: ಬೆಂಗಳೂರು. ಜುಲೈ. 28.. *ಮಾನ್ಯಮುಖ್ಯಮಂತ್ರಿ ಶ್ರೀ ಬಸವರಾಜ* *ಬೊಮ್ಮಾಯಿ* ಅವರು ಇಂದು *ಬೆಂಗಳೂರಿನ* *ವಿಧಾನಸೌಧದ ಸಮ್ಮೇಳನ* *ಸಭಾಂಗಣದಲ್ಲಿ* *ಅಧಿಕಾರಿಗಳ* ಜತೆ *ಸಭೆ ನಡೆಸಿದ* ನಂತರ *ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ* *ಮಾತನಾಡಿದರು.*
[28/07, 3:53 PM] Gurulingswami. Holimatha. Vv. Cm: *ನೂತನ ಯೋಜನೆಗಳ ಲೋಕಾರ್ಪಣೆ*
ಬೆಂಗಳೂರು, ಜುಲೈ 28-
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಒಂದು ವರ್ಷದ ಅಧಿಕಾರಾವಧಿ ಪೂರ್ಣಗೊಳಿಸಿದ ಸಂದರ್ಭದಲ್ಲಿ ನೂತನ ಯೋಜನೆಗಳನ್ನು ಲೋಕಾರ್ಪಣೆ ಮಾಡಿದರು.
ಈ ಕುರಿತು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ತಮ್ಮ ಆತ್ಮಸಾಕ್ಷಿಗೆ ಅನುಗುಣವಾಗಿ ಇಂದು ಏರ್ಪಡಿಸಿದ್ದ ೊಂದು ವರ್ಷದ ಸಾಧನೆಯ ಮಾಹಿತಿ ನೀಡುವ ಸಮಾರಂಭವನ್ನು ರದ್ದುಪಡಿಸಲಾಗಿದೆ. ಆದರೆ ಸಾರ್ವಜನಿಕರಿಗೆ ಈ ವರೆಗೆ ಕೈಗೊಂಡ ಅಭಿವೃದ್ಧಿ ಯೋಜನೆಗಳ ಮಾಹಿತಿ ನೀಡುವುದು ಹಾಗೂ ಮುಂದೆ ಕೈಗೆತ್ತಿಕೊಳ್ಳಲು ಉದ್ದೇಶಿಸಿರುವ ಯೋಜನೆಗಳ ಮಾಹಿತಿ ನೀಡುವ ಉದ್ದೇಶದಿಂದ ಮಾಧ್ಯಮಗಳ ಮೂಲಕ ಮಾಹಿತಿ ನೀಡುತ್ತಿರುವುದಾಗಿ ತಿಳಿಸಿದರು.
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಯುವಕರ ಸಬಲೀಕರಣ, ಶಿಕ್ಷಣ, ಆರೋಗ್ಯ ವಲಯದ ಮೂಲಸೌಕರ್ಯಗಳ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಲಾಗುತ್ತಿದೆ ಎಂದು ಅವರು ತಿಳಿಸಿದರು.
ಈ ಸಂದರ್ಭದಲ್ಲಿ ಮುಖ್ಯಮಂತ್ರಿಯವರು ಲೋಕಾರ್ಪಣೆ ಗೊಳಿಸಿದ ನೂತನ ಯೋಜನೆಗಳ ವಿವರ:
*ಎಸ್ ಸಿ /ಎಸ್ ಟಿ ಸಮುದಾಯಗಳಿಗೆ 75 ಯೂನಿಟ್ ಉಚಿತ ವಿದ್ಯುತ್ :*
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಬಡ ಕುಟುಂಬಗಳಿಗೆ ಉಚಿತವಾಗಿ 75 ಯುನಿಟ್ ವರೆಗೆ ಉಚಿತ ವಿದ್ಯುತ್ ನೀಡುವ ಯೋಜನೆಯಡಿ ಡಿಬಿಟಿ ವರ್ಗಾವಣೆ ಇಂದಿನಿಂದ ಪ್ರಾರಂಭವಾಗಲಿದೆ. ಸುಮಾರು 25 ಲಕ್ಷ ಫಲಾನುಭವಿಗಳಿಗೆ ಅನುಕೂಲವಾಗಲಿದೆ. ಇದಕ್ಕಾಗಿ 700 ಕೋಟಿ ರೂ. ಒದಗಿಸಲಾಗಿದೆ.
*ಸ್ವಯಂ ಉದ್ಯೋಗ ಯೋಜನೆ* :
ಬಾಬು ಜಗಜೀವನ್ ರಾಂ ಅವರ ಹೆಸರಿನಲ್ಲಿ ಸ್ವಯಂ ಉದ್ಯೋಗ ಯೋಜನೆ : ಪ್ರತಿಯೊಂದು ಕ್ಷೇತ್ರದಲ್ಲಿ 100 ಪರಿಶಿಷ್ಟ ಜಾತಿ/ ಪಂಗಡದ ಯುವಕರಿಗೆ ಸ್ವಯಂ ಉದ್ಯೋಗ ನೀಡುವ ಯೋಜನೆಗೆ ಚಾಲನೆ.
*8000 ಶಾಲಾ ಕೊಠಡಿಗಳ ನಿರ್ಮಾಣ :*
ಶಿಕ್ಷಣ ಹಾಗೂ ಅದರ ಮೂಲಸೌಕರ್ಯಗಳ ಅಭಿವೃದ್ಧಿಗೆ ಒತ್ತು ನೀಡಲಾಗಿದ್ದು, ‘ವಿವೇಕ’ ಯೋಜನೆಯಡಿ ಮೊದಲ ಬಾರಿಗೆ 8000 ಶಾಲಾ ಕೊಠಡಿಗಳ ನಿರ್ಮಾಣಕ್ಕೆ ಚಾಲನೆ.
*ಸಮುದಾಯ ಆರೋಗ್ಯ ಕೇಂದ್ರಗಳಾಗಿ ಉನ್ನತೀಕರಣ*:
ರಾಜ್ಯದ 100 ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಸಮುದಾಯ ಆರೋಗ್ಯ ಕೇಂದ್ರಗಳಾಗಿ ಉನ್ನತೀಕರಣಗೊಳಿಸುವ ಯೋಜನೆಗೆ ಚಾಲನೆ. ಕಲ್ಯಾಣ ಕರ್ನಾಟಕ ಭಾಗದಲ್ಲಿ ಸುಮಾರು 71 ಪಿಹೆಚ್ಸಿ ಗಳನ್ನು ರಾಜ್ಯದ ಸರಾಸರಿಗಿಂತ ಕಡಿಮೆ ಸೂಚ್ಯಂಕ ಇರುವ ಪ್ರದೇಶಗಳಲ್ಲಿ ಸ್ಥಾಪಿಸಲಾಗುವುದು.
