CM, ಇಂದು

[29/07, 1:50 PM] Gurulingswami. Holimatha. Vv. Cm: *ನಮಗೆ ಎಲ್ಲ ಜನರ ಜೀವವೂ ಮುಖ್ಯ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ*
ಬೆಂಗಳೂರು, ಜುಲೈ 29:
ನಮಗೆ ಎಲ್ಲ ಜನರ ಜೀವ ಮುಖ್ಯ. ನಾವು  ಎಲ್ಲರನ್ನೂ ಸರಿಸಮಾನವಾಗಿ ಕಾಣುತ್ತೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಅವರು ಇಂದು ಕೆಪಿಸಿ ಕಚೇರಿಯ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದರು.  

ಮಂಗಳೂರಿನಿಂದ ಹಿಂತಿರುಗಿದ ನಂತರ ಮಂಗಳೂರಿನಲ್ಲಿ ಮತ್ತೊಂದು ಕೊಲೆಯಾಗಿರುವ ಬಗ್ಗೆ ವಿಷಯ ತಿಳಿದು ಮಾಹಿತಿ ಪಡೆಯಲಾಗಿದೆ. ಕಾನೂನು ಸುವ್ಯವಸ್ಥೆ ಎ.ಡಿ.ಜಿ.ಪಿ ಅವರನ್ನು ಅಲ್ಲಿಯೇ ಇದ್ದು ಸೂಕ್ತ ಕ್ರಮ ವಹಿಸುವಂತೆ ಸೂಚಿಸಿದ್ದೇನೆ ಎಂದರು.
  
ಎಲ್ಲಾ ಮೂರು ಪ್ರಕರಣಗಳಲ್ಲಿಯೂ ಕಠಿಣ ಕ್ರಮ ವಹಿಸಲಾಗುವುದು. ಕಾನೂನಿನ ವ್ಯಾಪ್ತಿಯಲ್ಲಿ ಅಗತ್ಯವಿರುವ ಕ್ರಮ ವಹಿಸಲಾಗುವುದು. ಅದು ಯು.ಪಿ ಮಾದರಿ ಅಥವಾ ಕರ್ನಾಟಕ ಮಾದರಿಯಾಗಿರಬಹುದು ಎಂದು ಮುಖ್ಯಮಂತ್ರಿಗಳು ತಿಳಿಸಿದರು.
[29/07, 1:58 PM] Gurulingswami. Holimatha. Vv. Cm: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ಪುಣ್ಯಕೋಟಿ ದತ್ತು ಯೋಜನೆಯ ಕುರಿತು ಸಭೆ ಜರುಗಿತು. 

ಸಭೆಯಲ್ಲಿ ಪಶುಸಂಗೋಪನಾ ಸಚಿವ ಪ್ರಭು ಚೌಹಾಣ್, ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ, ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಮಂಜುನಾಥ್ ಪ್ರಸಾದ್,  ಇಲಾಖೆ ಕಾರ್ಯದರ್ಶಿ ಸಲ್ಮಾ ಫಾಹಿಮ್ ಮೊದಲಾದವರು ಉಪಸ್ಥಿತರಿದ್ದರು
[29/07, 2:28 PM] Gurulingswami. Holimatha. Vv. Cm: *ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ವಿಶೇಷ ಪೊಲೀಸ್ ಕ್ರಮಕ್ಕೆ ತೀರ್ಮಾನ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ*

ಬೆಂಗಳೂರು, ಜುಲೈ 29 :

 ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ವಿಶೇಷ ಪೊಲೀಸ್ ಕ್ರಮಗಳನ್ನು ತೆಗೆದುಕೊಳ್ಳಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಅವರು ಇಂದು ತಮ್ಮ ಆರ್.ಟಿ.ನಗರದ ನಿವಾಸದಲ್ಲಿ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದರು.

