CM ಇಂದು... ಎಲ್ಲಿ... ಎನುಮಾಡಿದ್ರೂ... ಓದಿ ಇಲ್ಲಿ

[06/05, 11:33 AM] Gurulingswami. Holimatha. Vv. Cm: ಬೆಂಗಳೂರಿನ ಜಯನಗರ ಬಡಾವಣೆಯಲ್ಲಿ ಇರುವ ಕೇಂದ್ರದ ಮಾಜಿ ಸಚಿವ ದಿವಂಗತ ಅನಂತ್ ಕುಮಾರ್ ಅವರ ಕಚೇರಿಯನ್ನು ಅನಂತ ಪ್ರೇರಣಾ ಕೇಂದ್ರವನ್ನಾಗಿ ಪರಿವರ್ತಿಸಲಾಗಿದ್ದು,  ಈ ಕೇಂದ್ರವನ್ನು ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್,   ಇಂದು ಉದ್ಘಾಟನೆ ಮಾಡಿದರು. ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸಂಸದ ತೇಜಸ್ವಿ ಸೂರ್ಯ, ಶಾಸಕರಾದ ಉದಯ ಗರುಡಾಚಾರ್, ರವಿಸುಬ್ರಹ್ಮಣ್ಯ,
ಅದಮ್ಯ ಚೇತನ ಸಂಸ್ಥೆ ಮುಖ್ಯಸ್ಥೆ ತೇಜಸ್ವಿನಿ ಅನಂತಕುಮಾರ್,
ಅನಂತಕುಮಾರ ಪ್ರತಿಷ್ಠಾನದ ಅಧ್ಯಕ್ಷ ಪಿ ಕೃಷ್ಣ ಭಟ್ ಮತ್ತು ಇತರರು ಉಪಸ್ಥಿತರಿದ್ದರು.
[06/05, 12:56 PM] Gurulingswami. Holimatha. Vv. Cm: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಬೆಂಗಳೂರಿನಲ್ಲಿ ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ಅವರನ್ನು ಭೇಟಿ ಮಾಡಿ ಸೌಹಾರ್ದಯುತವಾಗಿ ಮಾತುಕತೆ ನಡೆಸಿ ಹುಟ್ಟುಹಬ್ಬದ ಶುಭಾಶಯ ಕೋರಿದರು. ಈ ಸಂದರ್ಭದಲ್ಲಿ ಕಂದಾಯ ಸಚಿವ ಆರ್ ಅಶೊಕ, ಶಾಸಕ ಎಂ ಕೃಷ್ಣಪ್ಪ ಉಪಸ್ಥಿತರಿದ್ದರು.
[06/05, 1:35 PM] Gurulingswami. Holimatha. Vv. Cm: ಬೆಂಗಳೂರು, ಮೇ 06: 2022- 23 ನೇ ಆಯವ್ಯಯದಲ್ಲಿ ಘೋಷಣೆಯಾಗಿರುವ ಯೋಜನೆಗಳ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ಇಂದು ಅರಣ್ಯ ಇಲಾಖೆ ಸಭೆ ಜರುಗಿತು. 

ಸಭೆಯಲ್ಲಿ ಅರಣ್ಯ ಸಚಿವ ಉಮೇಶ್ ಕತ್ತಿ, ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್, ಅಭಿವೃದ್ಧಿ ಆಯುಕ್ತೆ ಹಾಗೂ ಅಪರ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ, ಆರ್ಥಿಕ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಐ.ಎಸ್.ಎನ್. ಪ್ರಸಾದ್, ಯೋಜನಾ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಡಾ: ಶಾಲಿನಿ ರಜನೀಶ್, ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಮಂಜುನಾಥ್ ಪ್ರಸಾದ್, ಅರಣ್ಯ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಜಾವೇದ್ ಅಖ್ತರ್,  ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಳಾದ  ಆರ್.ಕೆ.ಸಿಂಗ್, ವಿಜಯ್ ಕುಮಾರ್ ಗೋಗಿ ಹಾಗೂ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
[06/05, 1:49 PM] Gurulingswami. Holimatha. Vv. Cm: *ರಾಜ್ಯ ನೆಲ ಜಲ ವಿಚಾರಗಳಲ್ಲಿ ರಾಜ್ಯದ ಪರ ಗಟ್ಟಿ ನಿಲುವು ತಳೆದಿದ್ದ ಅನಂತಕುಮಾರ್: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ*

ಬೆಂಗಳೂರು, ಮೇ 06 :  

ಕೇಂದ್ರದ ಮಾಜಿ ಸಚಿವರಾಗಿದ್ದ ದಿವಂಗತ ಅನಂತ್ ಕುಮಾರ್ ಅವರು ರಾಜ್ಯದ ನೆಲ ಜಲ ವಿಷಯಗಳಲ್ಲಿ  ರಾಜ್ಯ ಹಾಗೂ ಕನ್ನಡ ಜನರ ಪರ ಗಟ್ಟಿ ನಿಲುವು ಹೊಂದಿದ್ದರು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಅವರು ಇಂದು ಬೆಂಗಳೂರಿನ ಜಯನಗರ ಬಡಾವಣೆಯ  ಅನಂತ್ ಕುಮಾರ್ ಅವರ ಕಚೇರಿಯಲ್ಲಿ  ಅನಂತ ಪ್ರೇರಣಾ ಕೇಂದ್ರವನ್ನು ಉದ್ಘಾಟಿಸಿ ಮಾತನಾಡಿದರು.