*‘ಸ್ತ್ರೀ ಸಾಮರ್ಥ್ಯ’ ಯೋಜನೆ* :
ಸ್ತ್ರೀಶಕ್ತಿ ಸಂಘಗಳು ಸ್ವಯಂ ಉದ್ಯೋಗ ಕೈಗೊಳ್ಳಲು ಉತ್ತೇಜನ ನೀಡುವ ನಿಟ್ಟಿನಲ್ಲಿ 1.50 ಲಕ್ಷ ರೂ. ನೀಡುವ ಜೊತೆಗೆ ಸುಲಭವಾಗಿ ಸಾಲ ಸೌಲಭ್ಯ ಒದಗಿಸಲು ಆಂಕರ್ ಬ್ಯಾಂಕ್ ಜೋಡಣೆ, ತರಬೇತಿ, ಉತ್ಪನ್ನಗಳಿಗೆ ಮಾರುಕಟ್ಟೆ ಸೌಲಭ್ಯ ನೀಡುವ ‘ಸ್ತ್ರೀ ಸಾಮರ್ಥ್ಯ ಯೋಜನೆ’ ಗೆ ಚಾಲನೆ ನೀಡಲಾಗಿದೆ. ಸುಮಾರು 5 ಲಕ್ಷ ಮಹಿಳೆಯರ ಸ್ವಾವಲಂಬನೆಗೆ ಎಂಡ್ ಟು ಎಂಡ್ ನೆರವು ನೀಡಲಾಗುತ್ತಿದೆ.
*ಸ್ವಾಮಿ ವಿವೇಕಾನಂದ ಯುವಶಕ್ತಿ ಯೋಜನೆ*:
ರಾಜ್ಯದ ಸುಮಾರು 28 ಸಾವಿರ ಗ್ರಾಮಗಳಲ್ಲಿ ತಲಾ ಒಂದು ಒಂದು ವಿವೇಕಾನಂದ ಸ್ವಸಹಾಯ ಸಂಘಗಳನ್ನು ರಚಿಸಿ, ಯುವಕರಿಗೂ ಆರ್ಥಿಕ ನೆರವು, ಬ್ಯಾಂಕ್ ವ್ಯವಸ್ಥೆ, ತರಬೇತಿ, ಉತ್ಪನ್ನಗಳಿಗೆ ಮಾರುಕಟ್ಟೆ ವ್ಯವಸ್ಥೆ ಕಲ್ಪಿಸುವ ಯೋಜನೆ. ಇದರಿಂದ 5 ಲಕ್ಷ ಯುವಕರು ಸ್ವಯಂ ಉದ್ಯೋಗದಲ್ಲಿ ತೊಡಗುವ ಅವಕಾಶ ಕಲ್ಪಿಸಲಾಗುವುದು.
*ಪುಣ್ಯಕೋಟಿ ದತ್ತು ಯೋಜನೆ*:
ಗೋವುಗಳ ಸಂರಕ್ಷಣೆಯಲ್ಲಿ ಜನರ ಪಾಲುದಾರಿಕೆಯನ್ನು ಉತ್ತೇಜಿಸಲು ಪುಣ್ಯಕೋಟಿ ದತ್ತು ಯೋಜನೆ ಜಾರಿ. ಈ ಯೋಜನೆಗೆ ಸಂಬಂಧಿಸಿದ ವೆಬ್ಸೈಟ್ ನ ಲೋಕಾರ್ಪಣೆ. ಪ್ರತಿಯೊಬ್ಬ ವ್ಯಕ್ತಿಯೂ ವಾರ್ಷಿಕ 11000 ರೂ. ಪಾವತಿಸಿ, ಒಂದು ಗೋವಿನ ಒಂದು ವರ್ಷದ ನಿರ್ವಹಣೆಯನ್ನು ಮಾಡಬಹುದಾಗಿದೆ. ಅವರೇ ಗೋವುಗಳನ್ನು ದತ್ತು ತೆಗೆದುಕೊಳ್ಳಬಹುದು, ಅಥವಾ 11,000 ಮೊತ್ತ ಪಾವತಿಸಿದ್ದಲ್ಲಿ ಸರ್ಕಾರದ ಗೋ ಶಾಲೆಗಳಲ್ಲಿ ಗೋವುಗಳ ರಕ್ಷಣೆಗೆ ಈ ಮೊತ್ತವನ್ನು ಬಳಸಿಕೊಳ್ಳಲಾಗುವುದು.
*ವಿದ್ಯಾನಿಧಿ ಯೋಜನೆ*
*ನೇಕಾರರ ಮಕ್ಕಳಿಗೆ ವಿದ್ಯಾನಿಧಿ* : ನೇಕಾರರ ಮಕ್ಕಳಿಗೆ ವಿದ್ಯಾನಿಧಿ ಯೋಜನೆಯನ್ನು ಪ್ರಾರಂಭಿಸಲಾಗಿದ್ದು, 10 – 12 ಸಾವಿರ ಮಕ್ಕಳಿಗೆ ಈ ಯೋಜನೆಯ ಲಾಭ ದೊರೆಯಲಿದೆ.
*ಟ್ಯಾಕ್ಸಿ ಚಾಲಕರ ಮಕ್ಕಳಿಗೆ ವಿದ್ಯಾನಿಧಿ :* ಟ್ಯಾಕ್ಸಿ ಚಾಲಕರ ಮಕ್ಕಳಿಗೂ ವಿದ್ಯಾನಿಧಿ ಯೋಜನೆಯನ್ನು ವಿಸ್ತರಿಸಲಾಗಿದ್ದು, 50,000 ಟ್ಯಾಕ್ಸಿ ಚಾಲಕ ಮಕ್ಕಳಿಗೆ ಈ ಯೋಜನೆಯ ಲಾಭ ದೊರೆಯಲಿದೆ.
