳಿಯದೆ ಉಳಿಯಲಿದೆ. ನಾವು ಅವರ ಆದರ್ಶಗಳನ್ನು ಪರಿಪಾಲನೆ ಮಾಡಬೇಕು ಎಂದು ಬಸವರಾಜ ಬೊಮ್ಮಾಯಿ ಹೇಳಿದರು.

*ಕೆಲವೇ ದಿನಗಳಲ್ಲಿ ಪುತ್ಥಳಿ ಅನಾವರಣ*

ಕೆ.ಸಿ ರೆಡ್ಡಿಯವರ ಪುತ್ಥಳಿ ನಿರ್ಮಾಣ ಪೂರ್ಣಗೊಂಡಿದೆ.  ಪುತ್ಥಳಿಗೆ ಇಂದೇ ಕಾರ್ಯಾದೇಶ ಹೊರಡಿಸಲಾಗುವುದು.  ಕೆಲವೇ ದಿನಗಳಲ್ಲಿ ಸ್ಥಳಾಂತರ ಮಾಡಿ ಪುನಃ ವಿಧಾನಸೌಧದಲ್ಲಿ ಪ್ರತಿಮೆ ಅನಾವರಣ ಮಾಡಲಾಗುವುದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.
[05/05, 1:44 PM] Gurulingswami. Holimatha. Vv. Cm: ಬೆಂಗಳೂರು, ಮೇ 05: 2022- 23 ನೇ ಆಯವ್ಯಯದಲ್ಲಿ ಘೋಷಣೆಯಾಗಿರುವ ಯೋಜನೆಗಳ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ಇಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ  ಸಭೆ ಜರುಗಿತು. 

 ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವ ಹಾಲಪ್ಪ ಆಚಾರ್, ಮುಖ್ಯ ಕಾರ್ಯದರ್ಶಿ ಪಿ.ರವಿ ಕುಮಾರ್,   ಅಭಿವೃದ್ಧಿ ಆಯುಕ್ತೆ ಹಾಗೂ ಅಪರ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ, ಆರ್ಥಿಕ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಐ.ಎಸ್.ಎನ್ ಪ್ರಸಾದ್,  ಇಲಾಖೆ  ಪ್ರಧಾನ ಕಾರ್ಯದರ್ಶಿ ಡಾ:ಎಂ.ಟಿ.ರೇಜು,  ನಿರ್ದೇಶಕಿ  ಪ್ರಿಯಾಂಕ ಮೇರಿ ಫ್ರಾನ್ಸಿಸ್, ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ  ಎನ್.ಮಂಜುನಾಥ್ ಪ್ರಸಾದ್ ,  ಹಾಗೂ  ಅಧಿಕಾರಿಗಳು ಉಪಸ್ಥಿತರಿದ್ದರು.
[05/05, 4:24 PM] Gurulingswami. Holimatha. Vv. Cm: *ಇಟಲಿ ಹಾಗೂ ಕರ್ನಾಟಕದ ನಡುವಿನ ಬಾಂಧವ್ಯ ವೃದ್ದಿಗೆ ಸಂಪೂರ್ಣ ಸಹಕಾರ   : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ*
ಬೆಂಗಳೂರು, ಮೇ 05: ಇಟಲಿ ಹಾಗೂ ಕರ್ನಾಟಕದ ನಡುವಿನ ಬಾಂಧವ್ಯ ವೃದ್ದಿಗೆ ಸಂಪೂರ್ಣ ಸಹಕಾರ ನೀಡಲಾಗುವುದು. ಭಾರತ ಮತ್ತು ಇಟಲಿಯ ಸಾಂಸ್ಕøತಿಕ ಮತ್ತು ವ್ಯವಹಾರಿಕ ಸಂಬಂಧ ಬಹಳ ಹಿಂದಿನಿಂದಲೂ ಇದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ  ತಮ್ಮನ್ನು ಭೇಟಿಯಾದ ಇಟಲಿಯ ವಿದೇಶಾಂಗ ವ್ಯವಹಾರಗಳ ಸಚಿವ ಲುಯ್ಗಿ ಡಿ ಮಾಯಿಒ  ನೇತೃತ್ವದ ನಿಯೋಗಕ್ಕೆ ಇಂದು  ಮನವರಿಕೆ ಮಾಡಿಕೊಟ್ಟರು.  

ಈ ಸಂದರ್ಭದಲ್ಲಿ ಮಾತನಾಡಿದ ಇಟಲಿಯ ವಿದೇಶಾಂಗ ವ್ಯವಹಾರಗಳ ಸಚಿವ ಲುಯ್ಗಿ ಡಿ ಮಾಯಿಒ ಕರ್ನಾಟಕದೊಂದಿಗೆ  ಇಟಲಿ  ಅತ್ಯುತ್ತಮ ಬಾಂಧವ್ಯವನ್ನು ಹೊಂದಲು ಇಚ್ಚಿಸಿದ್ದು,  ಇಟಲಿಗೆ ಭೇಟಿ ನೀಡುವಂತೆ ಮುಖ್ಯಮಂತ್ರಿಗಳಿಗೆ ಆಹ್ವಾನ ನೀಡಿದರು.  

ತಮ್ಮ ಭೇಟಿಯ ಕುರಿತಂತೆ ಸ್ಪಷ್ಟ ಕಲ್ಪನೆಯನ್ನು ಹೊಂದಿರುವ ನಿಯೋಗವು ದೇಶದಲ್ಲಿ ಹಾಗೂ ಅಂತರರಾಷ್ಟ್ರೀಯ ಮಟ್ಟದಲ್ಲಿ ಕರ್ನಾಟಕ ಹಾಗೂ ಬೆಂಗಳೂರಿನ ಮಹತ್ವವನ್ನು ಅರಿತುಕೊಂಡಿದೆ.  ಬೆಂಗಳೂರು ಮತ್ತು ಇಟಲಿಯ ನಡುವಿನ ಬಾಂಧವ್ಯವನ್ನು ಗಟ್ಟಿಗೊಳಿಸುವ ಆಸಕ್ತಿ ವ್ಯಕ್ತಪಡಿಸಿರುವುದು ಶ್ಲಾಘನೀಯ ಎಂದರು.