ಬೆಂಗಳೂರಿನ ಮೆಟ್ರೋ, ಅಂತರರಾಷ್ಟ್ರೀಯ ವಿಮಾನ ನಿಲ್ದಾಣ, ಹುಬ್ಬಳ್ಳಿ ನೈರುತ್ಯ ರೈಲ್ವೆ ವಿಭಾಗ, ಕೃಷ್ಣಾ ಮೇಲ್ದಂಡೆ ಯೋಜನೆ, ಕಾವೇರಿ ಜಲ ವಿಷಯದಲ್ಲಿ ಬಿಗಿ ನಿಲುವಿನಿಂದ ರಾಜ್ಯಕ್ಕೆ ಪರಿಹಾರ ಕೊಡಿಸುವಲ್ಲಿ ಅನಂತಕುಮಾರ್ ಅವರು ಪ್ರಮುಖ ಪಾತ್ರ ವಹಿಸಿದ್ದರು. ಅವರು ಬೆಂಗಳೂರಿನ ಸಮಗ್ರ ಅಭಿವೃದ್ಧಿಗೆ ದೊಡ್ಡ ಕೊಡುಗೆಯನ್ನು ನೀಡಿದ್ದಾರೆ. ಕೇಂದ್ರದಿಂದ ಆಗಬೇಕಾದ ಬೆಂಗಳೂರಿನ ಹಾಗೂ ರಾಜ್ಯದ ಎಲ್ಲ ಯೋಜನೆಗಳನ್ನು ಕಾರ್ಯಗತಗೊಳಿಸಲು ಸಹಕಾರ ನೀಡಿದ್ದರು ಎಂದು ಸಿಎಂ ಬೊಮ್ಮಾಯಿ ಹೇಳಿದರು.
 
 ಅತ್ಯಂತ ಆತ್ಮೀಯ ಸ್ನೇಹಿತರಾಗಿದ್ದ ಅವರ ಸ್ಥಾನಮಾನಗಳು ನಮ್ಮೊಂದಿಗಿನ ಸ್ನೇಹವನ್ನು ಬದಲಾಯಿಸಿರಲಿಲ್ಲ.  ಕೃಷ್ಣಾ ಟ್ರಿಬ್ಯುನಲ್ ವಿಚಾರದಲ್ಲಿ  ಸರ್ವೋಚ್ಛ ನ್ಯಾಯಾಲಯದಲ್ಲಿ  ನ್ಯಾಯ ಸಮ್ಮತವಾಗಿ ಕರ್ನಾಟಕದ ಪರವಾಗಿ ಹೋರಾಟ  ಮಾಡಿ ಕರ್ನಾಟಕದ ಹಿತ ಕಾಪಾಡಿದ್ದಾರೆ. ಆ ಮೂಲಕ ರಾಜ್ಯದ ಆಪತ್ತನ್ನು ಅವರು ತಪ್ಪಿಸಿದರು ಎಂದರು.

*ಸಾರ್ವಜನಿಕ ಹೋರಾಟದ ಅತ್ಯಂತ ಆತ್ಮೀಯ ಸಂಗಾತಿ :*
 ನನ್ನ ಸಾರ್ವಜನಿಕ ಹೋರಾಟದ ಅತ್ಯಂತ ಆತ್ಮೀಯ ಸಂಗಾತಿ, ಜನಮೆಚ್ಚಿದ ನಾಯಕರಾದ ಅನಂತಕುಮಾರ್ ಅವರು ಎಲ್ಲರಿಗೂ ಪ್ರೇರಣೆ. ಕನಾಟಕ ಎಂದು ಕೂಡ ಅನಂತಕುಮಾರ್ ಅವರನ್ನು ಮರೆಯಲು ಸಾಧ್ಯವಿಲ್ಲ. ನಮ್ಮ ಬದುಕಿನಲ್ಲಿ ಅವರು ಅನಂತವಾಗಿದ್ದಾರೆ ಎಂದು ತಿಳಿಸಿದರು.

*ಅನಂತಕುಮಾರ್ ಒಬ್ಬ ನೈಜ ನಾಯಕ*

ಅನಂತಕುಮಾರ್ ಒಬ್ಬ ನೈಜ ನಾಯಕ. ಯಾವುದೇ ಸ್ಥಿತಿಯಲ್ಲಿ, ಹಂತದಲ್ಲಿ ನಾಯಕತ್ವವನ್ನು ವಹಿಸುವ ನೈಜ ನಾಯಕ ಎನಿಸಿಕೊಳ್ಳುತ್ತಾರೆ. ವಿದ್ಯಾರ್ಥಿ ದೆಸೆಯಿಂದ ವಿದ್ಯಾರ್ಥಿ ಆಂದೋಲನದಲ್ಲಿ, ಮುಂದೆ  ಎಬಿವಿಪಿ ಸಂಘಟನೆಗಳಲ್ಲಿ ನಾಯಕತ್ವ ವಹಿಸಿದರು. ಭಾರತೀಯ  ಜನತಾ ಪಕ್ಷದ ಸಕ್ರಿಯ ಕಾರ್ಯಕರ್ತನಾಗಿ ನಾಯಕತ್ವ ವಹಿಸಿದರು. ಪಕ್ಷವನ್ನು ಅಧಿಕಾರಕ್ಕೆ ತರುವಲ್ಲಿ  ಬಲಪಡಿಸುವುದರಲ್ಲಿ ನಾಯಕತ್ವ ವಹಿಸಿದರು.  ಹತ್ತು ಜನ ಇದ್ದಾಗಲೂ, ಹತ್ತು ಲಕ್ಷ ಜನ ಇದ್ದಾಗಲೂ ನಾಯಕತ್ವ ವಹಿಸಿದ್ದರು. ಬಹಳ ಅಪರೂಪದ ನಾಯಕತ್ವ ಅವರದ್ದು ಎಂದರು. 

