ಮುಂಬೈ : 21 ವಿಶ್ವವಿದ್ಯಾಲಯಗಳನ್ನು ನಕಲಿ ಎಂದು ಘೋಷಿಸಿದ ವಿಶ್ವವಿದ್ಯಾಲಯ ಧನಸಹಾಯ ಆಯೋಗ (UGC) ಈ ಸಂಸ್ಥೆಗಳಿಗೆ ವಿದ್ಯಾರ್ಥಿಗಳಿಗೆ ಪದವಿಗಳನ್ನ ನೀಡುವ ಯಾವುದೇ ಅಧಿಕಾರವಿಲ್ಲ ಎಂದು ಇತ್ತೀಚೆಗೆ ಹೇಳಿದೆ. ವರದಿಗಳ ಪ್ರಕಾರ, ನಕಲಿ ಎಂದು ಘೋಷಿಸಲಾದ 21 ಸಂಸ್ಥೆಗಳು ವಿಶ್ವವಿದ್ಯಾಲಯ ಧನಸಹಾಯ ಆಯೋಗ ಕಾಯ್ದೆ, 1956ರ ವಿರುದ್ಧ ಕಾರ್ಯನಿರ್ವಹಿಸುತ್ತಿವೆ.ವರದಿಯ ಪ್ರಕಾರ, 21 ವಿಶ್ವವಿದ್ಯಾಲಯಗಳು ನಕಲಿ ಎಂದು ಪರಿಗಣಿಸಲಾಗಿದ್ದು, ಎಂಟು ವಿಶ್ವವಿದ್ಯಾಲಯಗಳು ದೆಹಲಿಯಿಂದ ಮತ್ತು ನಾಲ್ಕು ವಿಶ್ವವಿದ್ಯಾಲಯಗಳು ಉತ್ತರ ಪ್ರದೇಶದವು. ಇದಲ್ಲದೆ, ಪಶ್ಚಿಮ ಬಂಗಾಳ ಮತ್ತು ಒಡಿಶಾದಲ್ಲಿ ತಲಾ ಎರಡು ನಕಲಿ ವಿಶ್ವವಿದ್ಯಾಲಯಗಳಿವೆ. ಮತ್ತೊಂದೆಡೆ, ಕರ್ನಾಟಕ, ಕೇರಳ, ಮಹಾರಾಷ್ಟ್ರ, ಪುದುಚೇರಿ ಮತ್ತು ಆಂಧ್ರಪ್ರದೇಶಗಳಲ್ಲಿ ತಲಾ ಒಂದು ನಕಲಿ ವಿಶ್ವವಿದ್ಯಾಲಯವಿದೆ.
ಕೇಂದ್ರ, ರಾಜ್ಯ ಮತ್ತು ಪ್ರಾಂತೀಯ ಕಾಯ್ದೆಯಡಿ ಸ್ಥಾಪಿಸಲಾದ ವಿಶ್ವವಿದ್ಯಾಲಯಗಳು ಮಾತ್ರ ಪದವಿಗಳನ್ನ ನೀಡಬಹುದು ಎಂದು ಯುಜಿಸಿ ಹೇಳಿಕೆಯಲ್ಲಿ ತಿಳಿಸಿದೆ. ಇದಲ್ಲದೆ, ಡೀಮ್ಡ್-ಟು-ಬಿ ವಿಶ್ವವಿದ್ಯಾಲಯವಾಗಿರುವ ಸಂಸ್ಥೆಯು ಪದವಿಗಳನ್ನು ಸಹ ನೀಡಬಹುದು. ಸಂಸತ್ತಿನ ಕಾಯ್ದೆಯಿಂದ ಅಧಿಕಾರ ಪಡೆದ ಸಂಸ್ಥೆಗಳು ವಿದ್ಯಾರ್ಥಿಗಳಿಗೆ ಪದವಿಗಳನ್ನು ಸಹ ನೀಡಬಹುದು ಎಂದು ಅಧಿಕೃತ ಹೇಳಿಕೆ ತಿಳಿಸಿದೆ.
