*ಹಿಂದುಳಿದ ವರ್ಗಗಳಿಗೆ ಸ್ಥಾನಮಾನ ದೊರಕಿಸಲು ಅರಸು ಅವರ ಸೇವೆ ಅಮೋಘ: ವಿದ್ಯಾರ್ಥಿನಿಲಯಗಳ ಸುಧಾರಣೆಗೆ 250 ಕೋಟಿ ರೂ.,,, CM, ಇಂದು

[20/08, 3:11 PM] Cmo gh: *ಹಿಂದುಳಿದ ವರ್ಗಗಳಿಗೆ ಸ್ಥಾನಮಾನ ದೊರಕಿಸಲು ಅರಸು ಅವರ ಸೇವೆ ಅಮೋಘ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ*
ಬೆಂಗಳೂರು, ಆಗಸ್ಟ್ 20 : ಹಿಂದುಳಿದ ವರ್ಗಗಳಿಗೆ ಶಾಶ್ವತವಾಗಿ ರಾಜಕೀಯ, ಆರ್ಥಿಕ, ಸಾಮಾಜಿಕ, ಶೈಕ್ಷಣಿಕ ಸ್ಥಾನಮಾನ ದೊರಕಿಸಲು ದೇವರಾಜ ಅರಸು ಅವರು ಮಾಡಿದ ಸೇವೆ ಅಮೋಘ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಅಭಿಪ್ರಾಯಪಟ್ಟರು.
ಅವರು  ಇಂದು  ವಿಧಾನಸೌಧದ ಪಶ್ವಿಮದ್ವಾರ  ಬಳಿ ಮಾಜಿ ಮುಖ್ಯಮಂತ್ರಿ ದಿವಂಗತ ಡಿ. ದೇವರಾಜ ಅರಸುರವರ 107ನೇ ಜನ್ಮದಿನದ ಪ್ರಯುಕ್ತ   ಅವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ಪುಷ್ಪ ನಮನ ಸಲ್ಲಿಸಿದ ನಂತರ  ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದರು.
ಹಾವನೂರು ಆಯೋಗವನ್ನು ರಚಿಸಿ ಅನುಷ್ಠಾನಕ್ಕೆ ತಂದವರು ಅವರು. ಇಡೀ ಭಾರತ ದೇಶದಲ್ಲಿ ಹಿಂದುಳಿದ ವರ್ಗಗಳ ಬಗ್ಗೆ ಮೊದಲು ಚಿಂತನೆ ಮಾಡಿ ಕಾರ್ಯರೂಪಕ್ಕೆ ತಂಡ  ಶ್ರೇಯಸ್ಸು ದೇವರಾಜ ಅರಸು ಅವರದ್ದು ಎಂದರು.
ರಾಜ್ಯದ ಸಮಗ್ರ ಅಭಿವೃದ್ಧಿಯಲ್ಲಿ ಎಲ್ಲರನ್ನೂ ಒಳಗೊಂಡರೆ ಮಾತ್ರ ನೈಜ ಅಭಿವೃದ್ಧಿಯಾಗುತ್ತದೆ  ಎಂಬುದು ಡಿ.ದೇವರಾಜ ಅರಸು ಅವರ ನಿಲುವಾಗಿತ್ತು.  ಅವರ ನಿಲುವಿಗೆ ಬದ್ಧರಾಗಿ ನಾವೆಲ್ಲರೂ ಕೆಲಸ ಮಾಡುತ್ತಿದ್ದೇವೆ ಎಂದು ತಿಳಿಸಿದರು.  ಕರ್ನಾಟಕ ಕಂಡ ಧೀಮಂತ ನಾಯಕ, ದಕ್ಷ ಆಡಳಿತಗಾರ, ಹಿಂದುಳಿದ ವರ್ಗಗಳ ನೇತಾರ, ರೈತ ಬಂಧು  ಡಿ.ದೇವರಾಜ್ ಅರಸ್  ಎಂದು ಮುಖ್ಯಮಂತ್ರಿಗಳು ಬಣ್ಣಿಸಿದರು.