*ಆತ್ಮೀಯ ಒಡನಾಟ*
ಯಾವ ಉದ್ದೇಶಕ್ಕಾಗಿ ಬದುಕು ನಡೆಸಿದರೊ ಅದಕ್ಕಾಗಿ ಅವರು ಹೋರಾಟವನ್ನು ಮಾಡಿದವರು ಅನಂತ ಕುಮಾರ್. ಚಿಕ್ಕಂದಿನಿಂದಲೂ ನಮ್ಮಿಬ್ಬರ  ಸ್ನೇಹವಿತ್ತು. ಅವರು ನನ್ನ ಸಹಪಾಠಿಗಳಾಗಿದ್ದರು. ನಮ್ಮ ಮಧ್ಯೆ ಆತ್ಮೀಯ ಒಡನಾಟವಿತ್ತು. ನಮ್ಮ ನಡುವೆ ಯಾರೇ  ಕಾಲೇಜಿಗೆ ತಡವಾಗಿ ಹೋದರೂ  ಒಬ್ಬರು  ಬೆಂಚನ್ನು ಕಾಯ್ದಿರಿಸುತ್ತಿದ್ದೆವು. ತುರ್ತು ಪರಿಸ್ಥಿತಿ ಘೋಷಣೆಯಾದ ಸಂದರ್ಭದಲ್ಲಿ  ವಿದ್ಯಾರ್ಥಿ ಕ್ರಿಯಾ ಸಮಿತಿ ರೂಪಿಸಿ ಅನಂತ ಕುಮಾರ್ ಅವರನ್ನು ಕಾರ್ಯದರ್ಶಿಗಳನ್ನಾಗಿ ಮಾಡಿದೆವು. ತುರ್ತು ಪರಿಸ್ಥಿತಿ ವಿರುದ್ಧ ದೊಡ್ಡ ಪ್ರಮಾಣದ ಹೋರಾಟ ಮಾಡುವಂತಿರಲಿಲ್ಲ.  ಆದರೆ ಅಂಥ ಸಂದರ್ಭದಲ್ಲಿಯೂ ನೂರಾರು ವಿದ್ಯಾರ್ಥಿಗಳನ್ನು ಸೇರಿಸಿ ದೊಡ್ಡ ಹೋರಾಟ ಮಾಡಲಾಯಿತು. ಲಾಠಿ ಚಾರ್ಜ್ ಆಗಿ ಪೊಲೀಸರು ಅನಂತ ಕುಮಾರ್  ಅವರನ್ನು ಬಂಧಿಸಿದರು.  ಇದರಿಂದಾಗಿ ಒಂದು ವರ್ಷ ವಿದ್ಯಾರ್ಥಿ ಜೀವನ ವ್ಯರ್ಥವಾಯಿತು.  ನಂತರ ಕಾನೂನಿನ ವಿದ್ಯಾರ್ಥಿಯಾದರು. ಆ ಸಂದರ್ಭಗಳಲ್ಲಿ ಅವರಲ್ಲಿ ನಾಯಕತ್ವದ ವಿಚಾರ ಹಾಗೂ ಗುಣಗಳನ್ನು ಅವರಲ್ಲಿ ಕಂಡೆ. ದೂರದೃಷ್ಟಿ ಇದ್ದ ನಾಯಕರು ಅನಂತ ಕುಮಾರ್ ಎಂದರು. 

*ಪ್ರೀತಿಯ ಗಾಳ*
 ಗಂಭೀರ ರಾಜಕಾರಣದ ಜೊತೆಗೆ ಹಾಸ್ಯ ಪ್ರಜ್ಞೆಯೂ ಅವರಲ್ಲಿತ್ತು. 30- 40 ವರ್ಷ ಒಟ್ಟಿಗಿದ್ದರೂ, ಒಂದು ದಿನವೂ ದುಃಖಿತರಾಗಿ ಅಥವಾ ಚಿಂತಾಕ್ರಾಂತರಾಗಿ ಎಂದೂ ಇರಲಿಲ್ಲ. ಎಂಥಾ ಸ್ಥಿತಿ ಎದುರಾದರೂ ಸ್ಥಿತಪ್ರಜ್ಞತೆಯಿಂದ ಎಲ್ಲವನ್ನೂ ಎದುರಿಸುತ್ತಿದ್ದರು.  ನಗುನಗುತ್ತಾ ಇರುತ್ತಿದ್ದರು. ಸಮಸ್ಯೆಗಳನ್ನು ಬಗೆಹರಿಸಲು ಏನು ಮಾಡಬೇಕೋ ಅದನ್ನು ಮಾಡಬೇಕು ಎನ್ನುತ್ತಿದ್ದರು . ಇನ್ನೊಬ್ಬರಿಗೆ ಊಟ ಹಾಕಿಸುವುದರಲ್ಲಿ ಅವರಿಗೆ ಬಹಳ ಆಸಕ್ತಿ. ನನ್ನ ಬಗ್ಗೆ ಬಹಳ ಪ್ರೀತಿ. ಅವರ ಪ್ರೀತಿಯ ಗಾಳದಿಂದ ತಪ್ಪಿಸಿಕೊಳ್ಳಲು ಸಾಧ್ಯವಾಗಲಿಲ್ಲ. ಮಂತ್ರಿ ಸ್ಥಾನ  ನಮ್ಮ ಸಂಬಂಧವನ್ನು ಎಂದೂ ಬದಲಾಯಿಸಲಿಲ್ಲ ಎಂದು ಸ್ಮರಿಸಿದರು.

