ಮಳೆಯಿಂದ ಹಾನಿಗೊಳಗಾದ 11 ಜಿಲ್ಲೆಗಳ ಜಿಲ್ಲಾಧಿಕಾರಿಗಳೊಂದಿಗೆ ಸಿಎಂ ವೀಡಿಯೋ ಸಂವಾದ *ಮನೆ ಹಾನಿಗೆ ತಕ್ಷಣ ಪರಿಹಾರ ನೀಡಿ: ಸಿಎಂ ಬಸವರಾಜ ಬೊಮ್ಮಾಯಿ ಸೂಚನೆ* *ಕೆರೆಕಟ್ಟೆಗಳು ಒಡೆಯದಂತೆ ನಿಗಾ ವಹಿಸಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚನೆ*ಬೆಂಗಳೂರಿನಲ್ಲಿ ಮಂಕಿಪಾಕ್ಸ್ ಸಾಂಕ್ರಾಮಿಕದ ಬಗ್ಗೆ ಸಭೆ ಜರುಗಿತು.

[02/08, 5:24 PM] Gurulingswami. Holimatha. Vv. Cm: ಬೆಂಗಳೂರು, ಆಗಸ್ಟ್ 02 : ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ಇಂದು ಬೆಂಗಳೂರಿನಲ್ಲಿ ಮಂಕಿಪಾಕ್ಸ್ ಸಾಂಕ್ರಾಮಿಕದ ಬಗ್ಗೆ ಸಭೆ ಜರುಗಿತು. 
ಆರೋಗ್ಯ ಸಚಿವ ಡಾ: ಕೆ.ಸುಧಾಕರ್, ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ, ಆರೋಗ್ಯ ಇಲಾಖೆ ಆಯುಕ್ತ ಡಿ.ರಂದೀಪ್, ರಾಷ್ಟ್ರೀಯ ಆರೋಗ್ಯ ಮಿಷನ್ ನಿರ್ದೇಶಕಿ ಡಾ:ಅರುಂಧತಿ, ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಮಂಜುನಾಥ್ ಪ್ರಸಾದ್, ಮುಖ್ಯ ಮಂತ್ರಿಗಳ ಕಾರ್ಯದರ್ಶಿ ಶ್ರೀಕರ್,   ಆರೋಗ್ಯ ಟಾಸ್ಕ್ ಫೋರ್ಸ್ ಅಧ್ಯಕ್ಷ ಡಾ: ಸುದರ್ಶನ್ ಮೊದಲಾದವರು ಉಪಸ್ಥಿತರಿದ್ದರು.
[02/08, 7:41 PM] Gurulingswami. Holimatha. Vv. Cm: ಮಳೆಯಿಂದ ಹಾನಿಗೊಳಗಾದ 11 ಜಿಲ್ಲೆಗಳ ಜಿಲ್ಲಾಧಿಕಾರಿಗಳೊಂದಿಗೆ ಸಿಎಂ ವೀಡಿಯೋ ಸಂವಾದ
 
 *ಮನೆ ಹಾನಿಗೆ ತಕ್ಷಣ ಪರಿಹಾರ ನೀಡಿ: ಸಿಎಂ ಬಸವರಾಜ ಬೊಮ್ಮಾಯಿ ಸೂಚನೆ* 
*ಕೆರೆಕಟ್ಟೆಗಳು ಒಡೆಯದಂತೆ ನಿಗಾ ವಹಿಸಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚನೆ*
 
ಬೆಂಗಳೂರು, ಆಗಸ್ಟ್ 02: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಬಾರಿ ಮಳೆಯಿಂದ ಹಾನಿಗೊಳಗಾಗಿವ ಹನ್ನೊಂದು ಜಿಲ್ಲೆಗಳ ಜಿಲ್ಲಾಧಿಕಾರಿಗಳೊಂದಿಗೆ ವೀಡಿಯೋ ಸಂವಾದ ನಡೆಸಿದರು.
                     