*ಮೀನುಗಾರರ ಮಕ್ಕಳಿಗೆ ವಿದ್ಯಾನಿಧಿ* : ಮೀನುಗಾರರ ಮಕ್ಕಳಿಗೆ ವಿದ್ಯಾನಿಧಿ ಯೋಜನೆಯನ್ನು ವಿಸ್ತರಿಸಲಾಗಿದ್ದು, ಈ ಎಲ್ಲ ಕಾರ್ಯಕ್ರಮ ಸರ್ಕಾರದ ಆದೇಶಗಳನ್ನು ಹೊರಡಿಸಲಾಗಿದ್ದು, ಅನುದಾನದ ವ್ಯವಸ್ಥೆಯನ್ನೂ ಮಾಡಲಾಗಿದೆ. ಈ ಎಲ್ಲ ವಿದ್ಯಾನಿಧಿ ಯೋಜನೆಗಳಿಗೆ ಇಂದು ಚಾಲನೆ ನೀಡಲಾಗಿದೆ..
[28/07, 3:54 PM] Gurulingswami. Holimatha. Vv. Cm: *ಆತ್ಮಸಾಕ್ಷಿಯಾಗಿ ಒಂದು ವರ್ಷದ ಕಾರ್ಯಕ್ರಮ ರದ್ದು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ*
ಬೆಂಗಳೂರು, ಜುಲೈ 28-
ಭಾರತೀಯ ಜನತಾ ಪಕ್ಷದ ಯುವ ಮುಖಂಡ ಪ್ರವೀಣ್ ಹತ್ಯೆ ಆದ ನಂತರ ಜನ ಹಾಗೂ ಕಾರ್ಯಕರ್ತರು ವ್ಯಕ್ತ ಮಾಡಿರುವ ಆಕ್ರೋಶದ ಹಿನ್ನೆಲೆಯಲ್ಲಿ ಆತ್ಮಸಾಕ್ಷಿಯಾಗಿ ನಿರ್ಣಯ ಕೈಗೊಂಡು ಬ್ಯಾಂಕ್ವೆಟ್ ಹಾಲಿನಲ್ಲಿ ಮತ್ತು ಪಕ್ಷದ ವತಿಯಿಂದ ದೊಡ್ಡಬಳ್ಲಾಪುರದಲ್ಲಿ ನಡೆಯಬೇಕಿದ್ದ ಜನೋತ್ಸವ ಕಾರ್ಯಕ್ರಮಗಳನ್ನು ರದ್ದು ಮಾಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮಾಯಿ ತಿಳಿಸಿದರು.
ಅವರು ಇಂದು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸರ್ಕಾರಕ್ಕೆ ಒಂದು ವರ್ಷ ಪೂರ್ಣವಾದ ಹಿನ್ನೆಲೆಯಲ್ಲಿ ಪತ್ರಿಕಾಗೋಷ್ಠಿ ನಡೆಸಿದರು.
ಈ ನಿರ್ಣಯದ ಬಗ್ಗೆ ಹಲವಾರು ವ್ಯಾಖ್ಯಾನಗಳು ಆಗಿವೆ. ಆದರೆ. ಮೊನ್ನೆಯ ಘಟನೆಯ ಬಗ್ಗೆ ಯೋಚಿಸಿ ಈ ತೀರ್ಮಾನಕ್ಕೆ ಬರಲಾಗಿದೆ. ಕಾರ್ಯಕರ್ತರು ಹಾಗೂ ಜಿಲ್ಲಾ ಮಂತ್ರಿಗಳೊಂದಿಗೆ ಜೊತೆಗೆ ಚರ್ಚೆ ಮಾಡಿ ಈ ನಿರ್ಣಯವನ್ನು ತೆಗೆದುಕೊಳ್ಳಲಾಗಿದೆ ಎಂದರು.
ಇಂದಿಗೆ ಬಿಜೆಪಿ ಆಡಳಿತದ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಎರಡು ವರ್ಷ ಬಿ.ಎಸ್.ಯಡಿಯೂರಪ್ಪ ಅವರ ನೇತೃತ್ವದಲ್ಲಿ ಹಾಗೂ ಕಳೆದ ಒಂದು ವರ್ಷ ನನ್ನ ನೇತೃತ್ವದ ಸರ್ಕಾರಕ್ಕೆ ಒಂದು ವರ್ಷ ತುಂಬಿದೆ. ಜನರಿಗೆ ಒಂದು ವರ್ಷ ಏನು ಮಾಡಿದ್ದೇವೆ ಎಂದು ಹೇಳುವುದು ನಮ್ಮ ಕರ್ತವ್ಯ ಹಾಗೂ ಉತ್ತರದಾಯಿತ್ವ. ಈ ಸಂದರ್ಭದಲ್ಲಿ ಮಾಡಬಹುದಾದ ಇನ್ನಷ್ಟು ಕಲ್ಯಾಣ ಕಾರ್ಯಕ್ರಮಗಳನ್ನು ತಿಳಿಸುವ ಸಂದರ್ಭವಿದು ಎಂದರು.
ನಮ್ಮ ಸಚಿವ ಸಂಪುಟದ ಸಹೋದ್ಯೋಗಿಗಳಿಗೆ, ಪಕ್ಷದ ಕಾರ್ಯಕರ್ತರಿಗೆ, ಸದಸ್ಯರಿಗೆ, ಪದಾಧಿಕಾರಿಗಳಿಗೆ, ಕಾರ್ಯಕರ್ತರಿಗೆ, ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಜೆ.ಪಿ ನಡ್ಡಾ, ಗೃಹ ಸಚಿವ ಅಮಿತ್ ಶಾ, ದೇಶವನ್ನು ಸಮರ್ಥವಾಗಿ ನಡೆಸುತ್ತಿರುವ ಪ್ರಧಾನಿ ಮೋದಿಯವರಿಗೆ ಸವಾಲುಗಳ ಮಧ್ಯೆಯೂ ಸಾಧನೆ ಮಾಡಲು ಸಹಕಾರ ನೀಡಿದ ಎಲ್ಲರಿಗೂ ಧನ್ಯವಾದಗಳನ್ನು ತಿಳಿಸಿದರು.