ಶ್ರೀಮತಿ ತೇಜಸ್ವಿನಿ ಅನಂತಕುಮಾರ್ ಅವರ ಸಾಮಾಜಿಕ ಚಟುವಟಿಕೆಗಳು, ಅದಮ್ಯಚೇತನದ ಕೆಲಸ, ಸಸ್ಯಾಗ್ರಹ ಕಾರ್ಯಕ್ರಮ ಎಲ್ಲವೂ ಮುಂದುವರೆದಿರುವುದು ಶ್ಲಾಘನೀಯ. ಅನಂತಕುಮಾರ್ ಸ್ಮಾರಕ ನಿರ್ಮಾಣಕ್ಕೆ ಸರ್ಕಾರ ಎಲ್ಲ ಸಹಕಾರ ನೀಡುತ್ತದೆ ಎಂದರು.
[06/05, 2:15 PM] Gurulingswami. Holimatha. Vv. Cm: *ಮಂಡ್ಯದಲ್ಲಿ ಬಿಜೆಪಿ ಪಕ್ಷದ ಸಮಾವೇಶ ನಡೆಸುವ ಬಗ್ಗೆ ಚರ್ಚಿಸಿ ತೀರ್ಮಾನ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ*

ಬೆಂಗಳೂರು, ಮೇ 06:

ಮಂಡ್ಯದಲ್ಲಿ ಬಿಜೆಪಿ ಪಕ್ಷದ ಸಮಾವೇಶ ನಡೆಸುವ ಬಗ್ಗೆ ಪಕ್ಷದ ವೇದಿಕೆಯಲ್ಲಿ ಚರ್ಚೆ ಮಾಡಿ ನಡೆಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದರು.  

ಅವರು ಇಂದು ಬೆಂಗಳೂರಿನಲ್ಲಿ ಮಾಜಿ ಮುಖ್ಯಮಂತ್ರಿ ಎಸ್.ಎಂ ಕೃಷ್ಣ ಅವರನ್ನು ಭೇಟಿ ಮಾಡಿ ಸೌಹಾರ್ದಯುತವಾಗಿ ಮಾತುಕತೆ ನಡೆಸಿ ಹುಟ್ಟುಹಬ್ಬದ ಶುಭಾಶಯ ಕೋರಿ ನಂತರ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದರು.

ರಾಜ್ಯದ ಎಲ್ಲಾ ಭಾಗದಿಂದಲೂ  ಬಹಳ ಜನ ಬಿಜೆಪಿಗೆ ಬರುತ್ತಿದ್ದಾರೆ. ವಿಶೇಷವಾಗಿ ಕೋಲಾರ, ಮಂಡ್ಯದಿಂದ ಹೆಚ್ವು ಜನ  ಬರುತ್ತಿದ್ದಾರೆ. ಬ್ಯಾಚ್ ವಾರು ಸೇರ್ಪಡೆ ಮಾಡುವ ಕೆಲಸವಾಗುತ್ತಿದೆ. ಬಹಳ ದೊಡ್ಡ ಪ್ರಮಾಣದಲ್ಲಿ ದಕ್ಷಿಣ ಕರ್ನಾಟಕದಲ್ಲಿ  ಸಾರ್ವಜನಿಕರು ಹಾಗೂ ವಿಶೇಷವಾಗಿ ಯುವಕರು ಪಕ್ಷಕ್ಕೆ ಬರಲು  ಒಲವು ತೋರುತ್ತಿದ್ದಾರೆ. ಹೀಗಾಗಿ ಮಂಡ್ಯ ಜಿಲ್ಲೆಯಲ್ಲಿ ಹೊಸ ಯುವ ನಾಯಕತ್ವ ಹೊರಹೊಮ್ಮುವ ಎಲ್ಲಾ ಲಕ್ಷಣಗಳು ಕಾಣುತ್ತಿವೆ. ಬಿಜೆಪಿಯ ಪರವಾಗಿ ಮಂಡ್ಯದಲ್ಲಿ ಬಹಳ ದೊಡ್ಡ ಶಕ್ತಿಯ ಅಲೆ ಕಾಣುತ್ತಿದೆ ಎಂದು ಬಸವರಾಜ ಬೊಮ್ಮಾಯಿ ಹೇಳಿದರು.
 

ಎಸ್.ಟಿ. ಜಯರಾಂ ಮಾತ್ರ ಅಲ್ಲದೆ ಯಾರು ನಮ್ಮ ಪಕ್ಷದ ಬಗ್ಗೆ ಹಾಗೂ ಪಕ್ಷದ ವಿಚಾರಗಳ ಬಗ್ಗೆ ಒಲವು ತೋರಿಸಿದ್ದಾರೆಯೋ ಅವರೆಲ್ಲ ಬಳಿ ಮಾತನಾಡಲಾಗುವುದು ಎಂದರು.