*ಪುರಾತನ ಸಂಬಂಧ*
 ಮಾರ್ಬಲ್,  ಗ್ರ್ಯಾನೈಟ್, ಟಯರ್ ಉತ್ಪಾದನಾ ಘಟಕಗಳು ಕಳೆದ 40 ವರ್ಷಗಳಿಂದ ಬೆಂಗಳೂರಿನಲ್ಲಿವೆ. ಬೆಂಗಳೂರಿನ ಸುತ್ತಮುತ್ತ ಆಧುನಿಕ ಟೈಲ್ಸ್  ಉತ್ಪಾದಕ ಘಟಕಗಳಿವೆ.ಇವುಗಳಲ್ಲಿ ಶೇ 99 ರಷ್ಟು ಘಟಕಗಳಲ್ಲಿ ಇಟಲಿಯ ಯಂತ್ರಗಳು ಬಳಕೆಯಾಗುತ್ತವೆ ಎಂದರು.

*ವಿಜ್ಞಾನ ಇಲ್ಲಿನ ಜೀವನ ವಿಧಾನ*
 ಕರ್ನಾಟಕದಲ್ಲಿ  ಜನಸಾಮಾನ್ಯರೂ ತಮ್ಮ ದಿನನಿತ್ಯದ ಬದುಕಿನಲ್ಲಿ ವಿಜ್ಞಾನವನ್ನು ಬಳಸುತ್ತಾರೆ.  ವಿಜ್ಞಾನ ಇಲ್ಲಿನ ಜೀವನ ವಿಧಾನ. 

ವಿಜ್ಞಾನ ಕ್ಷೇತ್ರದಲ್ಲಿ ನಿಯೋಗವು ವ್ಯಕ್ತಪಡಿಸಿದ  ಆಸಕ್ತಿಗೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿಗಳು ಕರ್ನಾಟಕದಲ್ಲಿ  ಜನಸಾಮಾನ್ಯರೂ ತಮ್ಮ ದಿನನಿತ್ಯದ ಬದುಕಿನಲ್ಲಿ ವಿಜ್ಞಾನವನ್ನು ಬಳಸುತ್ತಾರೆ. ಬೆಂಗಳೂರು ವಿಜ್ಞಾನ ನಗರ. ಇಲ್ಲಿನ ಶಿಕ್ಷಣ ಹಾಗೂ ಆಲೋಚನೆಗಳು ವೈಜ್ಞಾನಿಕವಾಗಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು.

 *ಬೆಂಗಳೂರು ವಿಜ್ಞಾನ ನಗರಿ*

ಕರ್ನಾಟಕ ರಾಜ್ಯ ವಿಜ್ಞಾನ, 
ಸಂಶೋಧನೆ, ತಂತ್ರಜ್ಞಾನ,  ಸ್ಟಾರ್ಟ್ ಅಪ್ ಹಾಗೂ ಯೂನಿಕಾರ್ನ್, ಐಟಿ ಬಿಟಿ ಕ್ಷೇತ್ರಗಳಲ್ಲಿ ಮುಂಚೂಣಿಯಲ್ಲಿದೆ.  ಇವೆಲ್ಲವುಗಳ ಬೆಳವಣಿಗೆಗೆ 150 ವರ್ಷಗಳ ಹಿಂದೆಯೇ ಮೈಸೂರು ಮಹಾರಾಜರು ಬುನಾದಿಯನ್ನು ಹಾಕಿದ್ದರು. ಹೆಚ್.ಎಂ.ಟಿ, ಬಿ.ಹೆಚ್.ಇ.ಎಲ್ ಮುಂತಾದ ಉತ್ಪಾದನಾ ಕೇಂದ್ರಿತ ಕಾರ್ಖಾನೆಗಳು  ತಂತ್ರಜ್ಞಾನ ಕ್ಷೇತ್ರದ ಬೆಳವಣಿಗೆಗೆ ಪೂರಕವಾದ ವಾತಾವರಣ ನಿರ್ಮಿಸಿತು ಎಂದರು.

ಸ್ಟಾರ್ಟ್ ಅಪ್‍ಗಳು ಹಾಗೂ ಯೂನಿಕಾರ್ನ್ ಗಳ ಸ್ಥಾಪನೆಗೆ ರಾಜ್ಯ ಸರ್ಕಾರ ಪ್ರೋತ್ಸಾಹ ನೀಡುತ್ತಿದೆ.  ಬೆಂಗಳೂರು ದೇಶದ ವಿಜ್ಞಾನ ಹಾಗೂ ಆರ್ಥಿಕ ರಾಜಧಾನಿ ಹಾಗೂ   ದೇಶದ ಭವಿಷ್ಯ ಎಂದರು.
[05/05, 5:12 PM] Gurulingswami. Holimatha. Vv. Cm: ಬೆಂಗಳೂರು, ಮೇ 05: 2022- 23 ನೇ ಆಯವ್ಯಯದಲ್ಲಿ ಘೋಷಣೆಯಾಗಿರುವ ಯೋಜನೆಗಳ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ಇಂದು ಹಿಂದುಳಿದ ವರ್ಗಗಳ ಇಲಾಖೆ ಸಭೆ ಜರುಗಿತು. 

ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಮುಖ್ಯ ಕಾರ್ಯದರ್ಶಿ ಪಿ.ರವಿ ಕುಮಾರ್,   ಅಭಿವೃದ್ಧಿ ಆಯುಕ್ತೆ ಹಾಗೂ ಅಪರ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ, ಆರ್ಥಿಕ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಐ.ಎಸ್.ಎನ್ ಪ್ರಸಾದ್, ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ  ಎನ್. ಮಂಜುನಾಥ್ ಪ್ರಸಾದ್ , ಹಿಂದುಳಿದ ವರ್ಗಗಳ
ಇಲಾಖೆ ಪ್ರಧಾನ ಕಾರ್ಯದರ್ಶಿ ರಶ್ಮಿ ಮಹೇಶ,  ಆಯುಕ್ತ ದಯಾನಂದ ಹಾಗೂ ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು.
[05/05, 6:10 PM] Gurulingswami. Holimatha. Vv. Cm: ಬೆಂಗಳೂರು, ಮೇ 05: 2022- 23 ನೇ ಆಯವ್ಯಯದಲ್ಲಿ ಘೋಷಣೆಯಾಗಿರುವ ಯೋಜನೆಗಳ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ಇಂದು ಸಹಕಾರ ಇಲಾಖೆ ಸಭೆ ಜರುಗಿತು. 

