ನಮಗೆ ಎಲ್ಲ ಜನರ ಜೀವವೂ ಮುಖ್ಯ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ*

[29/07, 1:50 PM] Gurulingswami. Holimatha. Vv. Cm: *ನಮಗೆ ಎಲ್ಲ ಜನರ ಜೀವವೂ ಮುಖ್ಯ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ*
ಬೆಂಗಳೂರು, ಜುಲೈ 29:
ನಮಗೆ ಎಲ್ಲ ಜನರ ಜೀವ ಮುಖ್ಯ. ನಾವು  ಎಲ್ಲರನ್ನೂ ಸರಿಸಮಾನವಾಗಿ ಕಾಣುತ್ತೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಅವರು ಇಂದು ಕೆಪಿಸಿ ಕಚೇರಿಯ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದರು.  

ಮಂಗಳೂರಿನಿಂದ ಹಿಂತಿರುಗಿದ ನಂತರ ಮಂಗಳೂರಿನಲ್ಲಿ ಮತ್ತೊಂದು ಕೊಲೆಯಾಗಿರುವ ಬಗ್ಗೆ ವಿಷಯ ತಿಳಿದು ಮಾಹಿತಿ ಪಡೆಯಲಾಗಿದೆ. ಕಾನೂನು ಸುವ್ಯವಸ್ಥೆ ಎ.ಡಿ.ಜಿ.ಪಿ ಅವರನ್ನು ಅಲ್ಲಿಯೇ ಇದ್ದು ಸೂಕ್ತ ಕ್ರಮ ವಹಿಸುವಂತೆ ಸೂಚಿಸಿದ್ದೇನೆ ಎಂದರು.
  
ಎಲ್ಲಾ ಮೂರು ಪ್ರಕರಣಗಳಲ್ಲಿಯೂ ಕಠಿಣ ಕ್ರಮ ವಹಿಸಲಾಗುವುದು. ಕಾನೂನಿನ ವ್ಯಾಪ್ತಿಯಲ್ಲಿ ಅಗತ್ಯವಿರುವ ಕ್ರಮ ವಹಿಸಲಾಗುವುದು. ಅದು ಯು.ಪಿ ಮಾದರಿ ಅಥವಾ ಕರ್ನಾಟಕ ಮಾದರಿಯಾಗಿರಬಹುದು ಎಂದು ಮುಖ್ಯಮಂತ್ರಿಗಳು ತಿಳಿಸಿದರು.
[29/07, 1:58 PM] Gurulingswami. Holimatha. Vv. Cm: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ಪುಣ್ಯಕೋಟಿ ದತ್ತು ಯೋಜನೆಯ ಕುರಿತು ಸಭೆ ಜರುಗಿತು. 

ಸಭೆಯಲ್ಲಿ ಪಶುಸಂಗೋಪನಾ ಸಚಿವ ಪ್ರಭು ಚೌಹಾಣ್, ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ, ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಮಂಜುನಾಥ್ ಪ್ರಸಾದ್,  ಇಲಾಖೆ ಕಾರ್ಯದರ್ಶಿ ಸಲ್ಮಾ ಫಾಹಿಮ್ ಮೊದಲಾದವರು ಉಪಸ್ಥಿತರಿದ್ದರು
[29/07, 2:28 PM] Gurulingswami. Holimatha. Vv. Cm: *ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ವಿಶೇಷ ಪೊಲೀಸ್ ಕ್ರಮಕ್ಕೆ ತೀರ್ಮಾನ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ*

ಬೆಂಗಳೂರು, ಜುಲೈ 29 :

 ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ವಿಶೇಷ ಪೊಲೀಸ್ ಕ್ರಮಗಳನ್ನು ತೆಗೆದುಕೊಳ್ಳಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಅವರು ಇಂದು ತಮ್ಮ ಆರ್.ಟಿ.ನಗರದ ನಿವಾಸದಲ್ಲಿ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದರು.