90ನೇ ಹುಟ್ಟು ಹಬ್ಬವನ್ನು ಆಚರಿಸಿಕೊಂಡ ಮಾಜಿ ಮುಖ್ಯಮಂತ್ರಿ ಎಸ್.ಎಂ ಕೃಷ್ಣ ಅವರು ಆರೋಗ್ಯವಂತರಾಗಿರಲಿ ಎಂದು ದೇವರಲ್ಲಿ ಪ್ರಾರ್ಥಿಸಿರುವುದಾಗಿ ಮುಖ್ಯಮಂತ್ರಿಗಳು ಶುಭ ಹಾರೈಸಿದರು. ಅವರ ಮಾರ್ಗದರ್ಶನ ಸರ್ಕಾರ ಮತ್ತು ರಾಜ್ಯದ ಜನತೆಗೆ ದೊರೆಯುವಂತಾಗಲಿ ಎಂದು ತಿಳಿಸಿದರು.
[06/05, 2:31 PM] Gurulingswami. Holimatha. Vv. Cm: ಬೆಂಗಳೂರು, ಮೇ 06: 2022- 23 ನೇ ಆಯವ್ಯಯದಲ್ಲಿ ಘೋಷಣೆಯಾಗಿರುವ ಯೋಜನೆಗಳ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ಇಂದು ಕಂದಾಯ ಇಲಾಖೆ ಸಭೆ ಜರುಗಿತು. 

ಸಭೆಯಲ್ಲಿ ಕಂದಾಯ ಸಚಿವ ಆರ್.ಅಶೋಕ್, ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್, ಅಭಿವೃದ್ಧಿ ಆಯುಕ್ತೆ ಹಾಗೂ ಅಪರ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ, ಆರ್ಥಿಕ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಐ.ಎಸ್.ಎನ್. ಪ್ರಸಾದ್, ಯೋಜನಾ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಡಾ: ಶಾಲಿನಿ ರಜನೀಶ್, ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಮಂಜುನಾಥ್ ಪ್ರಸಾದ್, ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ತುಷಾರ್ ಗಿರಿನಾಥ್   ಕಂದಾಯ ಇಲಾಖೆ ಹಿರಿಯ ಅಧಿಕಾರಿಗಳಾದ  ಮನೀಶ್ ಮೌದ್ಗಿಲ್, ರೋಹಿಣಿ ಸಿಂಧೂರಿ ಬಿ ಆರ್ ಮಮತಾ ಮತ್ತಿತರ ಹಿರಿಯ ಅಧಿಕಾರಿಗಳು  ಉಪಸ್ಥಿತರಿದ್ದರು.
[06/05, 5:27 PM] Gurulingswami. Holimatha. Vv. Cm: *ಜೈವಿಕ ಹಾಗೂ ಅರಣ್ಯ ನಾಶವನ್ನು ಗುರುತಿಸಲು ಕ್ರಿಯಾ ಯೋಜನೆ ರೂಪಿಸಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ*

ಬೆಂಗಳೂರು, ಮೇ 06: ರಾಜ್ಯದಲ್ಲಿ ಅರಣ್ಯ ಜೀವಿಶಾಸ್ತ್ರ ವ್ಯವಸ್ಥೆಯ ಮೇಲೆ ಉಂಟಾಗಿರುವ ದುಷ್ಟಪರಿಣಾಮಗಳನ್ನು ಸರಿದೂಗಿಸಲು ಐಐಎಸ್ಸಿ ಸಂಸ್ಥೆಯ ತಜ್ಞರ ನೆರವಿನೊಂದಿಗೆ ಕ್ರಿಯಾ ಯೋಜನೆ ರೂಪಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸೂಚಿಸಿದರು. 

2022-23 ನೇ ಸಾಲಿನ ಆಯವ್ಯಯ ಘೋಷಣೆಗಳ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಅವರ ಅಧ್ಯಕ್ಷತೆಯಲ್ಲಿ ಇಂದು  ನಡೆದ ಅರಣ್ಯ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದರು.
  
ಸಭೆಯ ಮುಖ್ಯಾಂಶಗಳು:  
1. ಕ್ರಿಯಾಯೋಜನೆ ಸಿದ್ದಪಡಿಸಿ ಜಿಲ್ಲೆಗಳಿಗೆ  ಕಾಲಮಿತಿ ನಿಗದಿಪಡಿಸಿ ಅನುಷ್ಠಾನದ ರೂಪುರೇಷೆಗಳನ್ನು   ಸಿದ್ಧಪಡಿಸುವುದು.  

2.  ವಿಶ್ವ ಬ್ಯಾಂಕ್  ನೆರವಿನ ಪ್ಲಾಸ್ಟಿಕ್ ನಿರ್ವಹಣೆ ಯೋಜನೆಗೆ ದೊಡ್ಡ ಮೊತ್ತದ  ಅನುದಾನ ನಿಗದಿಪಡಿಸಿದೆ.  ಪ್ಲಾಸ್ಟಿಕ್ ನಿಯಂತ್ರಣಕ್ಕೆ ನಿರ್ದಿಷ್ಟ ಯೋಜನೆಯನ್ನು ರೂಪಿಸಬೇಕು. ವ್ಯಾಪಕ ಪ್ರಚಾರ ನೀಡಬೇಕು. ಸಾರ್ವಜನಿಕರನ್ನು  ತೊಡಗಿಸಿಕೊಳ್ಳಬೇಕು. ಫಲಿತಾಂಶವನ್ನು ಜನರಿಗೆ ತಿಳಿಸುವಂತೆ ಸೂಚಿಸಿದರು.  

