ಬೆಂಗಳೂರು ನಗರ ಜಿಲ್ಲೆಯ ಅಮೃತ ನಗರೋತ್ಥಾನ ಹಂತ 4 ರ 9 ನಗರ ಸ್ಥಳೀಯ ಸಂಸ್ಥೆಗಳ 110.50 ಕೋಟಿ ರೂ. ಕ್ರಿಯಾ ಯೋಜನೆಗೆ ಬೆಂಗಳೂರು ಉಸ್ತುವಾರಿ ಸಚಿವರೂ ಆಗಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಅನುಮೋದನೆ ನೀಡಲಾಯಿತು. ಬಿಡಿಎ ಅಧ್ಯಕ್ಷ ಹಾಗೂ ಯಲಹಂಕ ಶಾಸಕ ಎಸ್.ಆರ್. ವಿಶ್ವನಾಥ್, ಬೆಂಗಳೂರು ದಕ್ಷಿಣ ಶಾಸಕ ಎಂ. ಕೃಷ್ಣಪ್ಪ, ದಾಸರಹಳ್ಳಿ ಶಾಸಕ ಮಂಜುನಾಥ್, ಮುಖ್ಯಮಂತ್ರಿಯವರ ಪ್ರಧಾನ ಕಾರ್ಯದರ್ಶಿ ಎನ್. ಮಂಜುನಾಥ್ ಪ್ರಸಾದ್, ಬೆಂಗಳೂರು ನಗರ ಜಿಲ್ಲಾಧಿಕಾರಿ ಶ್ರೀನಿವಾಸ್ ಮತ್ತು ಇತರ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.
Post a Comment