ಬದ್ಧತೆಯುಳ್ಳ ಸಚಿವ ಸಂಪುಟ:
ನಮ್ಮದು ಒಂದು ತಂಡ. ಸಚಿವ ಸಂಪುಟದಲ್ಲಿ ಅತ್ಯಂತ ದಕ್ಷ ಆಡಳಿತಗಾರಿದ್ದಾರೆ, ಸೇವಾ ಮನೋಭಾವವಿರುವವರು, ಯುವಕರಿದ್ದಾರೆ. ಒಟ್ಟಾರೆ ಬದ್ಧತೆ ಇರುವ ಸಚಿವ ಸಂಪುಟ ನಮ್ಮದು. ಇವರೆಲ್ಲರ ಪಾಲು ಒಂದು ವರ್ಷದ ಸಾಧನೆಯಲ್ಲಿ ಇದೆ. ಕೋವಿಡ್ ಸಾಂಕ್ರಾಮಿಕ ಒಂದು ಹಂತಕ್ಕೆ ಬಂದಂಥ ಸಂದರ್ಭದಲ್ಲಿ ಅಧಿಕಾರ ವಹಿಸಿಕೊಳ್ಳಲಾಯಿತು. 2 ವರ್ಷ ನಮ್ಮ ನಾಯಕರಾದ ಬಿ.ಎಸ್.ಯಡಿಯೂರಪ್ಪ ನವರು ಅತ್ಯಂತ ಸಮರ್ಥವಾಗಿ, ಸಚಿವ ಸಂಪುಟದ ಸಚಿವರು, ಸಹಕಾರ ನೀಡಿದರು. ವಿಶೇಷವಾಗಿ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವರು ಹಾಗೂ ಅಧಿಕಾರಿಗಳು ಸಹಕಾರ ನೀಡಿದ್ದಾರೆ ಎಂದರು.
ಜನರ ಪಾಲ್ಗೊಳ್ಳುವಿಕೆ ಹಾಗೂ ಭಾಗೀಧಾರಿಕೆಯ ಆಡಳಿತ
ಆಡಳಿತ ಯಾರ ಪರವಾಗಿದೆ ಎನ್ನುವುದು ಮುಖ್ಯ. ನಮ್ಮ ನಿರ್ಣಯಗಳ ಮುಖಾಂತರ ಒಟ್ಟಾರೆ ಜನಪರವಾಗಿರುವ ಆಡಳಿತ ನೀಡುವುದು, ರಾಜ್ಯ ಸಮಗ್ರ ಅಭಿವೃದ್ಧಿ ಹೊಂದಿ ಎಲ್ಲರಿಗೂ ಪಾಲುದಾರಿಕೆ ಮತ್ತು ಪಾಲ್ಗೊಳ್ಳುವಿಕೆಯನ್ನು ಖಾತ್ರಿಪಡಿಸುವ ಆಡಳಿತವನ್ನು ನೀಡಿದ್ದೇವೆ ಎಂದು ನುಡಿದರು.
[28/07, 3:54 PM] Gurulingswami. Holimatha. Vv. Cm: *ರೈತರಲ್ಲಿ ಭರವಸೆ ಮೂಡಿಸಿದ ರೈತ ವಿದ್ಯಾನಿಧಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ*
ಬೆಂಗಳೂರು, ಜುಲೈ 28: ದೇಶದಲ್ಲಿಯೇ ಮೊದಲ ಬಾರಿಗೆ ಪ್ರಾರಂಭಿಸಿದ ರೈತ ವಿದ್ಯಾನಿಧಿ ಯೋಜನೆಯಡಿ ರೈತ ವಿದ್ಯಾನಿಧಿಯಿಂದ ಕಳೆದ ವರ್ಷ 8.50 ಲಕ್ಷ ಹಾಗೂ ಈ ವರ್ಷ 9.8 ಲಕ್ಷ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನವನ್ನು ನೀಡಲಾಗಿದೆ.
ಒಂದು ವರ್ಷದ ತಮ್ಮ ಅಧಿಕಾರಾವಧಿ ಪೂರ್ಣಗೊಳಿಸಿದ ಹಿನ್ನೆಲೆಯಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಅವರು ಮಾತನಾಡುತ್ತಿದ್ದರು.
ಪ್ರತಿ ದಿನವೂ ಕೂಡ 15-20 ಸಾವಿರ ಮಕ್ಕಳಿಗೆ ಡಿಬಿಟಿ ಮೂಲಕ ತಲುಪಿದೆ. ರೈತರ ಕುಟುಂಬಗಳಲ್ಲಿ ಅವರ ಮಕ್ಕಳ ವಿದ್ಯಾಭ್ಯಾಸ ಮಾಡುತ್ತಿರುವುದಕ್ಕೆ ರೈತರಲ್ಲಿ ಭರವಸೆ ಮೂಡಿದೆ ಎಂದರು.
ಬಡವರಿಗೆ ವಿವಿಧ ಸಾಮಾಜಿಕ ಭದ್ರತಾ ಯೋಜನೆಗಳಡಿ ಮಾಶಾಸನ ಮೊತ್ತ ಹೆಚ್ಚಳವಾಗಿದ್ದು, ಹೆಚ್ಚಿನ ಆರ್ಥಿಕ ನೆರವು , ಆಸರೆಯನ್ನು ಬಡವರಿಗೆ, ಅಂಗವಿಕಲರಿಗೆ ನೀಡಲಾಗಿದೆ. ಎಸ್.ಸಿ/ಎಸ್.ಟಿ ಸಮುದಾಯಕ್ಕೆ ಎಸ್.ಸಿ.ಎಸ್.ಪಿ/ ಟಿ.ಎಸ್.ಪಿ ಯಲ್ಲಿ ಅನುದಾನವನ್ನು ಹಚ್ಚಿಸಲಾಗಿದೆ. ಎಸ್.ಸಿ/ ಎಸ್.ಟಿ., ಹಿಂದುಳಿದ ವರ್ಗಗಳು ಹಾಗೂ ಅಲ್ಪಸಂಖ್ಯಾತರ ವಿವಿಧ ನಿಗಮಗಳಿಗೆ ಬಜೆಟ್ ನಲ್ಲಿ ನೀಡಿರುವ ಮೊತ್ತಕ್ಕೆ ಹೆಚ್ಚುವರಿಯಾಗಿ 800 ಕೋಟಿ ರೂ. ಅನುದಾನ ಒದಗಿಸಲಾಗಿದೆ.