 ದಕ್ಷಿಣ ಕನ್ನಡ, ಉಡುಪಿ ಸೇರಿದಂತೆ ಕರಾವಳಿ ಪ್ರದೇಶದಲ್ಲಿ ಇನ್ನಷ್ಟು  ಕಠಿಣ ಕ್ರಮ ತೆಗೆದುಕೊಳ್ಳುವ ಸಂಬಂಧ ಇಂದು ಪೊಲೀಸ್ ಹಿರಿಯ ಅಧಿಕಾರಿಗಳೊಂದಿಗೆ ಉನ್ನತ ಮಟ್ಟದ ಸಭೆಯನ್ನು ನಡೆಸಲಾಗುವುದು. ಕೇರಳ ಗಡಿ ಭಾಗದಲ್ಲಿ 55 ರಸ್ತೆಗಳನ್ನು ನಿಭಾಯಿಸುವುದು, ನಿರ್ಬಂಧ ಹೇರಿಕೆ ಸೇರಿದಂತೆ ಪ್ರಮುಖ ತೀರ್ಮಾನಗಳ ಬಗ್ಗ್ಗೆ ಸಭೆಯಲ್ಲಿ ಚರ್ಚಿಸಲಾಗುವುದು ಎಂದರು.

*ಕೊಲೆ ಪ್ರಕರಣಗಳನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ :*
ಪ್ರವೀಣ್ ಅವರ ಮನೆಗೆ ಭೇಟಿ ನೀಡಿದ  ಸಂದರ್ಭದಲ್ಲಿ ಮತ್ತೊಂದು ಕೊಲೆಯ ಮಾಹಿತಿ ಬಂದಿದೆ. ಮೂರು ಕೊಲೆಯ ಪ್ರಕರಣಗಳನ್ನು ಸರ್ಕಾರ ಗಂಭೀರವಾಗಿ ತೆಗೆದುಕೊಂಡಿದೆ. ಪ್ರತಿಯೊಬ್ಬ ನಾಗರೀಕನ ಜೀವವೂ ಸರ್ಕಾರಕ್ಕೆ ಮುಖ್ಯ. ತನಿಖೆ ನಡೆಯುತ್ತಿದೆ. ಮೂರು ಕೊಲೆಗಳಾಗಿರುವುದು ಜನರಲ್ಲಿ ಆತಂಕವನ್ನು ಮೂಡಿಸಿರುವುದು ಸಹಜ. ಸಮಾಜದಲ್ಲಿ ಇಂತಹ ಘಟನೆಗಳು ನಡೆಯಬಾರದು. ಸಮಾಜಘಾತುಕ ಶಕ್ತಿಗಳಿಗೆ ಕುಮ್ಮಕ್ಕು ನೀಡಲಾಗಿದೆ.ರಾಜಕೀಯ ಪ್ರೇರಣೆ ಕೂಡ ಇದರ ಹಿಂದಿದೆ. ಇದರಲ್ಲಿ ಹಲವು ಆಯಾಮಗಳಿವೆ. ಇವೆಲ್ಲಗಳನ್ನು ನಿಗ್ರಹಿಸಲು ಕಠಿಣ ಕ್ರಮಗಳನ್ನು ತೆಗೆದುಕೊಳ್ಳುತ್ತಿದ್ದೇವೆ ಎಂದರು.