ಸಹಕಾರ ಸಚಿವ ಎಸ್.ಟಿ.ಸೋಮಶೇಖರ್, 
ಮುಖ್ಯ ಕಾರ್ಯದರ್ಶಿ ಪಿ.ರವಿ ಕುಮಾರ್,   ಅಭಿವೃದ್ಧಿ ಆಯುಕ್ತೆ ಹಾಗೂ ಅಪರ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ, ಆರ್ಥಿಕ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಐ.ಎಸ್.ಎನ್ ಪ್ರಸಾದ್, ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ  ಎನ್. ಮಂಜುನಾಥ್ ಪ್ರಸಾದ್ ,
ಸಹಕಾರ ಇಲಾಖೆಯ ಪ್ರಧಾನ ಕಾರ್ಯದರ್ಶಿ ಎಸ್.ಆರ್.ಉಮಾಶಂಕರ್, ಸಹಕಾರ ಸಂಘಗಳ 
ನಿಬಂಧಕರು ಜಿಯಾವುಲ್ಲಾ 
ಹಾಗೂ ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು.
[05/05, 8:37 PM] Gurulingswami. Holimatha. Vv. Cm: 532 ಕೋಟಿ ರೂ ವೆಚ್ಚದಲ್ಲಿ ಅನುಭವ ಮಂಟಪ ನಿರ್ಮಾಣಕ್ಕೆ ಸರ್ಕಾರ ಒಪ್ಪಿಗೆ


*ಮೂರು ವರ್ಷಗಳೊಳಗಾಗಿ ಅನುಭವ ಮಂಟಪ ಕಾಮಗಾರಿ ಪೂರ್ಣಗೊಳಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚನೆ*

ಬೆಂಗಳೂರು, ಮೇ 05: ಬಸವಕಲ್ಯಾಣದಲ್ಲಿ 532 ಕೋಟಿ ರೂಪಾಯಿ ವೆಚ್ಚದಲ್ಲಿ ಅನುಭವ ಮಂಟಪ ನಿರ್ಮಾಣ ಯೋಜನೆಗೆ ರಾಜ್ಯ ಸರ್ಕಾರ ಇಂದು ಒಪ್ಪಿಗೆ ನೀಡಿತು. 


 ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ಇಂದು ನಡೆದ ಬಸವ ಕಲ್ಯಾಣ ಅಭಿವೃದ್ಧಿ ಮಂಡಳಿ ಸಭೆಯಲ್ಲಿ ಈ ಮಹತ್ವದ ನಿರ್ಧಾರ ಕೈಗೊಳ್ಳಲಾಯಿತು.

ಬಸವ ಕಲ್ಯಾಣ ಅಭಿವೃದ್ಧಿ ಮಂಡಳಿ ಕೈಗೆತ್ತಿಕೊಂಡಿರುವ ನೂತನ ಅನುಭವ ಮಂಟಪ ನಿರ್ಮಾಣಕ್ಕೆ ಸರ್ಕಾರ ೫೩೨ ಕೋಟಿ ರೂ.ಗಳ ವೆಚ್ಚದಲ್ಲಿ ಕಾಮಗಾರಿ ಕೈಗೊಳ್ಳಲು ಅನುಮತಿ ನೀಡಿದೆ.  ಮೂರು ವರ್ಷಗಳೊಗಳಾಗಿ  ಕಾಮಗಾರಿಯನ್ನು ಪೂರ್ಣಗೊಳಿಸಲು   ಮುಖ್ಯಮಂತ್ರಿಗಳು  ಸೂಚಿಸಿದರು. 


ಅನುಭವ ಮಂಟಪ ಬಸವಣ್ಣನವರ ಕ್ರಾಂತಿಕಾರಿ ವೇದಿಕೆ. ಈ ಮಂಟಪದ ಮೂಲಕ ಸಮಾಜದ ಓರೆಕೋರೆಗಳನ್ನು ತಿದ್ದುವ ಕೆಲಸವನ್ನು ಬಸವಣ್ಣನವರು ಮಾಡಿದ್ದಾರೆ. ಅವರು ಮಾಡಿರುವ ಸಾಮಾಜಿಕ ಕ್ರಾಂತಿಯನ್ನು ಪ್ರತಿಬಿಂಬಿಸುವ ರೂಪದಲ್ಲಿ ಅನುಭವ ಮಂಟಪ ನಿರ್ಮಾಣವಾಗಲಿದೆ. ಅನುಭವ ಮಂಟಪದಲ್ಲಿ 12ನೇ ಶತಮಾನದಲ್ಲಿ ಇದ್ದಂತಹ ವಚನಕಾರರು ದಾರ್ಶನಿಕ ಪುರುಷರ ಕುರಿತಾದ ಮಾಹಿತಿ ನೀಡುವಂತಹ ಕಿರು ಚಿತ್ರಗಳ ಪ್ರದರ್ಶನ, ಬಸವಣ್ಣನವರ ಜೀವನ ಸಾಧನೆ ಬಿಂಬಿಸುವ ಮಾಹಿತಿಗಳನ್ನು ಅನುಭವ ಮಂಟಪಕ್ಕೆ ಆಗಮಿಸುವ ಎಲ್ಲರಿಗೂ ವಿವರಿಸುವ ವ್ಯವಸ್ಥೆ ಈ ಅನುಭವ ಮಂಟಪದಲ್ಲಿ ಇರಲಿದೆ. 