ಜನಮನದಲ್ಲಿ ಶಾಶ್ವತ ಸ್ಥಾನ ಗಳಿಸಿದ ನಾಯಕ
ಅರಸು ಅವರು ಸ್ವಾತಂತ್ರ್ಯ ಪೂರ್ವ ಹಾಗೂ ನಂತರದ ಕರ್ನಾಟಕದ ಇತಿಹಾಸದಲ್ಲಿ ತಮ್ಮದೇ  ಆದ ಸೇವೆಯನ್ನು ಸಲ್ಲಿಸಿ, ಜನಮನದಲ್ಲಿ ಶಾಶ್ವತ ಸ್ಥಾನ ಗಳಿಸಿರುವ ನಾಯಕರು. ಅವರಿಗೆ  ಬಡವರ ಬಗ್ಗೆ ಇದ್ದಂಥ ಕಳಕಳಿ, ಹಿಂದುಳಿದ ವರ್ಗಗಳಿಗೆ ನ್ಯಾಯ ಕೊಡುವ ಚಿಂತನೆ ಮತ್ತು ಭೂ ರಹಿರತರ ಬಗ್ಗೆ ಅವರಿಗಿದ್ದ ಪ್ರೀತಿಯಿಂದ ಹಲವಾರು ಬದಲಾವಣೆಗಳನ್ನು ಅವರು ಮುಖ್ಯ ಮಂತ್ರಿಗಳಾಗಿದ್ದ ಸಂದರ್ಭದಲ್ಲಿ ನೋಡಿದ್ದೇವೆ. 
 ಭೂ ಸುಧಾರಣೆ ಕಾಯ್ದೆಯಿಂದ ಆರ್ಥಿಕ , ಸಾಮಾಜಿಕ ನ್ಯಾಯ
ಭೂ ಸುಧಾರಣಾ ಕಾಯ್ದೆಯಡಿ ಉಳುವವನೆ ಭೂಮಿಯ ಒಡೆಯ ಎಂಬುದು ದೊಡ್ಡ ಕ್ರಾಂತಿಕಾರಿ ಚಿಂತನೆ. ಬಹಳ ವರ್ಷದ ಹೋರಾಟದ ಫಲವಾಗಿ ಕಾನೂನು ರಚಿಸಿ ಅದನ್ನು ಅನುಷ್ಠಾನಕ್ಕೆ ತಂಡ ಶ್ರೇಯಸ್ಸು ದೇವರಾಜ ಅರಸು ಅವರಿಗೆ ಸಲ್ಲುತ್ತದೆ. ಆರ್ಥಿಕ , ಸಾಮಾಜಿಕ ನ್ಯಾಯವನ್ನು ಭೂ ಸುಧಾರಣೆ ಕಾಯ್ದೆಯಿಂದ ತಂದಿದ್ದಾರೆ ಎಂದರು. 
ಕರ್ನಾಟಕವನ್ನು ಎತ್ತರದ ಸ್ಥಾನಕ್ಕೆ ಕೊಂಡೊಯ್ದರು
ಬಡವರ ಬಗ್ಗೆ ಇದ್ದ ಕಳಕಳಿಯಿಂದ ಜನತಾ ಮನೆಗಳ ನಿರ್ಮಾಣ, ವಿದ್ಯುತ್ ನಲ್ಲಿ ರಿಯಾಯಿತಿ, ಹಿಂದುಳಿದ ವರ್ಗ, ಪರಿಶಿಷ್ಟ ಜಾತಿ ಮತ್ತು ಪಂಗಡದವರು ವಿಶೇಷ ಸವಲತ್ತುಗಳನ್ನು ನೀಡಿದರು. ರಾಜಕೀಯ ರಂಗದಲ್ಲಿ ರಾಷ್ಟ್ರ ಮಟ್ಟದಲ್ಲಿ  ಕರ್ನಾಟಕವನ್ನು ಎತ್ತರದ ಸ್ಥಾನಕ್ಕೆ ಕೊಂಡೊಯ್ದರು.  ಯಾರಿಗಾಗಿ ಇಡೀ ಸರ್ವಸ್ವವನ್ನೂ ತ್ಯಾಗ ಮಾಡಿದರೊ ಕೊನೆ ಗಳಿಗೆಯಲ್ಲಿ ಅವರುಗಳ್ಯಾರೂ ಜೊತೆಯಲ್ಲಿ ಇರದೇ ಹೋಗಿದ್ದು ದುರ್ದೈವ. ನಿಜವಾಗಿಯೂ ಈ ಬಗ್ಗೆ ನಾವು ಚಿಂತನೆ ಮಾಡಬೇಕಾದ ದುರಂತ. ಆದಾಗ್ಯೂ ದೇವರಾಜ್ ಅರಸು ಅವರ ಮಹತ್ವ ಎಂದೂ ಕಡಿಮೆಯಾಗುವುದಿಲ್ಲ. ಜನಮನದಲ್ಲಿ ಶಾಶ್ವತವಾಗಿ ನೆಲೆಸಿದ್ದಾರೆ. ಅವರು ಹಾಕಿಕೊಟ್ಟ ಮಾರ್ಗದಲ್ಲಿ ನಾವು ಕೂಡ ಹತ್ತು ಹಲವು ಕಾರ್ಯಕ್ರಮಗಳನ್ನು ನಮ್ಮ ಸರ್ಕಾರ ರಚನೆ ಮಾಡಿದೆ. 
 ಹಿಂದುಳಿದ ವರ್ಗಗಳಿಗೆ, ಮಹಿಳೆಯರಿಗೆ, ಎಸ್.ಸಿ/ ಎಸ್.ಟಿ ಯುವಕರಿಗೆ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮುಖಾಂತರ ದೇವರಾಜ ಅರಸು ಅವರಿಗೆ ನಿಜವಾದ ನಮನಗಳನ್ನು ಸಲ್ಲಿಸುವ ಕೆಲಸವನ್ನು ಮಾಡಿದ್ದೇವೆ. ಈ ಕೆಲಸವನ್ನು ನಿರಂತರವಾಗಿ ಮಾಡಿದ್ದೇವೆ ಎಂದರು.
[20/08, 3:47 PM] Cmo gh: *ಹಿಂದುಳಿದ ವರ್ಗಗಳ ವಿದ್ಯಾರ್ಥಿನಿಲಯಗಳ ಸುಧಾರಣೆಗೆ 250 ಕೋಟಿ ರೂ. ಮಂಜೂರಾತಿಗೆ ತೀರ್ಮಾನ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ*