ವಿಶೇಷವಾಗಿ ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡದಸುಮಾರು 25 ಲಕ್ಷ ಕ್ಕಿಂತ ಹೆಚ್ಚು ಬಡ ಕುಟುಂಬಗಳಿಗೆ 75 ಯೂನಿಟ್ ವರೆಗೆ ಉಚಿತ ವಿದ್ಯುತ್ ನೀಡಲಾಗುತ್ತಿದೆ. ಇದಕ್ಕೆ ವಾರ್ಷಿಕ 700 ಕೋಟಿ ರೂ. ಹೆಚ್ಚುವರಿ ಅನುದಾನ ಒದಗಿಸಲಾಗುತ್ತಿದೆ ಎಂದು ತಿಳಿಸಿದರು.
ವಸತಿನಿಲಯಗಳ ಭೋಜನ ವೆಚ್ಚ ಹಾಗೂ ವಿದ್ಯಾರ್ಥಿವೇತನದ ಮೊತ್ತ ಹೆಚ್ಚಿಸಲಾಗಿದೆ. 100 ಎಸ್.ಸಿ/ಎಸ್.ಟಿ ವಿದ್ಯಾರ್ಥಿನಿಲಯಗಳನ್ನು ನಿರ್ಮಿಸಲಾಗುತ್ತಿದೆ. 50 ಒಬಿಸಿ ಹಾಸ್ಟೆಲ್ಗಳು ಹಾಗೂ ಐದು ನಗರಗಳಲ್ಲಿ 1000 ವಿದ್ಯಾರ್ಥಿಗಳಿಗೆ ವಸತಿ ಕಲ್ಪಿಸುವ ಬೃಹತ್ ಹಾಸ್ಟಲ್ ಗಳನ್ನು ಹುಬ್ಬಳ್ಳಿ- ಧಾರವಾಡ, ಬೆಂಗಳೂರು, ಗುಲ್ಬರ್ಗಾ, ಮೈಸೂರು, ಮಂಗಳೂರಿನಲ್ಲಿ ನಿರ್ಮಿಸಲಾಗುತ್ತಿದೆ ಎಂದು ನುಡಿದರು.
ಇದರೊಂದಿಗೆ ಮನೆ ನಿರ್ಮಾಣಕ್ಕೆ ನೀಡುವ ಅನುದಾನವನ್ನು 75 ಸಾವಿರದಿಂದ 1 ಲಕ್ಷ ರೂ. ಗಳಿಗೆ ಹೆಚ್ಚಿಸಲಾಗಿದೆ. ಭೂಚೇತನ ಯೋಜನೆಯಡಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದವರಿಗೆ ಸುಮಾರು 3500 ಹೆಕ್ಟೇರ್ ಜಮೀನು ಖರೀದಿ ಮಾಡಲಾಗಿದೆ. ಮನೆ ಖರೀದಿ ಮಾಡುವ ದರವನ್ನೂ ಸಹ ಹೆಚ್ಚಿಸಲಾಗಿದೆ. ರೂ. 1.75 ಲಕ್ಷ ಇದ್ದ ಮೊತ್ತವನ್ನು ರೂ. 2 ಲಕ್ಷಕ್ಕೆ ಏರಿಸಲಾಗಿದೆ ಎಂದು ತಿಳಿಸಿದರು.
ಸ್ತ್ರೀ ಶಕ್ತಿ ಸಂಘಗಳ ಬಲವರ್ಧನೆಗೆ ವಿಶೇಷವಾದ ಯೋಜನೆಯನ್ನು ಪ್ರಥಮಬಾರಿ ರಾಜ್ಯದಲ್ಲಿ ರೂಪಿಸಲಾಗಿದೆ. ಉದ್ಯೋಗ ದೊರಕಿಸಲು, 1.50 ಲಕ್ಷ ಬೀಜ ಧನವನ್ನ ನೀಡಿ, ಆಂಕರ್ ಬ್ಯಾಂಕುಗಳೊಂದಿಗೆ ಒಪ್ಪಂದ ಮಾಡಿಕೊಳ್ಳಲಾಗಿದೆ. ಅವರಿಗೆ ಸಾಲ ಖಾತ್ರಿಯಾಗಿ ಸಿಗುವ ವ್ಯವಸ್ಥೆ ಮಾಡಿ, ವಿವಿಧ ಕಸುಬುಗಳಲ್ಲಿ ತರಬೇತಿ ನೀಡಿ ಅವರು ಉತ್ಪಾದಿಸುವ ಉತ್ಪನ್ನಗಳಿಗೆ ಮಾರುಕಟ್ಟೆ ಸೌಲಭ್ಯ ಕಲ್ಪಿಸಲು ವಿವಿಧ ಸಂಸ್ಥೆಗಳೊಂದಿಗೆ ಒಪ್ಪಂದ ಮಾಡಿಕೊಳ್ಳಲಾಗುತ್ತಿದೆ. ಪ್ರಥಮ ಬಾರಿಗೆ ಸ್ತ್ರೀ ಶಕ್ತಿ ಸಂಘಗಳಿಗೆ ಉತ್ಪಾದನೆಗೆ ಸಹಾಯ ಮಾಡುವುದಲ್ಲದೆ ಮಾರುಕಟ್ಟೆ ಒದಗಿಸುವ ಎಂಡ್ -ಟು-ಎಂಡ್ ಅಪ್ರೋಚ್ ಮೂಲಕ 5 ಲಕ್ಷ ಸ್ತ್ರೀಯರಿಗೆ ಸ್ವಯಂ ಉದ್ಯೋಗ ಅವಕಾಶ ಕಲ್ಪಿಸಲಾಗುತ್ತಿದೆ ಎಂದು ನುಡಿದರು.