3. ಶ್ರೀಗಂಧ ನೀತಿ ದುರ್ಬಳಕೆಯಾಗದಂತೆ ಎಚ್ಚರ ವಹಿಸುವಂತೆ ತಿಳಿಸಿದರು. 

4.ಸಂರಕ್ಷಣಾ ಮೀಸಲು ಅರಣ್ಯ ಪ್ರದೇಶಗಳಿಗೆ 5.00 ಕೋಟಿ ರೂ.ಗಳ ವಿಶೇಷ ಅನುದಾನ ಒದಗಿಸಲಾಗಿದೆ. ಕಾಡಿನ ಹೊರಗಿರುವ ಪ್ರಾಣಿಗಳ ಸಂರಕ್ಷಣೆಯನ್ನು  ಕೈಗೊಳ್ಳುವುದು.

5. ಮಾನವ- ಪ್ರಾಣಿ ಸಂಘರ್ಷ ನಿಯಂತ್ರಣಕ್ಕೆ ರೈಲು ಹಳಿ ತಡೆಗೋಡೆ ನಿರ್ಮಾಣಕ್ಕೆ 100 ಕೋಟಿ ರೂ.ಗಳನ್ನು ಒದಗಿಸಲಾಗಿದೆ.

6. ಮರಗಳ ಕಡಿತಲೆ ಮತ್ತು ಸಾಗಾಣಿಕೆ ಸರಳೀಕರಣ ಯೋಜನೆಯಡಿ  ಖಾಸಗಿ ಭೂಮಿಗಳಲ್ಲಿ ರೈತರು ಬೆಳೆದಿರುವ ಮರಗಳನ್ನು ಕಡಿಯುವ ಮತ್ತು ಸಾಗಣಿಕೆ ಮಾಡಲು ಅನುಮತಿ ಪ್ರಕ್ರಿಯೆ ಸರಳೀಕರಣ ಮಾಡುವುದು- ದುರ್ಬಳಕೆಯಾಗದಂತೆ ಕ್ರಮ ವಹಿಸುವುದು. ಹಳಿಯಾಳ, ದಾಂಡೇಲಿಗಳಲ್ಲಿನ ಟಿಂಬರ್ ಮಾರುಕಟ್ಟೆ ಮೇಲೆ ನಿಯಂತ್ರಿಸಬೇಕು.

7. ಆಡಳಿತದಲ್ಲಿ ಸುಧಾರಣೆ: ಮಾಲಿನ್ಯ ನಿಯಂತ್ರಣಾ ಮಂಡಳಿಯಲ್ಲಿ ಅರ್ಜಿಗಳ ಸರಳೀಕರಣ ಮಾಡುವುದು.  ಮಾಲಿನ್ಯಗಳ ವರ್ಗೀಕರಣವನ್ನು ಮಂಡಳಿ ತೀರ್ಮಾನಿಸಲಿ. 
 ಭ್ರಷ್ಟಾಚಾರಕ್ಕೆ ಕಡಿವಾಣ ಹಾಕಬೇಕು. ಕ್ಷಿಷ್ಟವಿರುವ ಕೆಲವು ನಿಯಮಗಳನ್ನು ತೆಗೆದುಹಾಕಬೇಕು. ವ್ಯವಸ್ಥೆಯನ್ನು ಆದಷ್ಟು ಸರಳೀಕರಿಸಬೇಕು ಎಂದು ಸೂಚಿಸಿದರು. ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳಿಗೆ ತೊಂದರೆಯಾಗಬಾರದು.  ಸಮ್ಮತಿಗಾಗಿ ಸಲ್ಲಿಕೆಯಾಗುವ ಅರ್ಜಿಗಳಿಗೆ ಅನುಮತಿ ನೀಡುವ ಮುನ್ನ  ಕಡ್ಡಾಯವಾಗಿ  ಕೈಗಾರಿಕೆಗಳಿಗೆ ಭೇಟಿ  ನೀಡಿ ಪರಿಶೀಲಿಸುವುದು.

8. ಬೆಳಗಾವಿ ಹಿಡ್ಕಲ್ ಅಣೆಕಟ್ಟು ಪ್ರದೇಶದಲ್ಲಿ ಪಕ್ಷಿಧಾಮ ಮತ್ತು ಚಿಟ್ಟೆಗಳ ಉದ್ಯಾನವನ್ನು ಪ್ರವಾಸೋದ್ಯಮ ದೃಷ್ಟಿ ಇಟ್ಟುಕೊಂಡು ಅಭಿವೃದ್ಧಿಪಡಿಸುವುದು.  