ಬೆಂಗಳೂರು, ಆಗಸ್ಟ್ 20 : 

 ಹಿಂದುಳಿದ ವರ್ಗಗಳ ವಿದ್ಯಾರ್ಥಿನಿಲಯಗಳ ಸ್ಥಿತಿಗತಿಗಳ ಸುಧಾರಣೆ ಹಾಗೂ ಹೆಚ್ಚಿನ ಸೌಲಭ್ಯಗಳನ್ನು ಒದಗಿಸಲು ಒಟ್ಟು 250 ಕೋಟಿ ರೂ. ಮಂಜೂರು ಮಾಡಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಅವರು ಇಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ಆಯೋಜಿಸಿರುವ ಮಾಜಿ ಮುಖ್ಯಮಂತ್ರಿಗಳಾದ ದಿವಂಗತ ಡಿ.ದೇವರಾಜ ಅರಸು ರವರ 107ನೇ ಜನ್ಮ ದಿನಾಚರಣೆ ಹಾಗೂ ಡಿ.ದೇವರಾಜ ಅರಸು ಪ್ರಶಸ್ತಿ ಪ್ರದಾನ ಮಾಡಿ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದರು.

 *2439  ಹಾಸ್ಟೆಲ್‍ಗಳಿಗೆ ಹೆಚ್ಚಿನ ಅನುದಾನ :*
ರಾಜ್ಯ ಸರ್ಕಾರದ ಎಲ್ಲ ವಿದ್ಯಾರ್ಥಿನಿಲಯಗಳ ಸಾಮಥ್ರ್ಯವನ್ನು ಶೇ. 25 ರಷ್ಟು ಹೆಚ್ಚಿಸಲು ಅನುದಾನವನ್ನು ನೀಡಲಾಗಿದೆ. ರಾಜ್ಯದ ಒಟ್ಟು 2439  ಹಾಸ್ಟೆಲ್‍ಗಳಿಗೆ ಹೆಚ್ಚಿನ ಅನುದಾನ ನೀಡಲಾಗಿದೆ. ವಿದ್ಯಾರ್ಥಿ ವೇತನದಲ್ಲಿ ತಲಾ 150 ರೂ.ಗಳನ್ನು ಹೆಚ್ಚಿಸಲಾಗಿದೆ. 195 ವಿದ್ಯಾರ್ಥಿನಿಲಯ ಕಟ್ಟಡಗಳು ನಿರ್ಮಾಣದ ವಿವಿಧ ಹಂತದಲ್ಲಿವೆ. ಕನಕದಾಸರ ಹೆಸರಿನಲ್ಲಿ 50 ಹೊಸ ಹಾಸ್ಟೆಲ್‍ಗಳನ್ನು ನಿರ್ಮಿಸಲಾಗುತ್ತಿದೆ. ರಾಜ್ಯದ 5 ಶೈಕ್ಷಣಿಕ ಕೇಂದ್ರಗಳಲ್ಲಿ 1000 ಮಕ್ಕಳಿಗೆ ಬಹುಮಹಡಿ ವಸತಿ ಸಮುಚ್ಛಯಗಳನ್ನು ನಿರ್ಮಿಸಲಾಗುತ್ತಿದೆ. ಈ ಯೋಜನೆಯನ್ನು  5000  ಮಕ್ಕಳ ಸಾಮಥ್ರ್ಯಕ್ಕೇರಿಸುವ ಗುರಿ ಇದ್ದು, ಹಣವನ್ನು ಒದಗಿಸಲಾಗಿದೆ. ದೇವರಾಜ ಅರಸು ಅವರ ಹೆಸರಿನಲ್ಲಿ ಪಿಹೆಚ್‍ಡಿ ಮಾಡುವ ವಿದ್ಯಾರ್ಥಿಗಳಿಗೆ ಒಟ್ಟು 4 ಕೋಟಿ ಅನುದಾನ ಬಿಡುಗಡೆ ಮಾಡಿ ಆದೇಶ ನೀಡಲಾಗಿದೆ. ವಿದೇಶದಲ್ಲಿ ವ್ಯಾಸಂಗ ಮಾಡುವ ವಿದ್ಯಾರ್ಥಿಗಳ ವಿದ್ಯಾರ್ಥಿವೇತನಕ್ಕೆ 10 ಕೋಟಿ ಅನುದಾನ ಹೆಚ್ಚಿಗೆ ನೀಡಲಾಗಿದೆ ಎಂದರು.

*ನಾರಾಯಣ ಗುರು ಹೆಸರಿನಲ್ಲಿ 4 ಹೊಸ ಶಾಲೆ  :*
ನಾರಾಯಣ ಗುರು ಅವರ ಹೆಸರಿನಲ್ಲಿ ತಲಾ 30 ಕೋಟಿ ರೂ. ವೆಚ್ಚದಲ್ಲಿ 4 ಶಾಲೆಗಳನ್ನು ಪ್ರಾರಂಭಿಸಲಾಗುವುದು. ಹಿಂದುಳಿದ ವರ್ಗದ ವಿವಿಧ ನಿಗಮ ಮಂಡಳಿಗೆ ಸುಮಾರು 800 ಕೋಟಿ ರೂ.ಗಳ ಅನುದಾನವನ್ನು ಅಧಿಕವಾಗಿ ನೀಡಲಾಗಿದೆ. ಶಿಕ್ಷಣ, ಉದ್ಯೋಗ ಮತ್ತು ಸಬಲೀಕರಣಗಳನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಪ್ರತಿಯೊಂದು ಗ್ರಾಮದಲ್ಲಿ ಸ್ವಾಮಿ ವಿವೇಕಾನಂದರ ಯುವಕರ ಸಂಘ ಯೋಜನೆಯಡಿ 10 ಲಕ್ಷ ರೂ. ಅನುದಾನ, ಉತ್ಪನ್ನಗಳಿಗೆ ಮಾರುಕಟ್ಟೆ ವ್ಯವಸ್ಥೆ ಕಲ್ಪಿಸಲಾಗುವುದು. ಸ್ತೀಶಕ್ತಿ ಸಂಘಗಳಿಗೆ ಆರ್ಥಿಕ ಸೌಲಭ್ಯ, ಬ್ಯಾಂಕ್ ಜೋಡಣೆ, ಮಾರುಕಟ್ಟೆ ವ್ಯವಸ್ಥೆ ಕಲ್ಪಿಸಿ 5 ಲಕ್ಷ ಮಹಿಳೆಯರಿಗೆ ಅನುಕೂಲ ಕಲ್ಪಿಸಲಾಗುತ್ತಿದೆ. ಸಾಮಾಜಿಕ ಚಟುವಟಿಕೆಗಳಲ್ಲಿ ತೊಡಗಿರುವ ಮಠಮಾನ್ಯಗಳಿಗೆ 129 ಕೋಟಿ ರೂ.ಗಳನ್ನು ನೀಡಲಾಗಿದೆ. ದೇವರಾಜ ಅರಸು ಅವರ ವಿಚಾರಗಳನ್ನು, ಕನಸುಗಳನ್ನು ನನಸು ಮಾಡುವುದು ಸರ್ಕಾರದ ಉದ್ದೇಶವಾಗಿದೆ. ಅವರ ಸಾಮಾಜಿಕ ನ್ಯಾಯದ ಕಲ್ಪನೆಯನ್ನು ಸಾಕಾರಗೊಳಿಸುವುದು ಎಂದು ತಿಳಿಸಿದರು.