*ದುಷ್ಕ್ರತ್ಯಗಳ  ನಿಗ್ರಹಕ್ಕೆ ಸರ್ಕಾರದ ಕ್ರಮಗಳು ಜನರಿಗೆ ವೇದ್ಯವಾಗಲಿದೆ :*
ಮಸೂದ್ ಕೊಲೆಯ ಅರೋಪಿಗಳನ್ನು ದಸ್ತಗಿರಿ ಮಾಡಲಾಗಿದೆ. ಇನ್ನೆರಡು ಕೊಲೆ ಪ್ರಕರಣದಲ್ಲಿ ಆರೋಪಿಗಳನ್ನು ಪತ್ತೆ ಹಚ್ಚಲಾಗುತ್ತಿದೆ. ಸರ್ಕಾರ ಈ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸುತ್ತಿದೆ. ಅದರ ಹಿಂದೆ ದೊಡ್ಡ ಸಂಘಟನೆಗಳಿವೆ. ಇದು ಕೇವಲ ಕೊಲೆ ಎಂದು ಪರಿಗಣಿಸಲಾಗುತ್ತಿಲ್ಲ. ಇದೊಂದು ಯೋಜನಾಬದ್ಧ ದುಷ್ಕøತ್ಯವಾಗಿದ್ದು, ಇದರ ಹಿಂದಿರುವ ಸಮಾಜಘಾತುಕ ಸಂಘಟನೆಗಳನ್ನು ಸದೆಬಡೆಯುವ ಮಹತ್ವದ ಕೆಲಸವನ್ನು ಮಾಡಲಾಗುತ್ತಿದೆ. ಇನ್ನು ಕೆಲವೇ ದಿನಗಳಲ್ಲಿ ಈ ಕ್ರಮಗಳು ಜನರಿಗೆ ವೇದ್ಯವಾಗಲಿದೆ ಎಂದರು.
[29/07, 2:28 PM] Gurulingswami. Holimatha. Vv. Cm: *ಸಿದ್ದರಾಮಯ್ಯ ಹೇಳುವುದೆಲ್ಲಾ ವೇದವಾಕ್ಯವಲ್ಲ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ*
ಬೆಂಗಳೂರು, ಜುಲೈ 29: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳುವುದೆಲ್ಲಾ ವೇದವಾಕ್ಯವಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಅವರು ಇಂದು ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡುತ್ತಿದ್ದರು.
ಸಿದ್ಧರಾಮಯ್ಯ ಅವರ ಕಾಲದಲ್ಲಿ 32 ಸರಣಿ ಕೊಲೆಗಳಾಗಿದ್ದವು. ಆಗ ಅವರು ಏನು ಮಾಡುತ್ತಿದ್ದರು ಎಂದು ಪ್ರಶ್ನಿಸಿದ ಮುಖ್ಯಮಂತ್ರಿಗಳು, ಎಲ್ಲಾ ವಿಷಯಗಳಲ್ಲಿ ರಾಜಕಾರಣವನ್ನು ಮಾಡಬಾರದು. ಅವರ ಹೇಳಿಕೆಗೆ ಹೆಚ್ಚಿನ ಮಹತ್ವವಿಲ್ಲ ಎಂದರು.

 ಶಾಸಕ ತನ್ವೀರ್ ಸೇಠ್ ಮೇಲೆ ಎಸ್‍ಡಿಪಿಐ ಹಾಗೂ ಪಿಎಫ್‍ಐ ಸಂಘಟನೆಯ ಸುಮಾರು 200 ಜನರನ್ನು ದಾಳಿ ನಡೆಸಿದ ಪ್ರಕರಣದಿಂದ ಅವರನ್ನು ಮುಕ್ತಗೊಳಿಸಲಾಗಿತ್ತು. ಅವರು ಈಗ ಪುನ: ಸಮಾಜಘಾತುಕ ಕೃತ್ಯಗಳನ್ನು ಮಾಡುತ್ತಿದ್ದಾರೆ. ಸಿದ್ದರಾಮಯ್ಯ ಕೇವಲ ಹೇಳಿಕೆಗಳನ್ನು ನೀಡುತ್ತಾರೆ ಎಂದರು. 

ಸರ್ಕಾರ  ಕ್ಷಿಪ್ರ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ. ಸರ್ಕಾರ ತೆಗೆದುಕೊಂಡಿರುವ ಕ್ರಮಗಳು ಜನರ ಮುಂದಿವೆ. ಎಸ್‍ಡಿಪಿಐ, ಪಿಎಫ್‍ಐ ಸಂಘಟನೆಗಳಿಗೆ ಫಂಡಿಂಗ್ ಮಾಡುತ್ತಿರುವುದೇ ಬಿಜೆಪಿ ಪಕ್ಷ ಎಂಬುದು ಅತ್ಯಂತ ಹಾಸ್ಯಾಸ್ಪದವಾದ ಹೇಳಿಕೆ. ಇದು ಕಾಂಗ್ರೆಸ್ಸಿನ ರಾಜಕೀಯ ದಿವಾಳಿತನವನ್ನು ಬಿಂಬಿಸುತ್ತದೆ. ಸರ್ಕಾರದಲ್ಲಿ ಯಾರೂ ರಾಜಿನಾಮೆ ಕೊಡುವ ಅಗತ್ಯವಿಲ್ಲ. ಇಂತಹ ಸಂದರ್ಭದಲ್ಲಿ ಕರ್ತವ್ಯದಿಂದ ವಿಮುಖರಾಗುವುದಿಲ್ಲ. ಗಟ್ಟಿಯಾಗಿ ನಿಂತು ಕಠಿಣ ನಿಲುವುಗಳನ್ನು ತೆಗೆದುಕೊಂಡು ಕೆಲಸ ಮಾಡಲಾಗುತ್ತಿದೆ ಎಂದರು.
[29/07, 2:34 PM] Gurulingswami. Holimatha. Vv. Cm: For us, life of every person is important: CM Bommai