ಜೂನ್ ಒಂದರಿಂದ ಈವರೆಗೆ ಆಗಿರುವ ಭಾರಿ ಮಳೆ ಹಾಗೂ ಪ್ರವಾಹದಿಂದ  ರಾಜ್ಯದಲ್ಲಿ ಉಂಟಾಗಿರುವ ಹಾನಿಯ ಬಗ್ಗೆ ಮುಖ್ಯಮಂತ್ರಿಗಳು ಅಧಿಕಾರಿಗಳಿಂದ ಮಾಹಿತಿ ಪಡೆದರು.

*ಬೆಳೆ  ಹಾನಿ*

ಒಟ್ಟು 3499 ಹೆಕ್ಟೇರ್ ಕೃಷಿ ಬೆಳೆ  ನಾಶವಾಗಿದ್ದು, 2057 ಹೆಕ್ಟೇರ್ ತೋಟಗಾರಿಕಾ ಬೆಳೆ  ನಾಶವಾಗಿದೆ.

 *ಮನೆ ಹಾನಿ*
 2430 ಮನೆಗಳು ಸಂಪೂರ್ಣ ಹಾನಿಗೊಳಗಾಗಿವೆ.   4378 ಮನೆಗಳು ಭಾಗಶಃ ಹಾನಿಯಾಗಿವೆ. 
 
*ಜೀವ ಹಾನಿ*

ಜೀವ ಹಾನಿ -39 
99 ಪ್ರಾಣಿ ಹಾನಿ,  

*ರಸ್ತೆ*
1730 ಕಿ.ಮೀ ರಸ್ತೆ ಹಾನಿ, 5419 ಕಿ.ಮಿ ಗ್ರಾಮೀಣ ರಸ್ತೆ ಹಾನಿಯಾಗಿವೆ.

 629 ಸೇತುವೆಗಳು ಹಾನಿಯಾಗಿವೆ - 3264 ಶಾಲಾ ಕಟ್ಟಡಗಳು ಹಾನಿಯಾಗಿದ್ದು, 29 ಪ್ರಾಥಮಿಕ ಆರೋಗ್ಯ ಕಟ್ಟಡಗಳ ಹಾನಿಯಾಗಿವೆ.  

*ವಿದ್ಯುತ್ ಕಂಬ*
 11796 ವಿದ್ಯುತ್ ಕಂಬಗಳು ನೆಲಕ್ಕುರುಳಿವೆ ಹಾಗೂ 759 ಟ್ರಾನ್ಸ್ ಫಾರ್ಮರ್ಗಳು  ಹಾನಿಗೊಳಪಟ್ಟಿವೆ.  
 

*ಸಭೆಯ ಮುಖ್ಯಾಂಶಗಳು:*


1.    ಸತತ ಮಳೆಯಿಂದ ಎಲ್ಲಾ ಕೆರೆಗಳು ತುಂಬಿವೆ. ಕೆರೆಗಳ ಕಟ್ಟೆಗಳು ಮತ್ತು ಕೋಡಿಗಳು ದುರ್ಬಲಗೊಂಡಿರುತ್ತವೆ. ಸಂಗ್ರಹ ಸಾಮರ್ಥ್ಯ ಹೆಚ್ಚಿರುವ  ಕೆರೆಗಳ  ಬಗ್ಗೆ ವಿಶೇಷ ಗಮನ ಹರಿಸಬೇಕು. ಕೆರೆಗಳು ವಡ್ಡು ಬಿರುಕು ಬಿಡದಂತೆ ಎಚ್ಚರ ವಹಿಸಬೇಕು.  ಸಣ್ಣ ನೀರಾವರಿ ಹಾಗೂ ಜಿಲ್ಲಾ ಪಂಚಾಯತ್ ಈ ಬಗ್ಗೆ ಜಂಟಿಯಾಗಿ ಕಾರ್ಯನಿರ್ವಹಿಸುವುದು. 