ಕಂದಾಯ ಸಚಿವ ಆರ್.ಅಶೋಕ್, ಪಶು ಸಂಗೋಪನಾ ಸಚಿವ ಪ್ರಭು ಚೌಹಾಣ್,  ಕೆ.ಕೆ.ಆರ್.ಡಿ.ಬಿ ಅಧ್ಯಕ್ಷ ಬಸವರಾಜ ಪಾಟೀಲ್ ಸೇಡಂ, ರಘುನಾಥ ರಾವ್ ಮಾಲ್ಕಪುರ್, ಅಮರನಾಥ ಪಾಟೀಲ್,  ಶಾಸಕರಾದ ಈಶ್ವರ ಖಂಡ್ರೆ, ಶಶೀಲ್ ನಮೋಶಿ ಮೊದಲಾದವರು ಬಸವಕಲ್ಯಾಣ ಅಭಿವೃದ್ಧಿ ಮಂಡಳಿ ವಿಶೇಷ ಅಧಿಕಾರಿ ಹಾಗೂ ಬೀದರ್ ಜಿಲ್ಲಾಧಿಕಾರಿ ಗೋವಿಂದರೆಡ್ಡಿ, ಬಸವಕಲ್ಯಾಣ ವೃದ್ಧಿ ಮಂಡಳಿಯ ಆಯುಕ್ತ ಶಿವಕುಮಾರ್ ಶೀಲವಂತ ಉಪಸ್ಥಿತರಿದ್ದರು.
[05/05, 8:54 PM] Gurulingswami. Holimatha. Vv. Cm: *ಐಐಟಿ ಮಾದರಿಯಲ್ಲಿ ರಾಜ್ಯದ  ೭ ಇಂಜಿನಿಯರಿಂಗ್ ಕಾಲೇಜುಗಳನ್ನು ಮೇಲ್ದರ್ಜೆಗೇರಿಸಲು ಟಾಸ್ಕ್ ಫೋರ್ಸ್ ರಚನೆಗೆ ಸಿಎಂ ಸೂಚನೆ* 
ಬೆಂಗಳೂರು, ಮೇ 05: ಐಐಟಿ ಮಾದರಿಯಲ್ಲಿ ರಾಜ್ಯದ 6 ಇಂಜಿನಿಯರಿಂಗ್ ಕಾಲೇಜುಗಳನ್ನು ಮೇಲ್ದರ್ಜೆಗೇರಿಸಲು ಟಾಸ್ಕ್ ಫೋರ್ಸ್ ರಚನೆಗೆ ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಸೂಚನೆ  ನೀಡಿದರು. 

ಕರ್ನಾಟಕ ಇನ್ಸಿಟಿಟ್ಯೂಟ್ ಆಫ್ ಟೆಕ್ನಾಲಜಿ ಗಳಾಗಿ ಮೇಲ್ದರ್ಜೆಗೇರಿಸುವ ಯೋಜನೆಗೆ ಸಂಬಂಧಿಸಿದಂತೆ ಎನ್ ಐ ಟಿ, ಐಐಟಿಗಳ ನಿವೃತ್ತ ನಿರ್ದೇಶಕರು, ಶಿಕ್ಷಣ ತಜ್ಞರು ಒಳಗೊಂಡಿರುವ ಸಮಿತಿಯನ್ನು ಇನ್ನೆರಡು ದಿನಗಳ ಒಳಗಾಗಿ ರಚಿಸಬೇಕು. ಕೆ ಐ ಟಿಗಳಿಗೆ ಸೂಕ್ತ ಮಾರ್ಗದರ್ಶನ ನೀಡಲು ಪ್ರಮುಖ ಐಟಿ ಕಂಪನಿಗಳು, ಕೈಗಾರಿಕೋದ್ಯಮಿಗಳ ಪ್ರಮುಖರ ಸೇವೆಯನ್ನು ಪಡೆಯಬಹುದು ಎಂದರು. 

 2022- 23 ರ ಆಯವ್ಯಯದಲ್ಲಿ ಘೋಷಣೆ ಮಾಡಿರುವ ಯೋಜನೆಗಳಿಗೆ ಸಂಬಂಧಿಸಿದಂತೆ  ಅವರ ಅಧ್ಯಕ್ಷತೆಯಲ್ಲಿ ಇಂದು ನಡೆದ ಉನ್ನತ ಶಿಕ್ಷಣ ಇಲಾಖೆಯ ಸಭೆಯ ಮುಖ್ಯಾಂಶಗಳು ಇಂತಿವೆ:   
 
1. ರಾಜ್ಯದ ಆಯ್ದ 14 ಇಂಜಿನಿಯರಿಂಗ್ ಕಾಲೇಜುಗಳನ್ನು ಕರ್ನಾಟಕ ಇನ್ಸಿಟಿಟ್ಯೂಟ್ ಆಫ್ ಟೆಕ್ನಾಲಜಿ ಮೇಲ್ದರ್ಜೆಗೇರಿಸುವ ಯೋಜನೆ ಪ್ರಮುಖವಾದುದು.

2. ಈಗಾಗಲೇ ಉತ್ತಮ ರೀತಿಯಲ್ಲಿ ಸ್ಥಾಪಿತವಾಗಿರುವ ಹಾಗೂ ಮೂಲಸೌಲಭ್ಯ, ಶಿಕ್ಷಕ ವರ್ಗ, ಹಾಸ್ಟೆಲ್ ವ್ಯವಸ್ಥೆಯಿರುವಂತಹ ಕಾಲೇಜುಗಳನ್ನು ಕೆಐಟಿ ಗೆ ಮೇಲ್ದರ್ಜೆಗೆ ಏರಿಸಲು ಆಯ್ದುಕೊಳ್ಳಲಾಗುವುದು

3. ಗುಲ್ಬರ್ಗಾದ ಇಂಜಿಯರಿಂಗ್ ಕಾಲೇಜನ್ನು ಈ ಯೋಜನೆಯಡಿ ಮೇಲ್ದರ್ಜೆಗೇರಿಸಲು ಸೂಕ್ತ ಪ್ರಸ್ತಾವನೆ ಸಲ್ಲಿಸುವುದು.

4. ಕಲ್ಯಾಣ ಕರ್ನಾಟಕದ ಕಲಬುರಗಿ, ಕಿತ್ತೂರು ಕರ್ನಾಟಕ ವಿಭಾಗದಲ್ಲಿ ಹಾವೇರಿ ಹಾಗೂ ಉತ್ತರ ಕನ್ನಡ ( ಕಾರವಾರ) ಇಂಜಿನಿರಿಂಗ್ ಕಾಲೇಜು, ಮೈಸೂರು ವಿಭಾಗದಲ್ಲಿ ಕೆ.ಆರ್.ಪೇಟೆ ಹಾಗೂ ಕೊಡುಗು , ಬೆಂಗಳೂರು ವಿಭಾಗದಲ್ಲಿ ಎಸ್ ಕೆ ಎಸ್ ಜೆ ಟಿ ಐ ಹಾಗೂ ರಾಮನಗರದ ಇಂಜಿನಿಯರಿಂಗ್ ಕಾಲೇಜನ್ನು ಮೇಲ್ದರ್ಜೆಗೇರಿಸಲು ಕ್ರಮ ಕೈಗೊಳ್ಳುವಂತೆ ಸೂಚಿಸಿದರು.

5. ಕರ್ನಾಟಕ ಇನ್ಸಿಟಿಟ್ಯೂಟ್ ಆಫ್ ಟೆಕ್ನಾಲಜಿ ಮುಂದಿನ ವರ್ಷದೊಳಗೆ ಎನ್ ಐ ಟಿ ಮಟ್ಟಕ್ಕೆ ಅಭಿವೃದ್ಧಿಯಾಗಬೇಕು. ಕಾಲೇಜುಗಳಲ್ಲಿ ವಿಷಯವಾರು ಕಲಿಕಾ ಉತ್ಕೃಷ್ಟ ಕೇಂದ್ರಗಳನ್ನಾಗಿ ಪರಿವರ್ತಿಸಲು  ಪ್ರಾಶಸ್ತ್ಯ ನೀಡಬೇಕು.

6. ಕೆಐಟಿಗಳ ನಿರ್ಮಾಣಕ್ಕೆ ವೈಜ್ಞಾನಿಕ ಚಿಂತನೆ ಅಗತ್ಯ. ಆರ್ ಎಂಡ್ ಡಿ ಹಾಗೂ ಉದ್ಯೋಗಾವಕಾಶಗಳಿಗೆ ಇಲ್ಲಿ ಪ್ರಾಮುಖ್ಯತೆ ನೀಡಬೇಕು.


7. ಕೆಐಟಿಗಳಿಗಾಗಿ  ಇಂಜಿನಿಯರಿಂಗ್ ಕಾಲೇಜುಗಳ ಆಯ್ಕೆ,  ಲೋಗೋ, ಬ್ರ್ಯಾಡಿಂಗ್ ಉತ್ತಮ ರೀತಿಯಲ್ಲಿ ಆಗಬೇಕು.
[05/05, 9:33 PM] Gurulingswami. Holimatha. Vv. Cm: *೬೫೦೦ ಶಾಲಾ ಕೊಠಡಿಗಳ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಲು ಮುಖ್ಯಮಂತ್ರಿಗಳ ಸೂಚನೆ* 
ಅಂದಾಜು ೧ ಸಾವಿರ ಕೋಟಿ ‌ ರೂಪಾಯಿ ವೆಚ್ಚದಲ್ಲಿ
ಪ್ರಸಕ್ತ ವರ್ಷದಲ್ಲಿ ಕಾಮಗಾರಿ ಆರಂಭಕ್ಕೆ ಕ್ರಮ

ಬೆಂಗಳೂರು, ಮೇ 05 :  ಪ್ರಾಥಮಿಕ ಶಿಕ್ಷಣ ಇಲಾಖೆಯ ಶಾಲೆಗಳಲ್ಲಿ  ಆರು ಸಾವಿರದ ಐದನೂರಕ್ಕೂ ಹೆಚ್ಚು ಕೊಠಡಿಗಳ ನಿರ್ಮಾಣ  ಕಾರ್ಯವನ್ನು ಅಂದಾಜು ೧ ಸಾವಿರ ಕೋಟಿ ರೂಪಾಯಿ ವೆಚ್ಚದಲ್ಲಿ  ಕೈಗೊಳ್ಳುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚಿಸಿದರು. 

2022- 23 ನೇ ಸಾಲಿನ ಬಜೆಟ್ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಇಂದು ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ನಡೆದ    ಪ್ರಾಥಮಿಕ ಶಿಕ್ಷಣ ಇಲಾಖೆ  ಸಭೆಯಲ್ಲಿ ಅವರು ಮಾತನಾಡುತ್ತಿದ್ದರು. 

ಸರ್ಕಾರಿ ಶಾಲೆಗಳಲ್ಲಿ ಕೊಠಡಿಗಳ ಸಂಖೆ ಕಡಿಮೆ ಇದೆ. ಇದ್ದರೂ ಅಚ್ವುಕಟ್ಟದ ಮತ್ತು ವ್ತವಸ್ಥಿತ ಕೊಠಡಿಗಳ ಸಂಖ್ಯೆ ಕಡಿಮೆ ಇದೆ. ಹೀಗಾಗಿ ಸರ್ಕಾರಿ ಶಾಲೆಗಳಲ್ಲಿ ಪೂರ್ಣಪ್ರಮಾಣದ ಮತ್ತು ಸುಸಜ್ಜಿತ ಕೊಠಡಿಗಳ ನಿರ್ಮಾಣ ಮಾಡಲು ಸರ್ಕಾರ ನಿರ್ಧರಿಸಿದೆ. 