Bengaluru. July 29.
For us, the life of every person is important. We treat everyone equally, Chief Minister Basavaraj Bommai said.

Speaking to media persons at the KPC office Bommai said, "I obtained information about one more murder in Mangaluru after my return to Bengaluru from Mangaluru. I have instructed ADGP(Law and Order) to camp there are take appropriate measures."

Stringent action would be taken in all the 3 murder cases. Replying to a question on the action he intends to control such happenings in future, Bommai said, "all measures within the ambit of the laws will be taken. It could be UP model of Karnataka model."
[29/07, 3:01 PM] Gurulingswami. Holimatha. Vv. Cm: Special police measures in Dakshina Kannada & Udupi districts: CM Bommai

Bengaluru. July 29.
We have decided to take special police measures in Dakshina Kannada and Udupi districts, Chief Minister Basavaraj Bommai said.

Speaking to media persons in Bengaluru he said, a high level meeting would be held today with top police officials with regard to taking some strong measures in the coastal region including Dakshina Kannada and Udupi. The meeting would look into issues like vigil at 55 roads connecting the Kerala border and other aspects. We will discuss taking some tough decisions.

Govt has taken the killings seriously

During the visit to Praveen's home I received information about the killing of one more youth. The state government has taken all 3 cases of killing very seriously.  For us, the life of every person is important. Investigation is on. Such acts should not happen. There is also political instigation for the anti-social forces. There are multiple dimensions to these incidents. We are taking stringent measures to control all these, Bommai said.

Killers of Masood have been arrested. The hunt is on for the culprits in the other two cases. It is not a simple murder. There are nefarious organisations behind the incidents. These outfits would be crushed. People will come to know about the measures in the next few days, Bommai said.
[29/07, 3:53 PM] Gurulingswami. Holimatha. Vv. Cm: *ರಾಷ್ಟ್ರೀಯ  ತನಿಖಾ ದಳಕ್ಕೆ ಪ್ರವೀಣ್ ಹತ್ಯೆ ಪ್ರಕರಣ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ*
ಬೆಂಗಳೂರು, ಜುಲೈ 29:   ಸುಳ್ಯದ ಬಿಜೆಪಿ ಮುಖಂಡ  ಪ್ರವೀಣ್ ನೆಟ್ಟಾರು ಅವರ ಹತ್ಯೆ ಪ್ರಕರಣದ ತನಿಖೆಯನ್ನು ರಾಷ್ಟ್ರೀಯ  ತನಿಖಾ ದಳಕ್ಕೆ (NIA) ವಹಿಸಲು ತೀರ್ಮಾನಿಸಲಾಗಿದೆ  ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಅವರು ಇಂದು ಬೆಂಗಳೂರಿನ  ಶಕ್ತಿಭವನದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ ಈ ವಿಷಯ ಪ್ರಕಟಿಸಿದರು.