ಕುತೂಹಲಕಾರಿಯಾಗಿ, ಯುಜಿಸಿ 21 ನಕಲಿ ವಿಶ್ವವಿದ್ಯಾಲಯಗಳನ್ನು 'ಸ್ವಯಂ ಘೋಷಿತ, ಮಾನ್ಯತೆ ಪಡೆಯದ ಸಂಸ್ಥೆಗಳು' ಎಂದು ಕರೆದಿದೆ. 'ಯುಜಿಸಿ ಕಾಯ್ದೆಯನ್ನ ಉಲ್ಲಂಘಿಸಿ ಕಾರ್ಯನಿರ್ವಹಿಸುತ್ತಿರುವ ಪ್ರಸ್ತುತ 21 ಸ್ವಯಂ ಘೋಷಿತ, ಮಾನ್ಯತೆ ಪಡೆಯದ ಸಂಸ್ಥೆಗಳನ್ನು ನಕಲಿ ವಿಶ್ವವಿದ್ಯಾಲಯಗಳೆಂದು ಘೋಷಿಸಲಾಗಿದೆ. ಇನ್ನು ಇವು ಯಾವುದೇ ಪದವಿಯನ್ನ ನೀಡುವ ಅಧಿಕಾರವನ್ನ ಹೊಂದಿಲ್ಲ ಎಂದು ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರಿಗೆ ಈ ಮೂಲಕ ತಿಳಿಸಲಾಗಿದೆ' ಎಂದು ಯುಜಿಸಿ ಹೇಳಿಕೆಯಲ್ಲಿ ತಿಳಿಸಿದೆ.
ಆಲ್ ಇಂಡಿಯಾ ಇನ್ಸ್ಟಿಟ್ಯೂಟ್ ಆಫ್ ಪಬ್ಲಿಕ್ ಅಂಡ್ ಫಿಸಿಕಲ್ ಹೆಲ್ತ್ ಸೈನ್ಸಸ್ (AIIPPHS), ಕಮರ್ಷಿಯಲ್ ಯೂನಿವರ್ಸಿಟಿ ಲಿಮಿಟೆಡ್, ಯುನೈಟೆಡ್ ನೇಷನ್ಸ್ ಯೂನಿವರ್ಸಿಟಿ, ಸೇಂಟ್ ಜಾನ್ಸ್ ಯೂನಿವರ್ಸಿಟಿ, ಕಿಶನಟ್ಟಂ ಕೇರಳ, ನವಭಾರತ್ ಶಿಕ್ಷಣ ಪರಿಷತ್, ನಾರ್ತ್ ಒರಿಸ್ಸಾ ಯೂನಿವರ್ಸಿಟಿ ಆಫ್ ಅಗ್ರಿಕಲ್ಚರ್ ಅಂಡ್ ಟೆಕ್ನಾಲಜಿ, ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಆಲ್ಟರ್ನೇಟಿವ್ ಮೆಡಿಸಿನ್, ಇನ್ಸ್ಟಿಟ್ಯೂಟ್ ಆಫ್ ಆಲ್ಟರ್ನೇಟಿವ್ ಮೆಡಿಸಿನ್ ಅಂಡ್ ರಿಸರ್ಚ್, ಗಾಂಧಿ ಹಿಂದಿ ವಿದ್ಯಾಪೀಠ, ನ್ಯಾಷನಲ್ ಯೂನಿವರ್ಸಿಟಿ ಆಫ್ ಎಲೆಕ್ಟ್ರೋ ಕಾಂಪ್ಲೆಕ್ಸ್ ಹೋಮಿಯೋಪಥಿ, ರಾಜಾ ಅರೇಬಿಕ್ ವಿಶ್ವವಿದ್ಯಾಲಯ, ಇತ್ಯಾದಿ 21 ವಿಶ್ವವಿದ್ಯಾಲಯಗಳು ನಕಲಿ ಎಂದು ಘೋಷಿಸಲಾದ ಪಟ್ಟಿಯಲ್ಲಿ ಸೇರಿವೆ
Post a Comment