2.    ರಕ್ಷಣೆ, ಪರಿಹಾರ ಮತ್ತು ಪುನಶ್ಚೇತನ ಕಾರ್ಯಗಳನ್ನು ಸಮರೋಪಾದಿಯಲ್ಲಿ  ಕೈಗೊಳ್ಳಲು ಸೂಚನೆ

3.    ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಕಡಿದುಹೋದ ರಸ್ತೆ ಸಂಪರ್ಕವನ್ನು  ಪುನ:ಸ್ಥಾಪಿಸಲು ಅಗತ್ಯ ಕ್ರಮ ಕೈಗೊಳ್ಳಿ


4.    ಬಿದ್ದುಹೋದ ಮನೆಗಳ ಬಗ್ಗೆ ತುರ್ತಾಗಿ  ಜಂಟಿ ಸಮೀಕ್ಷೆ  ಕೈಗೊಳ್ಳುವುದು.   ಭೂ ಕುಸಿತ ಸಂಭವಿಸುವ ಸಾಧ್ಯತೆ ಇರುವ ಕಡೆಗಳಲ್ಲಿ ಜನರನ್ನು ಮುಂಚಿತವಾಗಿಯೇ ಸ್ಥಳಾಂತರ ಮಾಡುವುದು. 

5.    ಭಟ್ಕಳದಲ್ಲಿ ಹಾಗೂ ಸುಳ್ಯದ ಸೇರಿದಂತೆ ಇತರ ಕಡೆಗಳ ವಾಣಿಜ್ಯ ಸಂಕೀರ್ಣಗಳಲ್ಲಿ ನೀರು ನುಗ್ಗಿ ಹಾಳಾಗಿರುವ ಬಗ್ಗೆ ವರದಿ ಸಲ್ಲಿಸುವುದು.
 
6.    ರೆಡ್ ಅಲರ್ಟ್ ಇರುವ ಜಿಲ್ಲೆಗಳಲ್ಲಿ ಮುನ್ನೆಚ್ಚರಿಕಾ ಕ್ರಮ ವಹಿಸಬೇಕು

7.    ಕೊಡಗು ಜಿಲ್ಲೆಯಲ್ಲಿ ಭೂ ಕುಸಿತವಾಗುವ ಬಗ್ಗೆ ಎಚ್ಚರ ವಹಿಸಬೇಕು. 


8.    ಪ್ರವಾಹದಂಥ ತುರ್ತು ಸಂದರ್ಭದಲ್ಲಿ ತಕ್ಷಣ ಪರಿಹಾರ ಕ್ರಮ‌ಕೈಗೊಂಡು, ಆ ಮೂಲಕ ಸರ್ಕಾರ ಜನರ ಕಷ್ಟಗಳಿಗೆ  ಸ್ಪಂದಿಸುತ್ತಿದೆ  ಎಂಬ ಸಂದೇಶ ರವಾನೆ ಮಾಡಬೇಕಿದೆ.

9.     ಜಿಲ್ಲಾಧಿಕಾರಿಗಳು ತುರ್ತು ಸಂದರ್ಭಗಳಲ್ಲಿ ಪರಿಹಾರ ವಿತರಣೆಗೆ ವಿಳಂಬ ಧೋರಣೆ ಅನುಸರಿಸದೆ, ಕೂಡಲೇ ಪರಿಹಾರ ವಿತರಿಸಲು ಸೂಚನೆ.

10.  ಹಾನಿಯಾಗಿರುವ ಮನೆಗಳ ಬಗ್ಗೆ  ಪ್ರಾಥಮಿಕ ವರದಿಯನ್ನು ಪ್ರತಿ ತಾಲೂಕಿನ ಇಓ ಗಳಿಂದ ಪಡೆಯುವುದು.
 
