ರಾಷ್ಟ್ರೀಯ ಗೋಪಾಲ ರತ್ನ ಪ್ರಶಸ್ತಿಗಳು -2022 ಗಾಗಿ ಸರ್ಕಾರವು ಅರ್ಜಿಗಳನ್ನು ಆಹ್ವಾನಿಸಿದೆ

 ಆಗಸ್ಟ್ 24, 2022

,


5:00PM

ರಾಷ್ಟ್ರೀಯ ಗೋಪಾಲ ರತ್ನ ಪ್ರಶಸ್ತಿಗಳು -2022 ಗಾಗಿ ಸರ್ಕಾರವು ಅರ್ಜಿಗಳನ್ನು ಆಹ್ವಾನಿಸಿದೆ

ಮೀನುಗಾರಿಕೆ, ಪಶುಸಂಗೋಪನೆ ಮತ್ತು ಹೈನುಗಾರಿಕೆ ಸಚಿವಾಲಯವು ರಾಷ್ಟ್ರೀಯ ಗೋಪಾಲ್ ರತ್ನ ಪ್ರಶಸ್ತಿಗಳು - 2022 ಗೆ ರಾಷ್ಟ್ರೀಯ ಪ್ರಶಸ್ತಿ ಪೋರ್ಟಲ್ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿಗಳನ್ನು ಆಹ್ವಾನಿಸಿದೆ. ಅರ್ಜಿಗಳನ್ನು ಸಲ್ಲಿಸಲು ಮುಂದಿನ ತಿಂಗಳು 15 ಕೊನೆಯ ದಿನಾಂಕವಾಗಿದೆ. ನವೆಂಬರ್ 26 ರಂದು ರಾಷ್ಟ್ರೀಯ ಹಾಲು ದಿನಾಚರಣೆಯ ಸಂದರ್ಭದಲ್ಲಿ ಪ್ರಶಸ್ತಿಗಳನ್ನು ನೀಡಲಾಗುವುದು.

 

ಪಶುಸಂಗೋಪನೆ ಮತ್ತು ಹೈನುಗಾರಿಕೆ ಇಲಾಖೆಯು ರೈತರಿಗೆ ಸುಸ್ಥಿರ ಜೀವನೋಪಾಯವನ್ನು ಒದಗಿಸಲು ಎಲ್ಲಾ ಪ್ರಯತ್ನಗಳನ್ನು ಮಾಡುತ್ತಿದೆ ಎಂದು ಸಚಿವಾಲಯ ಹೇಳಿದೆ. ರಾಷ್ಟ್ರೀಯ ಗೋಕುಲ್ ಮಿಷನ್ ಅನ್ನು ಡಿಸೆಂಬರ್ 2014 ರಲ್ಲಿ ದೇಶದಲ್ಲಿ ಮೊದಲ ಬಾರಿಗೆ ಪ್ರಾರಂಭಿಸಲಾಯಿತು, ವೈಜ್ಞಾನಿಕ ರೀತಿಯಲ್ಲಿ ಸ್ಥಳೀಯ ಗೋವಿನ ತಳಿಗಳನ್ನು ಸಂರಕ್ಷಿಸುವ ಮತ್ತು ಅಭಿವೃದ್ಧಿಪಡಿಸುವ ಉದ್ದೇಶದಿಂದ.

Post a Comment

Previous Post Next Post