ಪ್ರವೀಣ್ ಹತ್ಯೆ ವ್ಯವಸ್ಥಿತವಾಗಿ ಆಗಿದೆ ಹಾಗೂ ಇದೊಂದು  ಅಂತರರಾಜ್ಯ ವಿಚಾರವಾಗಿದೆ. ಡಿಜಿ, ಐಜಿ ಅವರ ಬಳಿ ಚರ್ಚಿಸಲಾಗಿದ್ದು, ಅದರ ಸಂಪೂರ್ಣ ಮಾಹಿತಿಯನ್ನು ಪಡೆಯಲು ಸೂಚಿಸಲಾಗಿದೆ. ತನಿಖೆ ತೀವ್ರಗತಿಯಲ್ಲಿ ನಡೆಯುತ್ತಿದ್ದು, ಮಾಹಿತಿ ಪಡೆದ ನಂತರ ಗೃಹ ಇಲಾಖೆ ಪತ್ರ ಬರೆಯಲಿದೆ. ಕೇರಳ ಗಡಿಯಲ್ಲಿ ಎರಡು ರಾಜ್ಯಗಳ ಸಂಪರ್ಕಿಸುವ ಪ್ರಮುಖ ಸ್ಥಳಗಳಲ್ಲಿ  ಸಿಸಿಟಿವಿ ಕ್ಯಾಮರಾಗಳನ್ನು ಅಳವಡಿಸಿ, ಚೆಕ್ ಪೋಸ್ಟ್ ಗಳನ್ನು ಹಾಕಲಾಗುವುದು. ಸೂಕ್ಷ್ಮ ಊರುಗಳಲ್ಲಿ ತಾತ್ಕಾಲಿಕ ಪೋಲಿಸ್ ಕ್ಯಾಂಪ್‍ಗಳು, ಹಲವಾರು ಖಾಲಿ ಹುದ್ದೆಗಳನ್ನು ತುಂಬಲು ಕ್ರಮ ತೆಗೆದುಕೊಳ್ಳಬೇಕು, ರಾತ್ರಿ ಗಸ್ತನ್ನು ಹೆಚ್ಚಿಸಬೇಕು ಹಾಗೂ ಕೆ.ಎಸ್.ಆರ್.ಪಿಯ ಮತ್ತೊಂದು ತುಕಡಿಯನ್ನು ದಕ್ಷಿಣ ಕನ್ನಡ ಜಿಲ್ಲೆಗೆ  ನಿಯೋಜಿಸಲು ಸೂಚಿಸಲಾಗಿದೆ ಎಂದರು.

 ನಿನ್ನೆ ಸೂರತ್ಕಲ್‍ನಲ್ಲಿ  ನಡೆದ ಹತ್ಯೆಯ ಬಗ್ಗೆಯೂ ತೀವ್ರಗತಿಯಲ್ಲಿ ತನಿಖೆಯಾಗಿ, ತಪ್ಪಿತಸ್ಥರನ್ನು ಬಂಧಿಸಬೇಕು. ಅದಕ್ಕೂ ಕೂಡ ತಂಡಗಳನ್ನು ರಚಿಸಿ ತನಿಖೆ ಪ್ರಾರಂಭ ಮಾಡಬೇಕೆಂದು ತೀರ್ಮಾನ ಮಾಡಲಾಗಿದೆ ಎಂದರು. ಜಿಲ್ಲಾ ಮಟ್ಟದಲ್ಲಿ ಧಾರ್ಮಿಕ ಮುಖಂಡರನ್ನ ಕರೆದು ಶಾಂತಿ ಸಭೆಗಳನ್ನು ಮಾಡುವ ನಡೆಸಲಾಗುವುದು ಎಂದು ಮುಖ್ಯಮಂತ್ರಿಗಳು ತಿಳಿಸಿದರು.
[29/07, 3:53 PM] Gurulingswami. Holimatha. Vv. Cm: Whatever Siddaramaiah says is not the ultimate truth

Bengaluru. July 29.
Whatever former Chief Minister Siddaramaiah says is not the ultimate truth(Vedavakya), Chief Minister Basavaraj Bommai said.

Speaking to media persons in Bengaluru Bommai said 32 serial killings had happened during Sidddaramaiah's regime. What was he doing then? Bommai asked. 

It is not right to indulge in politics over every issue. His statements have no significance, Bommai added.

Activists of PFI and SDPI were involved in the attempt to murder on Congress MLA Tanveer Sait. But the Siddaramaiah government freed about 200 activists of PFI and SDPI. They are again indulging in heinous acts now. Siddaramaiah issues only statements, Bommai said.