*ಬಡವರಿಗಾಗಿ ಮಿಡಿದ ದೂರದೃಷ್ಟಿಯ ನಾಯಕ :*
ಕರ್ನಾಟಕ ಸಾಮಾಜಿಕ, ಆರ್ಥಿಕ, ಶೈಕ್ಷಣಿಕವಾಗಿ ಪ್ರಗತಿಪರವಾಗಿರುವುದಲ್ಲಿ ದೇವರಾಜ ಅರಸು ಅವರ ಪಾತ್ರ ಮಹತ್ವದ್ದಾಗಿದೆ. ಬಡವರಿಗಾಗಿ ಮಿಡಿಯುವ ದೂರದೃಷ್ಟಿಯ ನಾಯಕ. ಅವರು ಪ್ರೇರಣಾದಾಯಕ ವ್ಯಕ್ತಿತ್ವದವರಾಗಿದ್ದರು. ರಾಜ್ಯದ ರಾಜಕೀಯ ಸಾಮಾಜಿಕ ವಲಯಗಳಲ್ಲಿ ಹೆಜ್ಜೆಗುರುತುಗಳನ್ನು ಬಿಟ್ಟುಹೋಗಿದ್ದಾರೆ. ಅರಸು ಸಮುದಾಯದ ಜನಸಂಖ್ಯೆ ಬಹಳ ಕಡಿಮೆ, ಕ್ಷತ್ರೀಯ ಹಿನ್ನೆಲೆಯಿರುವುದರಿಂದ ಹೋರಾಟದ ಮನೋಭಾವ ಅವರಲ್ಲಿ ಸಹಜವಾಗಿತ್ತು. ಧ್ವನಿ ಇಲ್ಲದ ಸಮಾಜಕ್ಕೆ ರಾಜಕೀಯ ಶಕ್ತಿಯನ್ನು ತುಂಬಿ ಹೊಸ ರಾಜಕೀಯ ಮನ್ವಂತರವನ್ನು ಪ್ರಾರಂಭಿಸಿದ ಕೀರ್ತಿ ಅರಸು ಅವರಿಗೆ ಸಲ್ಲುತ್ತದೆ. ಸಾಮಾಜಿಕ ನ್ಯಾಯವನ್ನು ಪ್ರತಿಪಾದಿಸಿದವರು ಎಂದರು.

*ಉಳುವವನೇ ಭೂಮಿಯ ಒಡೆಯ :*
ಉಳುವವನೇ ಭೂಮಿಯ ಒಡೆಯ ಎಂಬ ತತ್ವಕ್ಕೆ ಕಾನೂನಿನ ಸ್ವರೂಪವನ್ನು ನೀಡಿ,  ಉಳುವವನಿಗೆ ಆ ಭೂಮಿಯ ಮೇಲೆ ಅಧಿಕಾರವನ್ನು ಕೊಟ್ಟಂತಹ ಕ್ರಾಂತಿಕಾರಿ ಹೆಜ್ಜೆಯಾಯಿತು. . ಸಣ್ಣ ಉಳುಮೆದಾರರಿಗೆ ಭೂ ಒಡೆತನ ನೀಡಿದ ನಂತರ ರಾಜ್ಯದಲ್ಲಿ ಆಹಾರ ಉತ್ಪಾದನೆ ದಾಖಲೆ ಪ್ರಮಾಣದಲ್ಲಿ ಹೆಚ್ಚಾಯಿತು ಎಂದರು.