ಹೊಸ ರಾಷ್ಟ್ರೀಯ ಶಿಕ್ಷಣ ನೀತಿ ಒಪ್ಪಿ, ಅನುಷ್ಠಾನ ಮಾಡುತ್ತಿರುವ ರಾಜ್ಯ ನಮ್ಮದು. ಕೋವಿಡ್ ಸಂದರ್ಭದಲ್ಲಿ ಆರೋಗ್ಯ ವಲಯದಲ್ಲಿ ಮೂಲಸೌಕರ್ಯಗಳನ್ನು ಹೆಚ್ಚಿಸಲಾಗಿದೆ. ನಮ್ಮ ಸರ್ಕಾರ 750 ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಅಭಿವೃದ್ಧಿಪಡಿಸಲು ತಲಾ 20 ಲಕ್ಷ ರೂ.ಗಳನ್ನು ಒದಗಿಸಿದೆ ಎಂದು ಮುಖ್ಯಮಂತ್ರಿಗಳು ವಿವರಿಸಿದರು
[28/07, 4:18 PM] Gurulingswami. Holimatha. Vv. Cm: *ಸರ್ವರ ವಿಕಾಸಕ್ಕೆ ಸಮೃದ್ಧ ಕರ್ನಾಟಕವನ್ನು ಕಟ್ಟುವ ಸಂಕಲ್ಪ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ*
ಬೆಂಗಳೂರು,ಜುಲೈ 28 :
ರಾಜ್ಯದ ಎಲ್ಲ ವರ್ಗದವರ ಅಭಿವೃದ್ಧಿಗೆ ಸಮಗ್ರವಾದ ಯೋಜನೆಗಳ ಮೂಲಕ ರಾಜ್ಯದ ಆರ್ಥಿಕತೆಯನ್ನು ಹೆಚ್ಚಿಸಿ, ಅದರ ಲಾಭವನ್ನು ಎಲ್ಲರಿಗೂ ತಲುಪಿಸುವ ಸದುದ್ದೇಶದಿಂದ ಸರ್ವರ ವಿಕಾಸವಾಗುವ ಸಮೃದ್ಧ ಕರ್ನಾಟಕವನ್ನು ಕಟ್ಟುವ ಸಂಕಲ್ಪ ಮಾಡಲಾಗಿದೆ ಎಂದು ತಿಳಿಸಿದರು.
ಅವರು ಇಂದು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಪತ್ರಿಕಾಗೋಷ್ಟಿಯನ್ನು ಉದ್ದೇಶಿಸಿ ಮಾತನಾಡಿದರು.
ನಾಲ್ಕು ತಿಂಗಳೊಳಗೆ ಬಜೆಟ್ ಅನುಷ್ಠಾನ:
ಬಜೆಟ್ನಲ್ಲಿ ಘೋಷಿಸಲಾದ ಕಾರ್ಯಕ್ರಮಗಳಿಗೆ ಒಂದೇ ತಿಂಗಳ ಅವಧಿಯಲ್ಲಿ ಸರ್ಕಾರದ ಆದೇಶವನ್ನು ಹೊರಡಿಸಿ, ಪ್ರಥಮ ಬಾರಿಗೆ 4 ತಿಂಗಳ ಅವಧಿಯಲ್ಲಿ ಕಾರ್ಯಕ್ರಮಗಳ ಅನುಷ್ಠಾನಕ್ಕೆ ಕ್ರಮ ಕೈಗೊಳ್ಳಲಾಗಿದೆ. ಆಡಳಿತದಲ್ಲಿ ದಕ್ಷತೆಯನ್ನು ತರಲಾಗಿದೆ. ಪ್ರಗತಿಪರವಾಗಿರುವ ಉದ್ಯಮವನ್ನು ಸ್ಥಾಪಿಸಿ, ಯುವಕರಿಗೆ ಉದ್ಯೋಗ ನೀಡುವುದರಿಂದ ಹಿಡಿದು ಹೊಲದಲ್ಲಿ ದುಡಿಯುವ ರೈತನವರೆಗೂ, ಕೂಲಿಕಾರರಿಗೆ, ಮಹಿಳೆಯರಿಗೆ, ಎಸ್ ಸಿ /ಎಸ್ ಟಿ ಗಳಿಗೆ, ಓಬಿಸಿಗಳ ಅಭಿವೃದ್ಧಿಗೆ ಯೋಜನೆಗಳನ್ನು ಕೈಗೆತ್ತಿಕೊಳ್ಳಲಾಗಿದೆ ಎಂದರು.
ಪ್ರಾದೇಶಿಕ ಅಸಮಾನತೆ ನಿವಾರಣೆಗೆ ಕ್ರಮ:
ಈ ವರ್ಷ ವಿನೂತನ ಯೋಜನೆಗಳನ್ನು ಮಾಡಲಾಗಿದೆ. ಕಲ್ಯಾಣ ಕರ್ನಾಟಕ ಭಾಗದಲ್ಲಿ 14,000 ಖಾಲಿ ಹುದ್ದೆಗಳ ಭರ್ತಿಗೆ ಕ್ರಮ, ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ 3000 ಕೋಟಿ ರೂ. ಅನುದಾನ. ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಈ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ ಎಂದು ತಿಳಿಸಿದರು.
ರಾಜ್ಯದಲ್ಲಿ 5 ಹೊಸ ಇಂಟೆಗ್ರೇಟೆಡ್ ಟೌನ್ ಷಿಪ್ ಗಳನ್ನು ಕಟ್ಟುವ ಪ್ರಕ್ರಿಯೆ ಪ್ರಾರಂಭವಾಗಿದೆ. 6 ಇಂಜಿನಿಯರಿಂಗ್ ಕಾಲೇಜುಗಳನ್ನು ಐಐಟಿ ಮಾದರಿಯಲ್ಲಿ ಅಭಿವೃದ್ಧಿಪಡಿಸಲು ಕ್ರಮ ಕೈಗೊಳ್ಳಲಾಗಿದೆ. ಬಡವರಿಗೆ ಆರೋಗ್ಯ ಸೌಲಭ್ಯ ಒದಗಿಸುವ ನಿಟ್ಟಿನಲ್ಲಿ ಡಯಾಲಿಸಿಸ್ ಸೈಕಲ್ನ್ನು 60,000 ಕ್ಕೆ ಏರಿಸಲು ಆದೇಶಿಸಲಾಗಿದೆ. ಕ್ಯಾನ್ಸರ್ರೋಗಿಗಳಿಗೆ ಕೀಮೋಥೆರಪಿ ಚಿಕಿತ್ಸೆಯನ್ನು 10 ಕಾಲೇಜುಗಳಲ್ಲಿ ಒದಗಿಸಲು ಈಗಾಗಲೇ ಅನುಮತಿಯನ್ನು ನೀಡಲಾಗಿದೆ ಎಂದು ತಿಳಿಸಿದರು.