The state government is taking swift action, Bommai said. Reacting to the allegation that BJP is funding PFI and SDPI, Bommai said. "it is a laughable statement. It reflects the political bankruptcy of Congress. There is no need for any minister to resign. This is the time to stand united and take tough actions."
[29/07, 4:33 PM] Gurulingswami. Holimatha. Vv. Cm: NIA to investigate Praveen murder case: CM Bommai

Bengaluru. July 29.
The state government has decided to hand over investigation of BJP youth leader Praveen Nettaru murder case to National Investigation Agency(NIA), Chief Minister Basavaraj Bommai said.

Speaking to media persons the Chief Minister said, murder of Praveeen is a planned, organised crime. It has an interstate dimension. The issue has been discussed with state DG&IG and complete details have been sought. We will write to the Union Home Ministry on getting complete details into the case requesting for investigation by the NIA. 

Giving details about beefing up security measures, Bommai said CC cameras would be installed at all border crossing spots along the Kerala border. Checkposts would be setup, temporary police camps would be setup at sensitive spots in villages in the coastal region. The vacant posts in the police department would be filled, night patrolling would be intensified and an additional battalion of KSRP would be deployed in Dakshina Kannada district.

it has also been decided to intensify the investigation into the murder that happened yesterday in Suratkal. The culprits should be nabbed. Special teams should be constituted to crack the case. The Chief Minister also said that peace meetings would be held with religious leaders at district level.
[29/07, 4:45 PM] Gurulingswami. Holimatha. Vv. Cm: ಬೆಂಗಳೂರು, ಜುಲೈ 29: ಆಸ್ಟ್ರೇಲಿಯಾದ  ನ್ಯೂ ಸೌತ್ ವೇಲ್ಸ್ ಪ್ರೀಮಿಯರ್ ಡೊಮಿನಿಕ್  ಪೆರೊಟ್ಟೆಟ್ ಅವರ ನೇತೃತ್ವದ ನಿಯೋಗವು ಇಂದು  ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿ ಚರ್ಚಿಸಿತು. 

 ಸಭೆಯಲ್ಲಿ ಐ.ಟಿ. ಬಿಟಿ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಡಾ: ಇ. ವಿ.ರಮಣ ರೆಡ್ಡಿ,  ನಿರ್ದೇಶಕಿ ಮೀನಾ ನಾಗರಾಜ್ ಮೊದಲಾದವರು ಉಪಸ್ಥಿತರಿದ್ದರು.
[29/07, 6:44 PM] Gurulingswami. Holimatha. Vv. Cm: *ಮುಖ್ಯಮಂತ್ರಿಗಳನ್ನು ಭೇಟಿ ಮಾಡಿದ ನ್ಯೂ ಸೌತ್ ವೇಲ್ಸ್ ಪ್ರೀಮಿಯರ್ ಡೊಮಿನಿಕ್ ಪೆರೊಟ್ವೆಟ್*

*ಸೈಬರ್ ಸುರಕ್ಷತಾ  ನೀತಿ ಹಾಗೂ ಶ್ರೇಷ್ಠತಾ ಕೇಂದ್ರಗಳ ಬಗ್ಗೆ ಉತ್ಸುಕತೆ*
ಬೆಂಗಳೂರು, ಜುಲೈ 29: ಆಸ್ಟೇಲಿಯಾ ದೇಶದ ನ್ಯೂ ಸೌತ್ ವೇಲ್ಸ್ ಪ್ರೀಮಿಯರ್ ಡೊಮಿನಿಕ್ ಪೆರೊಟ್ವೆಟ್ ಅವರ ನೇತೃತ್ವದ ನಿಯೋಗವು ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಗೃಹ ಕಚೇರಿ ಕೃಷ್ಣಾದಲ್ಲಿ ಭೇಟಿ ಮಾಡಿ ವಿವಿಧ ವಿಷಯಗಳ ಕುರಿತು ಚರ್ಚಿಸಿತು.