ಸಭೆಯ ಮುಖ್ಯ ಅಂಶಗಳು ಇಂತಿವೆ:

1. ಬಜೆಟ್ ನ ಕಾರ್ಯಕ್ರಮಗಳ ಪರಿಣಾಮಕಾರಿ ಅನುಷ್ಟಾನಕ್ಕೆ ಆರ್ಥಿಕ ಹಾಗೂ ಸಮಯ ನಿರ್ವಹಣೆ ಬಹಳ ಮುಖ್ಯ. ಎಲ್ಲ ಕಾರ್ಯಕ್ರಮಗಳು ನಿಗದಿತ ಅವಧಿಯಲ್ಲಿ ಪೂರ್ಣಗೊಳ್ಳಬೇಕು.


*  ರಾಜ್ಯದ ಸರ್ಕಾರಿ ಶಾಲೆಗಳಲ್ಲಿನ ಮೂಲ ಸೌಕರ್ಯ ಅಭಿವೃದ್ಧಿಗೆ 500 ಕೋಟಿ ರೂ. ಒದಗಿಸಲಾಗುವುದು. ಅಭಿವೃದ್ಧಿ ಆಕಾಂಕ್ಷಿ ತಾಲ್ಲೂಕುಗಳಲ್ಲಿ ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಮೊದಲ ಆದ್ಯತೆ  ನಂತರ ಎಸ್ ಜಿ ಪಿ ಗೆ 2ನೇ ಆದ್ಯತೆ ಹಾಗೂ ನಾನ್ ಎಸ್ ಜಿ ಪಿ ಗಳಿಗೆ 3 ನೇ ಆದ್ಯತೆ ನೀಡುವುದು.


*. ಕೆಕೆಆರ್ ಡಿ ಬಿ ವ್ಯಾಪ್ತಿಯಲ್ಲಿ 32  ಆಕಾಂಕ್ಷಿ ತಾಲ್ಲೂಕುಗಳಿದ್ದು, ಅವುಗಳ ಅಭಿವೃದ್ಧಿಗೆ ಆದ್ಯತೆ.

* ಕ್ಷೇತ್ರವಾರು ಅಭಿವೃದ್ಧಿಗೊಳಿಸುವ ಶಾಲೆಗಳ ಸಂಖ್ಯೆಯನ್ನು ನಿಗದಿಪಡಿಸುವುದು.

* ಈ ಯೋಜನೆಯಡಿ ನಿರ್ಮಾಣವಾಗುವ ಶಾಲಾ ಕಟ್ಟಡಗಳು ಏಕ ರೂಪದ ಮಾದರಿ ಹಾಗೂ ಬಣ್ಣವನ್ನು ಹೊಂದಿರುವುದು ಹಾಗೂ ಈ ಕಟ್ಟಡಗಳಿಗೆ ಹೆಸರನ್ನು ನಮೂದಿಸುವುದು.

* ಸರ್ಕಾರಿ ಶಾಲೆಗಳನ್ನು ಮಾದರಿ ಶಾಲೆಗಳಾಗಿ ಉನ್ನತೀಕರಿಸುವುದಕ್ಕೆ ಸಂಬಂಧಿಸಿದಂತೆ ಸಿಎಸ್ ಆರ್ ತೊಡಗಿರುವ ಕಂಪನಿಗಳೊಂದಿಗೆ ಸಭೆ ನಿಗದಿಪಡಿಸುವುದು.

*ಶಾಲೆಗಳಲ್ಲಿ ಸ್ಪೋಕನ್ ಇಂಗ್ಲೀಷ್ ಕಲಿಸಿಲು ಶಿಕ್ಷಕರ ಸೇವೆಯನ್ನು ಸಿಎಸ್ ಆರ್ ಸಹಯೋಗದಲ್ಲಿ ಪಡೆಯಬಹುದು. ಅಂತೆಯೇ  ಅರೆಕಾಲಿಕ ಶಿಕ್ಷಕರು, ಲ್ಯಾಬ್ ಸಿಬ್ಬಂದಿ ಹಾಗೂ ಸಾರಿಗೆ ವ್ಯವಸ್ಥೆಯನ್ನು ಸಿಎಸ್ ಆರ್ ಸಹಯೋಗದಲ್ಲಿ ಮಾಡಬಹುದಾಗಿದೆ.

*ಸರ್ಕಾರಿ ಪ್ರೌಢಶಾಲೆಗಳು ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ಪೀಠೋಪಕರಣ ಒದಗಿಸಲು 100 ಕೋಟಿ ಅನುದಾನ ನೀಡಲಾಗಿದ್ದು, ಉತ್ತಮ ಗುಣಮಟ್ಟದ ಉತ್ತಮ ಪೀಠೋಪಕರಣ ಸರಬರಾಜು ಮಾಡಲು  ತಾಲ್ಲೂಕು ಮಟ್ಟದಲ್ಲಿ ಟೆಂಡರ್ ಕರೆಯುವುದು.

*ಆಯ್ದ ಪ್ರೌಢಶಾಲೆಗಳನ್ನು ಪದವಿಪೂರ್ವ ಕಾಲೇಜುಗಳನ್ನಾಗಿ ಉನ್ನತೀಕರಿಸುವುದಕ್ಕೆ ಸಂಬಂಧಿಸಿದಂತೆ ಮೊದಲು 100 ಶಾಲೆಗಳನ್ನು ಉನ್ನತೀಕರಣಕ್ಕೆ ಆಯ್ದುಕೊಳ್ಳುವುದು. 1.5 ಕೋಟಿ ರೂ. ರೆಕರಿಂಗ್ ವೆಚ್ಚವಾಗಿ ಪರಿಗಣಿಸುವುದು.

* 20,000 ಅಂಗನವಾಡಿಗಳಲ್ಲಿ ನೂತನ ಪಠ್ಯಕ್ರಮ ಜಾರಿಗೊಳಿಸುವ ಕಾರ್ಯಕ್ರಮವನ್ನು ಜುಲೈ ಮೊದಲನೆ ವಾರದಿಂದ ಪ್ರಾರಂಭಿಸಲು ಸೂಚಿಸಿದರು.