*ಹಿಂದುಳಿದ ವರ್ಗಗಳ ಏಳಿಗೆಗೆ ಹೊಸ ದಿಕ್ಸೂಚಿ ನೀಡಿದ ನಾಯಕ :*
ಹಿಂದುಳಿದ ಸಣ್ಣ ಸಮುದಾಯದವರಿಗೆ ಶಿಕ್ಷಣ, ಉದ್ಯೋಗ ಹಾಗೂ ಸ್ವಾಭಿಮಾನದ ಬದುಕು ನೀಡಿದ ಹಾಗೂ ಹಿಂದುಳಿದ ವರ್ಗಗಳ ಏಳಿಗೆಗೆ ಹೊಸ ದಿಕ್ಸೂಚಿಯನ್ನು ನೀಡಿದ ಮಹಾನ್ ನಾಯಕರಾಗಿದ್ದರು. ರಾಜ್ಯದ ಜನ ಶ್ರೀಮಂತವಾಗಿದ್ದರೆ ಮಾತ್ರ ರಾಜ್ಯ ಶ್ರೀಮಂತವಾಗುತ್ತದೆ ಎಂಬ ಕಲ್ಪನೆಯನ್ನು ಸಾಕಾರಗೊಳಿಸಲು ರಾಜ್ಯ ಸರ್ಕಾರ ಹಲವು ಕಾರ್ಯಕ್ರಮಗಳನ್ನು ಮಾಡುತ್ತಿದೆ. ಅರಸು ಅವರ ಜನತಾ ಮನೆ, ಪಡಿತರ ವ್ಯವಸ್ಥೆ, ವಿದ್ಯುಚ್ಛಕ್ತಿ ರಿಯಾಯ್ತಿ, ಕೃಷಿಯಲ್ಲಿ ಆಧುನೀಕರಣ, ವಿದ್ಯುಚ್ಛಕ್ತಿ ಉತ್ಪಾದನೆ ಹೆಚ್ಚಳ , ತಮ್ಮ ಮಹತ್ವದ ತೀರ್ಮಾನಗಳಿಂದ ರಾಜ್ಯವನ್ನು ಪ್ರಗತಿಪಥದಲ್ಲಿ ನಡೆಸಿದರು. ಹಿಂದುಳಿದ ವರ್ಗದವರ ನಾಯಕರನ್ನು ರಾಜಕೀಯವಾಗಿ ಬೆಳೆಸಿದರು.ಸಮಾಜದ ಕಟ್ಟಕಡೆಯ ವ್ಯಕ್ತಿಗೆ ಸರ್ಕಾರದ ಲಾಭಗಳು ತಲುಪಿಸಲು ಸಂಕಲ್ಪ ಮಾಡಬೇಕು ಎಂದರು.

ಹಿಂದುಳಿದ ವರ್ಗಗಳ ಜೀವನಮಟ್ಟ ಸುಧಾರಣೆ, ಮಕ್ಕಳಿಗೆ ಶಿಕ್ಷಣ, ಉದ್ಯೋಗ, ರಾಜಕೀಯ ಶಕ್ತಿ ತುಂಬುವ ಕೆಲಸವನ್ನು ಪ್ರಾಮಾಣಿಕವಾಗಿ ಮಾಡಲಾಗುವುದು. ದೇವರಾಜ ಅರಸು ಅವರು ಸಾಧಕರಾಗಿ ಎಲ್ಲರಿಗೂ ಪ್ರೇರಣೆ ಹಾಗೂ ಸ್ಪೂರ್ತಿಯಾಗಿದ್ದಾರೆ. ಹಿಂದುಳಿದ ವರ್ಗಗಳ ಶ್ರೇಯೋಭಿವೃದ್ಧಿಗೆ ಕಂಕಣಬದ್ಧವಾಗಿರುವ ಸರ್ಕಾರ ನಮ್ಮದಾಗಿದೆ ಎಂದರು.

Post a Comment

Previous Post Next Post