ಆಸ್ಟ್ರೀಲಿಯಾ ಸರ್ಕಾರವು ಇಂಡಿಯಾ ಆರ್ಥಿಕ ಕಾರ್ಯತಂತ್ರಕ್ಕಾಗಿ 280 ಮಿಲಿಯನ್ ಡಾಲರ್ ಗಳ ಅನುದಾನವನ್ನು  ಒದಗಿಸಿದೆ.   ಭಾರತದೊಂದಿಗೆ ಆರ್ಥಿಕ  ಪಾಲುದಾರಿಕೆಯನ್ನು ವೃದ್ಧಿಸಲು ಈ ಕಾರ್ಯತಂತ್ರ ಸಹಕಾರಿಯಾಗಲಿದೆ ಎಂದು ಡೊಮಿನಿಕ್ ಪೆರೊಟ್ವೆಟ್ ತಿಳಿಸಿದರು. ಕರ್ನಾಟಕದಲ್ಲಿ ಸೈಬರ್ ಸುರಕ್ಷತಾ  ನೀತಿ ಹಾಗೂ ಶ್ರೇಷ್ಠತಾ ಕೇಂದ್ರಗಳ ಬಗ್ಗೆ ಉತ್ಸುಕತೆ ತೋರಿದ ಅವರು ಆಸ್ಟ್ರೇಲಿಯಾ ಬೆಂಗಳೂರು ಟೆಕ್ ಸಮ್ಮಿಟ್ ನಲ್ಲಿ ಆಸ್ಟ್ರೇಲಿಯಾ ಸತತವಾಗಿ ನಾಲ್ಕು ವರ್ಷಗಳೂ ಭಾಗಿಯಾಗಿದೆ. ಈ ವರ್ಷವೂ ಭಾಗವಹಿಸಲಿದೆ ಎಂದು  ತಿಳಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಜಗತ್ತಿನ ವಿವಿಧ ದೇಶಗಳ ಮುಖ್ಯಸ್ಥರು ಹಿಂದೆ ನವದೆಹಲಿಗೆ ಭೇಟಿ ನೀಡುತ್ತಿದ್ದರು. ಆದರೆ ಈಗ ಅವರೆಲ್ಲರೂ ಬೆಂಗಳೂರಿಗೆ ಇನ್‍ಫೋಸಿಸ್ ಹಾಗೂ ವಿಪ್ರೋ ಮುಂತಾದ ಸಂಸ್ಥೆಗಳಿಗೆ ಭೇಟಿ  ನೀಡುತ್ತಾರೆ.  ಜ್ಞಾನವೇ ಶಕ್ತಿ ಎನ್ನುವುದು ಈ ಮೂಲಕ ನಿರೂಪಿತವಾಗಿದೆ.  ಕರ್ನಾಟಕ ರಾಜ್ಯ ಆರ್ ಅಂಡ್ ಡಿ, ಜೆನಿಟಿಕ್ಸ್, ಏರೋಸ್ಪೇಸ್, ಶಿಕ್ಷಣ ಆರೋಗ್ಯ, ನಾವೀನ್ಯತೆ, ಎಲೆಕ್ಟ್ರಿಕ್ ವೆಹಿಕಲ್, ಮುಂತಾದ ವಲಯಗಳಲ್ಲಿ ಮುಂಚೂಣಿಯಲ್ಲಿದ್ದು ಹೂಡಿಕೆಗಳಿಗೆ ಪ್ರಶಸ್ತ ಸ್ಥಳ ಎಂದು ಮುಖ್ಯಮಂತ್ರಿಗಳು ವಿವರಿಸಿದರು.

ಗ್ರಾಮೀಣ ಪ್ರದೇಶಗಳಲ್ಲಿ ಸುಧಾರಣೆ ಕಾಣುತ್ತಿದ್ದು, ರಸ್ತೆ ಸಂಪರ್ಕಗಳು ಉತ್ತಮಗೊಂಡಿವೆ.  ಶಾಲೆ, ಆರೋಗ್ಯ ಹಾಗೂ ಡಿಜಿಟಲ್ ಸಂಪರ್ಕಗಳನ್ನೂ ಇನ್ನೂ ಹೆಚ್ಚಿನ ರೀತಿಯಲ್ಲಿ ಸುಧಾರಿಸಲು ನಮ್ಮ ಸರ್ಕಾರ ಕ್ರಮಗಳನ್ನು ಕೈಗೊಂಡಿದೆ ಎಂದರು. ಗ್ರಾಮೀಣ ಹಾಗೂ ನಗರ ಪ್ರದೇಶಗಳ ಮಧ್ಯೆ ಅಸಮಾನತೆ ಇದ್ದು, ಅದರ ನಿವಾರಣೆಗೆ ಸರ್ಕಾರ ನಿರ್ದಿಷ್ಟ ಕ್ರಮಗಳನ್ನು ಕೈಗೊಂಡಿದೆ. ಗ್ರಾಮೀಣ ಪ್ರದೇಶದಲ್ಲಿರುವವರಿಗೆ ಉದ್ಯೋಗಾವಕಾಶಗಳನ್ನು ಒದಗಿಸಿ ಆರ್ಥಿಕ ಚಟುವಟಿಕೆಗಳಲ್ಲಿ ತೊಡಗಿಸುವುದು ನಮ್ಮ ಗುರಿ ಎಂದರು.  