 ದಕ್ಷಿಣ ಕನ್ನಡ, ಉಡುಪಿ ಸೇರಿದಂತೆ ಕರಾವಳಿ ಪ್ರದೇಶದಲ್ಲಿ ಇನ್ನಷ್ಟು  ಕಠಿಣ ಕ್ರಮ ತೆಗೆದುಕೊಳ್ಳುವ ಸಂಬಂಧ ಇಂದು ಪೊಲೀಸ್ ಹಿರಿಯ ಅಧಿಕಾರಿಗಳೊಂದಿಗೆ ಉನ್ನತ ಮಟ್ಟದ ಸಭೆಯನ್ನು ನಡೆಸಲಾಗುವುದು. ಕೇರಳ ಗಡಿ ಭಾಗದಲ್ಲಿ 55 ರಸ್ತೆಗಳನ್ನು ನಿಭಾಯಿಸುವುದು, ನಿರ್ಬಂಧ ಹೇರಿಕೆ ಸೇರಿದಂತೆ ಪ್ರಮುಖ ತೀರ್ಮಾನಗಳ ಬಗ್ಗ್ಗೆ ಸಭೆಯಲ್ಲಿ ಚರ್ಚಿಸಲಾಗುವುದು ಎಂದರು.

*ಕೊಲೆ ಪ್ರಕರಣಗಳನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ :*
ಪ್ರವೀಣ್ ಅವರ ಮನೆಗೆ ಭೇಟಿ ನೀಡಿದ  ಸಂದರ್ಭದಲ್ಲಿ ಮತ್ತೊಂದು ಕೊಲೆಯ ಮಾಹಿತಿ ಬಂದಿದೆ. ಮೂರು ಕೊಲೆಯ ಪ್ರಕರಣಗಳನ್ನು ಸರ್ಕಾರ ಗಂಭೀರವಾಗಿ ತೆಗೆದುಕೊಂಡಿದೆ. ಪ್ರತಿಯೊಬ್ಬ ನಾಗರೀಕನ ಜೀವವೂ ಸರ್ಕಾರಕ್ಕೆ ಮುಖ್ಯ. ತನಿಖೆ ನಡೆಯುತ್ತಿದೆ. ಮೂರು ಕೊಲೆಗಳಾಗಿರುವುದು ಜನರಲ್ಲಿ ಆತಂಕವನ್ನು ಮೂಡಿಸಿರುವುದು ಸಹಜ. ಸಮಾಜದಲ್ಲಿ ಇಂತಹ ಘಟನೆಗಳು ನಡೆಯಬಾರದು. ಸಮಾಜಘಾತುಕ ಶಕ್ತಿಗಳಿಗೆ ಕುಮ್ಮಕ್ಕು ನೀಡಲಾಗಿದೆ.ರಾಜಕೀಯ ಪ್ರೇರಣೆ ಕೂಡ ಇದರ ಹಿಂದಿದೆ. ಇದರಲ್ಲಿ ಹಲವು ಆಯಾಮಗಳಿವೆ. ಇವೆಲ್ಲಗಳನ್ನು ನಿಗ್ರಹಿಸಲು ಕಠಿಣ ಕ್ರಮಗಳನ್ನು ತೆಗೆದುಕೊಳ್ಳುತ್ತಿದ್ದೇವೆ ಎಂದರು.

*ದುಷ್ಕ್ರತ್ಯಗಳ  ನಿಗ್ರಹಕ್ಕೆ ಸರ್ಕಾರದ ಕ್ರಮಗಳು ಜನರಿಗೆ ವೇದ್ಯವಾಗಲಿದೆ :*
ಮಸೂದ್ ಕೊಲೆಯ ಅರೋಪಿಗಳನ್ನು ದಸ್ತಗಿರಿ ಮಾಡಲಾಗಿದೆ. ಇನ್ನೆರಡು ಕೊಲೆ ಪ್ರಕರಣದಲ್ಲಿ ಆರೋಪಿಗಳನ್ನು ಪತ್ತೆ ಹಚ್ಚಲಾಗುತ್ತಿದೆ. ಸರ್ಕಾರ ಈ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸುತ್ತಿದೆ. ಅದರ ಹಿಂದೆ ದೊಡ್ಡ ಸಂಘಟನೆಗಳಿವೆ. ಇದು ಕೇವಲ ಕೊಲೆ ಎಂದು ಪರಿಗಣಿಸಲಾಗುತ್ತಿಲ್ಲ. ಇದೊಂದು ಯೋಜನಾಬದ್ಧ ದುಷ್ಕøತ್ಯವಾಗಿದ್ದು, ಇದರ ಹಿಂದಿರುವ ಸಮಾಜಘಾತುಕ ಸಂಘಟನೆಗಳನ್ನು ಸದೆಬಡೆಯುವ ಮಹತ್ವದ ಕೆಲಸವನ್ನು ಮಾಡಲಾಗುತ್ತಿದೆ. ಇನ್ನು ಕೆಲವೇ ದಿನಗಳಲ್ಲಿ ಈ ಕ್ರಮಗಳು ಜನರಿಗೆ ವೇದ್ಯವಾಗಲಿದೆ ಎಂದರು.
[29/07, 2:28 PM] Gurulingswami. Holimatha. Vv. Cm: *ಸಿದ್ದರಾಮಯ್ಯ ಹೇಳುವುದೆಲ್ಲಾ ವೇದವಾಕ್ಯವಲ್ಲ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ*
ಬೆಂಗಳೂರು, ಜುಲೈ 29: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳುವುದೆಲ್ಲಾ ವೇದವಾಕ್ಯವಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಅವರು ಇಂದು ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡುತ್ತಿದ್ದರು.
ಸಿದ್ಧರಾಮಯ್ಯ ಅವರ ಕಾಲದಲ್ಲಿ 32 ಸರಣಿ ಕೊಲೆಗಳಾಗಿದ್ದವು. ಆಗ ಅವರು ಏನು ಮಾಡುತ್ತಿದ್ದರು ಎಂದು ಪ್ರಶ್ನಿಸಿದ ಮುಖ್ಯಮಂತ್ರಿಗಳು, ಎಲ್ಲಾ ವಿಷಯಗಳಲ್ಲಿ ರಾಜಕಾರಣವನ್ನು ಮಾಡಬಾರದು. ಅವರ ಹೇಳಿಕೆಗೆ ಹೆಚ್ಚಿನ ಮಹತ್ವವಿಲ್ಲ ಎಂದರು.