11. ಕಾಳಜಿ ಕೇಂದ್ರಗಳಲ್ಲಿ ಎಲ್ಲಾ ವ್ಯವಸ್ಥೆ ಗಳನ್ನು ತಹಶೀಲ್ದಾರ್ ಗಳು  ಖಾತರಿ ಪಡಿಸಿಕೊಂಡು ಅದನ್ನು ಜಿಲ್ಲಾಧಿಕಾರಿಗಳು ಮೇಲ್ವಿಚಾರಣೆ ಮಾಡಬೇಕು.
 
12. ಮೈಸೂರು, ದಾವಣಗೆರೆ ಹಾಗೂ ಉಡುಪಿ ಜಿಲ್ಲೆಗಳಿಗೆ ಅಗತ್ಯವಿರುವ ಹೆಚ್ಚುವರಿ  ಅನುದಾನ ಬಿಡುಗಡೆ ಮಾಡಲಾಗುವುದು. 

13. ಹಾನಿಗೊಳಗಾಗಿರುವ  ಮೀನುಗಾರರ ದೋಣಿಗಳ ದುರಸ್ತಿಗೆ ತಗಲುವ ವೆಚ್ಚವನ್ನು ಅಂದಾಜು ಮಾಡಲು ಸೂಚನೆ

14. ಎಲ್ಲಾ ಇಲಾಖೆಗಳು ಸಮನ್ವಯ ಸಾಧಿಸಿ ರಕ್ಷಣೆ, ಪರಿಹಾರ ಮತ್ತು ಪುನಶ್ಚೇತನ ಕಾರ್ಯಗಳನ್ನು ಆದ್ಯತೆ ಮೇರೆಗೆ  ಕೈಗೊಳ್ಳುವುದು.


ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ, ಆರ್ಥಿಕ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಹಾಗೂ ಅಭಿವೃದ್ಧಿ ಆಯುಕ್ತರಾದ ಐ.ಎಸ್.ಎನ್.ಪ್ರಸಾದ್, ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ಎಸ್.ಆರ್.ಉಮಾಶಂಕರ್,  ರಾಜ್ಯ ವಿಕೋಪ ನಿರ್ವಹಣಾ ಪ್ರಾಧಿಕಾರದ ಆಯುಕ್ತ ಮನೋಜ್ ರಾಜನ್, ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಮಂಜುನಾಥ್ ಪ್ರಸಾದ್ ಮೊದಲಾದವರು ಉಪಸ್ಥಿತರಿದ್ದರು.

 

--
[02/08, 7:41 PM] Gurulingswami. Holimatha. Vv. Cm: *ಮಂಕಿಪಾಕ್ಸ್ ಕುರಿತು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ  ಸೂಚನೆ*

ಬೆಂಗಳೂರು, ಆಗಸ್ಟ್ 02 :  ರಾಜ್ಯದಲ್ಲಿ  ಮಂಕಿಪಾಕ್ಸ್  ಹರಡದಂತೆ ಅಗತ್ಯವಿರುವ ಮುನ್ನೆಚ್ಚರಿಕಾ ಕ್ರಮಗಳನ್ನು ವಹಿಸಬೇಕೆಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚಿಸಿದರು. 
 

ಅವರು ಇಂದು ಮಂಕಿಪಾಕ್ಸ್ ಕುರಿತಂತೆ ಗೃಹ ಕಚೇರಿ ಕೃಷ್ಣಾದಲ್ಲಿ ಸಭೆ ನಡೆಸಿದರು. 

*ಸಭೆಯಲ್ಲಿ ಮುಖ್ಯಮಂತ್ರಿಗಳು ಅಧಿಕಾರಿಗಳಿಗೆ ನೀಡಿದ ಸೂಚನೆಗಳು*

1.      ದೇಶದಲ್ಲಿ ಆರು ಮಂಕಿಪಾಕ್ಸ್  ಪ್ರಕರಣಗಳು ವರದಿಯಾಗಿದ್ದು, ರಾಜ್ಯದ ವಿಮಾನನಿಲ್ದಾಣಗಳಲ್ಲಿ ಸೋಂಕಿತರ ಪರೀಕ್ಷೆಗೆ ಸೂಕ್ತ ಕ್ರಮ ವಹಿಸಬೇಕು. 

