ಆಗಸ್ಟ್ 25, 2022 | , | 1:01PM |
ಬಿಲ್ಕಿಸ್ ಬಾನೊ ಸಾಮೂಹಿಕ ಅತ್ಯಾಚಾರ ಪ್ರಕರಣ: 11 ಅಪರಾಧಿಗಳ ಕ್ಷಮಾಪಣೆ ಪ್ರಶ್ನಿಸಿ ಅರ್ಜಿ ವಿಚಾರಣೆಗೆ ಸುಪ್ರೀಂ ಒಪ್ಪಿಗೆ
ಫೈಲ್ PIC
2002ರ ಬಿಲ್ಕಿಸ್ ಬಾನೊ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ 11 ಅಪರಾಧಿಗಳ ಕ್ಷಮಾಪಣೆಯನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಇಂದು ಒಪ್ಪಿಕೊಂಡಿದೆ. ಆಗಸ್ಟ್ 15 ರಂದು ಬಿಡುಗಡೆಯಾದ ಅಪರಾಧಿಗಳ ಕ್ಷಮೆಯನ್ನು ಪ್ರಶ್ನಿಸಿ ಸಲ್ಲಿಸಿದ ಮನವಿಯ ಮೇಲೆ ಸುಪ್ರೀಂ ಕೋರ್ಟ್ ಗುಜರಾತ್ ಸರ್ಕಾರ ಮತ್ತು ಕೇಂದ್ರಕ್ಕೆ ನೋಟಿಸ್ ಜಾರಿ ಮಾಡಿದೆ.ಈ ಪ್ರಕರಣದಲ್ಲಿ ಅಪರಾಧಿಗಳನ್ನು ಕಕ್ಷಿದಾರರನ್ನಾಗಿ ಮಾಡುವಂತೆ ಅರ್ಜಿದಾರರನ್ನು ಸುಪ್ರೀಂ ಕೋರ್ಟ್ ಕೇಳಿದೆ. ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ 11 ಅಪರಾಧಿಗಳನ್ನು ಗುಜರಾತ್ ಸರ್ಕಾರದ 1992 ರ ಪರಿಹಾರ ನೀತಿಯ ಅಡಿಯಲ್ಲಿ ಬಿಡುಗಡೆ ಮಾಡಲಾಯಿತು.
Post a Comment