 ಶಾಸಕ ತನ್ವೀರ್ ಸೇಠ್ ಮೇಲೆ ಎಸ್‍ಡಿಪಿಐ ಹಾಗೂ ಪಿಎಫ್‍ಐ ಸಂಘಟನೆಯ ಸುಮಾರು 200 ಜನರನ್ನು ದಾಳಿ ನಡೆಸಿದ ಪ್ರಕರಣದಿಂದ ಅವರನ್ನು ಮುಕ್ತಗೊಳಿಸಲಾಗಿತ್ತು. ಅವರು ಈಗ ಪುನ: ಸಮಾಜಘಾತುಕ ಕೃತ್ಯಗಳನ್ನು ಮಾಡುತ್ತಿದ್ದಾರೆ. ಸಿದ್ದರಾಮಯ್ಯ ಕೇವಲ ಹೇಳಿಕೆಗಳನ್ನು ನೀಡುತ್ತಾರೆ ಎಂದರು. 

ಸರ್ಕಾರ  ಕ್ಷಿಪ್ರ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ. ಸರ್ಕಾರ ತೆಗೆದುಕೊಂಡಿರುವ ಕ್ರಮಗಳು ಜನರ ಮುಂದಿವೆ. ಎಸ್‍ಡಿಪಿಐ, ಪಿಎಫ್‍ಐ ಸಂಘಟನೆಗಳಿಗೆ ಫಂಡಿಂಗ್ ಮಾಡುತ್ತಿರುವುದೇ ಬಿಜೆಪಿ ಪಕ್ಷ ಎಂಬುದು ಅತ್ಯಂತ ಹಾಸ್ಯಾಸ್ಪದವಾದ ಹೇಳಿಕೆ. ಇದು ಕಾಂಗ್ರೆಸ್ಸಿನ ರಾಜಕೀಯ ದಿವಾಳಿತನವನ್ನು ಬಿಂಬಿಸುತ್ತದೆ. ಸರ್ಕಾರದಲ್ಲಿ ಯಾರೂ ರಾಜಿನಾಮೆ ಕೊಡುವ ಅಗತ್ಯವಿಲ್ಲ. ಇಂತಹ ಸಂದರ್ಭದಲ್ಲಿ ಕರ್ತವ್ಯದಿಂದ ವಿಮುಖರಾಗುವುದಿಲ್ಲ. ಗಟ್ಟಿಯಾಗಿ ನಿಂತು ಕಠಿಣ ನಿಲುವುಗಳನ್ನು ತೆಗೆದುಕೊಂಡು ಕೆಲಸ ಮಾಡಲಾಗುತ್ತಿದೆ ಎಂದರು.
[29/07, 3:53 PM] Gurulingswami. Holimatha. Vv. Cm: *ರಾಷ್ಟ್ರೀಯ  ತನಿಖಾ ದಳಕ್ಕೆ ಪ್ರವೀಣ್ ಹತ್ಯೆ ಪ್ರಕರಣ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ*
ಬೆಂಗಳೂರು, ಜುಲೈ 29:   ಸುಳ್ಯದ ಬಿಜೆಪಿ ಮುಖಂಡ  ಪ್ರವೀಣ್ ನೆಟ್ಟಾರು ಅವರ ಹತ್ಯೆ ಪ್ರಕರಣದ ತನಿಖೆಯನ್ನು ರಾಷ್ಟ್ರೀಯ  ತನಿಖಾ ದಳಕ್ಕೆ (NIA) ವಹಿಸಲು ತೀರ್ಮಾನಿಸಲಾಗಿದೆ  ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಅವರು ಇಂದು ಬೆಂಗಳೂರಿನ  ಶಕ್ತಿಭವನದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ ಈ ವಿಷಯ ಪ್ರಕಟಿಸಿದರು.