ಸಭೆಯಲ್ಲಿ ಅರಣ್ಯ ಸಚಿವ ಉಮೇಶ್ ಕತ್ತಿ, ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್, ಅಭಿವೃದ್ಧಿ ಆಯುಕ್ತೆ ಹಾಗೂ ಅಪರ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ, ಆರ್ಥಿಕ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಐ.ಎಸ್.ಎನ್. ಪ್ರಸಾದ್, ಯೋಜನಾ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಡಾ: ಶಾಲಿನಿ ರಜನೀಶ್, ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಮಂಜುನಾಥ್ ಪ್ರಸಾದ್, ಅರಣ್ಯ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಜಾವೇದ್ ಅಖ್ತರ್,  ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳಾದ  ಆರ್.ಕೆ.ಸಿಂಗ್, ವಿಜಯ್ ಕುಮಾರ್ ಗೋಗಿ ಹಾಗೂ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು. 
--
[06/05, 5:38 PM] Gurulingswami. Holimatha. Vv. Cm: ಬೆಂಗಳೂರು, ಮೇ 06: 2022- 23 ನೇ ಆಯವ್ಯಯದಲ್ಲಿ ಘೋಷಣೆಯಾಗಿರುವ ಯೋಜನೆಗಳ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ಇಂದು ವಸತಿ ಇಲಾಖೆ ಸಭೆ ಜರುಗಿತು. 
ಸಭೆಯಲ್ಲಿ ವಸತಿ ಸಚಿವ ವಿ. ಸೋಮಣ್ಣ, ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್, ಅಭಿವೃದ್ಧಿ ಆಯುಕ್ತೆ ಹಾಗೂ ಅಪರ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ, ಆರ್ಥಿಕ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಐ.ಎಸ್.ಎನ್. ಪ್ರಸಾದ್, ಯೋಜನಾ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಡಾ: ಶಾಲಿನಿ ರಜನೀಶ್, ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಮಂಜುನಾಥ್ ಪ್ರಸಾದ್, ವಸತಿ ಇಲಾಖೆ ಕಾರ್ಯದರ್ಶಿ ರವಿಶಂಕರ,  
ರಾಜೀವಗಾಂಧಿ ವಸತಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಡಾ. ಬಸವರಾಜ, ಕೆಎಚ್ ಬಿ ಆಯುಕ್ತ ರಮೇಶ ಮತ್ತಿತರ ಹಿರಿಯ ಅಧಿಕಾರಿಗಳು  ಉಪಸ್ಥಿತರಿದ್ದರು.
[06/05, 5:43 PM] Gurulingswami. Holimatha. Vv. Cm: ಬೆಂಗಳೂರು, ಮೇ 06: 2022- 23 ನೇ ಆಯವ್ಯಯದಲ್ಲಿ ಘೋಷಣೆಯಾಗಿರುವ ಯೋಜನೆಗಳ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ಇಂದು ಪಶು ಸಂಗೋಪನ ಇಲಾಖೆ ಸಭೆ ಜರುಗಿತು. 
ಸಭೆಯಲ್ಲಿ ಪಶು ಸಂಗೋಪನ ಇಲಾಖೆ ಸಚಿವ ಪ್ರಭು ಚವ್ಹಾಣ, ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್, ಅಭಿವೃದ್ಧಿ ಆಯುಕ್ತೆ ಹಾಗೂ ಅಪರ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ, ಆರ್ಥಿಕ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಐ.ಎಸ್.ಎನ್. ಪ್ರಸಾದ್, ಯೋಜನಾ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಡಾ: ಶಾಲಿನಿ ರಜನೀಶ್, ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಮಂಜುನಾಥ್ ಪ್ರಸಾದ್, 
ಪಶು ಸಂಗೋಪನ ಇಲಾಖೆ ಕಾರ್ಯದರ್ಶಿ ಸಲ್ಮಾ, ಆಯುಕ್ತ ಬಸವರಾಜೇಂದ್ರ, ನಿರ್ದೇಶಕ ಮಂಜುನಾಥ ಪಾಳೇಗಾರ, ಕೆಎಂಎಫ್ ಎಂ ಡಿ ಸತೀಶ ಮತ್ತಿತರ ಹಿರಿಯ ಅಧಿಕಾರಿಗಳು  ಉಪಸ್ಥಿತರಿದ್ದರು.
[06/05, 6:32 PM] Gurulingswami. Holimatha. Vv. Cm: *ಅಮೃತ ಯೋಜನೆಯ ಮನೆಗಳನ್ನೂ ಒಳಗೊಂಡಂತೆ ಒಟ್ಟು 6 ಲಕ್ಷ ಮನೆಗಳನ್ನು ಡಿಸೆಂಬರ್ ಮಾಹೆಯೊಳಗೆ ಪೂರ್ಣಗೊಳಿಸಿ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ*

ಬೆಂಗಳೂರು, ಮೇ 06 : 

ಅಮೃತ ಯೋಜನೆಯ ಮನೆಗಳನ್ನೂ ಒಳಗೊಂಡಂತೆ ಒಟ್ಟು 6 ಲಕ್ಷ ಮನೆಗಳನ್ನು ಡಿಸೆಂಬರ್ ಮಾಹೆಯೊಳಗೆ ಪೂರ್ಣಗೊಳಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚಿಸಿದರು.

2022-23 ನೇ ಸಾಲಿನ ಆಯವ್ಯಯ ಘೋಷಣೆಗಳ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಅವರ ಅಧ್ಯಕ್ಷತೆಯಲ್ಲಿ ಇಂದು  ನಡೆದ ವಸತಿ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.  
ಸಭೆಯ ಮುಖ್ಯಾಂಶಗಳು:  

1. ಫಲಾನುಭವಿಗಳ ಆಯ್ಕೆ ಪ್ರಕ್ರಿಯೆಯನ್ನು ಗರಿಷ್ಠ ಮೂರು ತಿಂಗಳೊಳಗೆ ಮುಕ್ತಾಯವಾಗಬೇಕು.