* 1000 ಗ್ರಾಮ ಪಂಚಾಯತಿಗಳನ್ನು ಸಾಕ್ಷರವನ್ನಾಗಿಸುವ ಕಾರ್ಯಕ್ರಮದಡಿಯಲ್ಲಿ ಡಿಜಿಟಲ್ ಶಿಕ್ಷಣ, ಬ್ಯಾಂಕ್ ವಹಿವಾಟು, ಬರವಣಿಗೆ ಇತ್ಯಾದಿ ದೈನಂದಿನ ಅವಶ್ಯಕತೆಗಳ ಬಗ್ಗೆ ಜನರಲ್ಲಿ ಅರಿವು ಮೂಡಿಸುವುದು.

*ಶಾಲಾ ವಿದ್ಯಾರ್ಥಿಗಳಿಗೆ ಸಾರಿಗೆ ಸೌಲಭ್ಯ ಒದಗಿಸಲು ಬಸ್ ವ್ಯವಸ್ಥೆ ಬಗ್ಗೆ ಮಾತನಾಡಿ, ಪ್ರತಿ ತಾಲ್ಲೂಕಿಗೆ 4 ರಿಂದ 5 ಬಸ್‍ಗಳ ಖರೀದಿಗೆ ಶಾಸಕರಿಗೆ ಅನುಮತಿ ನೀಡಲಾಗುವುದು. ಮೊದಲ ಹಂತದಲ್ಲಿ ತಾಲೂಕಾ ಮಟ್ಟದ ಪಿಯುಸಿ ಹಾಗೂ ಡಿಗ್ರಿ ಕಾಲೇಜಿನ ಸಹಯೋಗದೊಂದಿಗೆ ಬಸ್ ವ್ಯವಸ್ಥೆ ಕಲ್ಪಿಸುವುದು.
[05/05, 9:39 PM] Gurulingswami. Holimatha. Vv. Cm: *ಯಶಸ್ವಿನಿ ಯೋಜನೆಯನ್ನು ಅಕ್ಟೋಬರ್ 2 ರಂದು   ಉದ್ಘಾಟನೆ ಮಾಡಲು ಸೂಕ್ತ ಕ್ರಮ ವಹಿಸಲು ಸಿಎಂ.ಸೂಚನೆ*

ಬೆಂಗಳೂರು, ಮೇ 05: ಯಶಸ್ವಿನಿ ಯೋಜನೆಯನ್ನು ಅಕ್ಟೋಬರ್ 2 ರಂದು   ಉದ್ಘಾಟನೆ ಮಾಡಲು ಸೂಕ್ತ ಕ್ರಮ ವಹಿಸುವಂತೆ ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. 

2022- 23 ನೆ ಸಾಲಿನ ಆಯವ್ಯಯ ಘೋಷಣೆಗಳ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಅವರು ಇಂದು ಸಹಕಾರ ಇಲಾಖೆಯ ಪ್ರಗತಿ ಪರಿಶೀಲಿಸಿದರು. 

 *ಸಭೆಯ ಇತರ ಮುಖ್ಯಾಂಶಗಳು:*

. ಕ್ಷೀರ ಸಮೃದ್ಧಿ ಸಹಕಾರ ಬ್ಯಾಂಕ್ ಸ್ಥಾಪನೆಗೆ ಸಂಬಂಧಿಸಿದಂತೆ  ಆರ್.ಬಿ.ಐ ನಿಯಮಾವಳಿಗಳ ಅಗತ್ಯಗಳಿಗೆ ಅನುಸಾರವಾಗಿ ದಾಖಲೆಗಳನ್ನು  ಸಲ್ಲಿಸುವುದು. ಈ ತಿಂಗಳೊಳಗೆ ಕೆಲಸ ಪೂರ್ಣಗೊಳ್ಳಬೇಕು.

2. ಯಶಸ್ವಿನಿ ಯೋಜನೆ ಹಾಗೂ ಎ.ಬಿ.ಆರ್. ಕೆ ಡ್ಯೂಪ್ಲಿಕೇಷನ್ ಆಗಬಾರದು. ಎ.ಬಿ.ಆರ್.ಕೆ ಅರ್ಜಿಗಳನ್ನು ತಿರಸ್ಕರಿಸಕೂಡದು. ತಜ್ಞರಿಂದ ಅಧ್ಯಯನ ಕೈಗೊಂಡು ತೀರ್ಮಾನ ಕೈಗೊಳ್ಳುವುದು.    

3. ಗೋಕಾಕ್, ಬೀದರ್, ಹುಬ್ಬಳ್ಳಿಯಲ್ಲಿ ಸಹಕಾರಿ ವಲಯದ ಆಸ್ಪತ್ರೆಗಳನ್ನು ಬಲಪಡಿಸಲು  ಆಸ್ಪತ್ರೆಗಳಿಗೆ ನೆರವು ಒದಗಿಸಲು ಕ್ರಮ ವಹಿಸುವುದು. 

4. ಸಾಲಮನ್ನಾ :  50 ವರ್ಷಗಳ ಹಳೆಯ ಸೊಸೈಟಿಗಳಿಗೆ ನೆರವು ಒದಗಿಸುವ ಬಗ್ಗೆ ಕ್ರಮ ವಹಿಸುವಂತೆ ಸೂಚಿಸಿದರು.
[05/05, 9:50 PM] Gurulingswami. Holimatha. Vv. Cm: *ಜುಲೈ ಒಳಗೆ ಫಲಾನುಭವಿಗಳ ಆಯ್ಕೆ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಗೆ ಮುಖ್ಯಮಂತ್ರಿ ,ಬಸವರಾಜ ಬೊಮ್ಮಾಯಿ ಸೂಚನೆ*

ಬೆಂಗಳೂರು, ಮೇ 5- ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವ್ಯಾಪ್ತಿಯ ವಿವಿಧ ಯೋಜನೆಗಳಿಗೆ ಜುಲೈ ತಿಂಗಳೊಳಗಾಗಿ ಫಲಾನುಭವಿಗಳ ಆಯ್ಕೆಯನ್ನು ಪೂರ್ಣಗೊಳಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸೂಚಿಸಿದರು.

ಅವರು ಇಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಲ್ಲಿ 2022-23ರ ಆಯವ್ಯಯ ಘೋಷಣೆಗಳ ಅನುಷ್ಠಾನದ ಪ್ರಗತಿ ಪರಿಶೀಲನಾ ಸಭೆ ನಡೆಸಿದರು.
 *ಸಭೆಯ ಇತರ ಮುಖ್ಯಾಂಶಗಳು:* 
1. ಇಲಾಖೆಯ 50 ಕನಕದಾಸ ವಿದ್ಯಾರ್ಥಿನಿಲಯಗಳಿಗೆ  ಸುಸಜ್ಜಿತ ಕಟ್ಟಡ ನಿರ್ಮಾಣಗಳ ಕಾರ್ಯವನ್ನು ಪ್ರಾರಂಭಿಸುವುದು

2. ಈ ವರ್ಷ ಜುಲೈ ಒಳಗೆ ಫಲಾನುಭವಿಗಳ ಆಯ್ಕೆ ಮುಗಿಯಬೇಕು

3. ವಿದ್ಯಾರ್ಥಿನಿಲಯಗಳಲ್ಲಿ ಉತ್ತಮ ಗುಣಮಟ್ಟದ ಆಹಾರ ಒದಗಿಸಲು ಮಾಸಿಕ ಭೋಜನಾ ವೆಚ್ಚವನ್ನು ಹೆಚ್ಚಿಸಲಾಗಿದೆ.

4. ನಾರಾಯಣ ಗುರು ವಸತಿ ಶಾಲೆ ಸ್ಥಾಪನೆಗೆ ಸ್ಥಳ ನಿಗದಿಯಾಗಿದೆ.  ಮೊದಲ ಹಂತದಲ್ಲಿ 5 ಕೋಟಿ ರೂ.ಗಳಿಗೆ ಶಾಲೆಯನ್ನು ಪ್ರಾರಂಭ ಮಾಡುವುದು.  

5. ಒಕ್ಕಲಿಗ ಸಮುದಾಯ ಅಭಿವೃದ್ಧಿ ನಿಗಮಕ್ಕೆ 50 ಕೋಟಿ ಅನುದಾನ ಲಭ್ಯವಿದ್ದು, ಇದನ್ನು 100 ಕೋಟಿ ನೀಡುವುದು, ವೀರಶೈವ ಅಭಿವೃದ್ಧಿ ನಿಗಮಕ್ಕೆ ಲಭ್ಯವಿರುವ 100 ಕೋಟಿ ರೂ.ಗಳು ವೆಚ್ಚವಾದ ನಂತರ ಹೆಚ್ಚುವರಿ 100 ಕೋಟಿ ಗಳನ್ನು ಒದಗಿಸುವುದು. ಕಾಡುಗೊಲ್ಲ ಅಭಿವೃದ್ಧಿ ನಿಗಮ ಸ್ಥಾಪನೆಗೆ ಸಂಬಂಧಿಸಿದಂತೆ ತುರ್ತಾಗಿ ಸಭೆ ಕರೆಯುವಂತೆ ಸೂಚಿಸಿದರು.

6. ದೇವರಾಜ ಅರಸ್ ಹಿಂದುಳಿದ ವರ್ಗಗಳ ಹಿಂದುಳಿದ ನಿಗಮದ ಮೂಲಕ ಅನುಷ್ಠಾನಗೊಳಿಸುತ್ತಿರುವ ಯೋಜನೆಗಳ ಫಲಾನುಭವಿಗಳ ಆಯ್ಕೆಯಲ್ಲಿ ಶೇ 85 ರಷ್ಟು  ಪ್ರವರ್ಗ 1 ಮತ್ತು 2 ಎ ಗೆ ವರ್ಗೀಕರಿಸಿ ಬರುವ ಸಮುದಾಯಗಳ ಪಟ್ಟಿಯನ್ನು ಕಡತದಲ್ಲಿ ಸಲ್ಲಿಸುವಂತೆ ತಿಳಿಸಿದರು.

7. ಕೊಡವ ಜನಾಂಗದ ಶ್ರೇಯೋಭಿವೃದ್ಧಿಗಾಗಿ 10 ಕೋಟಿ ರೂ. ಮೊತ್ತದಲ್ಲಿ ಅಭಿವೃದ್ಧಿ ಯೋಜನೆಯಡಿ ವೈಯಕ್ತಿಕ ಸೌಲಭ್ಯಗಳನ್ನು ನೀಡುವುದು

8. ಅಮೃತ ಮುನ್ನಡೆ ನೂತನ ಯೋಜನೆಗೆ ಮುಂದಿನ ವಾರದಿಂದ ಅರ್ಜಿ ಕರೆಯುವುದು .  ಪದವಿ ಕೋರ್ಸುಗಳ ವಿದ್ಯಾರ್ಥಿಗಳಿಗೆ ಸೀಮಿತಗೊಳಿಸುವುದು.

9. ಸಮಾಜ ಕಲ್ಯಾಣ, ಪರಿಶಿಷ್ಟ ಪಂಗಡ ಕಲ್ಯಾಣ, ಹಿಂದುಳಿದ ವರ್ಗಗಳ ಕಲ್ಯಾಣ ಮತ್ತು ಅಲ್ಪಸಂಖ್ಯಾತರ ಇಲಾಖೆಗಳಿಂದ 50,000 ವಿದ್ಯಾರ್ಥಿಗಳಿಗೆ ಸರ್ಕಾರಿ ಉದ್ಯೋಗಕ್ಕೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ ನೀಡುವ ಕುರಿತು ಸಮಾಜ ಕಲ್ಯಾಣ ಹಿಂದುಳಿದ ವರ್ಗಗಳ, ಉನ್ನತ ಶಿಕ್ಷಣ ಇಲಾಖೆಗಳ ಸಭೆ ಕರೆದು, ಮೆರಿಟ್ ಆಧಾರದ ಮೇಲೆ ಅಭ್ಯರ್ಥಿಗಳ ಸಂಖ್ಯೆಯನ್ನು ನಿಗದಿಪಡಿಸುವಂತೆ ಸೂಚಿಸಿದರು.

Post a Comment

Previous Post Next Post