ಆ್ಯಸಿಡ್ ದಾಳಿಗೊಳಗಾದವರಿಗೆ ನೀಡುವ ಭತ್ಯೆಯನ್ನು 10,000 ರೂ. ಗಳಿಗೆ ಹೆಚ್ಚಳ, ಆಶಾ ಕಾರ್ಯಕರ್ತರಿಗೆ, ಸಫಾಯಿ ಕರ್ಮಚಾರಿ, ಗ್ರಾಮ ಸಹಾಯಕರಿಗೆ ಮಾಸಿಕ ಭತ್ಯೆ ಹೆಚ್ಚಳ ಮಾಡಲು ಆದೇಶ ಈಗಾಗಲೇ ನೀಡಲಾಗಿದೆ. ಅತಿಥಿ ಉಪನ್ಯಾಸಕರ ಗೌರವಧನ ಹೆಚ್ಚಳ, ಈ ಎಲ್ಲ ಸಾಧನೆಗಳು ಜನರನ್ನು ತಲುಪುತ್ತಿದ್ದು, ಸಕಾರಾತ್ಮಕ ಪ್ರತಿಕ್ರಿಯೆ ದೊರೆಯುತ್ತಿದೆ. ಇನ್ನೂ ಹೆಚ್ಚಿನ ಪ್ರಮಾಣದಲ್ಲಿ ರಾಜ್ಯದ ಅಭಿವೃದ್ಧಿಗೆ ಎಲ್ಲ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು ಎಂದರು.
ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಯಾವುದೇ ರಾಜಿ ಇಲ್ಲ :
ಸವಾಲುಗಳ ಬಗ್ಗೆಯೂ ಚಿಂತನೆ ನಡೆಸಲಾಗುತ್ತಿದೆ. ಕೋಮುಸೌಹಾರ್ದತೆಯನ್ನು ಕದಡಿಸುವ ಘಾತುಕ ಶಕ್ತಿಗಳು ಕೇರಳ, ಕರ್ನಾಟಕ, ಮಧ್ಯಪ್ರದೇಶ, ಉತ್ತರಪ್ರದೇಶ, ರಾಜಸ್ಥಾನ ಸೇರಿದಂತೆ ಇಡೀ ದೇಶದಲ್ಲಿ ಅಶಾಂತಿಯನ್ನು ಹಬ್ಬಿಸಲು ಪ್ರಯತ್ನಿಸುತ್ತಿವೆ. ಕರ್ನಾಟಕದಲ್ಲಿ ಕಳೆದ 10 ವರ್ಷಗಳಿಂದ ಸಮಾಜಘಾತುಕ ಶಕ್ತಿಗಳು ತಲೆಎತ್ತಿವೆ. 2014 ರಿಂದ ಇಲ್ಲಿಯವರೆಗೂ ಈ ಪರಿಸ್ಥಿತಿಯನ್ನು ನೋಡುತ್ತಿದ್ದೇವೆ. ರಾಜ್ಯದ ದಕ್ಷ ಪೊಲೀಸ್ ಅಧಿಕಾರಿಗಳ ಶ್ರಮದಿಂದ ಸ್ಲೀಪರ್ ಸೆಲ್ ಭಯೋತ್ಪಾದಕರು, ಅವರ ಸಂಘಟನೆಗಳಲ್ಲಿರುವ ಅನೇಕ ಅಪರಾಧಿಗಳನ್ನು ತಿಹಾರ್ ಜೈಲಿಗೆ ಕಳಿಸಲಾಗಿದೆ. ಡಿ.ಜೆ ಹಳ್ಳಿ ಪ್ರಕರಣ, ಮಂಗಳೂರು ಪ್ರಕರಣಗಳಲ್ಲಿ ನಿಷ್ಠೆಯಿಂದ ಕಾರ್ಯನಿರ್ವಹಿಸಿದ್ದಾರೆ. ದಕ್ಷಿಣ ಕನ್ನಡದಲ್ಲಿ ನಡೆದ ಪ್ರವೀಣ್ ಕೊಲೆ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿ, 5 ತನಿಖಾ ತಂಡಗಳನ್ನು ರಚಿಸಿ ಕೇರಳ ರಾಜ್ಯಕ್ಕೂ ಕಳುಹಿಸಲಾಗಿದೆ. ಆರೋಪಿಗಳನ್ನು ಕೂಡಲೇ ಬಂಧನಕ್ಕೆ ಒಳಪಡಿಸುವ ವಿಶ್ವಾಸ ನಮಗಿದೆ ಎಂದು ನುಡಿದರು.
ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವಲ್ಲಿ ಯಾವುದೇ ರಾಜಿ ಇಲ್ಲ. ರಾಜ್ಯದಲ್ಲಿ ಶಾಂತಿ ಹಾಗೂ ಕೋಮುಸೌಹಾರ್ದತೆಯನ್ನು ಕದಡುವ ಸಮಾಜದ್ರೋಹಿ ಶಕ್ತಿಗಳ ವಿರುದ್ಧ ಸರ್ಕಾರ ಸಮರವನ್ನು ಸಾರಿದೆ. ಇಂತಹ ಸಂದರ್ಭದಲ್ಲಿ ಜನರು ಸಂಯಮದಿಂದ ವರ್ತಿಸಬೇಕೆಂದು ಮುಖ್ಯಮಂತ್ರಿಗಳು ಮನವಿ ಮಾಡಿದರು.