2. ನಿವೇಶನ ಹಂಚಿಕೆ ಸಂಬಂಧ ರಾಜ್ಯದ ವಿವಿಧ ಭಾಗಗಳಲ್ಲಿರುವ ಆಸ್ತಿಗೆ  ಆದ್ಯತೆ ಮೇರೆಗೆ ಡಿಪಿಆರ್ ಮಾಡಿ ಸಲ್ಲಿಸುವುದು.

3. 1 ಲಕ್ಷ ಬಹುಮಹಡಿ ಬೆಂಗಳೂರು ವಸತಿ ಯೋಜನೆಯಡಿ ಪ್ರಗತಿಯಲ್ಲಿರುವ ಬಹುಮಹಡಿ ಮನೆಗಳ ನಿರ್ಮಾಣ ಕಾಮಗಾರಿಗಳ ಪೈಕಿ 20000 ಮನೆಗಳನ್ನು  ಪೂರ್ಣಗೊಳಿಸುವ ಗುರಿ ಇದೆ.

4. 20,000 ಮನೆಗಳನ್ನು ಪೂರ್ಣಗೊಳಿಸಲು ಅನುದಾನವನ್ನು  ಹಂತ ಹಂತವಾಗಿ ಅನುದಾನ ಬಿಡುಗಡೆ ಮಾಡುವುದು. ಕೀಲಿ ಕೈ ಹಸ್ತಾಂತರ ಮಾಡುವ ಮುನ್ನ ಷರತ್ತುಗಳನ್ನು ವಿಧಿಸುವುದು.

5. ಮುಗಿಯುವ ಹಂತದಲ್ಲಿರುವ ಮನೆಗಳನ್ನು ಆದ್ಯತೆ ಮೇರೆಗೆ ಪೂರ್ಣಗೊಳಿಸಿ, ಸಾಲವನ್ನು  ಫಲಾನುಭವಿಗಳ ಹೆಸರಿಗೆ ವರ್ಗಾವಣೆ ಮಾಡಿಸುವುದು.
[06/05, 6:55 PM] Gurulingswami. Holimatha. Vv. Cm: ಬೆಂಗಳೂರು, ಮೇ 06: 2022- 23 ನೇ ಆಯವ್ಯಯದಲ್ಲಿ ಘೋಷಣೆಯಾಗಿರುವ ಯೋಜನೆಗಳ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ಇಂದು ತೋಟಗಾರಿಕೆ ಇಲಾಖೆ ಸಭೆ ಜರುಗಿತು. 

ಸಭೆಯಲ್ಲಿ  ತೋಟಗಾರಿಕೆ ಸಚಿವ ಎನ್.ಮುನಿರತ್ನ, ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್, ಅಭಿವೃದ್ಧಿ ಆಯುಕ್ತೆ ಹಾಗೂ ಅಪರ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ, ಆರ್ಥಿಕ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಐ.ಎಸ್.ಎನ್. ಪ್ರಸಾದ್, ಯೋಜನಾ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಡಾ: ಶಾಲಿನಿ ರಜನೀಶ್, ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಮಂಜುನಾಥ್ ಪ್ರಸಾದ್, ತೋಟಗಾರಿಕೆ ಇಲಾಖೆ ಪ್ರಧಾನ ಕಾರ್ಯದರ್ಶಿ ರಾಜೇಂದರ್  ಕುಮಾರ್ ಕಟಾರಿಯಾ, ನಿರ್ದೇಶಕ ಕೆ.ನಾಗೇಂದ್ರ ಪ್ರಸಾದ್, ತೋಟಗಾರಿಕೆ ಇಲಾಖೆ ಹಾಗೂ ಹಿರಿಯ ಅಧಿಕಾರಿಗಳು  ಉಪಸ್ಥಿತರಿದ್ದರು.
[06/05, 7:23 PM] Gurulingswami. Holimatha. Vv. Cm: ಬೆಂಗಳೂರು, ಮೇ 06: 2022- 23 ನೇ ಆಯವ್ಯಯದಲ್ಲಿ ಘೋಷಣೆಯಾಗಿರುವ ಯೋಜನೆಗಳ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ಇಂದು   ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಇಲಾಖೆಯ ಸಭೆ ಜರುಗಿತು. 

ಸಭೆಯಲ್ಲಿ  ತೋಟಗಾರಿಕೆ ಮತ್ತು ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಸಚಿವ ಎನ್.ಮುನಿರತ್ನ, ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್, ಅಭಿವೃದ್ಧಿ ಆಯುಕ್ತೆ ಹಾಗೂ ಅಪರ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ, ಆರ್ಥಿಕ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಐ.ಎಸ್.ಎನ್. ಪ್ರಸಾದ್, ಯೋಜನಾ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಡಾ: ಶಾಲಿನಿ ರಜನೀಶ್, ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಮಂಜುನಾಥ್ ಪ್ರಸಾದ್, ಪ್ರದೇಶಾಭಿವೃದ್ಧಿ ಮಂಡಳಿಯ ನಿರ್ದೇಶಕ ಚಂದ್ರಶೇಖರ್ ಹಾಗೂ ಹಿರಿಯ ಅಧಿಕಾರಿಗಳು  ಉಪಸ್ಥಿತರಿದ್ದರು.

Post a Comment

Previous Post Next Post