ಕರ್ನಾಟಕ ಸಂಪದ್ಭರಿತ ರಾಜ್ಯವಾಗಿದ್ದು, ಹತ್ತು ಕೃಷಿ ಹವಾಮಾನ ವಲಯಗಳನ್ನು ಹೊಂದಿದೆ. ಇಲ್ಲಿನ ಜನ ಉದ್ಯಮಶೀಲರಾಗಿದ್ದಾರೆ ಎಂದರು.  
ಬೆಂಗಳೂರಿನಲ್ಲಿರಬಹುದಾದ ಸವಾಲುಗಳ ಬಗ್ಗೆ ಡೊಮಿನಿಕ್ ಪೆರೊಟ್ವೆಟ್ ಪ್ರಶ್ನಿಸಿದಾಗ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿಗಳು  ಬೆಂಗಳೂರಿನ ವಾಹನಗಳ ಸಂಖ್ಯೆ ಹಾಗೂ ಸಂಚಾರ ದಟ್ಟಣೆ ಸವಾಲುಗಳಾಗಿವೆ.  ಸಂಚಾರ ದಟ್ಟಣೆಯನ್ನು ನಿವಾರಿಸಲು  ಸಬ್ ಅರ್ಬನ್ ರೈಲು ಹಾಗೂ ಮೆಟ್ರೋ ಯೋಜನೆಗಳು ಸಹಕಾರಿಯಾಗಿವೆ ಎಂದರು.

ನಿಯೋಗದಲ್ಲಿ  ಆಸ್ಟ್ರೀಲಿಯಾ ಕೌನ್ಸಲ್ ಜನರಲ್ ಸಾರಾ ಕಿಲ್ರ್ಯೂ, ಮೈಕಲ್ ಕೌಟ್ಸ್ ಟ್ರಾಟ್ಟರ್, ಐಟಿ ಬಿಟಿ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಡಾ: ಇ.ವಿ.ರಮಣರೆಡ್ಡಿ, ನಿರ್ದೇಶಕಿ ಮೀನಾ ನಾಗರಾಜ್ ಮೊದಲಾದವರು ಉಪಸ್ಥಿತರಿದ್ದರು.
[29/07, 7:41 PM] Gurulingswami. Holimatha. Vv. Cm: ಬೆಂಗಳೂರು, ಜುಲೈ 29: ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ನಮ್ಮ ಬೆಂಗಳೂರು ಪ್ರತಿಷ್ಠಾನದ ವತಿಯಿಂದ ಬೆಂಗಳೂರಿನ ಕೋರಮಂಗಲದಲ್ಲಿ ಆಯೋಜಿಸಿದ್ದ 'ನಮ್ಮ ಬೆಂಗಳೂರು   ಅವಾರ್ಡ್ಸ್' ಪ್ರಶಸ್ತಿ ಪ್ರದಾನ ಹಾಗೂ 'ನಮ್ಮ ಆರೋಗ್ಯ ಯೋಧರು' ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.  ಆರೋಗ್ಯ ಸಚಿವರಾದ ಡಾ.ಕೆ ಸುಧಾಕರ, ನಮ್ಮ‌ ಬೆಂಗಳೂರು ಪ್ರತಿಷ್ಠಾನದ ಅಧ್ಯಕ್ಷ ಪ್ರದೀಪ ಮತ್ತು ಇತರರು ಪಾಲ್ಗೊಂಡಿದ್ದರು.

Post a Comment

Previous Post Next Post