ಸರ್ಕಾರದ ಕಠಿಣ ಕ್ರಮ ಕೇವಲ ಬಾಯಿ ಮಾತಲ್ಲ :
ಮಾಧ್ಯಮದವರ ಪ್ರಶ್ನೆಗಳಿಗೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿಗಳು, ಶಿವಮೊಗ್ಗದಲ್ಲಿ ಹರ್ಷನ ಕೊಲೆ ಪ್ರಕರಣದಲ್ಲಿ ಸರ್ಕಾರ 24 ಗಂಟೆಯಲ್ಲಿ ಕ್ರಮ ತೆಗೆದುಕೊಳ್ಳಲಾಯಿತು. ಡಿಜಿ ಹಳ್ಳಿ- ಕೆಜಿಹಳ್ಳಿ ಪ್ರಕರಣ,ಪಾಂಡವಪುರ ಪ್ರಕರಣದಲ್ಲಿಯೂ ಸರ್ಕಾರ ಕಠಿಣ ಕ್ರಮವನ್ನು ತೆಗೆದುಕೊಂಡಿದೆ. ಕೇವಲ ಬಾಯಿಮಾತಲ್ಲ, ಸರ್ಕಾರ ಕಠಿಣ ಕ್ರಮವನ್ನು ತೆಗೆದುಕೊಂಡಂತೆ ಬಿಜೆಪಿ ಮುಖಂಡ ಪ್ರವೀಣ್ ಕೊಲೆ ಪ್ರಕರಣದಲ್ಲಿಯೂ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು. ಕರ್ನಾಟಕದಲ್ಲಿ ಅಹಿತಕರ ಘಟನೆಗಳನ್ನು ನಿಯಂತ್ರಣ ಮಾಡಲು ಹಲವು ವಿಧಾನಗಳನ್ನು ಪ್ರಯೋಗ ಮಾಡಲಾಗುತ್ತಿದೆ. ಪರಿಸ್ಥಿತಿ ಒದಗಿಬಂದರೆ ಕರ್ನಾಟಕದಲ್ಲಿಯೂ ಯೋಗಿ ಮಾಡೆಲ್ ಬರಲಿದೆ ಎಂದು ತಿಳಿಸಿದರು.
ವಿವಾದಗಳ ಸವಾಲುಗಳನ್ನು ಸಮರ್ಥವಾಗಿ ನಿಭಾಯಿಸಲಾಗಿದೆ :
ಸಮಾಜದಲ್ಲಿ ಶಾಂತಿ ಸುವ್ಯವಸ್ಥೆ ಕದಡಲೆಂದೇ ಕೆಲವೊಂದು ಸಂಘಟನೆಗಳು ರಾಜ್ಯದಲ್ಲಿ ಹುಟ್ಟಿಕೊಂಡಿವೆ. 5 ವಿದ್ಯಾರ್ಥಿನಿಯರಿಂದ ಪ್ರಾರಂಭವಾದ ಹಿಜಾಬ್ ವಿವಾದವನ್ನು ವ್ಯವಸ್ಥಿತವಾಗಿ ರಾಜ್ಯದೆಲ್ಲೆಡೆ ಹಬ್ಬಿಸಲು ಪ್ರಯತ್ನಿಸಲಾಯಿತು. ಈ ಪರಿಸ್ಥಿತಿಯನ್ನು ನಿಯಂತ್ರಿಸಿ, ಕಾನೂನಿನ ಆದೇಶವನ್ನು ಜಾರಿಗೊಳಿಸಿದ್ದರ ಪರಿಣಾಮ, ಇಂದು ಬಹುತೇಕ ಎಲ್ಲರೂ ಹಿಜಾಬ್ ಸಂಬಂಧಿಸಿದ ನಿಯಮವನ್ನು ಪಾಲಿಸುತ್ತಿದ್ದಾರೆ ಎಂದು ತಿಳಿಸಿದರು.
ಮಸೀದಿಗಳಲ್ಲಿ ಆಜಾನ್ ಬಗ್ಗೆಯೂ ಸುಪ್ರೀಂ ಕೋರ್ಟ್ ಆದೇಶವನ್ನು ಪರಿಪಾಲಿಸಿ ವಿವಾದವನ್ನು ಬಗೆಹರಿಸಲಾಗಿದೆ. ವಿವಾದಗಳ ಸವಾಲುಗಳನ್ನು ಸಮರ್ಥವಾಗಿ ನಿಭಾಯಿಸಿ, ಅಭಿವೃದ್ಧಿಯ ಪಥದಲ್ಲಿ ಮುನ್ನಡೆಯಲಾಗಿದೆ. ಪಿಎಫ್ಐ, ಎಸ್ಡಿಪಿಐ ದೇಶಾದ್ಯಂತ ನಿಷೇಧಿಸಲು ಕೇಂದ್ರ ಸರ್ಕಾರ ಕ್ರಮ ಕೈಗೊಳ್ಳಬೇಕಾಗುತ್ತದೆ. ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಸಂದರ್ಭಾನುಸಾರ ವರದಿಗಳನ್ನು ಕಳುಹಿಸಲಾಗಿದ್ದು, ಪ್ರಕ್ರಿಯೆ ಪ್ರಾರಂಭವಾಗಿದೆ.
ಸರ್ಕಾರದ ಮೇಲೆ 40 % ಕಮಿಷನ್ ಪಡೆಯುವ ಭ್ರಷ್ಟಾಚಾರದ ಆರೋಪಕ್ಕೆ ಸಂಬಂಧಿಸಿದಂತೆ ಪತ್ರಕರ್ತರ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಮುಖ್ಯಮಂತ್ರಿಯವರು 40% ಕಮಿಷನ್ ತೆಗೆದುಕೊಳ್ಳುವ ಬಗ್ಗೆ ಸಂಪೂರ್ಣ ವಿವರವನ್ನು ನೀಡಿದರೆ, ಕ್ರಮ ತೆಗೆದುಕೊಳ್ಳಲಾಗುವುದು. ಅಭಿವೃದ್ಧಿ ಕಾರ್ಯಕ್ರಮಗಳಿಗೆ ಸಂಬಂಧಪಟ್ಟ ಎಲ್ಲ ಕಡತಗಳು ವಿಲೇವಾರಿಯಾಗಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು.
ದುಡಿಯುವ ವರ್ಗ, ಬಡವರ ವರ್ಗ, ಎಸ್ ಸಿ ಎಸ್ ಟಿ, ಹಿಂದುಳಿದ ವರ್ಗಗಳಿಗೂ ಇಂದು ಅನುಕೂಲ ಕಲ್ಪಿಸಲಾಗಿದೆ. ಪರಿಶಿಷ್ಟ ಪಂಗಡಗಳಿಗೆ ವಿಶೇಷ ಇಲಾಖೆಯನ್ನು ಸ್ಥಾಪಿಸಿ, ಹೆಚ್ಚಿನ ಅನುದಾನ ನೀಡಲಾಗಿದೆ. ಸಾಮಾಜಿಕ ಕೆಲಸಗಳಲ್ಲಿ ತೊಡಗಿರುವ ಎಲ್ಲ ಸಮುದಾಯದ ಮಠಗಳಿಗೂ ಧನಸಹಾಯ ಮಾಡಲಾಗಿದೆ ಎಂದು ತಿಳಿಸಿದರು.
Post a Comment