2. ಕೇಂದ್ರ ಸರ್ಕಾರ ಬಿಡುಗಡೆ ಮಾಡಿರುವ ಮಾರ್ಗಸೂಚಿಯಂತೆ  ಸೋಂಕು ಧೃಢಪಟ್ಟ ವ್ಯಕ್ತಿಗಳನ್ನು 21 ದಿನಗಳ ಕ್ವಾರಂಟೈನ್ ಮಾಡುವುದು ಸೇರಿದಂತೆ ಅಗತ್ಯ ಮುನ್ನೆಚ್ಚರಿಕೆ ವಹಿಸಬೇಕೆಂದು  ಮುಖ್ಯಮಂತ್ರಿಗಳು ಸೂಚಿಸಿದರು. 

3.      ಸೋಂಕಿಗೆ ಸಂಬಂಧಿಸಿದಂತೆ  ಚಿಕಿತ್ಸೆ ನೀಡಬಹುದಾದ ಖಾಸಗಿ ಸಂಸ್ಥೆಗಳನ್ನು ಗುರುತಿಸಬೇಕು

4.       ವೈದ್ಯಕೀಯ ಹಾಗೂ ಅರೆ ವೈದ್ಯಕೀಯ ಸಿಬ್ಬಂದಿಗೆ ಸೂಕ್ತ ತರಬೇತಿ ನೀಡುವಂತೆ ಸೂಚಿಸಿದರು.  

5.      ಮಂಕಿಪಾಕ್ಸ್ ಸೋಂಕಿನ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸಲು ವ್ಯಾಪಕವಾಗಿ ಪ್ರಚಾರ ಕಾರ್ಯ ಕೈಗೊಳ್ಳುವುದು.
 

ರಾಜ್ಯದ ಮೂವರು ವ್ಯಕ್ತಿಗಳ ಪೈಕಿ ಇಬ್ಬರು ವ್ಯಕ್ತಿಗಳ ಪರೀಕ್ಷಾ ವರದಿ ನೆಗೆಟಿವ್ ಇದೆ. ಬೆಲ್ಜಿಯಂ ನಿಂದ ಪ್ರಯಾಣ ಮಾಡಿದ್ದ ಉತ್ತರ ಕನ್ನಡ ಜಿಲ್ಲೆಯ ವ್ಯಕ್ತಿಯ  ಪರೀಕ್ಷಾ ವರದಿ ಇನ್ನೂ ಬರಬೇಕಿದೆ.  ಬೆಂಗಳೂರಿನ ಇಡಿ ಆಸ್ಪತ್ರೆ ಹಾಗೂ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯನ್ನು ಕ್ವಾರಂಟೈನ್ ಗಾಗಿ ಗುರುತಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.
 
ಸಭೆಯಲ್ಲಿ ಆರೋಗ್ಯ ಸಚಿವ ಡಾ: ಕೆ.ಸುಧಾಕರ್, ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ, ಆರೋಗ್ಯ ಇಲಾಖೆ ಆಯುಕ್ತ ಡಿ.ರಂದೀಪ್, ರಾಷ್ಟ್ರೀಯ ಆರೋಗ್ಯ ಮಿಷನ್ ನಿರ್ದೇಶಕಿ ಡಾ:ಅರುಂಧತಿ, ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಮಂಜುನಾಥ್ ಪ್ರಸಾದ್, ಮುಖ್ಯ ಮಂತ್ರಿಗಳ ಕಾರ್ಯದರ್ಶಿ ಶ್ರೀಕರ್,   ಆರೋಗ್ಯ ಟಾಸ್ಕ್ ಫೋರ್ಸ್ ಅಧ್ಯಕ್ಷ ಡಾ: ಸುದರ್ಶನ್ ಮೊದಲಾದವರು ಉಪಸ್ಥಿತರಿದ್ದರು.

Post a Comment

Previous Post Next Post