ಪ್ರವೀಣ್ ಹತ್ಯೆ ವ್ಯವಸ್ಥಿತವಾಗಿ ಆಗಿದೆ ಹಾಗೂ ಇದೊಂದು  ಅಂತರರಾಜ್ಯ ವಿಚಾರವಾಗಿದೆ. ಡಿಜಿ, ಐಜಿ ಅವರ ಬಳಿ ಚರ್ಚಿಸಲಾಗಿದ್ದು, ಅದರ ಸಂಪೂರ್ಣ ಮಾಹಿತಿಯನ್ನು ಪಡೆಯಲು ಸೂಚಿಸಲಾಗಿದೆ. ತನಿಖೆ ತೀವ್ರಗತಿಯಲ್ಲಿ ನಡೆಯುತ್ತಿದ್ದು, ಮಾಹಿತಿ ಪಡೆದ ನಂತರ ಗೃಹ ಇಲಾಖೆ ಪತ್ರ ಬರೆಯಲಿದೆ. ಕೇರಳ ಗಡಿಯಲ್ಲಿ ಎರಡು ರಾಜ್ಯಗಳ ಸಂಪರ್ಕಿಸುವ ಪ್ರಮುಖ ಸ್ಥಳಗಳಲ್ಲಿ  ಸಿಸಿಟಿವಿ ಕ್ಯಾಮರಾಗಳನ್ನು ಅಳವಡಿಸಿ, ಚೆಕ್ ಪೋಸ್ಟ್ ಗಳನ್ನು ಹಾಕಲಾಗುವುದು. ಸೂಕ್ಷ್ಮ ಊರುಗಳಲ್ಲಿ ತಾತ್ಕಾಲಿಕ ಪೋಲಿಸ್ ಕ್ಯಾಂಪ್‍ಗಳು, ಹಲವಾರು ಖಾಲಿ ಹುದ್ದೆಗಳನ್ನು ತುಂಬಲು ಕ್ರಮ ತೆಗೆದುಕೊಳ್ಳಬೇಕು, ರಾತ್ರಿ ಗಸ್ತನ್ನು ಹೆಚ್ಚಿಸಬೇಕು ಹಾಗೂ ಕೆ.ಎಸ್.ಆರ್.ಪಿಯ ಮತ್ತೊಂದು ತುಕಡಿಯನ್ನು ದಕ್ಷಿಣ ಕನ್ನಡ ಜಿಲ್ಲೆಗೆ  ನಿಯೋಜಿಸಲು ಸೂಚಿಸಲಾಗಿದೆ ಎಂದರು.

 ನಿನ್ನೆ ಸೂರತ್ಕಲ್‍ನಲ್ಲಿ  ನಡೆದ ಹತ್ಯೆಯ ಬಗ್ಗೆಯೂ ತೀವ್ರಗತಿಯಲ್ಲಿ ತನಿಖೆಯಾಗಿ, ತಪ್ಪಿತಸ್ಥರನ್ನು ಬಂಧಿಸಬೇಕು. ಅದಕ್ಕೂ ಕೂಡ ತಂಡಗಳನ್ನು ರಚಿಸಿ ತನಿಖೆ ಪ್ರಾರಂಭ ಮಾಡಬೇಕೆಂದು ತೀರ್ಮಾನ ಮಾಡಲಾಗಿದೆ ಎಂದರು. ಜಿಲ್ಲಾ ಮಟ್ಟದಲ್ಲಿ ಧಾರ್ಮಿಕ ಮುಖಂಡರನ್ನ ಕರೆದು ಶಾಂತಿ ಸಭೆಗಳನ್ನು ಮಾಡುವ ನಡೆಸಲಾಗುವುದು ಎಂದು ಮುಖ್ಯಮಂತ್ರಿಗಳು ತಿಳಿಸಿದರು.

Post a Comment

Previous Post Next Post